ಕರಾವಳಿ

ಮಂಗಳೂರು: ವಿದ್ಯುತ್ ತಂತಿ‌ ಸ್ಪರ್ಶಿಸಿ ಇಬ್ಬರು‌ ಆಟೋ‌ ಚಾಲಕರು ಸಾವು

ಸಮಗ್ರ ನ್ಯೂಸ್: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಮಂಗಳೂರು ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕರನ್ನು ರಾಜು ಮತ್ತು ದೇವರಾಜು ಎಂದು ಗುರುತಿಸಲಾಗಿದೆ. ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು. ಇಂದು ಬೆಳಗ್ಗೆ 4.30 ರ ಸುಮಾರಿಗೆ ಒಬ್ಬರು ರಿಕ್ಷಾ ಸ್ವಚ್ಚ ಗೊಳಿಸಲು ಹೊರಬಂದಿದ್ದು, ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ […]

ಮಂಗಳೂರು: ವಿದ್ಯುತ್ ತಂತಿ‌ ಸ್ಪರ್ಶಿಸಿ ಇಬ್ಬರು‌ ಆಟೋ‌ ಚಾಲಕರು ಸಾವು Read More »

ಸುರತ್ಕಲ್: ರಾ.ಹೆದ್ದಾರಿ ದುರವಸ್ಥೆಗೆ ಪಲ್ಟಿ ಹೊಡೆದ ಸ್ಕೂಟರ್| ಗುಂಡಿಯಲ್ಲೇ‌ ಸ್ಕೂಟರ್ ಬಿಟ್ಟು ಪ್ರತಿಭಟನೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಬಳಿ ಅರೆಬರೆ ಕಾಂಕ್ರೀಟ್ ಹಾಗೂ ಡಾಂಬರು ಹಾಕಿದ್ದು, ಭಾರಿ ಮಳೆಗೆ ಹೆದ್ದಾರಿ ಹೊಂಡಮಯವಾಗಿದೆ. ಸ್ಕೂಟರ್ ಸವಾರರೊಬ್ಬರು ಬುಧವಾರ ಬೆಳಿಗ್ಗೆ ಹೆದ್ದಾರಿಯ ಗುಂಡಿಗೆ ಬಿದ್ದು ಗಾಯಗೊಂಡರು. ಇದರಿಂದ ಬೇಸತ್ತ ಅವರು, ತಾವು ಬಿದ್ದ ಹೊಂಡದಲ್ಲೇ ತಮ್ಮ ಸ್ಕೂಟರ್ ನಿಲ್ಲಿಸಿ, ತಾವೂ ಅದರ ಪಕ್ಕದಲ್ಲೇ ನಿಂತು ಈ ದುರವಸ್ಥೆಯ ಬಗ್ಗೆ ಪ್ರತಿಭಟನೆ ನಡೆಸಿದರು. ಅಲ್ಲದೇ, ಹೆದ್ದಾರಿಯಲ್ಲಿ ಸಾಗುತ್ತಿದ್ದ ಇತರ ವಾಹನ ಸವಾರರಿಗೂ ಗುಂಡಿಗಳ ಕುರಿತು ಎಚ್ಚರಿಸುವ ಮೂಲಕ ಗಮನ ಸೆಳೆದರು. ಇಷ್ಟೆಲ್ಲ‌

ಸುರತ್ಕಲ್: ರಾ.ಹೆದ್ದಾರಿ ದುರವಸ್ಥೆಗೆ ಪಲ್ಟಿ ಹೊಡೆದ ಸ್ಕೂಟರ್| ಗುಂಡಿಯಲ್ಲೇ‌ ಸ್ಕೂಟರ್ ಬಿಟ್ಟು ಪ್ರತಿಭಟನೆ Read More »

ಪುತ್ತೂರು: ಭಾರೀ ಮಳೆಗೆ ಮನೆ ಮೇಲೆ ಧರೆ‌ ಕುಸಿದು‌ ಮಣ್ಣಿನಡಿ ಸಿಲುಕಿದ ಮಕ್ಕಳು| ಪವಾಡ ಸದೃಶ ತಪ್ಪಿದ ಭಾರೀ ದುರಂತ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮತ್ತೊಂದು ಅವಘಡ ಸಂಭವಿಸಿದೆ. ದ.ಕ ಜಿಲ್ಲೆಯ ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದ ಪರಿಣಾಮ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ ಘಟನೆ ಇಂದು(ಗುರುವಾರ) ಬೆಳಗಿನ ಜಾವ ನಡೆದಿದೆ. ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಘಟನೆ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿದಿದೆ. ಅದೃಷ್ಟವಶಾತ್ ಮಣ್ಣಿನಡಿ ಸಿಲುಕಿದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋಡೆ ಕುಸಿದ

