ಕರಾವಳಿ

ಉಡುಪಿ: ಕಾಪು ಬೀಚಿನಲ್ಲಿ ಬೈಕ್, ಪರ್ಸ್ ಇಟ್ಟು ನಾಪತ್ತೆ; ಪಡುಕೆರೆ ಸಮುದ್ರದಲ್ಲಿ ಮೃತದೇಹ ಪತ್ತೆ!

ಸಮಗ್ರ ನ್ಯೂಸ್‌ : ಕಾಪು ಬೀಚ್‌ ಬಳಿ ಬೈಕ್‌, ಮೊಬೈಲ್‌, ಪರ್ಸ್ ಇಟ್ಟು ನಾಪತ್ತೆಯಾದ ಯುವಕನ ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆ ವೇಳೆ ಪತ್ತೆಯಾಗಿದೆ. ಮೃತ ಯುವಕನನ್ನು ಕಾಪು ಪಡುಗ್ರಾಮದ ಕರಣ್ ಸಾಲ್ಯಾನ್ (20) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆಯಿಂದ ಮನೆಯಿಂದ ನಾಪತ್ತೆ ಆಗಿದ್ದ ಕರಣ್ ಸಾಲ್ಯಾನ್ ಅವರ ಬೈಕು, ಮೊಬೈಲ್ ಹಾಗೂ ಪರ್ಸ್ ಕಾಪು ಲೈಟ್ ಹೌಸ್ ಬಳಿಯ ಶ್ರೀಯಾನ್ ಸದನ ಮನೆಯ ಬಳಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿತ್ತು. ಕಾಣೆಯಾದ ಬಗ್ಗೆ […]

ಉಡುಪಿ: ಕಾಪು ಬೀಚಿನಲ್ಲಿ ಬೈಕ್, ಪರ್ಸ್ ಇಟ್ಟು ನಾಪತ್ತೆ; ಪಡುಕೆರೆ ಸಮುದ್ರದಲ್ಲಿ ಮೃತದೇಹ ಪತ್ತೆ! Read More »

ಪುತ್ತೂರು:ಮುಳಿಯ ವೃಕ್ಷಾರೋಪಣ; ಸಾರ್ವಜನಿಕರಿಗೆ ೩,೦೦೦ಕ್ಕೂ ಅಧಿಕ ಗಿಡಗಳ ವಿತರಣೆ

ಸಮಗ್ರ ನ್ಯೂಸ್: ಮುಳಿಯ ಜ್ಯುವೆಲ್ಸ್‌ನಿಂದ ವಿಶ್ವ ಪರಿಸರ ದಿನಾಚರಣೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಳಿಯ ಜ್ಯುವೆಲ್ಸ್ ವತಿಯಿಂದ ಮುಳಿಯ ವೃಕ್ಷಾರೋಪಣ ಕಾರ್ಯಕ್ರಮದ ಮೂಲಕ ಪುತ್ತೂರಿನ ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಗ್ರಾಹಕರಿಗೆ ಗಿಡ ವಿತರಣೆ ಮಾಡಲಾಯಿತು. ಮುಳಿಯ ಜ್ಯುವೆಲ್ಸ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ಕುಮಾರ್ ಹೊಳ್ಳ ಅವರಿಗೆ ಗಿಡಗಳನ್ನು ವಿತರಿಸುವ ಮೂಲಕ ಚಾಲನೆ ನೀಡಿದರು. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು, ನೆಲ್ಯಾಡಿ, ಸೋಮವಾರಪೇಟೆ ಶಾಖೆಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ಏಕಕಾಲಕ್ಕೆ ನಡೆಯಿತು.

ಪುತ್ತೂರು:ಮುಳಿಯ ವೃಕ್ಷಾರೋಪಣ; ಸಾರ್ವಜನಿಕರಿಗೆ ೩,೦೦೦ಕ್ಕೂ ಅಧಿಕ ಗಿಡಗಳ ವಿತರಣೆ Read More »

ಬೆಳ್ತಂಗಡಿ: ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

ಸಮಗ್ರ ನ್ಯೂಸ್‌ : ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಅವರ ಆರೋಗ್ಯವನ್ನು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ವಿಚಾರಿಸಿದರು. ಜೂನ್ 4ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿಯಿಂದ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಆಸ್ಪತ್ರೆಗೆ ದ.ಕ. ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಸಂಸದರ ಜೊತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಬಿಜೆಪಿ ಕಾರ್ಯಕರ್ತರು ಜೊತೆಯಲ್ಲಿದ್ದರು.

