ಮಂಗಳೂರು:: ಹಿಜಾಬ್ ಕುರಿತಂತೆ ಡಿಸಿ ಕಚೇರಿ ಬಾಗಿಲು ತಟ್ಟಿದ ವಿದ್ಯಾರ್ಥಿನಿಯರು| ಸಿಂಡಿಕೇಟ್ ನಿರ್ಣಯ ರದ್ದುಪಡಿಸಲಾಗದು ಎಂದ ಜಿಲ್ಲಾಧಿಕಾರಿ|
ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ಕೆಲ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೆ ಸದ್ದು ಮಾಡುತ್ತಿದೆ. ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅನುಮತಿಗಾಗಿ ವಿದ್ಯಾರ್ಥಿನಿಯರು ಡಿ.ಸಿ ಕಚೇರಿಗೆ ತೆರಳಿದ್ದರು. ಇಂದು ಜಿಲ್ಲಾಧಿಕಾರಿಗಳು ವಿದ್ಯಾರ್ಥಿನಿಯರ ಜೊತೆಗೆ ಸಭೆ ನಡೆಸಿದ್ದು, ಬಳಿಕ ಮಾತಾಡಿದ ಜಿಲ್ಲಾಧಿಕಾರಿಗಳು ಸಿಂಡಿಕೇಟ್ ಸಭೆಯ ನಿರ್ಣಯವನ್ನು ಪಾಲಿಸಲು ಸೂಚಿಸಿದ್ದಾಗಿ ತಿಳಿಸಿದ್ದಾರೆ. ಸಭೆಯಲ್ಲಿ ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲೆ ಅನುಸೂಯ ಅವರು ಕೂಡ ಭಾಗಿಯಾಗಿದ್ದರು. ಸಭೆಯ ಬಳಿಕ ಮಾತನಾಡಿದ ದಕ್ಷಿಣ









