ಕರಾವಳಿ

ಧರ್ಮಸ್ಥಳ: ಎರಡು ವರ್ಷದ ಹಸುಗೂಸನ್ನು ಬಿಟ್ಟು ಮಹಿಳೆ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಎರಡು‌ ವರ್ಷದ‌‌ ಮಗುವಿನ ತಾಯಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳ್ತಂಗಡಿ‌ ತಾಲೂಕಿನ ಧರ್ಮಸ್ಥಳ‌ ಗ್ರಾಮದ ಜೋಡುಸ್ಥಾನ ಎಂಬಲ್ಲಿ ‌ನಡೆದಿದೆ. ಮೃತರನ್ನು ಇಲ್ಲಿನ ನಿವಾಸಿ ರಕ್ಷಿತಾ ಜೈನ್ (26 ವ) ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿತ್ಯನೂತನ ಭಜನಾ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜು.2ರಂದು ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ.

ಧರ್ಮಸ್ಥಳ: ಎರಡು ವರ್ಷದ ಹಸುಗೂಸನ್ನು ಬಿಟ್ಟು ಮಹಿಳೆ ಆತ್ಮಹತ್ಯೆಗೆ ಶರಣು Read More »

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ/ 20 ರಾಜ್ಯಗಳಲ್ಲಿ ಯಕ್ಷಗಾನ ಪ್ರದರ್ಶನ

ಸಮಗ್ರ ನ್ಯೂಸ್‌: ಯಕ್ಷಗಾನ ಅಭಿಯಾನಕ್ಕಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾವಿದರ ತಂಡ ಜು. 9ರಂದು ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಅಮೆರಿಕ ಇದರ ಆಯೋಜನೆಯಯಲ್ಲಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದಲ್ಲಿ ಅಮೆರಿಕದ 20 ರಾಜ್ಯಗಳಲ್ಲಿ ಈ ತಂಡ ಯಕ್ಷಗಾನ ಪ್ರದರ್ಶನ ನೀಡಲಿದೆ ಎಂದು ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದ್ದಾರೆ ಟ್ರಸ್ಟ್‌ನ ಯುಎಸ್ಎ ಘಟಕದ ಅಧ್ಯಕ್ಷ ಡಾ.ಅರವಿಂದ ಉಪಾಧ್ಯಾಯ, ಡಾ. ಶ್ರೀಧರ ಆಳ್ವ ,

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ/ 20 ರಾಜ್ಯಗಳಲ್ಲಿ ಯಕ್ಷಗಾನ ಪ್ರದರ್ಶನ Read More »

ಉಪ್ಪಿನಂಗಡಿ: ದಾರಿ‌ ತಪ್ಪಿಸಿದ ಗೂಗಲ್ ಮ್ಯಾಪ್| ಆಸ್ಪತ್ರೆಗೆ ಹೋಗಬೇಕಿದ್ದ ಕಾರು ಹೊಳೆ ಪಾಲು

ಸಮಗ್ರ ನ್ಯೂಸ್: ಡಿಜಿಟಲ್‌ ಯುಗದಲ್ಲಿ ದಾರಿ ಗೊತ್ತಾಗದಿದ್ದರೆ ಗೂಗಲ್‌ ಮ್ಯಾಪ್‌ ಬಳುವುದು ಮಾಮೂಲು. ಈಗಂತೂ ಬಹುತೇಕ ಎಲ್ಲರೂ ಗೂಗಲ್‌ ಮ್ಯಾಪ್‌ ನೋಡಿಕೊಂಡೇ ಗೊತ್ತಿಲ್ಲದ ಸ್ಥಳಗಳಿಗೆ ಬೈಕ್‌, ಕಾರುಗಳಲ್ಲಿ ಪ್ರಯಾಣಿಸುತ್ತಿರುತ್ತಾರೆ. ಆದರೆ ಎಷ್ಟೋ ಸಂದರ್ಭಗಳಲ್ಲಿ ಈ ಮ್ಯಾಪ್‌ ನಮ್ಮನ್ನು ದಾರಿ ತಪ್ಪಿಸುವುದು ಉಂಟು. ಈ ಗೂಗಲ್‌ ಮ್ಯಾಪ್‌ ಎಡವಟ್ಟಿನಿಂದ ಕಾರು ನದಿಗೆ ಬಿದ್ದ, ಹೊಂಡಕ್ಕೆ ಬಿದ್ದ ಘಟನೆಗಳ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ಆಸ್ಪತ್ರೆಯ ಕಡೆಗೆ ಹೋಗಬೇಕಿದ್ದ ಯುವಕರು ಗೂಗಲ್‌ ಮ್ಯಾಪ್‌

