ಮಂಗಳೂರು: ಬೆಳ್ಳಂಬೆಳಗ್ಗೆ ಗುಂಡಿ ಸದ್ದು| ಪೊಲೀಸರ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿಗಳಿಗೆ ಗುಂಡೇಟು|
ಸಮಗ್ರ ನ್ಯೂಸ್: ಬೆಳ್ಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿದೆ. ಕೊಲೆ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಇಬ್ಬರು ಖದೀಮರ ಕಾಲಿಗೆ ಖಾಕಿ ಪಡೆ ಗುಂಡು ಹಾರಿಸಿ ಬಂಧಿಸಿದೆ. ಅರ್ಜುನ್ ಮೂಡುಶೆಡ್ಡೆ ಮತ್ತು ಮನೋಜ್ ಯಾನೆ ಬಿಂದಾಸ್ ಬಂಧಿತರು. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲು ಪೊಲೀಸರು ಮುಲ್ಕಿಯ ಗ್ಲೋಬಲ್ ಹೆರಿಟೇಜ್ ಲೇಔಟ್ಗೆ ಹೋದಾಗ ಘಟನೆ ನಡೆದಿದೆ. ಆರೋಪಿಗಳನ್ನ ಬಂಧಿಸಲು ಮುಂದಾದ ಪೊಲೀಸರ









