ಕರಾವಳಿ

ಸುಳ್ಯ: ಸೇತುವೆ, ರಸ್ತೆ ಸಂಪರ್ಕ ಸರಿ ಮಾಡುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸಿಎಂ ಗೆ ಮನವಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದಲ್ಲಿ ಸೇತುವೆ ಹಾಗೂ ರಸ್ತೆ ಸಂಪರ್ಕ ಸರಿ ಮಾಡುವಂತೆ ಮುಖ್ಯಮಂತ್ರಿಯವರಿಗೆ ಹಾಗೂ ಅಧಿಕಾರಿಗಳಿಗೆ ಮನವಿ ನೀಡಲಾಯಿತು. ಉಬರಡ್ಕದ ಅಮೈ ಪಾಲಡ್ಕ ಎಂಬಲ್ಲಿ ಹೊಸ ಸೇತುವೆ, ಯಾವಟೆ ಕಟ್ಟಕೋಡಿ ಅಚ್ಚು ಪಲ್ಲ ಸಂಪರ್ಕ ರಸ್ತೆಗೆ ಕಾಂಕ್ರೀಟಿಕರಣ, ಮಂಜಿಕಾನ ಬದನೆಕಜೆ ಸಂಪರ್ಕ ರಸ್ತೆಗೆ ಕಾಂಕ್ರೀಟಿಕರಣ ಮತ್ತು ಅದೇ ರಸ್ತೆಯಲ್ಲಿ ನದಿಗೆ ಸೇತುವೆ, ಇವೆಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು ಇರುವಂತಹ ಜಾಗ ಆದ ಕಾರಣ ಆದಷ್ಟು ಬೇಗ ಸೇತುವೆ ಮತ್ತು ಕಾಂಕ್ರೀಟಿಕರಣ

ಸುಳ್ಯ: ಸೇತುವೆ, ರಸ್ತೆ ಸಂಪರ್ಕ ಸರಿ ಮಾಡುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸಿಎಂ ಗೆ ಮನವಿ Read More »

ಮಂಗಳೂರು: ಮಳಲಿ ಮಸೀದಿ ವಿವಾದ| ಆಡಳಿತ ಮಂಡಳಿಯ ಅರ್ಜಿ ವಜಾಗೊಳಿಸಿದ ಕೋರ್ಟ್

ಸಮಗ್ರ ನ್ಯೂಸ್: ಮಂಗಳೂರಿನ ಮಳಲಿಪೇಟೆ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಇಂದು ವಜಾ ಗೊಳಿಸಿದೆ. ಮಳಲಿ ಮಸೀದಿ ಪ್ರಕರಣದಲ್ಲಿ ಮಸೀದಿಯು ವಕ್ಫ್ ಆಸ್ತಿಯಾಗಿರುವ ಕಾರಣ‌ ಈ ಪ್ರಕರಣದ ವಿಚಾರಣೆಗೆ ವಕ್ಫ್ ಸಂಬಂಧಿತ ಕೋರ್ಟ್ ಗಳು ಇರುವುದರಿಂದ ಈ ಪ್ರಕರಣವನ್ನು ವಿಚಾರಣೆ‌ ನಡೆಸಲು ಸಿವಿಲ್ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ. ಹಾಗಾಗಿ ಮಸೀದಿ ವಿರುದ್ಧ ದಾಖಲಾಗಿರುವ ಅರ್ಜಿಯನ್ನು ವಜಾ ಗೊಳಿಸುವಂತೆ ಮಳಲಿಪೇಟೆ ಮಸೀದಿಯ ಆಡಳಿತ ಮಂಡಳಿ ಸಲ್ಲಿಸಿದ್ದ

ಮಂಗಳೂರು: ಮಳಲಿ ಮಸೀದಿ ವಿವಾದ| ಆಡಳಿತ ಮಂಡಳಿಯ ಅರ್ಜಿ ವಜಾಗೊಳಿಸಿದ ಕೋರ್ಟ್ Read More »

