ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ನಿರ್ಲಕ್ಷ್ಯ| ರೋಗಿಯ ಕಾಲೊಳಗಿನ ಕಲ್ಲು ತೆಗೆಯದೇ ಹೊಲಿದ ವೈದ್ಯರು!!?
ಸಮಗ್ರ ನ್ಯೂಸ್: ಬೈಕ್ ಅಪಘಾತದಲ್ಲಿ ಸವಾರನಿಗೆ ಕಾಲಿಗೆ ಗಾಯವಾಗಿದ್ದು, ಗಾಯದಲ್ಲಿ ಸುಮಾರು 14 ಕಲ್ಲುಗಳಿದ್ದರೂ ಅವನ್ನು ನಿರ್ಲಕ್ಷಿಸಿ, ಹೊಲಿಗೆ ಹಾಕಿದ ಪರಿಣಾಮ ಗಾಯ ಉಲ್ಬಣಗೊಂಡು ಗಾಯಾಳು ಕಂಗಲಾದ ಘಟನೆ ಕಡಬದಲ್ಲಿ ನಡೆದಿದೆ. ಗಾಯ ಊತವಾಗಿ ಪರಿಣಮಿಸಿದ್ದು, ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ಮೂಲಕ ಕಲ್ಲುಗಳನ್ನು ಹೊರತೆಗೆಯಲಾಗಿದೆ. ಕೋಡಿಂಬಾಳ ಗ್ರಾಮದ ಕಲ್ಪುರೆ ನಿವಾಸಿ, ರೈಲ್ವೇ ಉದ್ಯೋಗಿ ಪುರುಷೋತ್ತಮ ಎಂಬವರು ಏ.25ರಂದು ಕೋಡಿಂಬಾಳ ಸಮೀಪದ ಉಂಡಿಲ ಎಂಬಲ್ಲಿ ಸ್ಕೂಟಿ ಸ್ಕೀಡ್ ಆಗಿ ಬಿದ್ದು ಕಾಲಿಗೆ ಗಾಯವಾಗಿತ್ತು, ಗಾಯಾಳುಗಳನ್ನು ಪುರುಷೋತ್ತಮ








