ಕರಾವಳಿ

ಮಂಗಳೂರು: ಮಲಗಿದ್ದಲ್ಲೇ 23 ವರ್ಷದ ವಿದ್ಯಾರ್ಥಿ ಸಾವು

ಮಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದ ಅರೆವೈದ್ಯಕೀಯ ವಿದ್ಯಾರ್ಥಿಯೊಬ್ಬ ವಿಶ್ರಾಂತಿ ವೇಳೆ ನಿದ್ರಿಸುತ್ತಿದ್ದಾಗ ಅಲ್ಲೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಮೃತರನ್ನು ಉಪ್ಪಿನಂಗಡಿ ನಿವಾಸಿ , ನಾಗೇಶ್(23) ಎಂದು ಗುರುತಿಸಲಾಗಿದೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್ ವಿದ್ಯಾರ್ಥಿಯಾಗಿದ್ದು , ಫೆ.13 ರ ರಾತ್ರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ನಾಗೇಶ್ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಮಂಗಳೂರು: ಮಲಗಿದ್ದಲ್ಲೇ 23 ವರ್ಷದ ವಿದ್ಯಾರ್ಥಿ ಸಾವು Read More »

ಮತ್ತೆ 54 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಭಾರತ

ನವದೆಹಲಿ : ದೇಶದ ಭದ್ರತೆಯ ಕಾರಣ ನೀಡಿ 54 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಿರುವುದಾಗಿ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಇಂದು ತಿಳಿಸಿದೆ. ಕಳೆದ ವರ್ಷ ಜೂನ್‌ನಲ್ಲಿ, ರಾಷ್ಟ್ರದ ಸಾರ್ವಭೌಮತ್ವ ಮತ್ತು ಭದ್ರತೆಗೆ ಬೆದರಿಕೆಯನ್ನು ಉಲ್ಲೇಖಿಸಿ ಭಾರತವು ಟಿಕ್‌ಟಾಕ್‌, ವಿಚಾಟ್ ಮತ್ತು ಹೆಲೋನಂತಹ ವ್ಯಾಪಕವಾಗಿ ಬಳಸಲಾಗುವ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು, ಪಬ್ಜಿಯಂತಹ ಜನಪ್ರಿಯ ಗೇಮಿಂಗ್ ಅಪ್ಲಿಕೇಶನ್‌ಗಳು ಸೇರಿದಂತೆ 59 ಚೀನೀ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಿತ್ತು. ಪ್ರಸ್ತುತ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಅಪ್ಲಿಕೇಶನ್‌ಗಳನ್ನು

ಮತ್ತೆ 54 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಭಾರತ Read More »

ಸುಳ್ಯ : ಓಮ್ನಿ ಪಲ್ಟಿ ವೇಳೆ ತಲೆಗೆ ಸರಳು ಬಡಿದು ಮಗು ಸಾವು

ಸಮಗ್ರ ನ್ಯೂಸ್ ಡೆಸ್ಕ್: ಓಮ್ನಿ ಕಾರೊಂದು ಪಲ್ಟಿಯಾಗಿ ಕಾರಿನಲ್ಲಿದ್ದ ಮಗುವೊಂದು ದಾರುಣವಾಗಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ‌ಗುತ್ತಿಗಾರು ಸಮೀಪ ಸೋಮವಾರದಂದು ನಡೆದಿದೆ. ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಕೆದಂಬಾಡಿ ಯತೀಶ್ ಹಾಗೂ ಕುಟುಂಬ ಓಮ್ನಿ ಕಾರೊಂದರಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಿ ಬರುತ್ತಿತ್ತು. ಈ ವೇಳೆ ಗುತ್ತಿಗಾರು ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಓಮ್ನಿಯಲ್ಲಿದ್ದ ಒಂದು ವರ್ಷದ ಮಗು ಸರಿತ್ ನ ತಲೆಗೆ ಕಾರಿ‌ನಲ್ಲಿನ ರಾಡ್ ಒಂದು ಬಡಿದ ಪರಿಣಾಮ ತೀವ್ರವಾದ ಏಟಾಗಿತ್ತು. ತಕ್ಷಣ

ಸುಳ್ಯ : ಓಮ್ನಿ ಪಲ್ಟಿ ವೇಳೆ ತಲೆಗೆ ಸರಳು ಬಡಿದು ಮಗು ಸಾವು Read More »

