ಕರಾವಳಿ

ಹಿಜಾಬ್ ವಿವಾದ ಉದ್ವಿಗ್ನ: ಕುಂದಾಪುರ ಪಿ.ಯು ಕಾಲೇಜಿಗೆ ನಾಳೆ ರಜೆ

ಸಮಗ್ರ ನ್ಯೂಸ್ ಡೆಸ್ಕ್: ಕುಂದಾಪುರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್‌ ಮತ್ತು ಕೇಸರಿ ಶಲ್ಯ ವಿವಾದ ತಾರಕಕ್ಕೇರಿದ್ದು, ಕಾಲೇಜಿಗೆ ಶನಿವಾರ ರಜೆ ಘೋಷಿಸಲಾಗಿದೆ. ಆಡಳಿತ ಮಂಡಳಿಯು ವಿದ್ಯಾರ್ಥಿಗಳನ್ನು ಕಾಲೇಜಿನ ಮೈದಾನದವರೆಗೆ ಬಿಟ್ಟುಕೊಂಡಿದೆ. ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡುವಂತೆ ಪ್ರಾಂಶುಪಾಲರನ್ನು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ವಿದ್ಯಾರ್ಥಿನಿಯರ ಪೋಷಕರು ಸಹ ಕಾಲೇಜಿಗೆ ಬಂದು ಪ್ರತಿಭಟನೆ ನಡೆಸಿದ್ದರು. ತರಗತಿಗೆ ಬಿಡುವಂತೆ ಒತ್ತಾಯಿಸಿದ್ದರೂ, ತರಗತಿಗೆ ಅವಕಾಶ ಕೊಟ್ಟಿಲ್ಲ. ಇದರಿಂದ ಪೋಷಕರು ಕಾಲೇಜು ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕುಂದಾಪುರ ಠಾಣಾ ಸರ್ಕಲ್ ಇನ್‌ಸ್ಪೆಕ್ಟರ್‌

ಹಿಜಾಬ್ ವಿವಾದ ಉದ್ವಿಗ್ನ: ಕುಂದಾಪುರ ಪಿ.ಯು ಕಾಲೇಜಿಗೆ ನಾಳೆ ರಜೆ Read More »

ಮೈಸೂರು: ಕೊಟ್ಟ ಕಾಣಿಕೆಯನ್ನು ಹಿಂಪಡೆಯಲಾರೆ- ಸಚಿವ ನಿರಾಣಿ

ಮೈಸೂರು : ಕೊಟ್ಟ ವ್ಯಕ್ತಿಯೂ ಶಾಶ್ವತವಲ್ಲ, ಪೀಠ ಮಾತ್ರ ಶಾಶ್ವತ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಅವರು ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಕೂಡಲಸಂಗಮ ಮಠದ ಶ್ರೀಗಳು ಮಠಕ್ಕೆ ನೀಡಿರುವ ದಾನದ ಕಾಣಿಕೆಗಳನ್ನು ಹಿಂತಿರುಗಿಸಲಾಗುವುದು ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ನಿರಾಣಿ, ನಾನು ಪೀಠಕ್ಕೆ ಕೊಟ್ಟಿದ್ದೇನೆ ಹೊರತು ಯಾವುದೇ ಒಬ್ಬ ವ್ಯಕ್ತಿಗೆ ಕೊಟ್ಟಿಲ್ಲ. ಕೊಟ್ಟಿರುವ ವ್ಯಕ್ತಿಯೂ ಶಾಶ್ವತವಾಗಿರುವುದಿಲ್ಲ, ಆದರೆ ಮಠ ಮಾತ್ರ ಶಾಶ್ವತವಾಗಿರುತ್ತದೆ ಎಂದರು. ನಮ್ಮಂಥವರು ನೂರಾರು ವ್ಯಕ್ತಿಗಳು ಬರುತ್ತಾರೆ, ಹೋಗುತ್ತಾರೆ. ನಾನು