ಪುತ್ತೂರು: ಭಾರೀ ಮಳೆಗೆ ಮನೆ ಮೇಲೆ ಧರೆ‌ ಕುಸಿದು‌ ಮಣ್ಣಿನಡಿ ಸಿಲುಕಿದ ಮಕ್ಕಳು| ಪವಾಡ ಸದೃಶ ತಪ್ಪಿದ ಭಾರೀ ದುರಂತ Read More »

ಕರಾವಳಿಯಲ್ಲಿ ಭಾರೀ ಮಳೆ‌ ಮುನ್ಸೂಚನೆ| ಜೂ.27ರಂದು ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ನಾಳೆ ಭಾರೀ ಪ್ರಮಾಣದ ಮಳೆ ಬೀಳುವ ಸಾಧ್ಯತೆ ಇದೆ. ನಾಳೆ(ಜೂ. ೨೭) ಮಾತ್ರವಲ್ಲದೆ ಶುಕ್ರವಾರಕ್ಕೂ ಮಳೆ ಮುಂದುವರೆಯಲಿದೆ. ಸುಮಾರು 30 ತಾಸಿನ ಭಾರೀ ಮಳೆಗೆ ತಯಾರಾಗಲು ಈ ಜಿಲ್ಲೆಗಳ ಜನರಿಗೆ ಸೂಚಿಸಲಾಗಿದೆ. ನಡುವೆ ದಕ್ಷಿಣ ಒಳನಾಡಿನಲ್ಲೂ ಮುಂಗಾರು

ಕರಾವಳಿಯಲ್ಲಿ ಭಾರೀ ಮಳೆ‌ ಮುನ್ಸೂಚನೆ| ಜೂ.27ರಂದು ರೆಡ್ ಅಲರ್ಟ್ ಘೋಷಣೆ Read More »

ಭಾರಿ ಮಳೆ ಹಿನ್ನೆಲೆ| ನಾಳೆ(ಜೂ.27)ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ‌ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (ಜೂ.27) ಗುರುವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿಗೆ ಆದೇಶ ಹೊರಡಿಸಿದ್ದಾರೆ. ರಜೆ ಪ್ರೌಢಶಾಲೆವರೆಗಿನ ತರಗತಿಗಳಿಗೆ ಮಾತ್ರ ಅನ್ವಯವಾಗಲಿದೆ.

ಭಾರಿ ಮಳೆ ಹಿನ್ನೆಲೆ| ನಾಳೆ(ಜೂ.27)ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ Read More »

ಕುಕ್ಕೆ ಸುಬ್ರಹ್ಮಣ್ಯ: ಮದ್ಯಪಾನ ಮಾಡಿದ್ದ ವ್ಯಕ್ತಿಯ ತಳ್ಳಿದ‌ ಆನೆ ‘ಯಶಸ್ವಿ’

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ರೂಂ ಬಾಯ್ ಒಬ್ಬರನ್ನು ಎಳೆದು ಹಾಕಿದ ಘಟನೆ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿಗೆ ಕೆಲವೇ ಸಮಯದ ಮೊದಲು ಈ ಘಟನೆ ನಡೆದಿದೆ. ಸುಬ್ರಹ್ಮಣ್ಯದ ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಡಿ.ಕೆ.ಶಿ ಯವರನ್ನು ಸ್ವಾಗತಿಸಲು ಹೋಗುವ ಸಲುವಾಗಿ ನಿಂತಿತ್ತು. ಈ ವೇಳೆ ಒಂದಿಬ್ಬರು ಪೊಲೀಸರು ಕೂಡ ಆನೆಯ ಬಳಿಯಲ್ಲಿ ನಿಂತು ಪೋಟೋ ತೆಗೆಯಲು ಬಂದಿದ್ದರು. ಇದೇ ವೇಳೆಗೆ ಸುಬ್ರಹ್ಮಣ್ಯದ ಲಾಡ್ಜ್ ಒಂದರ

ಕುಕ್ಕೆ ಸುಬ್ರಹ್ಮಣ್ಯ: ಮದ್ಯಪಾನ ಮಾಡಿದ್ದ ವ್ಯಕ್ತಿಯ ತಳ್ಳಿದ‌ ಆನೆ ‘ಯಶಸ್ವಿ’ Read More »

ಸುಬ್ರಹ್ಮಣ್ಯ: 9/11A, ಬೆಳೆವಿಮೆ ಸಮಸ್ಯೆ ಪರಿಹರಿಸಲು ಡಿಸಿಎಂ ಗೆ ಮನವಿ

ಸಮಗ್ರ ನ್ಯೂಸ್: ಸಾರ್ವಜನಿಕರು ಹಾಗೂ ರೈತರು ಇದೀಗ 9/11A ಮಾಡಿಸಲು ಮೂಡಾ ಕ್ಕೆ ಹೋಗಬೇಕಾದ ಪರಿಸ್ಥಿತಿ ಬಂದಿದ್ದು ಇದನ್ನು ಮತ್ತೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ತರಬೇಕೆಂದು ಹಾಗೂ ಹವಾಮಾನ ಆಧಾರಿತ ಬೆಲೆ ವಿಮೆ ಇನ್ನೂ ಆದೇಶ ಬರದೆ ಕೃಷಿಕರು ಕಂಗಾಲಾಗಿದ್ದು ಈ ಬಗ್ಗೆ ಕ್ರಮ ವಹಿಸುವಂತೆ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಸುಧಿರ್ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರನ್ನು ಭೇಟಿ ಆಗಿ ಮನವಿ ನೀಡಲಾಯಿತು ಇದಕ್ಕೆ ಸ್ಪಂದಿಸಿದ ಡಿಸಿಎಂ ನಂತರ ಪತ್ರಿಕಾಗೋಷ್ಠಿಯಲ್ಲಿ

ಸುಬ್ರಹ್ಮಣ್ಯ: 9/11A, ಬೆಳೆವಿಮೆ ಸಮಸ್ಯೆ ಪರಿಹರಿಸಲು ಡಿಸಿಎಂ ಗೆ ಮನವಿ Read More »

ಹವಾಮಾನ ವರದಿ| ಕರಾವಳಿಯಲ್ಲಿ ನಿರಂತರ‌ ವರ್ಷಧಾರೆ| ಜೂ.30ರವರೆಗೆ‌ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆಯಾಗುತ್ತಿದ್ದು ರಾಜ್ಯಾದ್ಯಂತ ಜೂನ್ 30ರ ವರೆಗೆ ಐದು ದಿನಗಳ ಕಾಲ ರಾಜ್ಯದ ಎಲ್ಲಾ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಅನ್ನು ರಾಜ್ಯ ಹವಾಮಾನ ಇಲಾಖೆ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಇನ್ನು ಕೋಟೆ,

ಹವಾಮಾನ ವರದಿ| ಕರಾವಳಿಯಲ್ಲಿ ನಿರಂತರ‌ ವರ್ಷಧಾರೆ| ಜೂ.30ರವರೆಗೆ‌ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ Read More »

ಮಂಗಳೂರು: ಕಾಂಪೌಂಡ್ ಕುಸಿದು ನಾಲ್ವರು ದುರ್ಮರಣ

ಸಮಗ್ರ ನ್ಯೂಸ್: ಮಂಗಳೂರಿನ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮನೆಯೊಳಗೆ ವಾಸ್ತವ್ಯವಿದ್ದ ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತ ದುರ್ದೈವಿಗಳು. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಇಬ್ಬರ ಶವಗಳನ್ನು ಹೊರ ತೆಗೆಯಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದೆ. ಅಬೂಬಕ್ಕರ್

ಮಂಗಳೂರು: ಕಾಂಪೌಂಡ್ ಕುಸಿದು ನಾಲ್ವರು ದುರ್ಮರಣ Read More »

ಬೆಳ್ಳಾರೆ ವಲಯದ ಅಮರ ಪಡ್ನೂರು ದೀಪಶ್ರೀ ಸಂಘದ ಸವಿತಾರವರಿಗೆ ಸುರಕ್ಷಾದ ಚೆಕ್ ಹಸ್ತಾಂತರ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ)ಸುಳ್ಯ ತಾಲೂಕು ಬೆಳ್ಳಾರೆ ವಲಯದ ಅಮರ ಪಡ್ನೂರು ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಸಂಘದ ಸವಿತಾರವರಿಗೆ ಸುರಕ್ಷಾದ ಚೆಕ್ ನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತ ಉಪಾಧ್ಯಕ್ಷ ಭುವನೇಶ್ವರಿ ತಾಲೂಕಿನ ಯೋಜನಾಧಿಕಾರಿ ಮಾಧವ, ಬೆಳ್ಳಾರೆ ವಲಯದ ಮೇಲ್ವಿಚಾರಕ ವಿಶಾಲ ಅಮರ ಪಡ್ನೂರು ಒಕ್ಕೂಟದ ಅಧ್ಯಕ್ಷ ವೀಣಾರವರು ಜೊತೆ ಕಾರ್ಯದರ್ಶಿ ಶ್ರೀವಸಂತವರು ಹಾಗೂ ಸೇವಾ ಪ್ರತಿನಿಧಿ ದಿವ್ಯ ರವರು ಪದಾಧಿಕಾರಿ ಶಾಂತಲಾ, ಲಲಿತ, ಚಿತ್ರಕಲಾ, ಶೇಷಮ್ಮ,

ಬೆಳ್ಳಾರೆ ವಲಯದ ಅಮರ ಪಡ್ನೂರು ದೀಪಶ್ರೀ ಸಂಘದ ಸವಿತಾರವರಿಗೆ ಸುರಕ್ಷಾದ ಚೆಕ್ ಹಸ್ತಾಂತರ Read More »