ದ.ಕ ಜಿಲ್ಲೆಯಲ್ಲಿ ಪುಣ್ಯಕ್ಷೇತ್ರಗಳಿಗೆ ವಾರಾಂತ್ಯದಲ್ಲೂ ಮುಕ್ತ ಅವಕಾಶ- ಕೋವಿಡ್ ನೆಗೆಟಿವ್ ವರದಿ ಅಗತ್ಯ- ಡಿಸಿ ಆದೇಶ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ವಿಧಿಸಿದ್ದ ವಾರಾಂತ್ಯ ನಿರ್ಬಂಧಗಳನ್ನು ತೆರವುಗೊಳಿಸಿ ಷರತ್ತುಗಳೊಂದಿಗೆ ಸೇವೆ ಹಾಗೂ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಿ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ. ಆದರೆ ದೇವಾಲಯಗಳಲ್ಲಿ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಡಳಿತ ಮಂಡಳಿಯು ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಹೊಂದಿರಬೇಕು. ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿ ಸೇರಿದಂತೆ ಎಲ್ಲರೂ ಪ್ರತಿ 15 ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಿ […]