ಕರಾವಳಿ

ನಾಳೆ(ಮಾ.17) ದೇಶಾದ್ಯಂತ ‘ಜೇಮ್ಸ್’ ಅಬ್ಬರ| ಪುನಿತ್ ಹುಟ್ಟುಹಬ್ಬಕ್ಕೆ ಅಪ್ಪು ಅಭಿನಯದ ಕೊನೆಯ ಚಿತ್ರ ರಿಲೀಸ್

ಸಮಗ್ರ ನ್ಯೂಸ್ ಡೆಸ್ಕ್: ಮಾ.17ರಂದು ಪುನೀತ್​ ರಾಜ್​ ಕುಮಾರ್​ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ಜೇಮ್ಸ್​ ಸಿನಿಮಾ ಬಿಡುಗಡೆಯಾಗುತ್ತಿದ್ದು, ಅಪ್ಪು ಅಭಿಮಾನಿಗಳು ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ. ನಾಳೆ ಪವರ್​ ಸ್ಟಾರ್​ ಪುನೀತ್​ ರಾಜ್​ ಕುಮಾರ್​​ ಅವರ 47ನೇ ಹಟ್ಟುಹಬ್ಬವಾಗಿದ್ದು,ಅವರು ನಮ್ಮನ್ನಗಲಿ ನಾಲ್ಕು ತಿಂಗಳುಗಳೇ ಕಳೆದಿವೆ. ಈ ನೋವಿನಲ್ಲೂ ಅಪ್ಪು ಅಭಿಮಾನಿಗಳು ಅವರ ಹುಟ್ಟುಹಬ್ಬದ ಜೊತೆಗೆ ಜೇಮ್ಸ್ ಸಿನಿಮಾ ಬಿಡುಗಡೆ ಜಾತ್ರೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ. ಜೇಮ್ಸ್ ಸಿನಿಮಾದ ಅದ್ಧೂರಿ ಸ್ವಾಗತಕ್ಕೆ ಅಭಿಮಾ‌ನಿಗಳು ಸಜ್ಜುಜೇಮ್ಸ್ ಚಿತ್ರದ ರಿಲೀಸ್ ದಿನವನ್ನು ಹಬ್ಬದಂತೆ

ನಾಳೆ(ಮಾ.17) ದೇಶಾದ್ಯಂತ ‘ಜೇಮ್ಸ್’ ಅಬ್ಬರ| ಪುನಿತ್ ಹುಟ್ಟುಹಬ್ಬಕ್ಕೆ ಅಪ್ಪು ಅಭಿನಯದ ಕೊನೆಯ ಚಿತ್ರ ರಿಲೀಸ್ Read More »

ಸುಳ್ಯ: ನ್ಯಾಯಾಂಗ ತೀರ್ಪು ನಿಂದಿಸಿ ಜಾಲತಾಣಗಳಲ್ಲಿ ಬರವಣಿಗೆ| ಸಂಪಾಜೆಯ ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಹೈಕೋರ್ಟ್ ಹಿಜಾಬ್ ಕುರಿತು ನೀಡಿದ್ದ ಆದೇಶವನ್ನು ಅಸಭ್ಯ ಪದಗಳಿಂದ ಟೀಕಿಸಿದ್ದ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಅಬ್ದುಲ್ ಮುತಾಲಿಬ್ (24)ಎಂದು ಗುರುತಿಸಲಾಗಿದೆ. ಹಿಜಾಬ್ ಶಾಲಾ-ಕಾಲೇಜುಗಳಲ್ಲಿ ನಿಷೇಧ ಕುರಿತಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶವನ್ನು ಹೈ ಕೋರ್ಟ್ ನಿನ್ನೆ ಎತ್ತಿ ಹಿಡಿಯುತ್ತಿದ್ದಂತೆ ಈತ ತೀವ್ರ ಅಸಮಾಧಾನಗೊಂಡಿದ್ದ. ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ನಿಂದನಾತ್ಮಕ ಪದಗಳನ್ನು ಪ್ರಕಟಿಸಿ ಬೈದಿದ್ದ. ಇದು ವೈರಲ್ ಆಗಿತ್ತು. ಈತನ ವಿರುದ್ಧ ಕೊಡಗು ಸಂಪಾಜೆ ಠಾಣೆಯಲ್ಲಿ ದೂರು

