ಕರಾವಳಿ

ಬೆಳ್ತಂಗಡಿ: ಒಂದೇ ಮನೆಯ ಇಬ್ಬರ ಮೃತದೇಹ ಅಂಗಳದಲ್ಲಿ ಪತ್ತೆ |ವಿಷಯುಕ್ತ ಅಣಬೆಯ ಖಾದ್ಯ ಸೇವನೆ ಶಂಕೆ

ಸಮಗ್ರ ನ್ಯೂಸ್: ಒಂದೇ ಮನೆಯ ಇಬ್ಬರ ಮೃತದೇಹ ಮನೆ ಅಂಗಳದಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ನಡೆದಿದ್ದು , ಕಾಡಿನ ವಿಷ ಪೂರಿತ ಅಣಬೆಯ ಸೇವನೆಯೇ ಸಾವಿಗೆ ಕಾರಣ ಎಂದು ಸಂಶಯಿಸಲಾಗಿದೆ. ಪಲ್ಲದಪಲ್ಕೆ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಮೃತಪಟ್ಟವರು. ಬಡ ಕುಟುಂಬದ ಮನೆಯಲ್ಲಿ ಮನೆ ಯಜಮಾನ ಗುರುವ ಸಹಿತ ಇಬ್ಬರು ಪುತ್ರರು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ‌ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು

ಬೆಳ್ತಂಗಡಿ: ಒಂದೇ ಮನೆಯ ಇಬ್ಬರ ಮೃತದೇಹ ಅಂಗಳದಲ್ಲಿ ಪತ್ತೆ |ವಿಷಯುಕ್ತ ಅಣಬೆಯ ಖಾದ್ಯ ಸೇವನೆ ಶಂಕೆ Read More »

ಶಂಕಿತ ಉಗ್ರ ಶಾರೀಕ್ ನ ವಾಟ್ಸಪ್ ಡಿಪಿಯಲ್ಲಿ ಶಿವನ ಫೋಟೋ| ಮೊಬೈಲ್ ತರಬೇತಿ ಕೇಂದ್ರದಿಂದ ‌ಮಾಹಿತಿ

ಸಮಗ್ರ ನ್ಯೂಸ್: ಮಂಗಳೂರು ಆಟೋ ಬಾಂಬ್ ಸ್ಪೋಟ ಪ್ರಕರಣದ ಶಂಕಿತ ಉಗ್ರ ಶಾರಿಕ್ ತನ್ನ ವಾಟ್ಸಪ್ ಡಿಪಿಯಲ್ಲಿ ಈಶ್ವರನ ಫೋಟೋ ಇಟ್ಟುಕೊಂಡಿದ್ದ ಎಂದು ಮೊಬೈಲ್ ತರಬೇತಿ ಕೇಂದ್ರದ ಮಾಲೀಕ ಪ್ರಸಾದ್ ತಿಳಿಸಿದ್ದಾರೆ. ಮೈಸೂರಿನ ಕೆ.ಆರ್. ಮೊಹಲ್ಲಾದಲ್ಲಿ ಮೊಬೈಲ್ ತರಬೇತಿ ಕೇಂದ್ರದಲ್ಲಿ ಮೊಬೈಲ್ ರಿಪೇರಿ ಬಗ್ಗೆ ತರಬೇತಿ ಪಡೆಯಲು ಬಂದಿದ್ದ ಶಾರಿಕ್ ಧಾರವಾಡ ಶೈಲಿ ಕನ್ನಡದಲ್ಲಿ ಮಾತನಾಡುತ್ತಿದ್ದ. ಧಾರವಾಡದ ಪ್ರೇಮ್ ರಾಜ್ ಎಂಬ ಹೆಸರಿನಲ್ಲಿ ದಾಖಲೆ ನೀಡಿ ತರಬೇತಿ ಪಡೆಯುತ್ತಿದ್ದ ಎಂದು ಪ್ರಸಾದ್ ಮಾಹಿತಿ ನೀಡಿದ್ದಾರೆ. ಶಂಕಿತ ಉಗ್ರ

ಶಂಕಿತ ಉಗ್ರ ಶಾರೀಕ್ ನ ವಾಟ್ಸಪ್ ಡಿಪಿಯಲ್ಲಿ ಶಿವನ ಫೋಟೋ| ಮೊಬೈಲ್ ತರಬೇತಿ ಕೇಂದ್ರದಿಂದ ‌ಮಾಹಿತಿ Read More »

ಸುಳ್ಯ: ಹೆರಿಗೆಯಾದ 12ನೇ ದಿನಕ್ಕೆ ಬಾಣಂತಿ ಮೃತ್ಯು

ಸಮಗ್ರ ನ್ಯೂಸ್: ಹೆರಿಗೆಯಾದ 12ನೇ ದಿನಕ್ಕೆ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯ ಸಮೀಪ ನಡೆದಿದೆ. ಸುಳ್ಯ ತಾಲೂಕು ಜಟ್ಟಿಪಳ್ಳದ ನಿವಾಸಿ ಲೀಲಾ ಎಂಬವರ ಪುತ್ರಿ ಗೀತಾ (30) ಸಾವನ್ನಪ್ಪಿದ ಬಾಣಂತಿ ಮಹಿಳೆ. ಇವರನ್ನು ಚೊಕ್ಕಾಡಿಯ ಜಗದೀಶ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಒಂದು ಗಂಡು ಮಗುವಿದ್ದು, ಎರಡನೇ ಮಗುವಿನ ಹೆರಿಗೆಗಾಗಿ ಅವರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 12 ದಿನಗಳ ಹಿಂದೆ ಅವರು ಹೆಣ್ಣು ಮಗುವಿಗೆ ನೀಡಿದ್ದರು. ಬಳಿಕ ಅವರು ಮಗು ಸಮೇತ ತಾಯಿ ಮನೆಗೆ ಬಂದಿದ್ದರು.

ಸುಳ್ಯ: ಹೆರಿಗೆಯಾದ 12ನೇ ದಿನಕ್ಕೆ ಬಾಣಂತಿ ಮೃತ್ಯು Read More »

ಮಂಗಳೂರು:ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆ|ಬದಲಿ ರಸ್ತೆ ವ್ಯವಸ್ಥೆ

ಸಮಗ್ರ ನ್ಯೂಸ್: ಮಂಗಳೂರು ತಾಲೂಕಿನ ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ ಸಂಖ್ಯೆ 67ರ 16.20 ಕಿ.ಮೀ. ನಿಂದ 19 ಕಿ.ಮೀ. ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ ಆದೇಶ ಹಾಗೂ ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಬದಲಿ ಮಾರ್ಗದ ವ್ಯವಸ್ಥೆ ಮಾಡಿ ಅಪರ ದಂಡಾಧಿಕಾರಿಗಳೂ ಆಗಿರುವ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಬದಲಿ ರಸ್ತೆ ವ್ಯವಸ್ಥೆ: ಕಟೀಲು ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ವಾಹನಗಳು ಬಜಪೆ

ಮಂಗಳೂರು:ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆ|ಬದಲಿ ರಸ್ತೆ ವ್ಯವಸ್ಥೆ Read More »

ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆ ಸಾವು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ಸಿನಿಂದ ಮಹಿಳೆಯೊಬ್ಬರು ಹೊರಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೇಪು ಲಕ್ಷ್ಮಿ ಜನಾರ್ಧನ ದೇವಸ್ಥಾನದ ಬಳಿ ಈ ದುರ್ಘಟನೆ ನಡೆದಿದೆ. ಬೆಂಗಳೂರಿನ ದಾಸರಹಳ್ಳಿಯ ನಾಗರತ್ಮಮ್ಮ( 58) ಮೃತಪಟ್ಟವರು. ಇವರು ಬೆಂಗಳೂರಿನಿಂದ ತಮ್ಮ ಕುಟುಂಬಸ್ಥರೊಂದಿಗೆ ಬೆಂಗಳೂರಿನಿಂದ ರೈಲು ಮೂಲಕ ಬಂದು ನೆಟ್ಟಣ ನಲ್ಲಿ ಬಂದಿಳಿದಿದ್ದರು. ಅಲ್ಲಿಂದ ಕೆ.ಎಸ್.ಆರ್.ಟಿ.ಸಿ ಬಸ್ ಮೂಲಕ ಧರ್ಮಸ್ಥಳಕ್ಕೆ ತೆರಳಲು ಬಸ್ ಏರಿ ಬಸ್ ಮುಂಭಾಗ ಕುಳಿತ್ತಿದ್ದ ಮಹಿಳೆಯು ಕೇಪು ದೇವಸ್ಥಾನದ ಬಳಿ

ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆ ಸಾವು Read More »

ಮೂಡಬಿದ್ರೆ, ಉತ್ತರ ಎರಡೂ ಕ್ಷೇತ್ರದತ್ತ “ಪ್ರತಿಭಾ” ಕಣ್ಣು!

ಸಮಗ್ರ ನ್ಯೂಸ್: ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ಮಂಗಳೂರು ಉತ್ತರ ಮತ್ತು ಮೂಲ್ಕಿ ಮೂಡಬಿದ್ರೆ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್ ಗಾಗಿ ಹೈಕಮಾಂಡ್ ಗೆ ಅರ್ಜಿ ಸಲ್ಲಿಸಿದ್ದಾರೆ. ಮಂಗಳೂರು ಉತ್ತರದಲ್ಲಿ ಟಿಕೆಟ್ ಗಾಗಿ ಲಾಬಿ ಜೋರಾಗಿ ನಡೆಯುತ್ತಿದ್ದು ಮಾಜಿ ಶಾಸಕ ಮೊಯಿದೀನ್ ಬಾವಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಟಿಕೆಟ್ ಆಕಾಂಕ್ಷಿಗಳಾಗಿ ಮುಂಚೂಣಿಯಲ್ಲಿದ್ದಾರೆ. ಇವರಲ್ಲದೆ ಮಮತಾ ಗಟ್ಟಿ, ಮಾಜಿ ಮೇಯರ್ ಗಳಾದ ಶಶಿಧರ್ ಹೆಗ್ಡೆ, ಕವಿತಾ ಸನಿಲ್, ಲುಕ್ಮಾನ್ ಬಂಟ್ವಾಳ, ಪುರುಷೋತ್ತಮ ಚಿತ್ರಾಪುರ ಹಾಗೂ ಇತರರು

ಮೂಡಬಿದ್ರೆ, ಉತ್ತರ ಎರಡೂ ಕ್ಷೇತ್ರದತ್ತ “ಪ್ರತಿಭಾ” ಕಣ್ಣು! Read More »

“ಪುದುಚೇರಿಯಲ್ಲಿ ಉಗ್ರ ಚಟುವಟಿಕೆಗೆ ಕಡಿವಾಣ, ಪ್ರವಾಸಿಗರ ಸುರಕ್ಷತೆಗೆ ಆದ್ಯತೆ”
-ಪುದುಚೇರಿ ಗೃಹಸಚಿವ ಎ. ನಮಸ್ಸಿವಾಯಂ

ಸುರತ್ಕಲ್: “ಪುದುಚೇರಿ ಸರಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ವಿದೇಶಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಉಗ್ರ ಚಟುವಟಿಕೆಗೆ ಮೇಲೆ ಹದ್ದಿನ ಕಣ್ಣಿರಿಸಲಾಗಿದ್ದು ಸುರಕ್ಷತಾ ಕ್ರಮಕ್ಕೆ ಒತ್ತು ,ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ” ಎಂದು ಪುದುಚೇರಿ ಗೃಹಸಚಿವ ಎ. ನಮಸ್ಸಿವಾಯಂ ಅವರು ಹೇಳಿದರು. ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಶ್ರೀ ಕಟೀಲೇಶ್ವರಿ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ ಅವರು ಕಲ್ಲಿದ್ದಲು ಉದ್ಯಮದ ಕುರಿತು ಮಾಹಿತಿ ಪಡೆದುಕೊಂಡರು.ಪುದುಚೇರಿ ಸಣ್ಣ ರಾಜ್ಯವಾಗಿದ್ದು ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಹೆಚ್ಚೆಚ್ಚು ಆಕರ್ಷಿಸುತ್ತಿದೆ. ಕರ್ನಾಟಕದ ಯುವ

“ಪುದುಚೇರಿಯಲ್ಲಿ ಉಗ್ರ ಚಟುವಟಿಕೆಗೆ ಕಡಿವಾಣ, ಪ್ರವಾಸಿಗರ ಸುರಕ್ಷತೆಗೆ ಆದ್ಯತೆ”
-ಪುದುಚೇರಿ ಗೃಹಸಚಿವ ಎ. ನಮಸ್ಸಿವಾಯಂ
Read More »

ಮಂಗಳೂರು:KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ..!

