ಕರಾವಳಿ

ದ.ಕನ್ನಡದಲ್ಲಿ ಬಿಜೆಪಿಗೆ ಭರ್ಜರಿ ಜಯ| ಕ್ಯಾಪ್ಟನ್ ಬ್ರಿಜೇಶ್ ಚೌಟಾ ಇನ್ಮುಂದೆ ಮಂಗಳೂರು ಎಂಪಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರ ಅಪಾರ ಅಭಿಮಾನಿಗಳನ್ನು ಹೊಂದಿರುವ ಕರ್ನಾಟಕದ ಬಲಿಷ್ಠ ಲೋಕ ಸಭಾ ಕ್ಷೇತ್ರವಾಗಿರುವ ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ಬ್ರಿಜೇಶ್​ ಚೌಟ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪದ್ಮರಾಜ್​ ವಿರುದ್ಧ ಭರ್ಜರಿ ಮತಗಳ ಅಂತರದ ವಿಜಯ ಸಾಧಿಸಿದ್ದಾರೆ. ಈ ಮೂಲಕ ಕೇಸರಿ ಪಕ್ಷ ಪಾರಮ್ಯ ಇಲ್ಲಿ ಮುಂದುವರಿದಿದೆ. ಆಡಳಿತ ವಿರೋಧಿ ಅಲೆಯನ್ನು ಮೀರುವ ಬಿಜೆಪಿಯ ತಂತ್ರ ಫಲಿಸಿದ್ದು, ಹೊಸ ಮುಖವೊಂದು ಪಾರ್ಲಿಮೆಂಟ್​ಗೆ ಏರಿದೆ. ಬಿಜೆಪಿ, ವಿಶೇಷವಾಗಿ ನರೇಂದ್ರ ಮೋದಿ ಕರ್ನಾಟಕದ […]

ದ.ಕನ್ನಡದಲ್ಲಿ ಬಿಜೆಪಿಗೆ ಭರ್ಜರಿ ಜಯ| ಕ್ಯಾಪ್ಟನ್ ಬ್ರಿಜೇಶ್ ಚೌಟಾ ಇನ್ಮುಂದೆ ಮಂಗಳೂರು ಎಂಪಿ Read More »

ಉಡುಪಿ- ಚಿಕ್ಕಮಗಳೂರು ಕ್ಷೇತ್ರ| ಬಿಜೆಪಿ‌ ಕೈಹಿಡಿದ ಮತದಾರ| ಕೋಟಾಗೆ ಭರ್ಜರಿ‌ ಗೆಲುವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ವಿರುದ್ಧ ಗೆಲುವು ಸಾಧಿಸಿದ್ದು, ಮತ ಎಣಿಕೆ ಕೇಂದ್ರ ಸಮೀಪ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿ ಅವರು ಗೆಲುವಿನ ನಗೆ ಬೀರಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಅವರನ್ನು ಮೇಲಕ್ಕೆತ್ತಿ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ಈ ಸಂದರ್ಭ ಶಾಸಕರಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ,

ಉಡುಪಿ- ಚಿಕ್ಕಮಗಳೂರು ಕ್ಷೇತ್ರ| ಬಿಜೆಪಿ‌ ಕೈಹಿಡಿದ ಮತದಾರ| ಕೋಟಾಗೆ ಭರ್ಜರಿ‌ ಗೆಲುವು Read More »

ಕುಂಭದ್ರೋಣ ಮಳೆಗೆ ತತ್ತರಿಸಿದ ಕರಾವಳಿ| ಪುತ್ತೂರು ಜಲಾವೃತ; ಬಂಟ್ವಾಳದಲ್ಲಿ ಸಿಡಿಲ ಹೊಡೆತಕ್ಕೆ ಮಹಿಳೆಯರಿಬ್ಬರು ಗಂಭೀರ

