ಕರಾವಳಿ

ಮಂಗಳೂರಿನ ಮಳಲಿಯಲ್ಲಿರುವುದು ಮಸೀದಿಯೋ? ಮಂದಿರವೋ? ನ.9 ರಂದು ಹೊರಬೀಳಲಿದೆ ತೀರ್ಪು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಸಮೀಪದ ಮಳಲಿಯಲ್ಲಿರುವ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸಿವಿಲ್ ಕೋರ್ಟ್ ನವೆಂಬರ್ 9 ಕ್ಕೆ ಆದೇಶ ಪ್ರಕಟಿಸಲಿದೆ. ಮಳಲಿಯ ಅಸಯ್ಯಿದ್ ಅದ್ಬುಲ್ಲಾಹಿಲ್ ಮದನಿ ದರ್ಗಾದಲ್ಲಿ ಹಿಂದೂ ದೇವಸ್ಥಾನದ ಶೈಲಿ ಪತ್ತೆಯಾಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕಳೆದ ಏಪ್ರಿಲ್ 21 ರಂದು ದರ್ಗಾವನ್ನು ನವೀಕರಣಗೊಳಿಸಲು ದರ್ಗಾದ ಎದುರಿನ ಭಾಗವನ್ನು ನೆಲ ಸಮಗೊಳಿಸಲಾಗಿತ್ತು. ಈ ವೇಳೆ ದರ್ಗಾದ ಒಳ ಭಾಗದಲ್ಲಿ ದೇವಾಲಯದ ಗುಡಿಯ ಶೈಲಿ, ಕಂಬಗಳು, ತೋಮರ, ಬಾಗಿಲುಗಳು ಪತ್ತೆಯಾಗಿದ್ದವು. ಇದರಿಂದ ಇದು

ಮಂಗಳೂರಿನ ಮಳಲಿಯಲ್ಲಿರುವುದು ಮಸೀದಿಯೋ? ಮಂದಿರವೋ? ನ.9 ರಂದು ಹೊರಬೀಳಲಿದೆ ತೀರ್ಪು Read More »

ಮಂಗಳೂರು: ಬಸ್- ಸ್ಕೂಟಿ ಡಿಕ್ಕಿ| 12ರ ಬಾಲಕ ದುರ್ಮರಣ

ಸಮಗ್ರ ನ್ಯೂಸ್: ಅತೀ ವೇಗದಿಂದ ಬಂದ ಬಸ್ಸೊಂದು ದ್ವಿಚಕ್ರ ವಾಹನ ಸವಾರರಿಗೆ ಬಡಿದು 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಲಾಲ್‌ಭಾಗ್‌ ಬಳಿ ನಡೆದಿದೆ. ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ ಸಂಚರಿಸುವ ಖಾಸಗಿ ಬಸ್ಸು ಇನ್ನೊಂದು ಬಸ್ಸನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಬಂದು ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದಿದೆ.ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದರೆ, ಸಹಸವಾರ 12ರ ಹರೆಯದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಘಟನಾ

ಮಂಗಳೂರು: ಬಸ್- ಸ್ಕೂಟಿ ಡಿಕ್ಕಿ| 12ರ ಬಾಲಕ ದುರ್ಮರಣ Read More »

ಕುಕ್ಕೆ ಸುಬ್ರಹ್ಮಣ್ಯ: ಸೂರ್ಯಗ್ರಹಣ ಹಿನ್ನೆಲೆ| ಅ.25ರಂದು ದೇವಸ್ಥಾನದಲ್ಲಿ ಸೇವಾ ಕಾರ್ಯಗಳಿಗೆ ಬ್ರೇಕ್