ಸಮಗ್ರ ನ್ಯೂಸ್: ಆಟೋ ರಿಕ್ಷಾ ಸ್ಫೋಟವಾದ ಬೆನ್ನಲ್ಲೇ ಇದೀಗ ಬಿಜೈಯ KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿ ಕೆಲ ಕಾಲ ಆತಂಕಕ್ಕೆ ಕಾರಣವಾದ ಘಟನೆ ಇಂದು ನಡೆದಿದೆ. ಈ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ತೀವ್ರ ಪರಿಶೀಲನೆಗೆ ಒಳಪಡಿಸಿತು‌. ಬಳಿಕ ಇದು ಪ್ರಯಾಣಿಕನೋರ್ವನ ಬ್ಯಾಗ್ ಅನ್ನೋದು ತಿಳಿದು ಬಂದಿದ್ದು, ಪೊಲೀಸರು ಮತ್ತು ಸಾರ್ವಜನಿಕರು ನಿರಾಳರಾದರು‌.

ಮಂಗಳೂರು:KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ..! Read More »

ಮಂಗಳೂರು: ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಬಾಂಬ್ ಸ್ಫೋಟ|ಚಾಲಕ ಪುರುಷೋತ್ತಮ್ ಅಚ್ಚರಿಯ ರೀತಿಯಲ್ಲಿ ಪಾರಾಗಿದ್ದು ಹೇಗೆ..!! ಕಾಪಾಡಿದನೇ ಕೊರಗಜ್ಜ!?

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಆಟೋದಲ್ಲಿ ಭಾರಿ ಪ್ರಮಾಣದ ಬಾಂಬ್ ಸ್ಫೋಟ. ಈ ವೇಳೆ ಸುತ್ತಮುತ್ತಲು ಆವರಿಸಿಕೊಂಡ ದಟ್ಟ ಹೊಗೆ. ಶೇಕಡ 60 ಸುಟ್ಟುಹೋದ ಆತಂಕವಾದಿ. ಅಚ್ಚರಿಯ ರೀತಿಯಲ್ಲಿ ಪಾರಾದ ಆಟೋ ಚಾಲಕ ಪುರುಷೋತ್ತಮ್. ಈ ಗ್ರೇಟ್ ಎಸ್ಕೇಪ್ ಗೆ ಪುರುಷೋತ್ತಮ್ ದೈವಗಳ ಮೇಲಿಟ್ಟ ನಂಬಿಕೆ ಅಂತ ಮಂಗಳೂರಿನ ಜನ ಮಾತನಾಡುತ್ತಿದ್ದಾರೆ. ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಭಾರಿ ಪ್ರಮಾಣದ ಸ್ಪೋಟವಾಗಿದೆ. ಮಂಗಳೂರಿನ ನಾಗುರಿ ಪರಿಸರದಲ್ಲಿ ಆತಂಕ ಮನೆ ಮಾಡಿದೆ. ಆಟೋರಿಕ್ಷಾ ಸ್ಪೋಟ ಆದ ದೃಶ್ಯ ಕಂಡ್ರೆ ಎಂತವರು ಕೂಡ ಬೆಚ್ಚಿ

ಮಂಗಳೂರು: ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಬಾಂಬ್ ಸ್ಫೋಟ|ಚಾಲಕ ಪುರುಷೋತ್ತಮ್ ಅಚ್ಚರಿಯ ರೀತಿಯಲ್ಲಿ ಪಾರಾಗಿದ್ದು ಹೇಗೆ..!! ಕಾಪಾಡಿದನೇ ಕೊರಗಜ್ಜ!? Read More »

ಕಾರ್ಕಳ: ಕಣಿವೆಗೆ ಬಿದ್ದ ಕಾರು – ಓರ್ವ ಮೃತ್ಯು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಣಿವೆಗೆ ಉರುಳಿ ಬಿದ್ದು ಓರ್ವ ಸಾವನಪ್ಪಿದ ಘಟನೆ ಕಾರ್ಕಳ ತಾಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆಯಲ್ಲಿ ನ.21 ರ ಬೆಳಿಗ್ಗೆ ಸಂಭವಿಸಿದೆ. ಉಡುಪಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿ ವೈಷ್ಣವ್ ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ. ಇನ್ನೂ ಕಾರಿನಲ್ಲಿ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಉಚ್ಚಿಲದಲ್ಲಿ ತಮ್ಮದೇ ಮನೆಯಲ್ಲಿ ಬಾಡಿಗೆಗೆ ಇರುವ ಕುಟುಂಬದ ಸದಸ್ಯರೊಟ್ಟಿಗೆ ಬೆಂಗಳೂರಿಗೆ ತಿರುಗಾಡಲು ಹೋಗಿ

ಕಾರ್ಕಳ: ಕಣಿವೆಗೆ ಬಿದ್ದ ಕಾರು – ಓರ್ವ ಮೃತ್ಯು Read More »