ಸಮಗ್ರ ನ್ಯೂಸ್: ಸೋಮವಾರ ಸಂಜೆ(ಜೂ. ೩) ಗುಡುಗು ಸಹಿತ ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಜಲಾವೃತಗೊಂಡಿದೆ. ಮಳೆಯ ಆರ್ಭಟಕ್ಕೆ ಪುತ್ತೂರಿನ ದರ್ಬೆಯಲ್ಲಿ ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಅಲ್ಲದೇ ಕೋರ್ಟ್ ರೋಡ್ ಬಳಿಯ ಜ್ಯುವೆಲ್ಲರಿ ಅಂಗಡಿಯೊಂದು ಜಲಾವೃತಗೊಂಡಿದೆ. ಇನ್ನು ಭಾರೀ ಮಳೆಗೆ ರಸ್ತೆಗಳು ನದಿಯಂತಾದವು. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಯಲ್ಲೇ ನೀರು ನಿಂತಿದೆ. ಹೀಗಾಗಿ ರಸ್ತೆಯಲ್ಲಿ ನೀರು ಹೆಚ್ಚಾಗಿ ಪಕ್ಕದ ಅಂಗಡಿ ಮುಂಗಟ್ಟುಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಬಂಟ್ವಾಳದ

ಕುಂಭದ್ರೋಣ ಮಳೆಗೆ ತತ್ತರಿಸಿದ ಕರಾವಳಿ| ಪುತ್ತೂರು ಜಲಾವೃತ; ಬಂಟ್ವಾಳದಲ್ಲಿ ಸಿಡಿಲ ಹೊಡೆತಕ್ಕೆ ಮಹಿಳೆಯರಿಬ್ಬರು ಗಂಭೀರ Read More »

ಮಂಗಳೂರು: ಕಮಾಲ್ ಮಾಡದ ನೋಟಾ| ಲೀಡ್ ಹೆಚ್ಚಿಸಿಕೊಂಡ ಬ್ರಿಜೇಶ್ ‌ಚೌಟಾ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಈಗಾಗಲೇ ಎರಡು ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ತನ್ನ ಹತಿರದ ಸ್ಪರ್ಧಿ ಕಾಂಗ್ರೆಸ್‌ ನ ಪದ್ಮರಾಜ್‌ ಆರ್‌ ಪೂಜಾರಿ ಗಿಂತ 20 ಸಾವಿರ ಮತಗಳಿಂದ ಮುಂದಿದ್ದಾರೆ. ಕ್ಷೇತ್ರದಲ್ಲಿ ನೋಟಾ ಮತಗಳು ಹೆಚ್ಚಾಗುತ್ತವೆ ಎಂಬ ನಿರೀಕ್ಷೆಯಿದ್ದರೂ ಅದು ಸುಳ್ಳಾಗಿದೆ. ನೋಟಾ ಗೆ ಸದ್ಯ 4134 ಮತ ಬಿದ್ದಿದೆ. ಚೌಟಾ 20 ಸಾವಿರ ಮತಗಳ ಲೀಡ್ ನಲ್ಲಿದ್ದಾರೆ.

ಮಂಗಳೂರು: ಕಮಾಲ್ ಮಾಡದ ನೋಟಾ| ಲೀಡ್ ಹೆಚ್ಚಿಸಿಕೊಂಡ ಬ್ರಿಜೇಶ್ ‌ಚೌಟಾ Read More »

ಬೆಳ್ತಂಗಡಿ: ಅರಣ್ಯಾಧಿಕಾರಿಗಳ ಜೊತೆಗೆ ಗಲಾಟೆ ನಡೆಸಿದ ಪ್ರಕರಣ| ಶಾಸಕ ಹರೀಶ್ ಪೂಂಜಾ, ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಮೇಲೆ‌ ಚಾರ್ಜ್ ಶೀಟ್