ವಿಟ್ಲ: ಪೆಟ್ರೋಲ್ ಸುರಿದು ಯುವಕನ ಕೊಲೆ|ಪೋಲೀಸರ ವಿಚಾರಣೆಯರಲ್ಲಿ ನಿಜಾಂಶ ಬಯಲು

ಸಮಗ್ರ ನ್ಯೂಸ್: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ನಿಜಾಂಶ ಬಯಲಾಗಿದೆ. ಬಂಧಿತ ಆರೋಪಿಯನ್ನು ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಎನ್ನಲಾಗಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಅದ್ರಾಮ, ಸಮಾದ್ ಎಂಬಾತನನ್ನು ಪೆಟ್ರೋಲ್ ಹಚ್ಚಿ ಕೊಲೆ ಮಾಡಿದ್ದ. ಏನಿದು ಪ್ರಕರಣ..!ಆದಿತ್ಯವಾರ ರಾತ್ರಿ ಯುವಕನೋರ್ವನನ್ನು ಕಿಡ್ನಾಪ್ ಮಾಡಿ ಬಳಿಕ ಕೊಲೆ ಮಾಡಲಾಗಿದೆ ಎಂಬ ಸುದ್ದಿ ಸೋಮವಾರ ಬೆಳಿಗ್ಗೆಯಿಂದ ಹರಡಿತ್ತು. ಇದು ವದಂತಿಯೋ ಅಥವಾ ಸತ್ಯ ವಿಚಾರವೋ ಎಂದು

ವಿಟ್ಲ: ಪೆಟ್ರೋಲ್ ಸುರಿದು ಯುವಕನ ಕೊಲೆ|ಪೋಲೀಸರ ವಿಚಾರಣೆಯರಲ್ಲಿ ನಿಜಾಂಶ ಬಯಲು Read More »

ಮಂಗಳೂರು: ತಲಪಾಡಿ ಆರ್ಟಿಒ‌‌ ಕಚೇರಿ ಮೇಲೆ‌ ಲೋಕಾಯುಕ್ತ ದಾಳಿ; ಹಲವು ವೈಫಲ್ಯಗಳು ಪತ್ತೆ

ಸಮಗ್ರ ನ್ಯೂಸ್: ಮಂಗಳೂರು‌ ನಗರದ ಹೊರವಲಯ ತಲಪಾಡಿಯ ಆರ್‌ಟಿಓ ಚೆಕ್‌ಪೋಸ್ಟ್‌ಗೆ ಲೋಕಾಯುಕ್ತ ಮಂಗಳೂರು ಪೊಲೀಸ್ ವಿಭಾಗದಿಂದ ನಿನ್ನೆ ನಡೆದ ದಾಳಿಯ ಸಂದರ್ಭದಲ್ಲಿ ಹಲವಾರು ನ್ಯೂನತೆಗಳು ಕಂಡುಬಂದಿವೆ. ದಲ್ಲಾಳಿಗಳ ಮೂಲಕ ಹಣ ವಸೂಲು, ದಾಖಲಾತಿಗಳಲ್ಲಿ ನ್ಯೂನತೆ ಹಾಗೂ ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ಹಣದ ವ್ಯವಹಾರ ನಡೆಯುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಸಮಗ್ರ ವರದಿಯನ್ನು ಕರ್ನಾಟಕ ಲೋಕಾಯುಕ್ತಕ್ಕೆ ನೀಡಲಾಗುವುದು ಎಂದು ಮಂಗಳೂರು ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ಕೆ. ತಿಳಿಸಿದ್ದಾರೆ. ಆರ್‌ಟಿಓ ಚೆಕ್‌ಪೋಸ್ಟ್‌ಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ,

ಮಂಗಳೂರು: ತಲಪಾಡಿ ಆರ್ಟಿಒ‌‌ ಕಚೇರಿ ಮೇಲೆ‌ ಲೋಕಾಯುಕ್ತ ದಾಳಿ; ಹಲವು ವೈಫಲ್ಯಗಳು ಪತ್ತೆ Read More »

ವರ್ಗಾವಣೆಗೊಂಡ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಮತ್ತೆ ಕರೆಸಿಕೊಳ್ಳದಿರಲು ಪಂಚಾಯತ್ ಸದಸ್ಯರ ಬೇಡಿಕೆ

