ಕಡಬ: ಮನೆಯೊಂದರ ಪಕ್ಕ ಅಕ್ರಮ ಕಸಾಯಿಖಾನೆ| ಗೋ ವಧೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಿಢೀರ್ ದಾಳಿ; ಇಬ್ಬರು ವಶಕ್ಕೆ
ಸಮಗ್ರ ನ್ಯೂಸ್: ಮನೆಯೊಂದರ ಹಿಂಬದಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಸೆ.6 ರ ಮುಂಜಾನೆ ನಡೆದಿದೆ. ತಾಲೂಕಿನ ಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ ಕಾರ್ಕಳ ಎಂಬಲ್ಲಿ ಮನೆಯೊಂದರಲ್ಲಿ ಜಾನುವಾರು ವಧೆ ಮಾಡುತ್ತಿರುವ ಕುರಿತು ಬಜರಂಗದಳಕ್ಕೆ ಮಾಹಿತಿ ಲಭಿಸಿತ್ತು. ಪೊಲೀಸರಿಗೆ ಮಾಹಿತಿ ರವಾನಿಸಿದ ಮೇರೆಗೆ ಕಡಬ ಠಾಣಾ ಎಸ್.ಐ ನೇತೃತ್ವದ ಪೊಲೀಸರು ದಾಳಿ ಮಾಡಿರುವುದಾಗಿ ತಿಳಿದು ಬಂದಿದೆ.ಸ್ಥಳದಲ್ಲಿ ಗೋವಧೆ ಮಾಡಲು ಬಳಸಿದ ಸಾಧನ, ದನದ ರುಂಡ, ಸುಮಾರು