ಸಮಗ್ರ ನ್ಯೂಸ್: ಅರಣ್ಯ ಇಲಾಖೆಯ ಜಾಗದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ಗಲಾಟೆ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜೂ.1ರಂದು (ದೋಷರೋಪ ಪಟ್ಟಿ)ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಲೋಲಾಕ್ಷ ಎಂಬಾತ ಮೀಸಲು ಅರಣ್ಯ ಇಲಾಖೆಯ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿದ್ದನ್ನು ಉಪ್ಪಿನಂಗಡಿ ಅರಣ್ಯ ಇಲಾಖೆ ಕಿತ್ತು ಹಾಕಿದ್ದರು. ಇದರ ವಿರುದ್ಧ ಬೆಳ್ತಂಗಡಿ ಶಾಸಕ ಹರೀಶ್

ಬೆಳ್ತಂಗಡಿ: ಅರಣ್ಯಾಧಿಕಾರಿಗಳ ಜೊತೆಗೆ ಗಲಾಟೆ ನಡೆಸಿದ ಪ್ರಕರಣ| ಶಾಸಕ ಹರೀಶ್ ಪೂಂಜಾ, ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಮೇಲೆ‌ ಚಾರ್ಜ್ ಶೀಟ್ Read More »

ಉಡುಪಿ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ – ಸವಾರ ಮೃತ್ಯು

ಸಮಗ್ರ ನ್ಯೂಸ್‌ : ಕೆಎಸ್‌ಆರ್‌ಟಿಸಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸರ್ಕಲ್‌ನಲ್ಲಿ ನಡೆದಿದೆ. ಮೃತ ಬೈಕ್‌ ಸವಾರನನ್ನು ಕೋಟತಟ್ಟು ಕಲ್ಮಾಡಿ ರಸ್ತೆಯ ವಾಸುದೇವ ಗಾಣಿಗ (33) ಎಂದು ಗುರುತಿಸಲಾಗಿದೆ. ವಾಸುದೇವ ರಾತ್ರಿ ಸುಮಾರು 12 ಗಂಟೆಗೆ ತೆಕ್ಕಟ್ಟೆ ಸಾಯಿಗ್ರಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದರು. ಅವರು ಕೋಟ ಸರ್ಕಲ್ ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರಿನಿಂದ ಶಿರಸಿ ಕಡೆ

ಉಡುಪಿ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ – ಸವಾರ ಮೃತ್ಯು Read More »

ಉಡುಪಿ: ದರೋಡೆಗೆ ಹೊಂಚು ಹಾಕುತ್ತಿದ್ದ ಆರು ಮಂದಿಯ ಬಂಧನ

ಸಮಗ್ರ ನ್ಯೂಸ್‌ : ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಪಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ ಆರೋಪಿಗಳನ್ನು ಕಾಪು ಪೊಲೀಸರು ಶನಿವಾರ ರಾತ್ರಿ ಸಿನಿಮೀಯ ರೀತಿಯ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ರಾ.ಹೆ.66ರ ಕೋತಲಕಟ್ಟೆ ಬಳಿ ಸ್ಕಾರ್ಪಿಯೋ ಕಾರಿಗೆ ತಡೆಯೊಡ್ಡಿದ ಪೊಲೀಸರು ಆರೋಪಿಗಳಾದ ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್ ಶ್ರೀಪತಿ ಪರಂಗಿಪೇಟೆ ಎಂಬವರನ್ನು ಬಂಧಿಸಿದ್ದಾರೆ. ಉಡುಪಿಯಿಂದ ಕಾಪು‌ ಕಡೆಗೆ ಬರುತ್ತಿದ್ದ ಕಾಪು‌ ಸಿಐ ಜಯಶ್ರೀ ಮಾನೆ ಅವರು ಉದ್ಯಾವರ ಸೇತುವೆ

ಉಡುಪಿ: ದರೋಡೆಗೆ ಹೊಂಚು ಹಾಕುತ್ತಿದ್ದ ಆರು ಮಂದಿಯ ಬಂಧನ Read More »

