ಹವಾಮಾನ ಸಮಾಚಾರ| ಮುಂದಿನ 5 ದಿನಗಳ ಕಾಲ ಕರಾವಳಿ, ಮಲೆನಾಡಿನಲ್ಲಿ ಮಳೆ ಮುನ್ಸೂಚನೆ| ಒಳನಾಡಿನಲ್ಲೂ ವರುಣಾರ್ಭಟ ಸಾಧ್ಯತೆ
ಸಮಗ್ರ ನ್ಯೂಸ್: ಮುಂದಿನ 5 ದಿನಗಳ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಮಲೆನಾಡು ಜಿಲ್ಲೆಗಳಿಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ನವೆಂಬರ್ 8 ಮತ್ತು 9 ರಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಒಣ ಹವೆಯಿರುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು […]