ಸುಳ್ಯ:ಅಪ್ರಾಪ್ತ ಬಾಲಕಿ ನೇಣಿಗೆ ಶರಣು
ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ನಿಡುಬೆ ಸಿ.ಆರ್.ಸಿ ಕಾಲನಿಯಲ್ಲಿ ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು (ಜೂ.1) ನಡೆದಿದೆ. ಐವರ್ನಾಡು ಗ್ರಾಮದ ನಿಡುಬೆ ಸಿ.ಆರ್.ಸಿ ಕಾಲನಿಯ ಇಲಯರಾಜ್‌ರವರ ಪುತ್ರಿ ಕೀರ್ತನ(15) ನೇಣು ಬಿಗಿದುಕೊಂಡಿದ್ದಾರೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತಾದರು, ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತಹದೇಹವನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಸುಳ್ಯ:ಅಪ್ರಾಪ್ತ ಬಾಲಕಿ ನೇಣಿಗೆ ಶರಣು Read More »