ಕರಾವಳಿ

ಸುಬ್ರಹ್ಮಣ್ಯ: ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಮನೆಯಿಂದಕೆಲಸಕ್ಕೆಂದು ಹೋಗಿ ಕಾಣೆಯಾಗಿದ್ದ‌ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಪಂಜದಿಂದ ವರದಿಯಾಗಿದೆ. ಇಲ್ಲಿನ‌ ಸಮೀಪದ‌ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ. ಅವರು ಜ.16 ರಂದು ಮುಂಜಾನೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ಬಳಿಕ ಅವರು ಮನೆಗೆ ವಾಪಾಸಾಗದ ಕಾರಣ ಮನೆಯವರು ಹುಡುಕಾಟ ನಡೆಸಿದ್ದರು. ಜ.19 ಕೂತ್ಕುಂಜ ಗ್ರಾಮದ ಸಂಪ ಎಂಬಲ್ಲಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದು ಮನೆಯವರು ‍ಸ್ಥಳಕ್ಕೆ ಆಗಮಿಸಿ ಮೃತ ದೇಹ ಖಚಿತ ಪಡಿಸಿ ಸುಬ್ರಹ್ಮಣ್ಯ

ಸುಬ್ರಹ್ಮಣ್ಯ: ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ Read More »

ಪುತ್ತೂರು: ಹಾಡುಹಗಲೇ ಯುವತಿಯ ಕೊಲೆಗೈದ ಪ್ರಕರಣ| ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್: ಹಾಡುಹಗಲೇ ಮನೆಯಂಗಳದಲ್ಲಿ ಮುಂಡೂರು ಗ್ರಾಮದ ಕಂಪ ಬದಿಯಡ್ಕ ಎಂಬಲ್ಲಿನ ದಿ.ಗುರುವ ಎಂಬವರ ಪುತ್ರಿ ಜಯಶ್ರೀ (23ವ) ಅವರನ್ನು ಜ.17ರಂದು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನ ಕನಕಮಜಲಿನ‌ ಉಮೇಶ್ ಎಂಬಾತನನ್ನು ಜ.18ರಂದು ಪೊಲೀಸರು ಬಂಧಿಸಿದ್ದಾರೆ. ಕನಕಮಜಲು ಗ್ರಾಮದ ಅಂಗಾರ ಎಂಬವರ ಪುತ್ರ ಉಮೇಶ್ (24ವ) ಬಂಧಿತ ಆರೋಪಿ. ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಆರೋಪಿ ಮತ್ತು ಆತ ಕೊಲೆ ಕೃತ್ಯಕ್ಕೆ ಬಳಸಿದ ಆಯುಧ ಮತ್ತು ಸ್ಕೂಟರ್ ವಶಕ್ಕೆ ಪಡೆದು ಕೊಂಡಿದ್ದಾರೆ.

ಪುತ್ತೂರು: ಹಾಡುಹಗಲೇ ಯುವತಿಯ ಕೊಲೆಗೈದ ಪ್ರಕರಣ| ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು Read More »

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮಾಣಿ- ಮೈಸೂರು ರಾ.ಹೆದ್ದಾರಿಯ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆ ಕಾರು ಚಲಾಯಿಸಿಕೊಂಡು ಬರುತ್ತಿದ್ದು, ಅರಂತೋಡು ಬಳಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಸುಳ್ಯ: ಅರಂತೋಡು – ಅಡ್ತಲೆ – ಎಲಿಮಲೆ ರಸ್ತೆ ಕಾಮಗಾರಿ ಕೊನೆಗೂ ಆರಂಭ| ಸಚಿವರನ್ನು ನುಡಿದಂತೆ ನಡೆಸಿದ ನಾಗರಿಕ ಹಿತರಕ್ಷಣಾ ವೇದಿಕೆ

ಸಮಗ್ರ ನ್ಯೂಸ್: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದು, ಪ್ರತಿಷ್ಟೆಯ ಪ್ರಶ್ನೆಯಾಗಿದ್ದ, ಸಾರ್ವಜನಿಕರ ಬಹುಬೇಡಿಕೆಯ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು – ಅಡ್ತಲೆ – ಎಲಿಮಲೆ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಗೊಂಡಿದೆ. ಈ ರಸ್ತೆ ಅಭಿವೃದ್ಧಿಗಾಗಿ ಹಲವು ವರ್ಷಗಳಿಂದ ಈ ಭಾಗದ ಸಾರ್ವಜನಿಕರು ಬೇಡಿಕೆ ಮುಂದಿಟ್ಟಿದ್ದರು. ಅರಂತೋಡು ನಾಗರಿಕ ಹಿತರಕ್ಷಣಾ ವೇದಿಕೆಯವರು ಹಲವು ಬಾರಿ ಶಾಸಕರಾದಿಯಾಗಿ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಅಲ್ಲದೆ ಕಳೆದ ಬಾರಿ‌ ಮತದಾನ ಬಹಿಷ್ಕಾರದ ಬ್ಯಾನರ್ ದಾರಿಯುದ್ದಕ್ಕೂ ಅಳವಡಿಸಲಾಗಿತ್ತು. ಇತ್ತೀಚೆಗೆ ಈ ರಸ್ತೆಯ