ಸಮಗ್ರ ನ್ಯೂಸ್: ಸೂರ್ಯಗ್ರಹಣ ಸಂಭವಿಸುವ ಹಿನ್ನಲೆಯಲ್ಲಿ ಅ.25ರಂದು ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎಲ್ಲಾ ಸೇವೆಗಳನ್ನು ರದ್ದುಪಡಿಸಲಾಗಿದೆ. ದೇವಾಲಯದಲ್ಲಿ ಯಾವುದೇ ಸೇವೆಗಳು ಇರುವುದಿಲ್ಲ. ಭೋಜನ ಪ್ರಸಾದ ವ್ಯವಸ್ಥೆಯು ಕೂಡ ಇರುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅ.26ರ ಬುಧವಾರದಂದು ಶ್ರೀ ದೇವರ ನಿತ್ಯದ ಪೂಜಾ ಸಮಯದಲ್ಲಿ ವ್ಯತ್ಯಯವಾಗುವುದರಿಂದ ಭಕ್ತಾದಿಗಳಿಗೆ ಬೆಳಿಗ್ಗೆ 9 ರಿಂದ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ: ಸೂರ್ಯಗ್ರಹಣ ಹಿನ್ನೆಲೆ| ಅ.25ರಂದು ದೇವಸ್ಥಾನದಲ್ಲಿ ಸೇವಾ ಕಾರ್ಯಗಳಿಗೆ ಬ್ರೇಕ್ Read More »

ಪುತ್ತೂರು: ರೈಲಿನಡಿಗೆ ಬಿದ್ದು ಯುವಕ ಸಾವು

ಸಮಗ್ರ ನ್ಯೂಸ್: ರೈಲಿನಡಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಅ.16 ರಂದು ಸಂಜೆ ಮಿತ್ತೂರಿನಲ್ಲಿ ನಡೆದಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಕಬಕ-ಪುತ್ತೂರು ರೈಲ್ವೆ ನಿಲ್ದಾಣಕ್ಕೆ ತರಲಾಗಿದ್ದು, ರೈಲಿನಡಿ ಬಿದ್ದಿದ್ದರಿಂದ ಮೃತದೇಹವು ಛಿದ್ರಗೊಂಡಿದೆ. ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ ರೈಲಿನ ಪೈಲೆಟ್ ಚಲಿಸುತ್ತಿರುವ ರೈಲನ್ನು ನಿಲ್ಲಿಸಿ ತೀವ್ರ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆ ತಂದಾಗ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಘಟನೆ ನಡೆದ ಸಂದರ್ಭ ರೈಲ್ವೇ

ಪುತ್ತೂರು: ರೈಲಿನಡಿಗೆ ಬಿದ್ದು ಯುವಕ ಸಾವು Read More »

“ನಾನೇನು ಉಗ್ರಗಾಮಿಯಲ್ಲ, ಸಾಮಾಜಿಕ ಕಾರ್ಯಕರ್ತೆಯಷ್ಟೇ” | ಪೊಲೀಸರ ಕಾರ್ಯವೈಖರಿಗೆ ಪ್ರತಿಭಾ ಕುಳಾಯಿ ಗರಂ

ಸಮಗ್ರ ನ್ಯೂಸ್: ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗೆ ಮಧ್ಯರಾತ್ರಿ ಮನೆಗೆ ನುಗ್ಗಿ ನೊಟೀಸ್ ನೀಡಿದ ಪೊಲೀಸ್ ಇಲಾಖೆ ವಿರುದ್ದ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಮಹಿಳೆಯರು ಇರುವ ಮನೆಗೆ ಯಾರು ಬೇಕಾದರೂ ಮಧ್ಯರಾತ್ರಿ ಬಂದು ಬಾಗಿಲು ತಟ್ಟಬಹುದೇ? ಇದೆಂತಾ ಪ್ರಜಾಪ್ರಭುತ್ವ? ಎಂದು ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್ ಇಲಾಖೆ ವಿರುದ್ದ ಕಿಡಿಕಾರಿರುವ ಅವರು ಅಕ್ಟೋಬರ್ 18ರ ಟೋಲ್ ಗೇಟ್ ಹೋರಾಟವನ್ನು ಹತ್ತಿಕ್ಕಲು ನನ್ನ ಮನೆಗೆ ಮಧ್ಯರಾತ್ರಿ ಪೊಲೀಸರನ್ನು ಕಳುಹಿಸಿ ನೋಟಿಸ್ ನೀಡಿರುವ