ಉಪ್ಪಿನಂಗಡಿ: ದಾರಿ‌ ತಪ್ಪಿಸಿದ ಗೂಗಲ್ ಮ್ಯಾಪ್| ಆಸ್ಪತ್ರೆಗೆ ಹೋಗಬೇಕಿದ್ದ ಕಾರು ಹೊಳೆ ಪಾಲು Read More »

ಸುಳ್ಯ: ಎರಡು ವರ್ಷಗಳ ಹಿಂದಿನ ಕಳ್ಳತನ ಪ್ರಕರಣ ‌ಭೇದಿಸಿದ ಬೆಳ್ಳಾರೆ ಪೊಲೀಸರು| ಬೆಳ್ತಂಗಡಿ ಮೂಲದ ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಎರಡು ವರ್ಷಗಳ ಹಿಂದೆ ಬೆಳ್ಳಾರೆ ಠಾಣೆ ವ್ಯಾಪ್ತಿಯ ಎಡಮಂಗಲದಲ್ಲಿ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿ, ಬೆಳ್ತಂಗಡಿ ಮೂಲದ ಶರತ್‌ (26) ಅವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. 2022ರ ಮಾರ್ಚ್‌ನಲ್ಲಿ ರಾತ್ರಿ ಸಮಯ ಕಡಬ ತಾಲೂಕಿನ ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿನ ಮನೆಯೊಂದರ ಬಾಗಿಲು ಮುರಿದು ನುಗ್ಗಿದ ಆರೋಪಿ ಮನೆಯೊಳಗಿದ್ದ ಕಬ್ಬಿಣದ ಕಪಾಟಿನ ಬೀಗದ ಕೀ ಬಳಸಿ ಕಪಾಟು ತೆರೆದು 30 ಸಾವಿರ ನಗದು ಹಾಗೂ 1.48 ಲಕ್ಷ ಮೌಲ್ಯದ ಚಿನ್ನಾಭರಣ ಸಹಿತ ಅಂದಾಜು 1.78

ಸುಳ್ಯ: ಎರಡು ವರ್ಷಗಳ ಹಿಂದಿನ ಕಳ್ಳತನ ಪ್ರಕರಣ ‌ಭೇದಿಸಿದ ಬೆಳ್ಳಾರೆ ಪೊಲೀಸರು| ಬೆಳ್ತಂಗಡಿ ಮೂಲದ ಯುವಕ ಅರೆಸ್ಟ್ Read More »

ಮಂಗಳೂರು: ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ| ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಕೈದಿಗಳಿಗೆ ಗಾಯಗಳಾಗಿರುವ ಘಟನೆ ಮಂಗಳೂರು ಜಿಲ್ಲೆಯ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಘರ್ಷಣೆಯಲ್ಲಿ ಇಬ್ಬರು ಕೈದಿಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.‌ ಮಂಗಳೂರು ಕಾರಾಗೃಹದ ಎ ಬ್ಯಾರಕ್ನಲ್ಲಿ ನಡೆದ ಘಟನೆಯಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಲ್ಲೆ ಮಾಡಿದ ತಂಡದ ಸೆಲ್ ಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಇದೀಗ ಪೊಲೀಸರು

ಮಂಗಳೂರು: ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ| ಇಬ್ಬರು ಗಂಭೀರ Read More »

