ಕರಾವಳಿ

ಜೂ.1 ರಿಂದ 3 ರವರೆಗೆ ದ.ಕ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ- 2024ಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜೂನ್ 01 ರಂದು ಸಂಜೆ 4 ಗಂಟೆಯಿಂದ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ. ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ […]

ಜೂ.1 ರಿಂದ 3 ರವರೆಗೆ ದ.ಕ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ Read More »

ಉಡುಪಿ: ಸ್ವರ್ಣ ನದಿಯ ಸೇತುವೆ ದಂಡೆಗೆ ಡಿಕ್ಕಿ ಹೊಡೆದ ಬಸ್| ಪ್ರಯಾಣಿಕರು ಪಾರು

ಸಮಗ್ರ ನ್ಯೂಸ್‌ : ಖಾಸಗಿ ಬನ್ನೊಂದು ಸೇತುವೆ ಬದಿಯ ದಂಡೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಕಲ್ಯಾಣಪುರ ಸೇತುವೆಯಲ್ಲಿ ಸಂಭವಿಸಿದೆ. ಬಸ್ ನದಿಯಲ್ಲಿ ಮುಳುಗುವ ಅಪಾಯವಿದ್ದು, ಅದೃಷ್ಟವಶಾತ್ ಯಾವುದೇ ದುರ್ಘಟನೆ ಸಂಭವಿಸಿಲ್ಲ. ಬಹಳ ದೊಡ್ಡ ದುರಂತದಿಂದ ಪ್ರಯಾಣಿಕರು ಪಾರಾಗಿದ್ದಾರೆ. ಉಡುಪಿಯಿಂದ ಬ್ರಹ್ಮಾವರದ ಕಡೆಗೆ ಚಲಿಸುವ ಬಸ್ ಸ್ವರ್ಣ ನದಿಯ ಕಲ್ಯಾಣಪುರ ಸೇತುವೆಯ ಗರ್ಡ‌ರ್ ರಭಸದಿಂದ ಗುದ್ದಿದೆ. ಇದರ ಪರಿಣಾಮ ಸುರಕ್ಷಾ ಗರ್ಡರ್ ಮುರಿದಿದ್ದು, ಬಸ್ ಅಂಚಿನಲ್ಲಿ ನಿಂತಿದೆ. ಪ್ರಯಾಣಿಕರು ನದಿಗೆ ಬಿದ್ದು ಮುಳುಗಡೆ ಆಗುವ ಸನ್ನಿವೇಶದ ಅಪಾಯದಿಂದ

ಉಡುಪಿ: ಸ್ವರ್ಣ ನದಿಯ ಸೇತುವೆ ದಂಡೆಗೆ ಡಿಕ್ಕಿ ಹೊಡೆದ ಬಸ್| ಪ್ರಯಾಣಿಕರು ಪಾರು Read More »

ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ| ಸಣ್ಣ ಮಕ್ಕಳು ಭಾಗಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುರುಷರಕಟ್ಟೆ ಎಂಬಲ್ಲಿ ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ ನಡೆದಿದೆ . ಪ್ರಸಿದ್ಧ ಬಿಂದು ನೀರಿನ ಫ್ಯಾಕ್ಟರಿ ಪುರುಷರಕಟ್ಟೆ ಎಂಬಲ್ಲಿ ಕಾರ್ಯಾಚರಿಸುತ್ತಿದ್ದು ಈ ಫ್ಯಾಕ್ಟರಿಗೆ ಸೇರಿದ ಬೋರ್‌ವೆಲ್‌ಗಳನ್ನು ಫ್ಲಶ್ ಮಾಡುತ್ತಿದ್ದ ಸಂದರ್ಭದಲ್ಲಿ ಅನ್ಯಕೋಮಿನ ಸಂಘಟನೆಗೆ ಸೇರಿದ ಗುಂಪಿನಿಂದ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ಸಣ್ಣ ಮಕ್ಕಳು ಕೂಡ ಭಾಗಿಯಾಗಿರುವುದು ಕೇಳಿ ಬಂದಿದೆ. ಸದ್ಯ ಎರಡೂ ಗುಂಪುಗಳಿಂದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ

ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ| ಸಣ್ಣ ಮಕ್ಕಳು ಭಾಗಿ Read More »

ಮಂಗಳೂರು: ರಸ್ತೆ ಮಧ್ಯೆ ನಮಾಜ್ ಮಾಡಿದ ಪ್ರಕರಣ| ಸುಮೋಟೋ‌ ಕೇಸ್ ದಾಖಲು

ಸಮಗ್ರ ನ್ಯೂಸ್: ಮಂಗಳೂರು ನಗರದ ಕಂಕನಾಡಿಯ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲಿ ಮೇ 24ರಂದು ನಮಾಝ್ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸುಮೊಟೊ‌ ಕೇಸ್ ದಾಖಲಿಸಲಾಗಿದೆ. ಈ ವೀಡಿಯೋ ಪರಿಶೀಲಿಸಲಾಗಿದ್ದು, ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡೆತಡೆಯನ್ನುಂಟು ಮಾಡಿದ ವ್ಯಕ್ತಿಗಳ ಮೇಲೆ ಸ್ವಯಂಪ್ರೇರಿತ (ಸುಮೊಟೊ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಮಂಗಳೂರು: ರಸ್ತೆ ಮಧ್ಯೆ ನಮಾಜ್ ಮಾಡಿದ ಪ್ರಕರಣ| ಸುಮೋಟೋ‌ ಕೇಸ್ ದಾಖಲು Read More »

‘ತುಳುನಾಡು ಕರುನಾಡಲ್ಲೇ ಇದೆ, ನಮ್ಮನ್ನು ಹೊರಗಿನವರಂತೆ ಕಾಣಬೇಡಿ’| ಮಂಗಳೂರಿನಲ್ಲಿ ಕಿಚ್ಚ ಸುದೀಪ್ ಹೇಳಿಕೆ

ಸಮಗ್ರ ನ್ಯೂಸ್: ‘ಎಲ್ಲರಿಗೂ ನಮಸ್ಕಾರ. ವೇದಿಕೆ ಮೇಲಿದ್ದವರು ನಮ್ಮ ತುಳುನಾಡಿಗೆ ನಮ್ಮ ತುಳುನಾಡಿಗೆ ಎಂದು ನಮ್ಮನ್ನು ಹೊರಗಿನವರನ್ನಾಗಿ ಮಾಡುತ್ತಿದ್ದಾರೆ. ತುಳುನಾಡು ಕರ್ನಾಕಟದಲ್ಲೇ ಇದೆ’ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ‘ಯಕ್ಷ ಧ್ರುವ ಪಟ್ಲ ಫೌಂಡೇಶನ್​’ ಆಯೋಜಿಸಿದ್ದ ‘ಯಕ್ಷ ಧ್ರುವ ಪಟ್ಲ ಸಂಭ್ರಮ 2024’ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ‘ಕರ್ನಾಟಕ ನಮ್ಮ ಹೃದಯದಲ್ಲಿದೆ. ನಾವು ಅರ್ಧ ಈಕಡೆಯವರು ಎಂದು ನಿರೂಪಕರು ಹೇಳಿದರು. ಪ್ರತಿ ಬಾರಿ ಇಲ್ಲಿಗೆ ಕರೆದಾಗ ಬಹಳ ಖುಷಿ ಆಗುತ್ತದೆ. ಈ ಊರಿನ

‘ತುಳುನಾಡು ಕರುನಾಡಲ್ಲೇ ಇದೆ, ನಮ್ಮನ್ನು ಹೊರಗಿನವರಂತೆ ಕಾಣಬೇಡಿ’| ಮಂಗಳೂರಿನಲ್ಲಿ ಕಿಚ್ಚ ಸುದೀಪ್ ಹೇಳಿಕೆ Read More »

ಕುಕ್ಕೆ ಸುಬ್ರಹ್ಮಣ್ಯ: ರಾಜ್ಯದ ಶ್ರೀಮಂತ ದೇವಸ್ಥಾನದಲ್ಲಿ ಇದೆಂತಾ ಅ(ವ್ಯ)ವಸ್ಥೆ| ಬೀದಿಯಲ್ಲೇ ಮಲಗಿದ ಭಕ್ತಾಧಿಗಳು

