ಕರಾವಳಿ

ಮಂಗಳೂರು: ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಸಮಗ್ರ ನ್ಯೂಸ್: ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಗುರುವಾರ ಸಂಜೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹರ್ಷದೀಪ್(20) ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿದ್ದ ಈತ ಗುರುವಾರ ಬಗಂಬಿಲದ ಮನೆಗೆ ಬಂದಿದ್ದು ಮನೆಯಲ್ಲಿ ತಾಯಿ ಮತ್ತು ಮಗ ವಾಸವಾಗಿದ್ದರು . ತಾಯಿಗೆ ತುಂಬ ಸಾಲ ಇರುವ ಬಗ್ಗೆ ಅರಿತ ವಿದ್ಯಾರ್ಥಿ ಹರ್ಷದೀಪ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ

ಮಂಗಳೂರು: ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ Read More »

ಮಂಗಳೂರು: ಚಾಲಿ ಅಡಿಕೆ ಮಾರುಕಟ್ಟೆ ಕೊಂಚ ಚೇತರಿಕೆ| ಆಮದು ಸುಂಕ ಹೆಚ್ಚಳಕ್ಕೆ ಆಗ್ರಹ

ಸಮಗ್ರ ನ್ಯೂಸ್: ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಇಳಿಕೆಯ ಹಾದಿಯಲ್ಲಿ ಸಾಗುತ್ತಿದ್ದ ಹೊಸ ಅಡಿಕೆ ಧಾರಣೆಯಲ್ಲಿ ಕೊಂಚ ಚೇತರಿಕೆಯ ಲಕ್ಷಣ ಕಂಡು ಬಂದಿದೆ. ಅಡಿಕೆ ಸುಲಿದು ಮಾರಾಟ ಮಾಡುವ ಸಂದರ್ಭದಲ್ಲಿ ಏಕಾಏಕಿ ಧಾರಣೆ ಕುಸಿತ ಆಗಿರುವುದರಿಂದ ಬೆಳೆಗಾರರಿಗೆ ನಷ್ಟದ ಭೀತಿ ಉಂಟಾಗಿತ್ತು. ಆದರೆ ಇದೀಗ ಧಾರಣೆ ಏರಿಕೆಯತ್ತ ಮುಖ ಮಾಡಿದ್ದು ಇನ್ನಷ್ಟು ಹೆಚ್ಚಳದ ನಿರೀಕ್ಷೆ ಮೂಡಿಸಿದೆ. ಹೊರ ಮಾರುಕಟ್ಟೆಯಲ್ಲಿ ಮೇ ತಿಂಗಳಲ್ಲಿ 435-440 ರೂ. ತನಕ ಇದ್ದ ಧಾರಣೆ ಜೂನ್‌ ಮೊದಲ ವಾರದಲ್ಲಿ 400 ರೂ.ಗಿಂತ ಕೆಳಗೆ ಇಳಿದಿತ್ತು.

ಮಂಗಳೂರು: ಚಾಲಿ ಅಡಿಕೆ ಮಾರುಕಟ್ಟೆ ಕೊಂಚ ಚೇತರಿಕೆ| ಆಮದು ಸುಂಕ ಹೆಚ್ಚಳಕ್ಕೆ ಆಗ್ರಹ Read More »

ಪುತ್ತೂರು:ಗೃಹರಕ್ಷಕ ಸಿಬ್ಬಂದಿ ಕುರಿತು ಮಾನಹಾನಿಕರ ವರದಿ ಪ್ರಕಟ| ಸುದ್ದಿಬಿಡುಗಡೆ ಸಂಪಾದಕ ಡಾ. ಯು.ಪಿ ಶಿವಾನಂದ ವಿರುದ್ದ ದೂರು‌ ದಾಖಲು

ಸಮಗ್ರ ನ್ಯೂಸ್: ಗೃಹರಕ್ಷಕದಳದ ಮಹಿಳಾ ಸಿಬ್ಬಂದಿ ಕುರಿತು ಮಾನಹಾನಿಕರ ವರದಿ ಪ್ರಕಟಿಸಿದ ಸುದ್ದಿ ಬಿಡುಗಡೆ ಸಂಪಾದಕ ಡಾ. ಯು.ಪಿ ಶಿವಾನಂದ ವಿರುದ್ದ ಪುತ್ತೂರು ಡಿವೈಎಸ್ ಪಿ ಗಾನ ಪಿ. ಕುಮಾರ್ ಗೆ ದೂರು ನೀಡಲಾಗಿದೆ. ಗೃಹರಕ್ಷಕ ದಳದ ಪುತ್ತೂರು ಘಟಕವು ಜೂ.16ರಂದು ದೂರು ನೀಡಿದ್ದು, ಸಿಬ್ಬಂದಿ ವಿರುದ್ದ ಮಾನಹಾನಿಕರವಾಗಿ, ಅವಹೇಳನಕಾರಿಯಾಗಿ ವರದಿ ಪ್ರಕಟಿಸಲಾಗಿದೆ, ಈ ಕುರಿತಂತೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಂತೆ ಮನವಿ ಮಾಡಲಾಗಿದೆ. ಪುತ್ತೂರಿನ ಭವನವೊಂದಕ್ಕೆ ಆ ಭವನದಲ್ಲಿ ಕಚೇರಿ ಹೊಂದಿರುವ ಪ್ರತಿಷ್ಠಿತ ವ್ಯಕ್ತಿಯೋರ್ವರು ಗೃಹರಕ್ಷಕ

ಪುತ್ತೂರು:ಗೃಹರಕ್ಷಕ ಸಿಬ್ಬಂದಿ ಕುರಿತು ಮಾನಹಾನಿಕರ ವರದಿ ಪ್ರಕಟ| ಸುದ್ದಿಬಿಡುಗಡೆ ಸಂಪಾದಕ ಡಾ. ಯು.ಪಿ ಶಿವಾನಂದ ವಿರುದ್ದ ದೂರು‌ ದಾಖಲು Read More »

ಮಂಗಳೂರು: ಮಹಡಿಯಿಂದ ಬಿದ್ದು ಬಾಲಕಿ ಸಾವು

ಸಮಗ್ರ ನ್ಯೂಸ್: ಬಾಲಕಿಯೊಬ್ಬಳು ಐದನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು, ಮೃತಪಟ್ಟ ಘಟನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ. ಮಹಮ್ಮದ್ ಇಂತಯಾಜ್ ಅವರ ಪುತ್ರಿ ಸೆಹರ್ ಇಂತಿಯಾಜ್ (15) ಮೃತಪಟ್ಟ ಬಾಲಕಿ. ಮನೆಯ ಬಾಲ್ಕನಿಯ ಸೈಡ್ ಕರ್ಟನ್ ಅನ್ನು ಕುರ್ಚಿಯ ಮೇಲೆ ಹತ್ತಿ ಸರಿಪಡಿಸುವಾಗ ಆಯತಪ್ಪಿ ಕೆಳಗೆ ಬಿದ್ದು ಪ್ರಜ್ಞಾಹೀನಳಾಗಿದ್ದಳು. ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಗಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಈಕೆ ಬಿಜೈ ಲೂರ್ಡ್ಸ್ ಸೆಂಟ್ರಲ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದಳು. ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಮಹಡಿಯಿಂದ ಬಿದ್ದು ಬಾಲಕಿ ಸಾವು Read More »

ಬೆಳ್ತಂಗಡಿ: ಶಿಕ್ಷಕಿ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮೃತ್ಯು

ಬೆಳ್ತಂಗಡಿ: ತಾಲೂಕಿನ ಕಾಯರ್ತಡ್ಕದ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕಿ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮೃತಪಟ್ಟ ಘಟನೆ ಜೂ. 13ರಂದು ನಡೆದಿದೆ. ಕಳೆಂಜ ಗ್ರಾಮದ ಉದ್ರಾಜೆ ನಿವಾಸಿ, ಭಾರತಿ ಎಸ್‌. (42) ಮೃತರು. ಇವರು ಕಾರ್ಯನಿಮಿತ್ತ ಬೆಂಗಳೂರಿಗೆ ಹೋಗಿದ್ದಾಗ ಹೃದಯಾಘಾತ ಕ್ಕೊಳಗಾಗಿದ್ದರು. ತತ್‌ಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೇಲಂತಬೆಟ್ಟು ಕಾಲೇಜಿನ ಉಪನ್ಯಾಸಕ ಡಾ| ಕುಶಾಲಪ್ಪ ಎಸ್‌. ಅವರ ಪತ್ನಿಯಾಗಿರುವ ಭಾರತಿ ಅವರು ಕಳೆದ 8 ವರ್ಷಗಳಿಂದ ಕಾಯರ್ತಡ್ಕದ ದಿವ್ಯಜ್ಯೋತಿ ಆಂಗ್ಲ

ಬೆಳ್ತಂಗಡಿ: ಶಿಕ್ಷಕಿ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮೃತ್ಯು Read More »