ಸುಳ್ಯ: ಪತಿಯಿಂದಲೇ ಪತ್ನಿಗೆ ಚೂರಿ‌ ಇರಿತ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 6 ವರ್ಷಗಳ ಹಿಂದೆ ನವೀನ್‌ ಕುಮಾರ್‌ ಎಂಬವರಿಗೆ ಜಾಲ್ಸೂರು ಗ್ರಾಮದ 25 ವರ್ಷದ ಮಹಿಳೆಯನ್ನು ವಿವಾಹ ಮಾಡಿಕೊಡಲಾಗಿತ್ತು. ಆದರೆ ಸಂಸಾರದಲ್ಲಿ ಪತಿ ನವೀನ್ ತನ್ನ ಪತ್ನಿಗೆ ಪತಿಯು ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಇದರಿಂದಾಗಿ ಪತ್ನಿಯು ನಾಲ್ಕು ವರ್ಷಗಳಿಂದ ವಿನೋಬನಗರದಲ್ಲಿರುವ ತವರು ಮನೆಯಲ್ಲಿ ವಾಸವಿದ್ದಾರೆ. ನವೀನ್‌ ಕುಮಾರ್‌ ಜೂ.28ರಂದು ರಾತ್ರಿ ಅಲ್ಲಿಗೆ ಹೋಗಿ ಪತ್ನಿಗೆ ಚೂರಿಯಿಂದ ಹಲ್ಲೆ

ಸುಳ್ಯ: ಪತಿಯಿಂದಲೇ ಪತ್ನಿಗೆ ಚೂರಿ‌ ಇರಿತ Read More »

ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗ

ಸಮಗ್ರ ನ್ಯೂಸ್: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗವಾಗಿದೆ. ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ ಇವರಿಗೆ 97 ವರ್ಷ ವಯಸ್ಸಾಗಿತ್ತು ಅವರು ವಯೋಸಹಜ ಕಾಯಿಲೆಯಿಂದ ಜೂ.30 ರಂದು ನಿಧನರಾದರು. ಮೃತರಿಗೆ ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನ ಏರಿದ ಪ್ರತಿ ಸಂದರ್ಭದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು, ತಾಯಿ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು. ಅಲ್ಲದೇ ಚುನಾವಣೆ ವೇಳೆ

ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗ Read More »

ತಂದೆಯ ಅಂತಿಮ ಸಂಸ್ಕಾರಕ್ಕೆ ರಜೆ ನೀಡದ ವಿದೇಶಿ ಕಂಪನಿ| ಸುಳ್ಯದ ಯುವಕನ ನೆರವಿಗೆ ಬಂದ ಸಂಸದ ಚೌಟ

ಸಮಗ್ರ ನ್ಯೂಸ್: ತಂದೆಯ ನಿಧನ ಹಿನ್ನೆಲೆಯಲ್ಲಿ ಊರಿಗೆ ಬರಲು ಯತ್ನಿಸಿದ ಯುವಕನಿಗೆ ರಜೆ ಕೊಡದೆ, ಪಾಸ್ ಪೋರ್ಟ್ ತೆಗೆದಿಟ್ಟು ಸತಾಯಿಸಿದ ವಿಷಯ ತಿಳಿದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿದೇಶಾಂಗ ಇಲಾಖೆ ಮತ್ತು ಮಾಲ್ಡೀವ್ಸ್ ಎಂಬಸ್ಸಿ ಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿದ ಘಟನೆ ನಡೆದಿದೆ. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಗುರುಪ್ರಸಾದ್ ಗೋಳ್ಯಾಡಿ ಜೂ. 20ರಂದು ನಿಧನರಾಗಿದ್ದರು. ಇವರ ಮಗ ತ್ರಿಶೂಲ್ ಎರಡು ವರ್ಷಗಳಿಂದ ಮಾಲ್ಡೀವ್ಸ್ ನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕಿದ್ದು ತಂದೆಯ ನಿಧನ ವಿಷಯ ತಿಳಿದು

ತಂದೆಯ ಅಂತಿಮ ಸಂಸ್ಕಾರಕ್ಕೆ ರಜೆ ನೀಡದ ವಿದೇಶಿ ಕಂಪನಿ| ಸುಳ್ಯದ ಯುವಕನ ನೆರವಿಗೆ ಬಂದ ಸಂಸದ ಚೌಟ Read More »

ಪುತ್ತೂರು: ಪ್ರಿಡ್ಜ್ ಸ್ಪೋಟಗೊಂಡು‌ ಮನೆ ಹೊತ್ತಿ‌ ಉರಿದರೂ ಹಾನಿಯಾಗದ ಕಲ್ಲುರ್ಟಿ‌ ದೈವದ ಪೀಠ| ತುಳುನಾಡಿನಲ್ಲಿ ‌ಮತ್ತೆ ಅನಾವರಣಗೊಂಡ ದೈವಲೀಲೆ