ಮೈಸೂರು: ಕೊಟ್ಟ ಕಾಣಿಕೆಯನ್ನು ಹಿಂಪಡೆಯಲಾರೆ- ಸಚಿವ ನಿರಾಣಿ Read More »

ಮಂಗಳೂರು: ಬ್ರೇಕ್ ಪೆಡಲ್ ಗೆ ಸಿಕ್ಕಿಹಾಕಿಕೊಂಡ ನೀರಿನ ಬಾಟಲ್| ನಿಯಂತ್ರಣ ತಪ್ಪಿದ‌ ಕಾರಿನಿಂದಾಗಿ ಸರಣಿ ಅಪಘಾತ

ಸಮಗ್ರ ನ್ಯೂಸ್ ಡೆಸ್ಕ್: ಕಾರಿನ ಬ್ರೇಕ್ ಪೆಡಲ್ ಗೆ ನೀರಿನ ಬಾಟಲ್ ಸಿಕ್ಕಿ ಹಾಕಿಕೊಂಡ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ದ್ವಿಚಕ್ರ ವಾಹನ ಹಾಗೂ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉರ್ವಾದ ಚಿಲಿಂಬಿ- ಮಠದಕಣಿ ಕ್ರಾಸ್ ರೋಡ್ ನಲ್ಲಿ ನಡೆದಿದೆ. ವಿವೇಕಾನಂದ ಶೆಣೈ (63) ಎಂಬವರು ಈ ಕಾರನ್ನು ಚಲಾಯಿಸುತ್ತಿದ್ದು, ಕೋಟೆಕಣಿಯಿಂದ ಇಳಿಜಾರಿನ ರಸ್ತೆಯಲ್ಲಿ ತೆರಳುತ್ತಿರುವ ವೇಳೆ, ಲೇಡಿಹಿಲ್‌ನಿಂದ ಉರ್ವಾ ಸ್ಟೋರ್ಸ್ ಕಡೆಗೆ ಹೋಗುತ್ತಿದ್ದ ಹೋಂಡಾ ಆಕ್ಟಿವಾಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಆಕ್ಟಿವಾದಲ್ಲಿದ್ದ

ಮಂಗಳೂರು: ಬ್ರೇಕ್ ಪೆಡಲ್ ಗೆ ಸಿಕ್ಕಿಹಾಕಿಕೊಂಡ ನೀರಿನ ಬಾಟಲ್| ನಿಯಂತ್ರಣ ತಪ್ಪಿದ‌ ಕಾರಿನಿಂದಾಗಿ ಸರಣಿ ಅಪಘಾತ Read More »

ಮಂಗಳೂರು : ಓಮಸತ್ವ ಮಾರುವ ನೆಪದಲ್ಲಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ| ಮುಸ್ಲಿಂ ಯುವಕ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್ ಡೆಸ್ಕ್: ಓಮಸತ್ವ ಮಾರುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿದ ಘಟನೆ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆಪದವು ಎಂಬಲ್ಲಿ ನಡೆದಿದೆ. ಆರೋಪಿಯನ್ನು ಮೊಹಮ್ಮದ್ ಇಕ್ಬಾಲ್ ಕೆಂಚನಕೆರೆ ಎಂದು ಗುರುತಿಸಲಾಗಿದೆ. ಈತ ಓಮಸತ್ವ ಮಾರುವ ನೆಪದಲ್ಲಿ ಮನೆಯಲ್ಲಿ ಒಂಟಿ ಮಹಿಳೆಯ ಮೇಲೆ ಅತ್ಯಾಚಾರ ಯತ್ನ ಮಾಡಿದ್ದಾನೆ. ಈ ವೇಳೆ ಸ್ಥಳೀಯರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದು ಪೊಲೀಸರಿಗೆ ಒಪ್ಪಿಸಿದ್ದಾನೆ. ಈ ಬಗ್ಗೆ ಬಜಪೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೂಚನೆ

ಮಂಗಳೂರು : ಓಮಸತ್ವ ಮಾರುವ ನೆಪದಲ್ಲಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ| ಮುಸ್ಲಿಂ ಯುವಕ ಪೊಲೀಸ್ ವಶಕ್ಕೆ Read More »

ವಿಟ್ಲ: ಕೊರಗಜ್ಜನ ವೇಷ ಧರಿಸಿ ಅವಮಾನಿಸಿದ ಮದುಮಗ ಕೊನೆಗೂ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್ ಡೆಸ್ಕ್: ವಿಟ್ಲದ ಸಾಲೆತ್ತೂರಿನಲ್ಲಿ ಕೊರಗಜ್ಜ ದೈವಕ್ಕೆ ಅಪಮಾನ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ ಸೋಂಕಲ್ ಅಗರ್ತಿಮೂಲೆ ಸಮೀಪದ ಉಮರುಲ್ ಭಾಷಿತ್ ಎಂಬಾತನ ಜೊತೆ ಜ.6 ರಂದು ನಡೆದಿತ್ತು. ಅದೇ ದಿನ ರಾತ್ರಿ ಸಾಲೆತ್ತೂರಿನ ಮದುಮಗಳ ಮನೆಯಲ್ಲಿ ನಡೆದ ಔತಣ ಕೂಟದಲ್ಲಿ ಮದುಮಗ ಭಾಷಿತ್ ಕೊರಗಜ್ಜನ ಮಾದರಿಯ ವೇಷ ಧರಿಸಿ ಕುಣಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ

ವಿಟ್ಲ: ಕೊರಗಜ್ಜನ ವೇಷ ಧರಿಸಿ ಅವಮಾನಿಸಿದ ಮದುಮಗ ಕೊನೆಗೂ ಪೊಲೀಸ್ ವಶಕ್ಕೆ Read More »

ಉಪನ್ಯಾಸಕ ಹುದ್ದೆ ಕೊಡಿಸುವ ಆಮಿಷವೊಡ್ಡಿ‌ ಯುವಕನ ಬೆತ್ತಲೆಗೊಳಿಸಿದ ದುರುಳರು| ಲೈಂಗಿಕ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್

ಸಮಗ್ರ ನ್ಯೂಸ್ ಡೆಸ್ಕ್: ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ ಮೂವರನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪೊಲೀಸರು ಬಂಧಿಸಿದ್ದಾರೆ. ಅಜಿತ್ ಶ್ರೀಕಾಂತ ನಾಡಿಗ್ (25), ಧನುಷ್ಯ ದಿಲೀಪ್ ಕುಮಾರ ಶೆಟ್ಟಿ ಶಿರಸಿ (25) ಹಾಗೂ ಪದ್ಮಜಾ ಡಿ.ಎನ್.ಶಿವಮೊಗ್ಗ (50) ಬಂಧಿತರು. ಖಾಯಂ ಉಪನ್ಯಾಸಕ ಹುದ್ದೆ ಕೊಡಿಸೋದಾಗಿ ಯುವಕನ್ನು ಶಿವಮೊಗ್ಗಕ್ಕೆ ಕರೆಸಿಕೊಂಡಿದ್ದ ಇವರು, ಕೋಣೆಯೊಂದರಲ್ಲಿ ನಗ್ನಗೊಳಿಸಿ ಮಹಿಳೆಯ ಜೊತೆ ಲೈಂಗಿಕ ಕ್ರಿಯೆ ನಡೆಸುವ ವಿಡಿಯೋ ಚಿತ್ರಿಕರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದರು. ನಂತರ ವಿಡಿಯೋ ತೋರಿಸಿ 15 ಲಕ್ಷ ನೀಡುವಂತೆ

ಉಪನ್ಯಾಸಕ ಹುದ್ದೆ ಕೊಡಿಸುವ ಆಮಿಷವೊಡ್ಡಿ‌ ಯುವಕನ ಬೆತ್ತಲೆಗೊಳಿಸಿದ ದುರುಳರು| ಲೈಂಗಿಕ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ Read More »