ಸುಳ್ಯ : ಮಹಿಯೊಬ್ಬರ ಮನೆ ಬೀಳುವ ಹಂತಕ್ಕೆ

ಅಧಿಕಾರಿಗಳ ನಿರ್ಲಕ್ಷ್ಯ, ಅಂಬೇಡ್ಕರ್ ರಕ್ಷಣಾ ವೇದಿಕೆ ಹೋರಾಟದ ಎಚ್ಚರಿಕೆ ಆಲೆಟ್ಟಿ ಗ್ರಾಮದ ಬಡ ದಲಿತ ಮಹಿಯೊಬ್ಬರು ಸರಕಾರದ ಸವಲತ್ತಿಗಾಗಿ ಅಲೆದಾಡಿದಾಡಿದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ದಿಂದಾಗಿ ಬೀಳುವ ಸ್ಥಿತಿಯಲ್ಲಿರುವ ಮನೆಯಲ್ಲಿಯೇ ಜೀವನ ಸಾಗಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆಲೆಟ್ಟಿ ಗ್ರಾಮದ ಮೊರಂಗಲ್ಲು ದಲಿತ ಮಹಿಳೆ ಭಾಗೀರಥಿ ಎಂಬವರು ಸುಮಾರು 40 ವರ್ಷಗಳಿಂದ ಸರ್ವೇ ನಂಬರ್ 121 ರಲ್ಲಿ ಸಣ್ಣದೊಂದು ಮನೆಕಟ್ಟಿಕೊಂಡು ವಾಸವಾಗಿದ್ದಾರೆ. ಆದರೆ ಈ ಜಾಗಕ್ಕೆ 94ಸಿಗೆ ಅರ್ಜಿ ಕೊಟ್ಟು ಹಲವು ವರ್ಷಗಳಾದರೂ ಅವರಿಗೆ ಇದುವರೆಗೂ ಹಕ್ಕು

ಸುಳ್ಯ : ಮಹಿಯೊಬ್ಬರ ಮನೆ ಬೀಳುವ ಹಂತಕ್ಕೆ Read More »

ಮಂಗಳೂರು: ಪಾರ್ಕ್ ಮಾಡಲಾಗಿದ್ದ ಬಸ್‌ನಿಂದ ಹಣ ಕಳವು

ಮಂಗಳೂರು: ಸ್ಟೇಟ್‌ಬ್ಯಾಂಕ್‌ನಲ್ಲಿ ಪಾರ್ಕ್ ಮಾಡಲಾಗಿದ್ದ ಬಸ್‌ವೊಂದರಿಂದ ವ್ಯಕ್ತಿಯೊಬ್ಬ ಹಣ ಕಳವುಗೈಯುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಟೇಟ್‌ಬ್ಯಾಂಕ್ ಬಸ್‌ನಿಲ್ದಾಣ-ಉಪ್ಪಿನಂಗಡಿ ನಡುವೆ ಸಂಚರಿಸುವ ಬಸ್‌ ಇದಾಗಿದ್ದು, ಸ್ಟೇಟ್‌ಬ್ಯಾಂಕ್‌ನಲ್ಲಿ ಪಾರ್ಕ್ ಮಾಡಲಾಗಿತ್ತು. ಚಾಲಕ ಮತ್ತು ನಿರ್ವಾಹಕ ಊಟಕ್ಕಾಗಿ ಹೊರಗೆ ಹೋಗಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಬಸ್‌ನೊಳಗೆ ಆಗಮಿಸಿ ಬಸ್‌ನಲ್ಲಿ ಕಂಡಕ್ಟರ್ ಬ್ಯಾಗ್‌ನಲ್ಲಿ ಇರಿಸಲಾಗಿದ್ದ ಹಣವನ್ನು ಕದ್ದಿದ್ದಾನೆ. ಈ ವೇಳೆ ಯಾವುದೇ ಪ್ರಯಾಣಿಕರು ಬಸ್‌ನಲ್ಲಿ ಇರಲಿಲ್ಲ. ಬಸ್‌ನಿಂದ ಹಣ ಕಳವು ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಮಂಗಳೂರು: ಪಾರ್ಕ್ ಮಾಡಲಾಗಿದ್ದ ಬಸ್‌ನಿಂದ ಹಣ ಕಳವು Read More »

ನೆಲ್ಯಾಡಿ: ಟ್ರಾವೆಲ್ಲರ್ ಮೇಲೆ ಉರುಳಿದ ಮರ| ವಾಹನ ಜಖಂ

ಸಮಗ್ರ ನ್ಯೂಸ್: ಟೆಂಪೋ ಟ್ರಾವೆಲ್ಲರ್ ಮೇಲೆ ಮರ ಬಿದ್ದ ಪರಿಣಾಮ ವಾಹನ ಜಖಂಗೊಂಡು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಯಶಾಂತಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಮೇಲೆ ಪೆರಿಯಶಾಂತಿ ಸಮೀಪ ರಸ್ತೆಯ ಪಕ್ಕದಲ್ಲಿದ್ದ ಮರವೊಂದು ಉರುಳಿ ಬಿದ್ದಿದೆ. ಘಟನೆಯಲ್ಲಿ ಟ್ರಾವೆಲ್ಲರ್ ಮೇಲ್ಭಾಗಕ್ಕೆ ಹಾನಿಯಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ನೆಲ್ಯಾಡಿ: ಟ್ರಾವೆಲ್ಲರ್ ಮೇಲೆ ಉರುಳಿದ ಮರ| ವಾಹನ ಜಖಂ Read More »