ಸಮಗ್ರ ನ್ಯೂಸ್: ಬೇಸಿಗೆ ರಜೆ ಮತ್ತು‌ ‘ಶಕ್ತಿ’ ಯೋಜನೆಯಿಂದಾಗಿ ರಾಜ್ಯದ ಪ್ರಸಿದ್ಧ ಯಾತ್ರಾಕ್ಷೇತ್ರಗಳು ತುಂಬಿ ತುಳುಕುತ್ತಿದ್ದು, ಕರಾವಳಿಯ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಉಡುಪಿ ಸೇರಿದಂತೆ ಪ್ರಸಿದ್ಧ ದೇವಸ್ಥಾನಗಳು ಭಕ್ತರಿಂದ ತುಂಬಿ ತುಳುಕುತ್ತಿವೆ. ರಾಜ್ಯದ ನಂ. ೧ ಮುಜುರಾಯಿ ದೇವಸ್ಥಾನ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಕಳೆದ ಕೆಲ ದಿನಗಳಿಂದ ಭಕ್ತರ ದಂಡೇ ಕಂಡುಬರುತ್ತಿದ್ದು, ಮೂಲ ಸೌಕರ್ಯ ನೀಡಲು ದೇವಸ್ಥಾನದ ಆಡಳಿತ ಮಂಡಳಿ ಹರಸಾಹಸ ಪಡುತ್ತಿದೆ. ಶಕ್ತಿ ಯೋಜನೆ ಪರಿಣಾಮ ಮಹಿಳಾ ಭಕ್ತರ‌ ದಂಡು ಕುಕ್ಕೆ ಕ್ಷೇತ್ರದತ್ತ ಹರಿದು ಬರುತ್ತಿದ್ದು,

ಕುಕ್ಕೆ ಸುಬ್ರಹ್ಮಣ್ಯ: ರಾಜ್ಯದ ಶ್ರೀಮಂತ ದೇವಸ್ಥಾನದಲ್ಲಿ ಇದೆಂತಾ ಅ(ವ್ಯ)ವಸ್ಥೆ| ಬೀದಿಯಲ್ಲೇ ಮಲಗಿದ ಭಕ್ತಾಧಿಗಳು Read More »

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ವಿರುದ್ದ ಎರಡು ಪ್ರತ್ಯೇಕ ಚಾರ್ಜ್ ಶೀಟ್ ಸಲ್ಲಿಕೆ

ಸಮಗ್ರ ನ್ಯೂಸ್: ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿದ್ದನ್ನು ವಿರೋಧಿಸಿ ಪೊಲೀಸರ ವಿರುದ್ಧವೇ ಗುಡುಗಿದ್ದ ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಾಗಿದ್ದ ಎರಡೂ ಪ್ರಕರಣಗಳ ತ್ವರಿತ ತನಿಖೆ ನಡೆಸಿದ ಪೊಲೀಸರು ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ.28. ರಂದು ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್ ) ಸಲ್ಲಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಎಸ್.ಪಿ ಅವರಿಂದ ನಿಯೋಜಿಸಲ್ಪಟ್ಟಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಪುತ್ತೂರು ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ್ ಜಿ.ಜೆ‌ ಅವರು ಬೆಂಗಳೂರಿನ ನ್ಯಾಯಾಲಯಕ್ಕೆ ಈ ಆರೋಪ ಪಟ್ಟಿ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ವಿರುದ್ದ ಎರಡು ಪ್ರತ್ಯೇಕ ಚಾರ್ಜ್ ಶೀಟ್ ಸಲ್ಲಿಕೆ Read More »

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣ| ಅವರವರ ಪ್ರಕಾರ ಎಲ್ಲರೂ ಅಮಾಯಕರೇ, ಯಾರನ್ನೂ ಬಿಡೋ‌ ಮಾತೇ ಇಲ್ಲ – ಎಸ್ಪಿ