ಬೆಳ್ತಂಗಡಿ: ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ Read More »

ಉಡುಪಿ: ಬಾವಿಗೆ ಬಿದ್ದ ಹಸುವನ್ನು ರಕ್ಷಿಸಿದ ಭಜರಂಗದಳ ಕಾರ್ಯಕರ್ತರು

ಸಮಗ್ರ ನ್ಯೂಸ್‌ : ಪರ್ಕಳ ಸಮೀಪದ ಹೆರ್ಗದಲ್ಲಿ ಕಾಮಗಾರಿ ಹಂತದಲ್ಲಿದ್ದ ಬಾವಿಗೆ ಬಿದ್ದ ಹಸುವನ್ನು ಭಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿ ಜೀವದಾನ ನೀಡಿದ್ದಾರೆ. ಸುಮಾರು 40 ಅಡಿ ಆಳದ ಬಾವಿಗೆ ಈ ಹಸು ಬಿದ್ದಿತ್ತು. ತಕ್ಷಣ ಭಜರಂಗದಳ ಕಾರ್ಯಕರ್ತರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಆಗಮಿಸಿದ ಪ್ರಾಣೇಶ್ ಪರ್ಕಳ ನೇತೃತ್ವದ ಕಾರ್ಯಕರ್ತರ ತಂಡ ಕಾರ್ಯಾಚರಣೆ ನಡೆಸಿ ಗಾಯಾಳು ಹಸುವನ್ನು ರಕ್ಷಿಸಿತು. ಪರ್ಕಳ ಬಜರಂಗದಳದ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪ್ರಾಣೇಶ್ ಪರ್ಕಳ, ಶಶಿಕಾಂತ್ ನಡಿದಾರೆ,

ಉಡುಪಿ: ಬಾವಿಗೆ ಬಿದ್ದ ಹಸುವನ್ನು ರಕ್ಷಿಸಿದ ಭಜರಂಗದಳ ಕಾರ್ಯಕರ್ತರು Read More »

ನೆಲ್ಯಾಡಿ: ಕಾರು ಮತ್ತು ಬೈಕ್‌ ನಡುವೆ ಅಪಘಾತ| ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೈಕ್ ಹಾಗೂ ಮಹೀಂದ್ರಾ ಎಕ್ಸ್’ಯುವಿ 700 ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ಉದನೆ ಸಮೀಪದ ನೇಲ್ಯಡ್ಕ ನಾಳಾಲು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಹೀಂದ್ರಾ ಎಕ್ಸ್’ಯುವಿ 700 ಕಾರು ಹಾಗೂ ಬೈಕ್ ನಡುವೆ ನೇಲ್ಯಡ್ಕ ಸಮೀಪ ಅಪಘಾತ ಸಂಭವಿಸಿದೆ.

ನೆಲ್ಯಾಡಿ: ಕಾರು ಮತ್ತು ಬೈಕ್‌ ನಡುವೆ ಅಪಘಾತ| ಸವಾರ ಸ್ಥಳದಲ್ಲೇ ಸಾವು Read More »

ನೀಟ್ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದ ಮಂಗಳೂರಿನ ಅರ್ಜುನ್

ಸಮಗ್ರ ನ್ಯೂಸ್: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್-ಯುಜಿ) ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ವಿದ್ಯಾರ್ಥಿ ಅರ್ಜುನ್ ಕಿಶೋರ್ (720ಕ್ಕೆ 720 ಅಂಕ) ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ದೆಹಲಿಯ ಏಮ್ಸ್‌ನಲ್ಲಿ ವೈದ್ಯಕೀಯ ಶಿಕ್ಷಣ ಓದುವುದು ನನ್ನ ಕನಸಾಗಿತ್ತು. ಕಾಲೇಜು ವೇಳಾಪಟ್ಟಿಯನ್ನು ಚಾಚೂತಪ್ಪದೆಅನುಸರಿಸುತ್ತಿದ್ದೆ. ಯಾವುದೇ ಅನುಮಾನ ಇದ್ದರೂ ಉಪನ್ಯಾಸಕರು ಪರಿಹರಿಸುತ್ತಿದ್ದರು. ಕಠಿಣ ಪರಿಶ್ರಮ ಮತ್ತು ಏಕಾಗ್ರತೆಯ ಓದು ಗುರಿ ಸಾಧನೆಗೆ ಸಹಕಾರಿಯಾಯಿತು’ ಎಂದು ಅರ್ಜುನ್ ಪ್ರತಿಕ್ರಿಯಿಸಿದ್ದಾರೆ. ಅರ್ಜುನ್ ತಂದೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ

ನೀಟ್ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದ ಮಂಗಳೂರಿನ ಅರ್ಜುನ್ Read More »

