ಕರಾವಳಿ

ಬೆಳ್ತಂಗಡಿ| ತಾ.ಪಂ ಮಾಜಿ ಉಪಾಧ್ಯಕ್ಷ ಆತ್ಮಹತ್ಯೆ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ, ಲಾಯಿಲ ನಿವಾಸಿ ಸಂತೋಷ್ ಕುಮಾರ್ (47) ಶನಿವಾರ ಸರ್ಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಅವಿವಾಹಿತರಾಗಿದ್ದರು. ಕೆಲ‌ ವರ್ಷಗಳ ಹಿಂದೆ ಅಪಘಾತವೊಂದರಲ್ಲಿ ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದರು.ಕೆಲ ಸಮಯ ಚಾಪೆ ಹಿಡಿದಿದ್ದ ಅವರು, ಕೊಕ್ಕಡದ ಸೇವಾಧಾಮ ಬೆನ್ನುಮೂಳೆ ಮುರಿತಕ್ಕೊಳಗಾದವರ ಆರೈಕೆ ಕೇಂದ್ರದಿಂದ ಚಿಕಿತ್ಸೆ ಮತ್ತು ಫಿಸಿಯೋಥೆರಫಿ ಪಡೆದು ಚೇತರಿಸಿಕೊಂಡು ಸ್ವಾವಲಂಬಿಯಾಗಿ ದುಡಿಯುತ್ತಿದ್ದರು. ಉಜಿರೆ- ಬೆಳ್ತಂಗಡಿ ಅಪೆ ರಿಕ್ಷಾ ಚಾಲಕ ಮಾಲೀಕರ‌ ಸಂಘದ ಪದಾಧಿಕಾರಿಯಾಗಿ, ಲಾಯಿಲ ಗಣೇಶೋತ್ಸವ ಸಮಿತಿ,ಕೃಷ್ಣ ಜನ್ಮಾಷ್ಟಮಿ ಸಮಿತಿ […]

ಬೆಳ್ತಂಗಡಿ| ತಾ.ಪಂ ಮಾಜಿ ಉಪಾಧ್ಯಕ್ಷ ಆತ್ಮಹತ್ಯೆ Read More »

ಉಡುಪಿ| ಏಳು ವರ್ಷಗಳಿಂದ ಹೊರ ಪ್ರಪಂಚ ಕಾಣದ ತಾಯಿ ಮಗಳು| ಈ ಗೃಹಬಂಧನ ಯಾಕೆ ಗೊತ್ತಾ…?

ಉಡುಪಿ: ಮಾನಸಿಕ ಅಸ್ವಸ್ಥ ಮಗನ ಉಪಟಳ, ಮತ್ತು ಉಗ್ರ ವರ್ತನೆಯ ಭೀತಿಯಿಂದ ತಾಯಿ ಗುಲಾಬಿ ಶೆಟ್ಟಿ(80 ವ) ಹಾಗೂ ಮಗಳು ವಾರಿಜ ಶೆಟ್ಟಿ (50ವರ್ಷ) ಕಳೆದ ಏಳು ವರ್ಷಗಳಿಂದ ಹೊರಪ್ರಪಂಚದ ಬೆಳಕು ಕಾಣದೆ ಮನೆಯಲ್ಲಿ ವಿದ್ಯುತ್ ಸಂಪರ್ಕವೂ ಇಲ್ಲದೆ ಗೃಹಬಂಧನಲ್ಲಿ ಕತ್ತಲೆಯ ದಿನಗಳ ಕಳೆಯುತ್ತಿದ್ದರು. ಮೂವರನ್ನು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಸ್ಥಳೀಯರ ಸಹಕಾರದಿಂದ ರಕ್ಷಿಸಿರುವ ಘಟನೆಯು ಶುಕ್ರವಾರ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ವಿಶು ಶೆಟ್ಟಿಯವರು ಮಾನಸಿಕ ಅಸ್ವಸ್ಥನನ್ನು ಚಿಕಿತ್ಸೆಗಾಗಿ ದೊಡ್ಡಣಗುಡ್ಡೆ

ಉಡುಪಿ| ಏಳು ವರ್ಷಗಳಿಂದ ಹೊರ ಪ್ರಪಂಚ ಕಾಣದ ತಾಯಿ ಮಗಳು| ಈ ಗೃಹಬಂಧನ ಯಾಕೆ ಗೊತ್ತಾ…? Read More »