ಸಮಗ್ರ ನ್ಯೂಸ್: ಶಾಸಕ ಹರೀಶ್‌ ಪೂಂಜ ಅವರ ಬಂಧನ ಹೈಡ್ರಾಮಾದಲ್ಲಿ ಪೊಲೀಸರು ಅನಗತ್ಯವಾಗಿ ಮನೆಗೆ ನುಗ್ಗಿದ್ದಾರೆ ಎಂಬ ಆರೋಪಕ್ಕೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದ.ಕ. ಜಿಲ್ಲಾ ಪೊಲೀಸ್‌ ಅಧೀಕ್ಷಕ ರಿಷ್ಯಂತ್‌ ಸಿ.ಬಿ. ಮಾಧ್ಯಮಕ್ಕೆ ಸ್ಪಷ್ಟೀಕರಣ ನೀಡಿದ್ದಾರೆ. ಪೂಂಜ ಅವರ ಮನೆಗೆ ಆರಂಭದಲ್ಲಿ ನೋಟಿಸ್‌ ನೀಡುವ ಸಲುವಾಗಿ ಮೂವರು ತೆರಳಿದ್ದರು. ಆದರೆ ಅಲ್ಲಿ ಅವರು ಠಾಣೆಗೆ ಬಾರದೆ ಜನ ಸೇರಿಸಿ ದ್ದರಿಂದ ಭದ್ರತೆಗಾಗಿ ಹೆಚ್ಚುವರಿ ತಂಡ ಕಳುಹಿಸಬೇಕಾಯಿತು. ಬಳಿಕ ಅಲ್ಲಿನ ರಸ್ತೆ ಕಿರಿದಾಗಿದ್ದರಿಂದ ನೀವು ತೆರಳಿದರೆ

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣ| ಅವರವರ ಪ್ರಕಾರ ಎಲ್ಲರೂ ಅಮಾಯಕರೇ, ಯಾರನ್ನೂ ಬಿಡೋ‌ ಮಾತೇ ಇಲ್ಲ – ಎಸ್ಪಿ Read More »

ಮಂಗಳೂರು: ಕಂಕನಾಡಿಯ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡುವ ವೀಡಿಯೋ ವೈರಲ್

ಸಮಗ್ರ ನ್ಯೂಸ್: ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಾರೆ. ಈ ಘಟನೆ ಕಳೆದ ಶುಕ್ರವಾರ ನಡೆದಿದ್ದು, ನಮಾಜ್ ಮಾಡಿದ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ. ಕಂಕನಾಡಿಯಲ್ಲಿ ಮಸೀದಿ ಮುಂದೆ ಇರುವ ರಸ್ತೆಯಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ನಡು ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದರಿಂದ ವಾಹನ ಸವಾರರು ಯೂಟರ್ನ್ ತೆಗೆದುಕೊಂಡು ಹೋಗಿದ್ದಾರೆ. ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮುಸ್ಲಿಮರು ನಮಾಜ್ ಮಾಡಿದನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದ್ದು, ಇದಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಮಂಗಳೂರು: ಕಂಕನಾಡಿಯ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡುವ ವೀಡಿಯೋ ವೈರಲ್ Read More »

ಉಡುಪಿ: ಸಿದ್ದರಾಮಯ್ಯನವರೇ ಪುಂಡರನ್ನು ಬಂಧಿಸುವ ಗಂಡೆದೆ ಇಲ್ಲವೇ? ಎಂದ ಸುನಿಲ್ ಕುಮಾರ್

ಸಮಗ್ರ ನ್ಯೂಸ್‌ : ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಉಡುಪಿ, ದಕ್ಷಿಣ ಕನ್ನಡದಂಥ‌ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡಿ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ

ಉಡುಪಿ: ಸಿದ್ದರಾಮಯ್ಯನವರೇ ಪುಂಡರನ್ನು ಬಂಧಿಸುವ ಗಂಡೆದೆ ಇಲ್ಲವೇ? ಎಂದ ಸುನಿಲ್ ಕುಮಾರ್ Read More »