ಪಟಾಕಿ ಸಿಡಿಸಿದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ತಲ್ವಾರ್ ನಿಂದ ಹಲ್ಲೆ ನಡೆಸಿದ ಘಟನೆ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಿಜೆಪಿ ಮಂಡಳದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ(33) ಹಲ್ಲೆಗೊಳಾಗಾದವರು. ಕಳೆಂಜದ ಕುಶಲಪ್ಪ ಗೌಡ ಕಜೆ ಹಲ್ಲೆ ಆರೋಪಿ. ಈತ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾನೆ. ರಾಜೇಶ್‌ಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಪಟಾಕಿ ಸಿಡಿಸಿದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಮತ್ತೊಬ್ಬ ಆರೋಪಿ ಮುಂಬೈನಲ್ಲಿ ಬಂಧನ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಕ್ಕೆ ಹಾರಲು ಯತ್ನಿಸುತ್ತಿದ್ದ ಮತ್ತೊಬ್ಬ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಲಾಗಿದೆ. ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಬಂಧಿತ ಆರೋಪಿ. ರಿಯಾಜ್ ಯೂಸಫ್ ಹಾರಳ್ಳಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಮಂಗಳವಾರ ಬಂಧಿಸಿದೆ. ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಬಂಧಿತರಾಗಿರುವ ಒಟ್ಟು ಆರೋಪಿಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.ಕಳೆದ ತಿಂಗಳು ಮನ್ಸೂರ್ ಪಾಷಾ ಜತೆಗೆ ತಲೆಮರೆಸಿಕೊಂಡಿದ್ದ ಮುಸ್ತಫಾ ಪೈಚಾರ್ ನನ್ನು ಬಂಧಿಸಿದ ಒಂದು ತಿಂಗಳ ನಂತರ ಈ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಮತ್ತೊಬ್ಬ ಆರೋಪಿ ಮುಂಬೈನಲ್ಲಿ ಬಂಧನ Read More »

ದ.ಕ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಗೆ ತಿರುವಳ್ಳೂರ್ ನಲ್ಲಿ ಭರ್ಜರಿ ಜಯ

ಸಮಗ್ರ ನ್ಯೂಸ್: ಐಎಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿ ಬಳಿಕ ರಾಜಕೀಯ ರಂಗವನ್ನು ಪ್ರವೇಶಿಸಿದ್ದ ಸಸಿಕಾಂತ್ ಸೆಂಥಿಲ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಸಸಿಕಾಂತ್ ಸೆಂಥಿಲ್, ಜಯಭೇರಿ ಬಾರಿಸಿದ್ದಾರೆ.ಸಸಿಕಾಂತ್ ಸೆಂಥಿಲ್ ಕರ್ನಾಟಕದ ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಹೆಸರುವಾಸಿಯಾಗಿದ್ದರು.

ದ.ಕ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಗೆ ತಿರುವಳ್ಳೂರ್ ನಲ್ಲಿ ಭರ್ಜರಿ ಜಯ Read More »

ದ.ಕ ಲೋಕಸಭಾ ಕ್ಷೇತ್ರದಲ್ಲಿ ದಿ. ಸೌಜನ್ಯಾಳಿಗೆ 20 ಸಾವಿರಕ್ಕೂ ಅಧಿಕ ಮತ!! ನ್ಯಾಯಯುತ ಹೋರಾಟಕ್ಕೆ ಅಭೂತಪೂರ್ವ ಬೆಂಬಲ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಪಕ್ಷಗಳ ಮತಬೇಟೆಯ ಜೊತೆ ಧರ್ಮಸ್ಥಳದಲ್ಲಿ ಕೊಲೆಯಾದ ದಿ.ಸೌಜನ್ಯಾ ಪರವಾದ ಕ್ಯಾಂಪೇನ್‌ ಕೂಡಾ ಜೋರಾಗಿ ನಡೆದಿತ್ತು. ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯುವುದಕ್ಕಾಗಿ ನೋಟಾಗೆ ಮತ ಹಾಕುವಂತೆ ಕ್ಯಾಂಪೇನ್‌ ಮಾಡಲಾಗಿತ್ತು. ಬೆಳ್ತಂಗಡಿ ತಾಲ್ಲೂಕಿನಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ನೋಟಾಗೆ ಮತ ಹಾಕುವಂತೆ ಕ್ಯಾಂಪೇನ್‌ ಮಾಡಲಾಗಿತ್ತು. ಇದಕ್ಕೆ ಮತದಾರರು ದೊಡ್ಡ ಮಟ್ಟದಲ್ಲಿ ಸ್ಪಂದಿಸಿದ್ದಾರೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ನೋಟಾ

ದ.ಕ ಲೋಕಸಭಾ ಕ್ಷೇತ್ರದಲ್ಲಿ ದಿ. ಸೌಜನ್ಯಾಳಿಗೆ 20 ಸಾವಿರಕ್ಕೂ ಅಧಿಕ ಮತ!! ನ್ಯಾಯಯುತ ಹೋರಾಟಕ್ಕೆ ಅಭೂತಪೂರ್ವ ಬೆಂಬಲ Read More »