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಲಾರಿ

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಯ ಡಿವೈಡರ್‍ಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‍ಲ್ಲಿ ನಡೆದಿದೆ. ಮಂಗಳೂರು ಕಡೆ ತೆರಳುತ್ತಿದ್ದ ಲಾರಿ ಇದಾಗಿದ್ದು. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹೋಗಿ ನಿಂತಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಕಾಪು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಲಾರಿ Read More »

ಕಾರ್ಕಳ: ಎಟಿಎಮ್ ಮೆಷಿನ್ ಒಡೆದು ಕಳ್ಳತನಕ್ಕೆ ಯತ್ನ

ಕಾರ್ಕಳ: ತಾಲೂಕಿನ ಕಾಂಜರಕಟ್ಟೆಯಲ್ಲಿರುವ ಕೆನರಾ ಬ್ಯಾಂಕಿನ ಎಟಿಎಮ್‍ನಲ್ಲಿ ಕಳ್ಳತನಕ್ಕೆ ಯತ್ನ ನಡೆದಿದೆ. ಆ.26ರ ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಕಳ್ಳರು ಎಟಿಎಮ್ ಮೆಷಿನ್ ಒಡೆದು ಹಾಕಿದ್ದು ನಗದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೋಲೀಸರಿಂದ ತನಿಖೆ ನಡೆಯುತ್ತಿದೆ.

ಕಾರ್ಕಳ: ಎಟಿಎಮ್ ಮೆಷಿನ್ ಒಡೆದು ಕಳ್ಳತನಕ್ಕೆ ಯತ್ನ Read More »

ಪುತ್ತೂರು: ಚಿನ್ನಾಭರಣ ಪಾಲಿಶ್ ಮಾಡುವ ನೆಪದಲ್ಲಿ ಬಂದ ವಂಚಕ -ಐದೂವರೆ ಪವನ್ ಚಿನ್ನ ಕಳೆದುಕೊಂಡ ಗ್ರಾಂ. ಪಂ. ಸದಸ್ಯೆ

ಪುತ್ತೂರು: ಚಿನ್ನಾಭರಣ ಪಾಲಿಶ್ ಮಾಡುವ ನೆಪದಲ್ಲಿ ಬಂದ ವಂಚಕನಿಗೆ ಕೊಟ್ಟು 5 ಪವನ್‍ನ ಚಿನ್ನಾಭರಣವನ್ನು ಕಳೆದುಕೊಂಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ನೆಟ್ಟಣಿಗೆ ಮುಡ್ನೂರು ಗ್ರಾ.ಪಂ. ಸದಸ್ಯೆಯಾಗಿರುವ ಪೆರ್ನಾಜೆ ನಿವಾಸಿ ಇಂದಿರಾ ವಂಚನೆ ಒಳಗಾದವರು. ಚಿನ್ನಾಭರಣವನ್ನು ಹೊಳೆಯುವಂತೆ ಪಾಲಿಶ್ ಮಾಡಿಕೊಡುವುದಾಗಿ ನಂಬಿಸಿ ಪಡೆದುಕೊಂಡ ಆರೋಪಿ ಮಾಂಗಲ್ಯ ಸರ ಸೇರಿದಂತೆ ಸುಮಾರು ಐದೂವರೆ ಪವನ್ ಚಿನ್ನಾಭರಣವನ್ನು ಅನುಮಾನ ಬಾರದಂತೆ ಆಕೆಯ ಕಣ್ಣೆದುರೇ ವಂಚಿಸಿ ಪರಾರಿಯಾಗಿದ್ದಾನೆ. ಬೆಳ್ಳಿ, ಬಂಗಾರದ ಆಭರಣಗಳು ಸೇರಿದಂತೆ ಮನೆಯ ಶೋಕೇಸ್, ಟಿವಿ ಹಾಗೂ ಹಲವು ವಸ್ತುಗಳನ್ನು ಸ್ವಚ್ಛಗೊಳಿಸಿ

ಪುತ್ತೂರು: ಚಿನ್ನಾಭರಣ ಪಾಲಿಶ್ ಮಾಡುವ ನೆಪದಲ್ಲಿ ಬಂದ ವಂಚಕ -ಐದೂವರೆ ಪವನ್ ಚಿನ್ನ ಕಳೆದುಕೊಂಡ ಗ್ರಾಂ. ಪಂ. ಸದಸ್ಯೆ Read More »