ಸುಳ್ಯ: ನ್ಯಾಯಾಂಗ ತೀರ್ಪು ನಿಂದಿಸಿ ಜಾಲತಾಣಗಳಲ್ಲಿ ಬರವಣಿಗೆ| ಸಂಪಾಜೆಯ ಯುವಕ ಅರೆಸ್ಟ್ Read More »

ರಾಜ್ಯದಲ್ಲಿ ಮತ್ತೆ ಮಳೆ ನಿರೀಕ್ಷೆ| ನಾಳೆಯಿಂದ(ಮಾ.17) ಮೂರು ದಿನ ಪೂರ್ವ ಮುಂಗಾರು ಮಳೆ

ಸಮಗ್ರ ನ್ಯೂಸ್ ಡೆಸ್ಕ್: ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿ, ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದ ಪರಿಣಾಮ ಮಾರ್ಚ್ 17 ರಿಂದ 3 ದಿನ ದಕ್ಷಿಣ ಒಳನಾಡು ಹಾಗೂ ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಾರ್ಚ್ 17 ಕ್ಕೆ ಮೈಸೂರು, ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದೆ. ಮಾರ್ಚ್ 18 ರಂದು ಮೈಸೂರು, ಕೊಡಗು, ಚಿಕ್ಕಮಗಳೂರು

ರಾಜ್ಯದಲ್ಲಿ ಮತ್ತೆ ಮಳೆ ನಿರೀಕ್ಷೆ| ನಾಳೆಯಿಂದ(ಮಾ.17) ಮೂರು ದಿನ ಪೂರ್ವ ಮುಂಗಾರು ಮಳೆ Read More »

ಸುಳ್ಯ: ಹಿಜಾಬ್ ಕುರಿತ ತೀರ್ಪಿಗೆ ಮತಾಂಧನಿಂದ ದರ್ಪ| ಜಾಲತಾಣದಲ್ಲಿ ಸಂಘಿಗಳ ವಿರುದ್ಧ ಕಿಡಿಕಾರಿದ ಮುಸ್ಲಿಂ ಯುವಕ

ಸಮಗ್ರ ನ್ಯೂಸ್: ಹಿಜಾಬ್ ಧಾರಣೆ ಕುರಿತಂತೆ ಕರ್ನಾಟಕ ಹೈಕೋರ್ಟ್ ಇಂದು ಐತಿಹಾಸಿಕ ತೀರ್ಪು ‌ನೀಡಿದ್ದು, ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿದ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿದೆ. ಇದರ ಜೊತೆಗೆ ಹಿಜಾಬ್ ಧರಿಸುವುದು ಇಸ್ಲಾಂನ ಕಡ್ಡಾಯ ಭಾಗವಲ್ಲ ಎಂಬ ತೀರ್ಪು ಕೆಲ ಮತಾಂಧ ಶಕ್ತಿಗಳಿಗೆ ಅರಗಿಸಿಕೊಳ್ಳಲಾಗದೇ ಜಾಲತಾಣಗಳಲ್ಲಿ ಕಿಡಿಕಾರುತ್ತಿರುವುದು ಕಂಡುಬಂದಿದೆ. ಈ ತೀರ್ಪಿನ ವಿರುದ್ದ ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಅರ್ಜಿದಾರರು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪು ಮರುಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ. ಈ ನಡುವೆ ದ.ಕ ಜಿಲ್ಲೆಯ

ಸುಳ್ಯ: ಹಿಜಾಬ್ ಕುರಿತ ತೀರ್ಪಿಗೆ ಮತಾಂಧನಿಂದ ದರ್ಪ| ಜಾಲತಾಣದಲ್ಲಿ ಸಂಘಿಗಳ ವಿರುದ್ಧ ಕಿಡಿಕಾರಿದ ಮುಸ್ಲಿಂ ಯುವಕ Read More »

ಉಡುಪಿ:ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಅವಕಾಶ ನೀಡಿ| ನಾವು ಕುರಾನ್ ಫಾಲೋ ಮಾಡುತ್ತೇವೆ ಹೊರತು ಸರಕಾರದ ಆದೇಶವಲ್ಲ ಎಂದ ಹಿಜಾಬ್ ಹೋರಾಟಗಾರ್ತಿಯರು