ಗುಂಡ್ಯ: ಬಸ್ ಮೇಲೆ ಬಿದ್ದ ಮರ; ಅದೃಷ್ಟವಶಾತ್ ತಪ್ಪಿದ ಅಪಾಯ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ ಮೇಲೆ ಮರವೊಂದು ಉರುಳಿಬಿದ್ದ ಘಟನೆ ಗುಂಡ್ಯ – ಕುಕ್ಕೆ ಸುಬ್ರಹ್ಮಣ್ಯ ರಸ್ತೆಯ ಅನಿಲ ಬಳಿ ನಡೆದಿದೆ. ಅದೃಷ್ಟವಶಾತ್ ಸಂಭಾವ್ಯ ಅಪಾಯ ತಪ್ಪಿದ್ದು, ಪ್ರಯಾಣಿಕರು ಬಚಾವಾಗಿದ್ದಾರೆ. ಈ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಗಾಳಿ ಕಾರಣದಿಂದ ಈ ಘಟನೆ ಸಂಭವಿಸಿದೆ. ಅಪಾಯಕಾರಿ ಮರಗಳನ್ನು ತೆರವುಗೊಳಿಸದ ಅರಣ್ಯ ಇಲಾಖೆಯ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಈ ರಸ್ತೆಯಲ್ಲಿ ಆಗಾಗ ರಸ್ತೆ ಬದಿಯ ಮರಗಳು ಬೀಳುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಇನ್ನೂ ಎಚ್ಚೆತ್ತುಕೊಳ್ಳಲಿಲ್ಲ, ಈಗಾಗಲೇ ಅಪಾಯಕಾರಿ ಮರಗಳೆಂದು

ಗುಂಡ್ಯ: ಬಸ್ ಮೇಲೆ ಬಿದ್ದ ಮರ; ಅದೃಷ್ಟವಶಾತ್ ತಪ್ಪಿದ ಅಪಾಯ Read More »

ಮಂಗಳೂರು: ವಿವಿ ಕಾಲೇಜಿನಲ್ಲಿ ಗುಂಪು ಘರ್ಷಣೆ ಪ್ರಕರಣ| 6 ವಿದ್ಯಾರ್ಥಿಗಳ ಮೇಲೆ ದೂರು ದಾಖಲಿಸಿದ ಪೊಲೀಸರು

ಸಮಗ್ರ ನ್ಯೂಸ್: ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್‌ ವಿವಾದ ಬಗೆಹರಿಯುವ ಮೊದಲೇ ಇನ್ನೊಂದು ವಿವಾದ ಶುರುವಾಗಿದೆ. ನಿನ್ನೆ ಸಾವರ್ಕರ್‌ ಫೋಟೋ ವಿವಾದ ಸಂಬಂಧಿಸಿದ ಜಗಳವಾಡಿಕೊಂಡ ಮಂಗಳೂರು ವಿಶ್ವವಿದ್ಯಾಲಯ 6 ವಿದ್ಯಾರ್ಥಿಗಳ ಮೇಲೆ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರ್ಕಝ್‌, ಅಬೂಬುಕ್ಕರ್‌ ಸಿದ್ದಿಕ್‌, ಮಹಮ್ಮದ್‌ ಅಫಾಜ್‌,ಪ್ರಜನ್‌, ಸ್ವಸ್ತಿಕ್ ಮತ್ತು ಗುರುಕಿರಣ್‌ ಎಂದು ಗುರುತಿಸಲಾಗಿದೆ. ಕಾಲೇಜಿನ ಕೆಲವು ವಿದ್ಯಾರ್ಥಿಗಳು ತರಗತಿಯಲ್ಲಿ ಸಾವರ್ಕರ್‌ ಫೋಟೊ ಹಾಕಿದ್ದು, ಬಳಿಕ ತೆರವುಗೊಳಿಸಲಾಗಿದೆ. ಕಾಲೇಜಿನ ಕಾಮರ್ಸ್‌ ಬ್ಲಾಕ್‌ನಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು

ಮಂಗಳೂರು: ವಿವಿ ಕಾಲೇಜಿನಲ್ಲಿ ಗುಂಪು ಘರ್ಷಣೆ ಪ್ರಕರಣ| 6 ವಿದ್ಯಾರ್ಥಿಗಳ ಮೇಲೆ ದೂರು ದಾಖಲಿಸಿದ ಪೊಲೀಸರು Read More »