ದ.ಕ.: ಇಂದು ರಾತ್ರಿ 9 ಗಂಟೆಯಿಂದ ಮತ್ತೆ ವೀಕೆಂಡ್ ಕರ್ಪ್ಯೂ ಜಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‍ಗೆ ಸಂಬಂಧಿತ ವಾರಾಂತ್ಯ ಕರ್ಪ್ಯೂ ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಈ ಅವಧಿಯಲ್ಲಿ ಅಗತ್ಯ ವಸ್ತುಗಳ ಅಂಗಡಿಗಳು, ಹಣ್ಣು – ತರಕಾರಿಗಳು, ಮೀನು, ಮಾಂಸ ಮತ್ತು ಬೀದಿ ವ್ಯಾಪಾರಿಗಳ ಅಂಗಡಿಗಳು ಬೆಳಿಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಮದ್ಯದ ಅಂಗಡಿಗಳು ಬೆಳಿಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಪಾರ್ಸೆಲ್‍ಗಳನ್ನು ನೀಡಬಹುದು. ಹೋಟೆಲ್‍ಗಳು ಪಾರ್ಸೆಲ್‍ಗಳನ್ನು ಮಾತ್ರ ನೀಡಬಹುದು. ದಿನದ 24

ದ.ಕ.: ಇಂದು ರಾತ್ರಿ 9 ಗಂಟೆಯಿಂದ ಮತ್ತೆ ವೀಕೆಂಡ್ ಕರ್ಪ್ಯೂ ಜಾರಿ Read More »

ಸೆ.15ರವರೆಗೆ ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಿಸಬೇಡಿ – ದ.ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್‍ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಅವರು ನಿರ್ದೇಶನ ನೀಡಿದರು. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಆ.26ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ

ಸೆ.15ರವರೆಗೆ ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಿಸಬೇಡಿ – ದ.ಕ ಜಿಲ್ಲಾಧಿಕಾರಿ ಸೂಚನೆ Read More »

ಮಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಕಾಲೇಜುಗಳಿಗೆ ನೊಟೀಸ್ -627 ವಿದ್ಯಾರ್ಥಿಗಳಿಗೆ ಸೋಂಕು

ಮಂಗಳೂರು: ದ. ಕ. ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆ ಮಾರ್ಗಸೂಚಿ ಉಲ್ಲಂಘಿಸಿದ ಕಾಲೇಜುಗಳನ್ನು ಪತ್ತೆಹಚ್ಚಿ ನೋಟಿಸ್ ನೀಡಲು ಮುಂದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 29 ಕಾಲೇಜುಗಳ 627 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.ಈ ಪೈಕಿ 327 ಮಂದಿ ಕೇರಳ ಭಾಗದವರಾಗಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ , ಸೇರಿದಂತೆ ಹೊರಜಿಲ್ಲೆ ರಾಜ್ಯದ ವಿದ್ಯಾರ್ಥಿಗಳು ಸೇರಿದ್ದಾರೆ. ಜಿಲ್ಲೆಯ ಕಾಲೇಜುಗಳಲ್ಲಿ ಹಾಸ್ಟೆಲ್ ಗಳಲ್ಲಿ ಕೊರೋನಾ ಮಾರ್ಗಸೂಚಿ ಪಾಲನೆ ಕಡ್ಡಾಯ ಎಂದು ಆರೋಗ್ಯ ಇಲಾಖೆ ಈಗಾಗಲೇ ಸೂಚನೆ

ಮಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಕಾಲೇಜುಗಳಿಗೆ ನೊಟೀಸ್ -627 ವಿದ್ಯಾರ್ಥಿಗಳಿಗೆ ಸೋಂಕು Read More »

ಮಂಗಳೂರು: ಟಿ.ವಿ ನೋಡಲು ಬಂದ ಬಾಲಕಿಗೆ ಲೈಂಗಿಕ ಕಿರುಕುಳ ಮನೆ ಮಾಲೀಕನ ಬಂಧನ

ಮಂಗಳೂರು: ಪಕ್ಕದ ಮನೆಗೆ ಟಿ.ವಿ ನೋಡಲು ಬಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮನೆ ಮಾಲೀಕನನ್ನು ಮಹಿಳಾ ಠಾಣೆಯ ಪೋಲಿಸರು ಬಂಧಿಸಿದ್ದಾರೆ. ಪೆರ್ಮುದೆ ನಿವಾಸಿ ರಾಮಕೃಷ್ಣ ಬಂಧಿತ ಆರೋಪಿ. ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ರಾಮಕೃಷ್ಣನ ಬಾಡಿಗೆ ಮನೆಯಲ್ಲಿ ಮೂವರು ಮಕ್ಕಳೊಂದಿಗೆ ವಾಸವಿದ್ದರು. ಆಗಸ್ಟ್ 21ರಂದು ತುರ್ತು ಕೆಲಸಕ್ಕಾಗಿ ತಾಯಿ ಶಿವಮೊಗ್ಗಕ್ಕೆ ಮಕ್ಕಳನ್ನು ಬಿಟ್ಟು ಹೋಗಿದ್ದರು. ಮಕ್ಕಳನ್ನು ನೋಡಿಕೊಳ್ಳುವಂತೆ ಆರೋಪಿಯ ಪತ್ನಿಗೆ ಹೇಳಿದ್ದರು. ಸಂಜೆಯ ವೇಳೆಗೆ ಮೂವರು ಮಕ್ಕಳು ಆರೋಪಿಯ ಮನೆಗೆ ಟಿವಿ ನೋಡಲು ಹೋಗಿದ್ದು, ಆಗ

ಮಂಗಳೂರು: ಟಿ.ವಿ ನೋಡಲು ಬಂದ ಬಾಲಕಿಗೆ ಲೈಂಗಿಕ ಕಿರುಕುಳ ಮನೆ ಮಾಲೀಕನ ಬಂಧನ Read More »

ಪುತ್ತೂರು: ಕಾರು ಚಾಲಕನ ಕೊಲೆ ಯತ್ನ |6 ಮಂದಿಯ ಬಂಧನ |ಇದು ಕಾರ್ತಿಕ್ ಮೇರ್ಲ ಕೊಲೆ ಕೇಸಿಗೆ ಸಂಬಂಧವೇ?

ಪುತ್ತೂರು: ದರ್ಬೆ ಪೆಟ್ರೋಲ್ ಪಂಪ್‌ನಲ್ಲಿ ಆ.24ರಂದು ರಾತ್ರಿ ಇನ್ನೋವಾ ಕಾರು ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕೆಲವೇ ಗಂಟೆಗಳಲ್ಲಿ 6 ಮಂದಿ ಆರೋಪಿಗಳನ್ನು ಪುತ್ತೂರು ನಗರ ಪೊಲೀಸ್ ಠಾಣಾ ಇನ್‌ಸ್ಪೆಕ್ಟರ್ ಗೋಪಾಲ್ ನಾಯ್ಕ್ ನೇತೃತ್ವದಲ್ಲಿ ಬಂಧಿಸಿದ್ದಾರೆ. ಇದು ಹಿಂಜಾವೇ ಯ ಕಾರ್ತಿಕ್ ಮೇರ್ಲ ಕೊಲೆ ಕೇಸಿಗೆ ಸಂಬಂಧಿಸಿದ ಈ ಕೊಲೆ ಯತ್ನ ನಡೆದಿದೆ ಎಂದು ತನಿಖೆ ವೇಳೆ ತಿಳಿದು ಬಂಧಿದೆ. ಕಿಶೊರ್ ಮೇರ್ಲ, ರಾಕೇಶ್ ಪಂಚೋಡಿ, ರೆಹಮಂತ್, ಇಬ್ರಾಹಿಂ, ದೇವಿಪ್ರಸಾದ್ ಮತ್ತು ಅಶ್ರಫ್ ಬಂಧಿತ ಆರೋಪಿಗಳು.

ಪುತ್ತೂರು: ಕಾರು ಚಾಲಕನ ಕೊಲೆ ಯತ್ನ |6 ಮಂದಿಯ ಬಂಧನ |ಇದು ಕಾರ್ತಿಕ್ ಮೇರ್ಲ ಕೊಲೆ ಕೇಸಿಗೆ ಸಂಬಂಧವೇ? Read More »