ಮಂಗಳೂರು: ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ಹೈಟೆಕ್ ವೇಶ್ಯಾವಾಟಿಕೆ| ನಾಲ್ವರು ಅಪ್ರಾಪ್ತರ ರಕ್ಷಣೆ| ಮೂವರು ಕಿಡಿಗೇಡಿಗಳ ಬಂಧನ

ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ಪೆಂಟ್ ಹೌಸ್ ಒಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸಲಾಗುತ್ತಿರುವ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಓರ್ವ ಪುರುಷ, ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ. ಬಂಧಿತರನ್ನು ಶಮೀನಾ, ಆಯಿಷಮ್ಮ ಮತ್ತು ಸಿದ್ಧಿಕ್​ ಎಂದು ಗುರುತಿಸಲಾಗಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಿ ವಿಡಿಯೋ ರೆಕಾರ್ಡ್​ ಮಾಡಿ ಯುವತಿಯರು ಮತ್ತು ಬಾಲಕಿಯರನ್ನು ಬೆದರಿಸಲಾಗುತ್ತಿತ್ತು. ದಾಳಿ ನಡೆಸಿದ ಪೊಲೀಸರು, ಪಿಯುಸಿ ಓದುತ್ತಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು ನಾಲ್ವರನ್ನು ರಕ್ಷಿಸಿದ್ದಾರೆ. ಮಂಗಳೂರು ಮಹಿಳಾ ಪೊಲೀಸ್

ಮಂಗಳೂರು: ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ಹೈಟೆಕ್ ವೇಶ್ಯಾವಾಟಿಕೆ| ನಾಲ್ವರು ಅಪ್ರಾಪ್ತರ ರಕ್ಷಣೆ| ಮೂವರು ಕಿಡಿಗೇಡಿಗಳ ಬಂಧನ Read More »

ಉಡುಗೆ-ತೊಡುಗೆ ಹೆಸರಲ್ಲಿ ಮುಸ್ಲಿಂ ವಿಧ್ಯಾರ್ಥಿನಿಯರ ಶಿಕ್ಷಣ ಹತ್ತಿಕ್ಕಲಾಗುತ್ತಿದೆ| ಹಿಜಾಬ್ ಪ್ರಕರಣ ಕುರಿತು ಸರ್ಕಾರವನ್ನು ತರಾಟೆಗೆತ್ತಿದ ಮೆಹಬೂಬಾ ಮುಫ್ತಿ

ಸಮಗ್ರ ಸುದ್ದಿ ವಿಭಾಗ: ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್ ಕಾರಣ ಮುಂದಿಟ್ಟು ವಿದ್ಯಾರ್ಥಿನಿಯರ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ‘ಬೇಟಿ ಬಚಾವೋ ಬೇಟಿ ಪಡಾವೋ’ ಎಂಬುದು ಮತ್ತೊಂದು ಸುಳ್ಳು ಘೋಷಣೆ. ಮುಸಲ್ಮಾನ ಹೆಣ್ಣುಮಕ್ಕಳಿಗೆ ತಮ್ಮ ಉಡುಗೆ ತೊಡುಗೆಗಳಿಂದಾಗಿ ಶಿಕ್ಷಣದ ಹಕ್ಕನ್ನು ನಿರಾಕರಿಸುತ್ತಿದ್ದಾರೆ. ಮುಸ್ಲಿಮರನ್ನು ಕಡೆಗಣಿಸುವುದನ್ನು ಕಾನೂನುಬದ್ಧಗೊಳಿಸುವುದು ಗಾಂಧಿಯವರ ಭಾರತವನ್ನು ಗೋಡ್ಸೆಯ ಭಾರತವನ್ನಾಗಿ ಪರಿವರ್ತಿಸುವ ಇನ್ನೊಂದು ಹೆಜ್ಜೆಯಾಗಿದೆ ಎಂದು ಮುಫ್ತಿ ಟ್ವೀಟ್ ಮಾಡಿದ್ದಾರೆ. ಬಿಜೆಪಿಯು ದೇಶದ

