ಉಳ್ಳಾಲ: ಯುವಕನಿಗೆ ಚೂರಿ ಇರಿತ – ಆರೋಪಿ ಪರಾರಿ, ಪೊಲೀಸರಿಂದ ಶೋಧ
ಮಂಗಳೂರು: ಉಳ್ಳಾಲದ ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಗಾಯಗೊಂಡವರನ್ನು ಗ್ಯಾಸ್ ರಿಪೇರಿ ಅಂಗಡಿ ಮಾಲೀಕ ಹರೀಶ್ ಎಂದು ಗುರುತಿಸಲಾಗಿದೆ. ಉಳ್ಳಾಲ ಪೊಲೀಸರು ಗಾಯಾಳುಗಳನ್ನು ತೊಕ್ಕೊಟ್ಟುವಿನಲ್ಲಿರುವ ಆಸ್ಪತ್ರೆಗೆ ಸೇರಿಸಿದ್ದಾರೆ. ಮೊಗವೀರಪಟ್ನ ನಿವಾಸಿಯೊಬ್ಬ ವಿಶಾಲ್ ಎಂಬಾತನಿಂದ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ವೈಯಕ್ತಿಕ ದ್ವೇಷದಿಂದ ನಡೆದಿರುವ ಕೃತ್ಯ ಎಂದು ಶಂಕಿಸಲಾಗಿದ್ದು, ಸದ್ಯ ವಿಶಾಲ್ ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಉಳ್ಳಾಲ: ಯುವಕನಿಗೆ ಚೂರಿ ಇರಿತ – ಆರೋಪಿ ಪರಾರಿ, ಪೊಲೀಸರಿಂದ ಶೋಧ Read More »