“ನಾನೇನು ಉಗ್ರಗಾಮಿಯಲ್ಲ, ಸಾಮಾಜಿಕ ಕಾರ್ಯಕರ್ತೆಯಷ್ಟೇ” | ಪೊಲೀಸರ ಕಾರ್ಯವೈಖರಿಗೆ ಪ್ರತಿಭಾ ಕುಳಾಯಿ ಗರಂ Read More »

ಶಾಸಕ ಹರೀಶ್ ಪೂಂಜಾ ಮೇಲೆ ಕೊಲೆಯತ್ನವಾಗಿಲ್ಲ – ಎಸ್ಪಿ ಸ್ಪಷ್ಟನೆ

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಮೇಲೆ ದಾಳಿಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಾಧ್ಯಮ ಹೇಳಿಕೆ ನೀಡಿದ್ದು, ಇದು ಕೊಲೆಯತ್ನ ಪ್ರಕರಣವಲ್ಲ. ಓವರ್ ಟೇಕ್ ಮಾಡುವ ಭರದಲ್ಲಿ ಮಾಡಿದಾಗ ನಡೆದ ಘಟನೆಯಾಗಿದೆ. ಸ್ಕಾರ್ಪಿಯೋ ಕಾರಿನಲ್ಲಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಆರೋಪಿಯ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ. ಆರೋಪಿ

ಶಾಸಕ ಹರೀಶ್ ಪೂಂಜಾ ಮೇಲೆ ಕೊಲೆಯತ್ನವಾಗಿಲ್ಲ – ಎಸ್ಪಿ ಸ್ಪಷ್ಟನೆ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಬೆದರಿಕೆ ಒಡ್ಡಿದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾರವರ ಮೇಲೆ ನಡೆದಿದೆ ಎನ್ನಲಾದ ತಲವಾರ್‌ ದಾಳಿ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆದರೆ ಆತನ ಬಳಿ ಯಾವುದೇ ಆಯುಧ ಪತ್ತೆಯಾಗಿಲ್ಲದಿರುವುದು ವಿಶೇಷವಾಗಿದೆ. ಮಂಗಳೂರು ಪಳ್ನೀರ್‌ ನಿವಾಸಿ ಅಬ್ದುಲ್‌ ಖಾದರ್‌ ಎಂಬವರ ಪುತ್ರ ರಿಯಾಝ್‌ (38) ಬಂಧಿತ ಆರೋಪಿ. ಈತನಿಗೆ ಯಾವುದೇ ಪೂರ್ವ ಕ್ರಿಮಿನಲ್‌ ಹಿನ್ನಲೆ ಇಲ್ಲ .ಈ ಪ್ರಕರಣ ಹೊರತು ಪಡಿಸಿ ಈತನ ವಿರುದ್ದ ಇವರೆಗೆ ಯಾವುದೇ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಬೆದರಿಕೆ ಒಡ್ಡಿದ ಆರೋಪಿ ಅರೆಸ್ಟ್ Read More »

ಪುತ್ತೂರು ಬಸ್ ನಿಲ್ದಾಣ ಇನ್ಮುಂದೆ ಕೋಟಿ-ಚೆನ್ನಯ ಬಸ್ ನಿಲ್ದಾಣ| ಪ್ರಸ್ತಾವನೆಗೆ ಅನುಮೋದನೆ ನೀಡಿದ ರಾಜ್ಯಸರ್ಕಾರ