ಸಮಗ್ರ ನ್ಯೂಸ್: ಪುತ್ತೂರು ತಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಸೇವೆ ಸಲ್ಲಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ನಾಗೇಶ್ ರವನ್ನುಮತ್ತೆ ಆರ್ಯಾಪು ಗ್ರಾಮ ಪಂಚಾಯತ್ ಗೆ ಯಾವುದೇ ಕಾರಣಕ್ಕೂ ವರ್ಗಾವಣೆಗೊಳಿಸಬಾರದೆಂದು ಶಾಸಕರಿಗೆ ಬಿಜೆಪಿಯ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಸದಸ್ಯರಾದ ಸಚಿನ್ ವಳತ್ತಡ್ಕ ಮನವಿ ಸಲ್ಲಿಸಿದರು. ನಾಗೇಶ್ ರವರು ಈಗಾಗಲೆ ಪುತ್ತೂರು ತಾಲೂಕಿನ ಒಳಮೊಗ್ರು ಗಾಮ ಪಂಚಾಯತ್ ಗೆ ವರ್ಗಾವಣೆಗೊಂಡಿದ್ದು ಅದಕ್ಕಾಗಿ ನಾವು ಅವರಿಗೆ ಮತ್ತು ವರ್ಗಾವಣೆಗೊಳಿಸಿದ ಮಾನ್ಯ ಶಾಸಕರಾದ ಸಂಜೀವ ಮಠಂದೂರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ.

ವರ್ಗಾವಣೆಗೊಂಡ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಮತ್ತೆ ಕರೆಸಿಕೊಳ್ಳದಿರಲು ಪಂಚಾಯತ್ ಸದಸ್ಯರ ಬೇಡಿಕೆ Read More »

ಕರಾವಳಿಯ ಮೂರು ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆ ಆರಂಭ| ಜನಸಂಕಲ್ಪ ಸಭೆಯಲ್ಲಿ ಸಿಎಂ ಘೋಷಣೆ

ಸಮಗ್ರ ನ್ಯೂಸ್: ಬಹುನಿರೀಕ್ಷಿತ ಉಡುಪಿ ಮಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಪಡಿತರ ಮೂಲಕ ಕುಚಲಕ್ಕಿ ವಿತರಣೆ ಕಾರ್ಯಕ್ರಮವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಕಾಪುವಿನಲ್ಲಿ ಜನ ಸಂಕಲ್ಪ ಸಭೆಯಲ್ಲಿ ಘೋಷಿಸಿದ್ದಾರೆ. ಈಗ ನೀಡುತ್ತಿರುವ ಪಡಿತರ ಅಕ್ಕಿ ಸಾರ್ವಜನಿಕರಿಗೆ ಉಪಯೋಗಕ್ಕೆ ಬರುತ್ತಿಲ್ಲವೆಂಬ ಹಿನ್ನೆಲೆಯಲ್ಲಿ ಪಡಿತರ ವ್ಯವಸ್ಥೆಗೆ ಕುಚಲಕ್ಕಿ ನೀಡುವ ವ್ಯವಸ್ಥೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳು ಹೇಳುತ್ತಲೇ ವೇದಿಕೆಯಲ್ಲಿ ಎದ್ದು ನಿಂತು ಮುಖ್ಯಮಂತ್ರಿಗಳಿಗೆ ಕೈಮುಗಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದರು.

ಕರಾವಳಿಯ ಮೂರು ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆ ಆರಂಭ| ಜನಸಂಕಲ್ಪ ಸಭೆಯಲ್ಲಿ ಸಿಎಂ ಘೋಷಣೆ Read More »

ಸುಳ್ಯ:ಬೈಕ್-ಜೀಪು ಅಪಘಾತ|ಸವಾರ ಗಂಭೀರ

ಸಮಗ್ರ ನ್ಯೂಸ್: ಬೈಕ್, ಜೀಪು ಅಪಘಾತದಿಂದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಅರಂತೋಡು ಗ್ರಾಮದ ಬಿಳಿಯಾರು ಪೆಟ್ರೋಲ್ ಬಂಕ್ ಬಳಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಸಂಪಾಜೆಯ ಕಲ್ಲುಗುಂಡಿ ಕಡೆಯಿಂದ ಸುಳ್ಯ ಕಡೆಗೆ ಧನಂಜಯ ಎಂಬ ಯುವಕ ಬೈಕಿನಲ್ಲಿ ಬರುತ್ತಿರುವಾಗ ಸುಳ್ಯ ಕಡೆಯಿಂದ ತೊಡಿಕಾನ ಕಡೆಗೆ ಹರೀಶ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಜೀಪು ಬಸ್ಸನ್ನು ಓವರ್ ಟೆಕ್ ಮಾಡುವ ಸಂದರ್ಭದಲ್ಲಿ ವಿರುದ್ದ ದಿಕ್ಕಿನಿಂದ ಬಂದು ಡಿಕ್ಕಿ ಹೊಡೆದಿದೆ. ಇನ್ನು ಢಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು

ಸುಳ್ಯ:ಬೈಕ್-ಜೀಪು ಅಪಘಾತ|ಸವಾರ ಗಂಭೀರ Read More »

ಮಂಗಳೂರು: ಸೆಂಟ್ರಲ್ ಮಾರ್ಕೆಟ್ ನಲ್ಲಿ ಭೀಪ್ ಸ್ಟಾಲ್ ಗಳಿದ್ದರೆ ನಾನು ಭೂಮಿಪೂಜೆಯನ್ನೇ ಮಾಡುವುದಿಲ್ಲ: ವೇದವ್ಯಾಸ್ ಕಾಮತ್

ಸಮಗ್ರ ನ್ಯೂಸ್: ಸೆಂಟ್ರಲ್ ಮಾರ್ಕೆಟ್ ನಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟದಲಲ್ಲಿ ಭೀಪ್ ಸ್ಟಾಲ್ ಗಳಿದ್ದರೆ ನಾನು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆಯನ್ನೇ ಮಾಡುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಬೀಫ್ ಸ್ಟಾಲ್ ಕುರಿತು ಇಂದು ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿದ ಶಾಸಕ ಕಾಮತ್, ಈ ಹಿಂದಿನ ಮಾರುಕಟ್ಟೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನವಾಗಿ 114 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ನೂತನವಾಗಿ ನಿರ್ಮಿಸುವ ಮಾರುಕಟ್ಟೆಯಲ್ಲಿ ಬೀಫ್

ಮಂಗಳೂರು: ಸೆಂಟ್ರಲ್ ಮಾರ್ಕೆಟ್ ನಲ್ಲಿ ಭೀಪ್ ಸ್ಟಾಲ್ ಗಳಿದ್ದರೆ ನಾನು ಭೂಮಿಪೂಜೆಯನ್ನೇ ಮಾಡುವುದಿಲ್ಲ: ವೇದವ್ಯಾಸ್ ಕಾಮತ್ Read More »

ನ. 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

ಸಮಗ್ರ ನ್ಯೂಸ್: ನ. 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದೆ. ನ.22 ರಂದು ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸಲಿದ್ದಾರೆ. ನ. 23ರಂದು ಸಂಜೆ 5ಕ್ಕೆ ಸಾಹಿತ್ಯ ಸಮ್ಮೇಳನವನ್ನು ಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಉದ್ಘಾಟಿಸುವರು. ರಾತ್ರಿ 12 ಗಂಟೆ ಬಳಿಕ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಈ ಅಂಗವಾಗಿ ಕೆಎಸ್‌ಆರ್‌ಟಿಸಿ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.

ನ. 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ Read More »

ಮಂಗಳೂರು: ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ನ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ ತೆರೆಯಲು ಅವಕಾಶ

ಸಮಗ್ರ ನ್ಯೂಸ್: ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ ತೆರೆಯಲು ಅವಕಾಶ ನೀಡಲು ಮಹಾನಗರಪಾಲಿಕೆ ಯೋಜನೆ ರೂಪಿಸಿದ್ದು ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. 114 ಕೋಟಿ ವೆಚ್ಚದಲ್ಲಿ ನೂತನ ಸೆಂಟ್ರಲ್ ‌ಮಾರ್ಕೆಟ್ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗಿದ್ದು ನೂತ‌ನ ಸೆಂಟ್ರಲ್ ಮಾರ್ಕೆಟ್ ನ ಲೋವರ್ ಗ್ರೌಂಡ್ ಫ್ಲೋರ್ ನಲ್ಲಿ 9 ಭೀಫ್ ಸ್ಪಾಲ್ ತೆರೆಯಲು ನೀಲಿ ನಕ್ಷೆ ತಯಾರಾಗಿದೆ. ಸದ್ಯ ಸ್ಮಾರ್ಟ್ ಸಿಟಿ ಮಂಡಳಿ ಮುಂದಿರುವ ಮಾರ್ಕೆಟ್ ನ ತ್ರೀಡಿ ನಕಾಶೆಯಲ್ಲಿ

ಮಂಗಳೂರು: ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ನ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್​ ತೆರೆಯಲು ಅವಕಾಶ Read More »