ಮಂಗಳೂರು: ಧರ್ಮದಂಗಲ್ ನಡುವೆಯೂ ಸಾಮರಸ್ಯದ ಬೀಜ ಬಿತ್ತಿದ ಹಿಂದೂ ನವವಿವಾಹಿತ| ಮಸೀದಿಯಲ್ಲಿ ಮುಸ್ಲಿಂ ಗೆಳೆಯರಿಗಾಗಿ ಇಪ್ತಾರ್ ಆಯೋಜನೆ
ಸಮಗ್ರ ನ್ಯೂಸ್: ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ದಂಗಲ್ ದಿನಕ್ಕೊಂದು ತಿರುವು ಪಡೆಯತ್ತಿದೆ. ಹಿಜಾಬ್‌ನಿಂದ ಆರಂಭವಾದ ವೈಮನಸ್ಸು ಹಲಾಲ್, ವ್ಯಾಪಾರ ಬಹಿಷ್ಕಾರವನ್ನು ದಾಟಿ ಬಂಗಾರ ಖರೀದಿಯವರೆಗೂ ಬಂದು ನಿಂತಿದೆ. ಈ ಘಟನೆಯ ಆತಂಕದ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮರಸ್ಯದ ಘಟನೆ ನಡೆದಿದೆ. ತನ್ನ ಮದುವೆಗೆ ಬಂದರೂ ಉಪವಾಸ ನಿಮಿತ್ತ ಊಟ ಮಾಡದೇ ಹಿಂದಿರುಗಿದ ಮುಸ್ಲಿಂ ಗೆಳೆಯರಿಗೋಸ್ಕರ ಹಿಂದೂ ಯುವಕ ಮಸೀದಿಯಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಿ, ನೂರಾರು ಮಂದಿಗೆ ಊಟ ಹಾಕಿದ ಮಾದರಿ ಕಾರ್ಯ ದಕ್ಷಿಣ ಕನ್ನಡ