ಸಮಗ್ರ ನ್ಯೂಸ್: ಪುತ್ತೂರು ಸರಕಾರಿ ಬಸ್ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯ ಹೆಸರು ಇಡಲು ಸರಕಾರ ಅನುಮೋದನೆ ನೀಡಿದೆ. ಪಡುಮಲೆ ಕೋಟಿ-ಚೆನ್ನಯ ಸಂಚಲನ ಟ್ರಸ್ಟ್ ‌ಬಸ್ ನಿಲ್ದಾಣಕ್ಕೆ ತುಳುನಾಡಿನ ಆರಾಧ್ಯ ಪುರುಷರ ಹೆಸರು ಇಡುವಂತೆ ಶಾಸಕ ಸಂಜೀವ ಮಠಂದೂರಿಗೆ ಮನವಿ ಸಲ್ಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ನಾಮಕರಣಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ಸರಕಾರದ ಸಂಬಂಧಪಟ್ಟ ಇಲಾಖೆಗಳಿಗೆ ಹಸ್ತಾಂತರಿಸಲಾಗಿತ್ತು.ಇದೀಗ ಸರಕಾರ ಈ ಮನವಿಗೆ ಸ್ಪಂದಿಸುವ ಮೂಲಕ ಅನುಮೋದನೆಯನ್ನು ನೀಡಿದೆ.

ಪುತ್ತೂರು ಬಸ್ ನಿಲ್ದಾಣ ಇನ್ಮುಂದೆ ಕೋಟಿ-ಚೆನ್ನಯ ಬಸ್ ನಿಲ್ದಾಣ| ಪ್ರಸ್ತಾವನೆಗೆ ಅನುಮೋದನೆ ನೀಡಿದ ರಾಜ್ಯಸರ್ಕಾರ Read More »

ಕಲ್ಲಡ್ಕ: ನಿರ್ಮಾಣ ಹಂತದ ಪ್ಲೈಓವರ್ ಕುಸಿತ

ಸಮಗ್ರ ನ್ಯೂಸ್: ಮಂಗಳೂರು ಬೆಂಗಳೂರು ರಾ.ಹೆದ್ದಾರಿಯ ಬಂಟ್ವಾಳದಿಂದ ಶಿರಾಡಿವರೆಗಿನ ಚತುಷ್ಪಥ ಹೆದ್ದಾರಿ ನಿರ್ಮಾಣದ ಕಾಮಗಾರಿ ವೇಳೆ ಕಲ್ಲಡ್ಕದಲ್ಲಿ ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿಯ ನಿರ್ಮಾಣ ಹಂತದ ಪಿಲ್ಲರ್ ಹಠಾತ್ ಕುಸಿತಗೊಂಡ ಘಟನೆ ಅ.13 ರಂದು ಮಧ್ಯಾಹ್ನ ನಡೆದಿದೆ. ಕಲ್ಲಡ್ಕ ಪೇಟೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಫ್ಲೈ ಓವರ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಹಲವು ರೀತಿಯಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಇದೀಗ ನಿರ್ಮಾಣ ಹಂತದ ಪಿಲ್ಲರ್ ಕಾಮಗಾರಿ ಕುಸಿದಿದ್ದು, ಈ ಘಟನೆಯ ನಂತರ

ಕಲ್ಲಡ್ಕ: ನಿರ್ಮಾಣ ಹಂತದ ಪ್ಲೈಓವರ್ ಕುಸಿತ Read More »

ಮಂಗಳೂರು: ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ದಿ. ಪುವೀಣ್ ನೆಟ್ಟಾರು ಅವರ ಪತ್ನಿ ನೂತನಕುಮಾರಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಅವರು ಇಂದು (ಗುರುವಾರ) ಬೆಳಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರವನ್ನು ಸ್ವೀಕರಿಸಿದ್ದಾರೆ. ದಿ. ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರು ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಕೆಲಸ ಮಾಡಲಿದ್ದಾರೆ. ನೂತನಕುಮಾರಿ ಅವರಿಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ‘ಸಿ’ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಆದರೆ,

ಮಂಗಳೂರು: ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ Read More »