ಉಡುಪಿ: ನಾವು ನಮ್ಮ ಕುರಾನ್ ಫಾಲೋ ಮಾಡುತ್ತೇವೆ. ನಾವು ಸರಕಾರದ ಆದೇಶ ಅನುಸರಿಸಬೇಕಾಗಿಲ್ಲ. ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಅವಕಾಶ ಬೇಕು ಎಂದು ಹಿಜಾವ್ ಹೋರಾಟಗಾರ್ತಿ ಆಲಿಯಾ ಅಸಾದಿ ಹೇಳಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿಜಾವ್ ಹೋರಾಟಗಾರ್ತಿಯರು, ನಮ್ಮ ಸಂವಿಧಾನ ಹಕ್ಕಿಗಾಗಿ ಮುಂದಿನ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯ ಸಿಗುವ ಭರವಸೆ ಇತ್ತು. ನಾವು ಹಿಜಬ್ ತೆಗೆದು ತರಗತಿ ಒಳಗೆ ಹೋಗಲ್ಲ. ಕಾನೂನು ರೀತಿಯಲ್ಲಿ ಹೋರಾಟ ಮಾಡುತ್ತೇವೆ. ಕುರಾನ್ ನಲ್ಲಿ ದೇಹವನ್ನು ಮುಚ್ಚಬೇಕೆಂಬ

ಉಡುಪಿ:ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಅವಕಾಶ ನೀಡಿ| ನಾವು ಕುರಾನ್ ಫಾಲೋ ಮಾಡುತ್ತೇವೆ ಹೊರತು ಸರಕಾರದ ಆದೇಶವಲ್ಲ ಎಂದ ಹಿಜಾಬ್ ಹೋರಾಟಗಾರ್ತಿಯರು Read More »

ಹಿಜಾಬ್ ತೀರ್ಪು ಹಿನ್ನಲೆ| ನಾಳೆ ಕರಾವಳಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಮಂಗಳವಾರ ಬೆಳಗ್ಗೆ ಹೈಕೋರ್ಟ್ ಹಿಜಾಬ್ ಕುರಿತಾಗಿ ತೀರ್ಪು ನೀಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾವು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುತ್ತಿದ್ದೇವೆ.ಬಾಹ್ಯ ಪರೀಕ್ಷೆಗಳು ವೇಳಾಪಟ್ಟಿಯಂತೆ ಇರುತ್ತವೆ. ಎಲ್ಲಾ ಶಾಲಾ-ಕಾಲೇಜುಗಳ ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ತಿಳಿಸಿದ್ದಾರೆ. ಉಭಯ ಜಿಲ್ಲೆಗಳಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

ಹಿಜಾಬ್ ತೀರ್ಪು ಹಿನ್ನಲೆ| ನಾಳೆ ಕರಾವಳಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ Read More »

ಪುತ್ತೂರು: ಭಜನಾ ಮಂದಿರದ ಜಾಗದ ತಕರಾರು| ವೃದ್ಧೆ ಮೇಲೆ ಹಲ್ಲೆಗೈದ ಪುಂಡರು

ಸಮಗ್ರ ನ್ಯೂಸ್: ಭಜನಾ ಮಂದಿರದ ಜಾಗದ ವಿಷಯವಾಗಿ ತಂಡದ ನಡುವೆ ಹಲ್ಲೆ ನಡೆದ ಘಟನೆ ಆರ್ಯಾಪು ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ. ಭಜನಾ ಮಂಡಳಿ ಜಾಗದ ವಿಷಯವಾಗಿ ಎರಡು ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಪರಸ್ಪರ ಹಲ್ಲೆಗೈದಿದ್ದು, ಮಹಿಳೆಯೊಬ್ಬರ ಕೈ’ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಗೊಂಡ ಮಹಿಳೆ ಸರೋಜಿನಿ ಆಚಾರ್ಯ(68) ಮತ್ತು ಅವರ ಪುತ್ರ ನಾರಾಯಣ ಆಚಾರ್ಯ (35) ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಮತ್ತೊಂದು ತಂಡ ಪೂವಪ್ಪ ನಾಯ್ಕ್ ಎಂಬವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ

ಪುತ್ತೂರು: ಭಜನಾ ಮಂದಿರದ ಜಾಗದ ತಕರಾರು| ವೃದ್ಧೆ ಮೇಲೆ ಹಲ್ಲೆಗೈದ ಪುಂಡರು Read More »