ಸುರತ್ಕಲ್‌ ಟೋಲ್‌ಗೇಟ್‌ ಪ್ರತಿಭಟನೆ – ಆಪತ್ಬಾಂಧವ ಆಸೀಫ್ ಆರೋಗ್ಯದಲ್ಲಿ ಏರುಪೇರು

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಆಪತ್ಬಾಂಧವ ಆಸೀಫ್ ನಡೆಸುತ್ತಿರುವ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಅವರ ಆರೋಗ್ಯ ಹದಗೆಟ್ಟಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಸ್ಥಳೀಯ ಆಡಳಿತದ ಗಮನ ಸೆಳೆಯುವ ಸಲುವಾಗಿ ಆಸಿಫ್ ತನ್ನ ದೇಹಕ್ಕೆ ಕಬ್ಬಿಣದ ಸರಪಳಿಯನ್ನು ಕಟ್ಟಿಕೊಂಡು ಫೆಬ್ರವರಿ 14 ರಂದು ಎರಡು ಗಂಟೆಗಳ ಕಾಲ ಕಂಬಕ್ಕೆ ಕಟ್ಟಿಕೊಂಡಿದ್ದಾರೆ. ಹಾಗಾಗಿ ಬಿಸಿಲಿನಿಂದಾಗಿ ಅವರ ಆರೋಗ್ಯ ಹದಗೆಟ್ಟಿದ್ದು, ಸುರತ್ಕಲ್ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಚಿಕಿತ್ಸೆ ನೀಡುವಂತೆ ಮನವಿ ಮಾಡಿದರೂ ಆಸಿಫ್

ಸುರತ್ಕಲ್‌ ಟೋಲ್‌ಗೇಟ್‌ ಪ್ರತಿಭಟನೆ – ಆಪತ್ಬಾಂಧವ ಆಸೀಫ್ ಆರೋಗ್ಯದಲ್ಲಿ ಏರುಪೇರು Read More »

ಮಂಗಳೂರು: ಚೂರಿ ಇರಿತ ಪ್ರಕರಣ – ಐವರ ಬಂಧನ

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ ಆರನೇ ಬ್ಲಾಕ್‌ನಲ್ಲಿ ಫೆಬ್ರವರಿ 1 ರಂದು ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ಶರೋಜ್ ಚಾರು (24), ಮೊಹಮ್ಮದ್ ಮುಸ್ತಫಾ (22), ಅಬ್ದುಲ್ ಅಮೀನ್ (19), ಹಲ್ಲೆ ನಡೆಸಲು ಕಾರು ಒದಗಿಸಿದ ಸಿದ್ದಿಕ್ ಸಮದ್ (25) ಮತ್ತು ಮೊಹಮ್ಮದ್ ನೌಫಿಲ್ (18) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಫೆ.1ರ ರಾತ್ರಿ ತನ್ನ ಸ್ನೇಹಿತರಾದ ಅಬೂಬಕ್ಕರ್ ಮತ್ತು ಹಾರಿಸ್ ಜತೆ ಮಾತನಾಡುತ್ತಿದ್ದ

ಮಂಗಳೂರು: ಚೂರಿ ಇರಿತ ಪ್ರಕರಣ – ಐವರ ಬಂಧನ Read More »

ಮಂಗಳೂರು: ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿದ ಡಿ.ಸಿ

ಸಮಗ್ರ ನ್ಯೂಸ್ ಡೆಸ್ಕ್ : ಜಿಲ್ಲೆಯ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳಿಂದ ದ.ಕ ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾದ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ.

ಮಂಗಳೂರು: ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿದ ಡಿ.ಸಿ Read More »

ಮಂಗಳೂರು: ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿದ ಡಿ.ಸಿ

ಸಮಗ್ರ ನ್ಯೂಸ್ ಡೆಸ್ಕ್ : ಜಿಲ್ಲೆಯ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳಿಂದ ದ.ಕ ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾದ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ.

ಮಂಗಳೂರು: ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿದ ಡಿ.ಸಿ Read More »

ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನ ಗಣಿಗಾರಿಕೆ ಸ್ಥಗಿತ -ಸಚಿವ ಸುನೀಲ್ ಕುಮಾರ್

ಸಮಗ್ರ ನ್ಯೂಸ್ ಡೆಸ್ಕ್: ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನ 3 ಕಲ್ಲು ಗಣಿಗಾರಿಕೆ ಚಟುವಟಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಸಚಿವರು ಸ್ಥಳೀಯರ ಹಾಗೂ ದೇವಸ್ಥಾನದ ಭಕ್ತಾಧಿಗಳ ದೂರಿನ ಹಿನ್ನೆಲೆಯಲ್ಲಿ 2007ರಿಂದ ಈ ಪ್ರದೇಶದಲ್ಲಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಕಾವಳ ಮುಡೂರು ಗ್ರಾಮದ ಸರ್ವೆ ನಂ. 164/2ಪಿ1 ರಲ್ಲಿ 0.50 ಎಕರೆ ಮತ್ತು 172/2ಪಿ1 ರಲ್ಲಿ 0.50 ಎಕರೆ ಸಹಿತ

ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನ ಗಣಿಗಾರಿಕೆ ಸ್ಥಗಿತ -ಸಚಿವ ಸುನೀಲ್ ಕುಮಾರ್ Read More »

ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಲ್ಲಿ ಜತೆ ಕಾರ್ಯದರ್ಶಿ ಮೂಲಕ ಸಭೆ ನಡೆಸಲು ಯತ್ನ| ಡಾ. ಕೆ.ವಿ ಚಿದಾನಂದ ಸೇರಿ ಐವರಿಗೆ ನೋಟೀಸ್

ಸಮಗ್ರ ನ್ಯೂಸ್ ಡೆಸ್ಕ್: ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಸಭೆ ಕರೆಯುವ ಮತ್ತು ವ್ಯವಹಾರ ನೋಡಿಕೊಳ್ಳುವ ಪ್ರಧಾನ ಕಾರ್ಯದರ್ಶಿಯ ಅಧಿಕಾರಕ್ಕೆ ತೊಂದರೆ ಕೊಡಬಾರದು ಮತ್ತು ನ್ಯಾಯಾಲಯದಲ್ಲಿ ದಾವೆ ಇತ್ಯರ್ಥವಾಗುವ ವರೆಗೆ ಪ್ರಧಾನ ಕಾರ್ಯದರ್ಶಿಯನ್ನು ಬದಲಾಯಿಸಬಾರದು ಎಂದು ಹೈಕೋರ್ಟ್ ಆದೇಶವಿದ್ದರೂ ಅದನ್ನು ಉಲ್ಲಂಘಿಸಿ ಜತೆ ಕಾರ್ಯದರ್ಶಿಯ ಮೂಲಕ ಅಕಾಡೆಮಿಯ ಸಭೆ ಕರೆಯಲು ಪ್ರಯತ್ನಿಸಲಾಗಿದೆ ಹಾಗೂ ಜತೆ ಕಾರ್ಯದರ್ಶಿಗೆ ಕಾರ್ಯದರ್ಶಿಯ ಜವಾಬ್ದಾರಿ ನೀಡುವ ಅಜೆಂಡಾವನ್ನು ಇರಿಸಿ ನ್ಯಾಯಾಲಯದ ತೀರ್ಪನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಅಕಾಡೆಮಿ ಆಫ್ ಲಿಬರಲ್

ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಲ್ಲಿ ಜತೆ ಕಾರ್ಯದರ್ಶಿ ಮೂಲಕ ಸಭೆ ನಡೆಸಲು ಯತ್ನ| ಡಾ. ಕೆ.ವಿ ಚಿದಾನಂದ ಸೇರಿ ಐವರಿಗೆ ನೋಟೀಸ್ Read More »

ಧರ್ಮಸ್ಥಳ:ಮತ್ತೆ ರಾಜಕೀಯ ಪ್ರಹಸನಕ್ಕೆ‌ ಸಾಕ್ಷಿಯಾಯ್ತು‌ ಮಂಜುನಾಥನ ಸನ್ನಿದಿ| ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ ಆಣೆ ಪ್ರಮಾಣ

ಸಮಗ್ರ ನ್ಯೂಸ್ ಡೆಸ್ಕ್: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥನ ದೇವಸ್ಥಾನ ಮತ್ತೆ ಆಣೆ ಪ್ರಮಾಣಕ್ಕೆ ಸಾಕ್ಷಿಯಾಗಿದೆ. ಸಾಗರ ಶಾಸಕ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ‌ ಬೇಳೂರು ಗೋಪಾಲಕೃಷ್ಣ ನಡುವಿನ ಮರಳು ಮಾಫಿಯಾದ ಕಮಿಷನ್ ಪಡೆದ ಆರೋಪ ಪ್ರತ್ಯಾರೋಪ ಈಗ ಶ್ರೀಕ್ಷೇತ್ರ ಧರ್ಮಸ್ಥಳದ ದೇವರ ಕಟಕಟೆಗೆ ಬಂದು ನಿಂತಿದೆ. ಈ ಆರೋಪ ಸುಳ್ಳು ಅಂತಾ ಶಾಸಕ ಹರತಾಳು ಹಾಲಪ್ಪ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಆಣೆ- ಪ್ರಮಾಣ ಮಾಡಿದರೆ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾತ್ರ ಹರತಾಳು ಹಾಲಪ್ಪ

ಧರ್ಮಸ್ಥಳ:ಮತ್ತೆ ರಾಜಕೀಯ ಪ್ರಹಸನಕ್ಕೆ‌ ಸಾಕ್ಷಿಯಾಯ್ತು‌ ಮಂಜುನಾಥನ ಸನ್ನಿದಿ| ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ ಆಣೆ ಪ್ರಮಾಣ Read More »