ಸುಳ್ಯ: ಅರಂತೋಡು – ಅಡ್ತಲೆ – ಎಲಿಮಲೆ ರಸ್ತೆ ಕಾಮಗಾರಿ ಕೊನೆಗೂ ಆರಂಭ| ಸಚಿವರನ್ನು ನುಡಿದಂತೆ ನಡೆಸಿದ ನಾಗರಿಕ ಹಿತರಕ್ಷಣಾ ವೇದಿಕೆ Read More »

ಪುತ್ತೂರು: ಯುವತಿಗೆ ಚೂರಿ ಇರಿತ ಪ್ರಕರಣ| ಸುಳ್ಯದ ವ್ಯಕ್ತಿಯ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಪುತ್ತೂರುನಲ್ಲಿ ಯುವತಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಮುಂಡೂರು ಕಂಪದ ದಿ.ಗುರುವ ಎಂಬವರ ಪುತ್ರಿ ಜಯಶ್ರೀ ಎಂಬಾಕೆಯನ್ನು ಜ.17ರಂದು ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಹಿನ್ನಲೆ ಸುಳ್ಯ ತಾಲೂಕಿನ ಕನಕಮಜಲಿನ ಉಮೇಶ ಎಂಬಾತನ ಕೃತ್ಯ ಎಂದು ಶಂಕೆ ವ್ಯಕ್ತವಾಗಿದ್ದು ಸಾವಿಗೀಡಾದ ಯುವತಿ ಮನೆಯವರು ಉಮೇಶ್ ಕನಕಮಜಲು ವಿರುದ್ದ ಸಂಶಯ ವ್ಯಕ್ತ ಪಡಿಸಿ ದೂರು ನೀಡಿದ್ದಾರೆ. ಈ ಪ್ರಕರ ಪೊಲೀಸರು ಮಾಹಿತಿ ಸಂಗ್ರಹಿಸಿದ್ದು ತನಿಖೆ ಮುಂದುವರಿದಿದೆ. ದೂರಿನಲ್ಲಿ

ಪುತ್ತೂರು: ಯುವತಿಗೆ ಚೂರಿ ಇರಿತ ಪ್ರಕರಣ| ಸುಳ್ಯದ ವ್ಯಕ್ತಿಯ ವಿರುದ್ಧ ದೂರು ದಾಖಲು Read More »

ಉಜಿರೆ ರುಡ್ ಸೆಟ್ ನಿಂದ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

ಸಮಗ್ರ‌ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವನ್ನು ಒದಗಿಸುತ್ತಿದೆ. ಉಚಿತವಾಗಿ ಎಸಿ, ರೆಫ್ರಿಜರೇಟರ್ ದುರಸ್ತಿ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಸುರೇಶ್ ಅವರು, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಪ್ರತಿಷ್ಠಾನ ಮತ್ತು ಕೆನರಾ ಬ್ಯಾಂಕ್ ಜೊತೆಯಾಗಿ 40 ವರ್ಷಗಳಿಂದ ಮುನ್ನಡೆಸುತ್ತಿರುವ ಉಜಿರೆಯ ರುಡ್ ಸೆಟ್ ಸಂಸ್ಥೆ ಯಲ್ಲಿ ಎಸಿ

ಉಜಿರೆ ರುಡ್ ಸೆಟ್ ನಿಂದ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ Read More »

ಪುತ್ತೂರು: ಚೂರಿಯಿಂದ ಇರಿದು ಯುವತಿಯ ಹತ್ಯೆ

ಸಮಗ್ರ ನ್ಯೂಸ್: ಯುವತಿಯೋರ್ವಳನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಜ.17 ರಂದು ಪುತ್ತೂರಿನಲ್ಲಿ ನಡೆದಿದೆ. ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ. ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಇನ್ನೂ ಯುವತಿಯ ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಸಂಪ್ಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಪುತ್ತೂರು: ಚೂರಿಯಿಂದ ಇರಿದು ಯುವತಿಯ ಹತ್ಯೆ Read More »

ಅತ್ಯಂತ ಆಕರ್ಷಕ, ಬೆಲೆಬಾಳುವ ಪುಂಗನೂರು ಹಸು ಧರ್ಮಸ್ಥಳಕ್ಕೆ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅತ್ಯಂತ ಆಕರ್ಷಕ ಹಾಗೂ ಬೆಲೆಬಾಳುವ ಪುಂಗನೂರು ತಳಿಯ 5 ಹಸುಗಳ ಆಗಮನವಾಗಿದೆ. ಈ ತಳಿಯ ಹಸುಗಳ ಮೂಲ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪುಂಗನೂರು ಗ್ರಾಮವಾಗಿದ್ದು ಈ ಕಾರಣದಿಂದ ಹಸುವಿನ ತಳಿಗೂ ಗ್ರಾಮದ ಹೆಸರೇ ಬಂದಿದೆ. ದೇಶದಲ್ಲಿ ಸುಮಾರು 40 ವಿವಿಧ ತಳಿಯ ಹಸುಗಳಿದ್ದರೂ ಪುಂಗನೂರು ಹಸುವಿಗೆ ಸಮಾನವಾದದ್ದು ಯಾವುದು ಇಲ್ಲ. ತೀರಾ ಸಾಧು ಸ್ವಭಾವದ ಈತಳಿಯ ದನ ಒಂದಕ್ಕೆ ಲಕ್ಷಾಂತರ ರೂ.ಬೆಲೆ ಇದೆ. ಯಾವುದೇ ಪರಿಸ್ಥಿತಿಗೆ ಹೊಂದಿಕೊಳ್ಳುವ ಇವು ಬಹಳ

ಅತ್ಯಂತ ಆಕರ್ಷಕ, ಬೆಲೆಬಾಳುವ ಪುಂಗನೂರು ಹಸು ಧರ್ಮಸ್ಥಳಕ್ಕೆ Read More »

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಭಜರಂಗದಳ ಮುಖಂಡನ ಶವ..!! ಸಾವಿನ ಸುತ್ತ ಅನುಮಾನದ ಹುತ್ತ

ಸಮಗ್ರ ನ್ಯೂಸ್: ಪಾಣೆಮಂಗಳೂರು ಹಳೆಯ ಸೇತುವೆಯ ನೇತ್ರಾವತಿ ನದಿಯಲ್ಲಿ ಯುವಕನೋರ್ವ ಶವ ಪತ್ತೆಯಾದ ಘಟನೆ ನಡೆದಿದೆ. ಸಜೀಪ ವಿಶ್ವ ಹಿಂದೂ ಪರಿಷತ್ ಮುಖಂಡ, ಬಜರಂಗದಳ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ರಾಜೇಶ್ ಸುವರ್ಣ ಸ್ಥಾನದಮನೆ ಮೃತಪಟ್ಟ ಯುವಕ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರ ವಾಹನವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ ನೇತ್ರಾವತಿ ನದಿಗೆ ಯಾರೋ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಭಜರಂಗದಳ ಮುಖಂಡನ ಶವ..!! ಸಾವಿನ ಸುತ್ತ ಅನುಮಾನದ ಹುತ್ತ Read More »

ಮಂಗಳೂರು:ಗಾಂಜಾ ಚಲಾವಣೆ, ಸೇವನೆ ಆರೋಪ|ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿ ಬಂಧನ

ಸಮಗ್ರ ನ್ಯೂಸ್ : ಗಾಂಜಾ ಚಲಾವಣೆ ಮತ್ತು ಸೇವನೆ ಆರೋಪದ ಮೇಲೆ ವೈದ್ಯರು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ. ಐವರು ಯುವಕರು ಮತ್ತು ನಾಲ್ವರು ಯುವತಿಯರನ್ನು ಬಂಧಿಸಲಾಗಿದ್ದು, ಅದರಲ್ಲಿ ಒಬ್ಬರು ತಮಿಳುನಾಡು ಮತ್ತು ಆಂಧ್ರಪ್ರದೇಶದವರು, ಇಬ್ಬರು ಕೇರಳ, ಪಂಜಾಬ್ ಮತ್ತು ದೆಹಲಿಯಿಂದ ಬಂದವರಾಗಿದ್ದು, ಒಬ್ಬರು ಸ್ಥಳೀಯರಾಗಿದ್ದಾರೆ. ಬಂಧಿತ ಒಂಬತ್ತು ಮಂದಿಯಲ್ಲಿ ವಿದ್ಯಾರ್ಥಿಗಳು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ವೈದ್ಯರು ಇದ್ದಾರೆ. ನಾಲ್ವರು ಯುವತಿಯರು ಎಂಬಿಬಿಎಸ್ ಮತ್ತು ಬಿಡಿಎಸ್ ಅಂತಿಮ

ಮಂಗಳೂರು:ಗಾಂಜಾ ಚಲಾವಣೆ, ಸೇವನೆ ಆರೋಪ|ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿ ಬಂಧನ Read More »