ಸುಳ್ಯ: ಕೋಳಿ ಗೂಡಲ್ಲಿದ್ದ ನಾಗರ ಕಡಿದು ವೃದ್ದೆ ಸಾವು

ಸಮಗ್ರ ನ್ಯೂಸ್: ಮನೆಯ ಸಮೀಪ ಕೊಟ್ಟಿಗೆಯ ಸುತ್ತ ಸ್ವಚ್ಚಗೊಳಿಸುವ ಸಂದರ್ಭ ಕೋಳಿ ಗೂಡು(ಕಾಪು) ವನ್ನು ಪರಿಶೀಲಿಸಲು ವೃದ್ದೆಯೊಬ್ಬರು ಕೈ ಹಾಕಿದಾಗ ನಾಗರ ಹಾವು ಕಡಿದು ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ಸಂಭವಿಸಿದೆ. ಮೃತರನ್ನು ಹರಿಹರ ಪಲ್ಲತ್ತಡ್ಕ ಗ್ರಾಮದ ಕಲ್ಲೇಮಠ ನಿವಾಸಿ ದೇವಮ್ಮ(67) ಎಂದು ಗುರುತಿಸಲಾಗಿದೆ. ಕೈಗೆ ನಾಗರ ಹಾವು ಕಡಿದಿರುವುದು ಗೊತ್ತಾಗಿದ್ದು ತಕ್ಷಣವೇ ಅವರನ್ನು ಹಳ್ಳಿ ಮದ್ದಿಗೆ ಕರೆದೊಯ್ದು ಅಲ್ಲಿಂದ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯೆ ವಿಷವೇರಿ ಕೊನೆಯುಸಿರೆಳೆದರೆನ್ನಲಾಗಿದೆ.

ಸುಳ್ಯ: ಕೋಳಿ ಗೂಡಲ್ಲಿದ್ದ ನಾಗರ ಕಡಿದು ವೃದ್ದೆ ಸಾವು Read More »

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ನಾರಾಯಣ‌ ಕಳಿಗೆ ಇನ್ನಿಲ್ಲ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ಬಿಳಿನೆಲೆಯ ಚೇರು ನಿವಾಸಿ ನಾರಾಯಣ ಕಳಿಗೆ ಅವರು ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. 2023ರ ಸೆಪ್ಟೆಂಬರ್ ನಲ್ಲಿ ಬ್ರೈನ್ ಸ್ಟ್ರೋಕ್ ಆಗಿ ಚಿಕಿತ್ಸೆ ಪಡೆಯುತ್ತಿದ್ದರು. ನಾಳೆ ಜೂ.3 ರ ಬೆಳಗ್ಗೆ ಅವರ ಅಂತಿಮ ಸಂಸ್ಕಾರ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿದು ಬಂದಿದೆ. ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಮಾಲತಿ, ಓರ್ವ ಪುತ್ರಿ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ನಾರಾಯಣ‌ ಕಳಿಗೆ ಇನ್ನಿಲ್ಲ Read More »

ಉಜಿರೆ: ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಮಿಸ್ಸಿಂಗ್; ದೂರು ದಾಖಲು

ಸಮಗ್ರ ನ್ಯೂಸ್: ಉಜಿರೆಯ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಿಂದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಘಟನೆ ನಡೆದಿದೆ. ಕ್ರೀಡಾ ವಸತಿ ನಿಲಯದ ವಾರ್ಡನ್‌ ಮೋಹಿನಿ ಎಂಬುವವರು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿರುವ ಕುರಿತು ವರದಿಯಾಗಿದೆ. ಬೇಲೂರು ಮೂಲದ ದಿವ್ಯಾ ಎಸ್, ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಶಿಕ್ಷಣ ಪಡೆಯುತ್ತಿದ್ದು‌ ಮೇ 29ರಂದು ಬೆಳಿಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುವುದಾಗಿ ಹೇಳಿ ನಿಲಯ ಪಾಲಕರಲ್ಲಿ ತಿಳಿಸಿ ಹೋದವಳು ಹಾಸ್ಟೆಲ್ ಗೂ ಹಿಂತಿರುಗದೆ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ.

ಉಜಿರೆ: ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಮಿಸ್ಸಿಂಗ್; ದೂರು ದಾಖಲು Read More »