ಸಮಗ್ರ ನ್ಯೂಸ್: ಪುತ್ತೂರಿನ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡು ಮನೆ ಹೊತ್ತಿ ಉರಿದಿದೆ. ಆದರೆ ಪವಾಡವೆಂಬಂತೆ ಕಲ್ಲುರ್ಟಿ ದೈವದ ಪೀಠವು ಕಿಂಚಿತ್ತೂ ಹಾನಿಗೊಂಡಿಲ್ಲ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ತುಳುನಾಡಿನ ದೈವದ ಶಕ್ತಿ ಕಂಡು ಬೆರಗಾಗಿದ್ದಾರೆ. ದೈವಾರಾಧನೆ ತುಳುನಾಡಿನ ಕಲೆ ಸಂಸ್ಕೃತಿ, ಬದುಕಿನ ಭಾಗವಾಗಿರದೇ ನಂಬಿಕೆ ಹಾಗೂ ಶಕ್ತಿಯ ಮೂಲವಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಇಲ್ಲಿ ದೇವರಿಗೆ ಎಷ್ಟು ಪ್ರಾಮುಖ್ಯತೆವಿದೆಯೋ ಅಷ್ಟೇ ಪ್ರಾಮುಖ್ಯತೆ ದೈವಗಳಿಗಿದೆ. ಕಷ್ಟದ ಕಾಲದಲ್ಲಿ ನಂಬಿದ ದೈವ ಕೈ ಬಿಡೋದಿಲ್ಲ ಎಂದು ನಂಬಿಕೊಂಡು ಬಂದಿರುವ

ಪುತ್ತೂರು: ಪ್ರಿಡ್ಜ್ ಸ್ಪೋಟಗೊಂಡು‌ ಮನೆ ಹೊತ್ತಿ‌ ಉರಿದರೂ ಹಾನಿಯಾಗದ ಕಲ್ಲುರ್ಟಿ‌ ದೈವದ ಪೀಠ| ತುಳುನಾಡಿನಲ್ಲಿ ‌ಮತ್ತೆ ಅನಾವರಣಗೊಂಡ ದೈವಲೀಲೆ Read More »

ತಂದೆಯ ಅಂತಿಮ ಸಂಸ್ಕಾರಕ್ಕೆ ರಜೆ ನೀಡದ ವಿದೇಶಿ ಕಂಪನಿ| ಸುಳ್ಯದ ಯುವಕನ ನೆರವಿಗೆ ಬಂದ ಸಂಸದ ಚೌಟ

ಸಮಗ್ರ ನ್ಯೂಸ್: ತಂದೆಯ ನಿಧನ ಹಿನ್ನೆಲೆಯಲ್ಲಿ ಊರಿಗೆ ಬರಲು ಯತ್ನಿಸಿದ ಯುವಕನಿಗೆ ರಜೆ ಕೊಡದೆ, ಪಾಸ್ ಪೋರ್ಟ್ ತೆಗೆದಿಟ್ಟು ಸತಾಯಿಸಿದ ವಿಷಯ ತಿಳಿದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿದೇಶಾಂಗ ಇಲಾಖೆ ಮತ್ತು ಮಾಲ್ಡೀವ್ಸ್ ಎಂಬಸ್ಸಿ ಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿದ ಘಟನೆ ನಡೆದಿದೆ. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಗುರುಪ್ರಸಾದ್ ಗೋಳ್ಯಾಡಿ ಜೂ. 20ರಂದು ನಿಧನರಾಗಿದ್ದರು. ಇವರ ಮಗ ತ್ರಿಶೂಲ್ ಎರಡು ವರ್ಷಗಳಿಂದ ಮಾಲ್ಡೀವ್ಸ್ ನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕಿದ್ದು ತಂದೆಯ ನಿಧನ ವಿಷಯ ತಿಳಿದು

ತಂದೆಯ ಅಂತಿಮ ಸಂಸ್ಕಾರಕ್ಕೆ ರಜೆ ನೀಡದ ವಿದೇಶಿ ಕಂಪನಿ| ಸುಳ್ಯದ ಯುವಕನ ನೆರವಿಗೆ ಬಂದ ಸಂಸದ ಚೌಟ Read More »