ವಿಟ್ಲ: ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಡಸ್ಟರ್ ಕಾರು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಡಸ್ಟರ್ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಿದ್ದಂತೆ ಸುಟ್ಟು ಭಸ್ಮವಾದ ಘಟನೆ ವಿಟ್ಲಪಡ್ನೂರು ಗ್ರಾಮದ ಕೋಡಪದವು ಸರವು ಎಂಬಲ್ಲಿ ಭಾನುವಾರ ನಡೆದಿದೆ. ಸಿಟ್ರೀನ್ ಪಾಯಸ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು ಸಂಪೂರ್ಣವಾಗಿ ಸುಟ್ಟು ಕರಲಾಗಿದೆ ಎಂದು ತಿಳಿದು ಬಂದಿದೆ. ಬೋಳಂತೂರು ಕಡೆಯಿಂದ ಕೋಡಪದವು ಮೂಲಕ ವಿಟ್ಲ ಕಡೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಶಬ್ದ ಕೇಳಿಸಿದ್ದು, ದಿಢೀರನೆ ಕಾರನ್ನು ರಸ್ತೆ ಬದಿಗೆ ತಂದು ನಿಲ್ಲಿಸಿದ್ದಾರೆ. ಈ ಸಂದರ್ಭ ಬೆಂಕಿ ಕಾಣಿಸಿಕೊಂಡಿದೆ. ಇನ್ನು ತಕ್ಷಣ

ವಿಟ್ಲ: ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಡಸ್ಟರ್ ಕಾರು Read More »

ಬೆಳ್ತಂಗಡಿ: ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಸಮಗ್ರ ನ್ಯೂಸ್: ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಅನಾರು ಎಂಬಲ್ಲಿ ಮೃತ್ಯುಂಜಯ ನದಿಗೆ ಸ್ನಾನಕ್ಕೆ ತರಳಿದ್ದ ವ್ಯಕ್ತಿಯೋರ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ನಡೆದಿದೆ. ನಡ್ತಿಲು ಹೊಯ್ಗೆಗದ್ದೆ ಜತ್ತನ್ನ ಎಂಬವರ ಪುತ್ರ ಸತೀಶ್ (35) ಮೃತಪಟ್ಟವರು. ಮೃತರು ತಂದೆ, ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ: ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು Read More »

ನೆಲ್ಯಾಡಿ: ವಿಷಕಾರಿ ಹಾವು ಕಡಿದು ಗ್ರಾ.ಪಂ.ಮಾಜಿ ಸದಸ್ಯೆ ಮೃತ್ಯು

ನೆಲ್ಯಾಡಿ: ನೆಲ್ಯಾಡಿಯ ಕೊಣಾಲು ಗ್ರಾಮದಲ್ಲಿ ರಬ್ಬರ್ ಟ್ಯಾಪಿಂಗ್‌ಗೆ ಹೋಗಿದ್ದ ವೇಳೆ ವಿಷಕಾರಿ ಹಾವು ಕಡಿದು ಗೋಳಿತ್ತೊಟ್ಟು ಮಾಜಿ ಗ್ರಾ.ಪಂ. ಸದಸ್ಯೆಯೋರ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಕೊಣಾಲು ಗ್ರಾಮದ ಆರ್ಲ ನಿವಾಸಿ ರೋಸಮ್ಮ ಪಿ.ಡಿ.ಯಾನೆ ವಲ್ಸಮ್ಮ(52) ಎಂದು ಗುರುತಿಸಲಾಗಿದೆ. ಮಾ.11ರಂದು ರೋಸಮ್ಮರವರು ರಾತ್ರಿ ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್‌ಗೆ ಹೋಗಿದ್ದ ವೇಳೆ ಅವರಿಗೆ ವಿಷಕಾರಿ ಹಾವೊಂದು ಕಡಿದಿದ್ದು, ತಕ್ಷಣ ರೋಸಮ್ಮರವರು ಅಲ್ಲಿಂದ ಪಕ್ಕದ ಮನೆಗೆ ಬಂದಿದ್ದು ಅಲ್ಲಿ ಕುಸಿದು ಬಿದ್ದರು. ಇನ್ನು ತಕ್ಷಣ ಅವರನ್ನು ನೆಲ್ಯಾಡಿಯ

ನೆಲ್ಯಾಡಿ: ವಿಷಕಾರಿ ಹಾವು ಕಡಿದು ಗ್ರಾ.ಪಂ.ಮಾಜಿ ಸದಸ್ಯೆ ಮೃತ್ಯು Read More »