ಉಡುಗೆ-ತೊಡುಗೆ ಹೆಸರಲ್ಲಿ ಮುಸ್ಲಿಂ ವಿಧ್ಯಾರ್ಥಿನಿಯರ ಶಿಕ್ಷಣ ಹತ್ತಿಕ್ಕಲಾಗುತ್ತಿದೆ| ಹಿಜಾಬ್ ಪ್ರಕರಣ ಕುರಿತು ಸರ್ಕಾರವನ್ನು ತರಾಟೆಗೆತ್ತಿದ ಮೆಹಬೂಬಾ ಮುಫ್ತಿ Read More »

ಮಂಗಳೂರು: 1.6 ಕ್ವಿಂಟಾಲ್ ಅಕ್ರಮ ಗೋಮಾಂಸ ಸಾಗಾಟ| ನಾಲ್ಕು ಮಂದಿಯ ಬಂಧನ

ಸಮಗ್ರ ನ್ಯೂಸ್ ಡೆಸ್ಕ್: ಕೇರಳದ ಕಾಸರಗೋಡಿನಿಂದ ಮಂಗಳೂರಿನ ಉಳ್ಳಾಲಕ್ಕೆ ಒಂದು ಕ್ವಿಂಟಾಲ್ 60ಕೆಜಿ ಗೋ ಮಾಂಸವನ್ನು ಕಾರಿನಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ಪ್ರಕರಣ ಪತ್ತೆ ಹಚ್ವಿದ ಪೊಲೀಸರು ಈ ಸಂಬಂಧ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು ಪೆರ್ಮನ್ನೂರು ಚೆಂಬುಗುಡ್ಡೆ ನಿವಾಸಿ ಹುಸೇನ್ (24), ಉಳ್ಳಾಲ ರಿಜ್ವಾ ಮಂಜಿಲ್ ಕೋಡಿಯ ಮಹಮ್ಮದ್ ಮುಜಾಂಬಿಲ್ (25), ಉಳ್ಳಾಲದ ಫಾತಿಮಾ ಮಂಜಿಲ್ ಕೋಡಿಯ ಮಹಮ್ಮದ್ ಅಮೀನ್ (21) ಮತ್ತು ಉಳ್ಳಾಲ ಅಲ್ ಅದಿ ಹೌಸ್ ಕೋಡಿಯ ಸೊಹೈಬ್ ಅಕ್ತರ್ (22)

ಮಂಗಳೂರು: 1.6 ಕ್ವಿಂಟಾಲ್ ಅಕ್ರಮ ಗೋಮಾಂಸ ಸಾಗಾಟ| ನಾಲ್ಕು ಮಂದಿಯ ಬಂಧನ Read More »

ಕುಂದಾಪುರ: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಗೇಟ್ ನಲ್ಲೇ ತಡೆದ ಪ್ರಾಂಶುಪಾಲ

ಸಮಗ್ರ ನ್ಯೂಸ್ ಡೆಸ್ಕ್: ಹಿಜಾಬ್ ಧರಿಸಿ ಬಂಧ ಕಾರಣಕ್ಕಾಗಿ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಗುರುವಾರ ಕಾಲೇಜಿನ ಗೇಟಿನಲ್ಲಿಯೇ ತಡೆದು ಪ್ರವೇಶ ನಿರಾಕರಿಸಿದ ಬಗ್ಗೆ ವರದಿಯಾಗಿದೆ. ಹಿಜಾಬ್‌ಗೆ ಪ್ರತಿಯಾಗಿ ಕೆಲವು ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ವಿವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕರ ನೇತೃತ್ವದಲ್ಲಿ ಕರೆದ ಸಭೆಯಲ್ಲಿ ವಸ್ತ್ರ ಸಂಹಿತೆ ಪಾಲಿಸುವಂತೆ ಮತ್ತು ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರ್ಬಂಧ ವಿಧಿಸುವ

ಕುಂದಾಪುರ: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಗೇಟ್ ನಲ್ಲೇ ತಡೆದ ಪ್ರಾಂಶುಪಾಲ Read More »