ಕರಾವಳಿ

ಉಡುಪಿ: ಆವರಣ ಗೋಡೆ ಕುಸಿದು 3 ದ್ವಿಚಕ್ರ ವಾಹನ ಜಖಂ

ಸಮಗ್ರ ನ್ಯೂಸ್‌ : ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಉಡುಪಿ ನಗರದ ಹಳೆ ಬಸ್ ಸ್ಟ್ಯಾಂಡ್ ಸಮೀಪದ ಕೃಷ್ಣಾ ಕ್ಯಾಂಪೇಕ್ಸ್ ಶ್ರೀ ನಾಗದೇವರ ಸನ್ನಿಧಿಯ ಪಕ್ಕದ ಆವರಣದ ಗೋಡೆ ಕುಸಿದು 3 ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊಂಡಿದೆ. ಉಡುಪಿ ಬೋರ್ಡ್ ಶಾಲೆಯ ಆವರಣ ಗೋಡೆ ಕುಸಿದಿದ್ದು, ಯಾವುದೇ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ. ರಾತ್ರಿಯಿಡಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು ಕೆಲವೆಡೆ ಮರಗಿಡಗಳು ಧರೆಗುರುಳಿದಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಉಡುಪಿ: ಆವರಣ ಗೋಡೆ ಕುಸಿದು 3 ದ್ವಿಚಕ್ರ ವಾಹನ ಜಖಂ Read More »

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ‌ ಸಾವು

ಸಮಗ್ರ ನ್ಯೂಸ್: ಪುತ್ತೂರಿನ ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಯುವತಿ ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20). ಕೆಲವು ದಿನಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು. ಆ ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ‌ ಸಾವು Read More »

ಉಡುಪಿ: ರೆಬೆಲ್ ರಘುಪತಿ ಭಟ್ ಗೆ ಬಿಜೆಪಿಯಿಂದ ಗೇಟ್ ಪಾಸ್

ಸಮಗ್ರ ನ್ಯೂಸ್: ವಿಧಾನಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ರಘುಪತಿ ಭಟ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದುದರಿಂದ, ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ

ಉಡುಪಿ: ರೆಬೆಲ್ ರಘುಪತಿ ಭಟ್ ಗೆ ಬಿಜೆಪಿಯಿಂದ ಗೇಟ್ ಪಾಸ್ Read More »

ಧರ್ಮಸ್ಥಳ: ಸಿಎಂ, ಡಿಸಿಎಂ ಎದುರು ಜೈ ಶ್ರೀರಾಮ್, ಜೈ ಮೋದಿ ಘೋಷಣೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳ ಭೇಟಿ ನೀಡಿದ್ದ ವೇಳೆ ಜೈ ಶ್ರೀ ರಾಮ್ ಹಾಗೂ ಜೈ ಮೋದಿ ಘೋಷಣೆ ಕೇಳಿಬಂದಿದೆ. ಪಂಜೆ, ಶಲ್ಯ ತೊಟ್ಟು, ಮಂಜುನಾಥ ಸ್ವಾಮಿಯ ದರ್ಶನ ಮಾಡಿ, ಪ್ರಾರ್ಥನೆ ಸಲ್ಲಿಸಿದ್ರು. ಈ ವೇಳೆ ರಾಜ್ಯಸಭಾ ಸದಸ್ಯರೂ ಆಗಿರುವ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಇನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಂಜುನಾಥ ಸ್ವಾಮಿ ದರ್ಶನ ಪಡೆಯಲು ತೆರಳುತ್ತಿರೋ ವೇಳೆ ಹೊರಗೆ ಸರತಿ

ಧರ್ಮಸ್ಥಳ: ಸಿಎಂ, ಡಿಸಿಎಂ ಎದುರು ಜೈ ಶ್ರೀರಾಮ್, ಜೈ ಮೋದಿ ಘೋಷಣೆ Read More »

ಉಡುಪಿ: ನಡುರಸ್ತೆಯಲ್ಲೇ ಗ್ಯಾಂಗ್ ವಾರ್| ಇಬ್ಬರನ್ನು ಅರೆಸ್ಟ್ ಮಾಡಿದ ಖಾಕಿ| ಹೊಡೆದಾಟದ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗರುಡ ಗ್ಯಾಂಗ್ ಗೆ ಸೇರಿದ ಇಬ್ಬರು ಆರೋಪಿಗಳಾದ ಆಶಿಕ್ ಮತ್ತು ರಖೀಬ್ ಎಂಬವರನ್ನು ಬಂಧಿಸಲಾಗಿದ್ದು ಉಳಿದವರು ಪರಾರಿಯಾಗಿದ್ದಾರೆ. ಮೇ 20ರಂದು ಪ್ರಕರಣ ದಾಖಲಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ

ಉಡುಪಿ: ನಡುರಸ್ತೆಯಲ್ಲೇ ಗ್ಯಾಂಗ್ ವಾರ್| ಇಬ್ಬರನ್ನು ಅರೆಸ್ಟ್ ಮಾಡಿದ ಖಾಕಿ| ಹೊಡೆದಾಟದ ವಿಡಿಯೋ ವೈರಲ್ Read More »

ಇಂದು(ಮೇ.25) ಧರ್ಮಸ್ಥಳಕ್ಕೆ ಸಿಎಂ ಮತ್ತು‌ ಡಿಸಿಎಂ ಭೇಟಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬೆಳಗ್ಗೆ 11:30 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಹೊರಟು 12.05ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಮಧ್ಯಾಹ್ನ 1.05 ಕ್ಕೆ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಸಂಜೆ 4 ಗಂಟೆಗೆ ಧರ್ಮಸ್ಥಳದಿಂದ ಹೊರಟು ಮಂಗಳೂರು

ಇಂದು(ಮೇ.25) ಧರ್ಮಸ್ಥಳಕ್ಕೆ ಸಿಎಂ ಮತ್ತು‌ ಡಿಸಿಎಂ ಭೇಟಿ Read More »

ಕರಾವಳಿಯಲ್ಲಿ ಅಬ್ವರಿಸುತ್ತಿರುವ ಪೂರ್ವ ಮುಂಗಾರು| ಸಿಡಿಲಿಗೆ ಕಾಲೇಜು ವಿದ್ಯಾರ್ಥಿ ಬಲಿ; ಅಲ್ಲಲ್ಲಿ ಹಾನಿ

ಸಮಗ್ರ ನ್ಯೂಸ್: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದ್ದು, ಶುಕ್ರವಾರದಿಂದೀಚೆಗೆ ಭಾರಿ ಮಳೆಯಾಗುತ್ತಿದೆ. ಶನಿವಾರ ಬೆಳಗಿನ ಜಾವ ದಟ್ಟ ಮೋಡದೊಂದಿಗೆ ಮಳೆಯಾಗುತ್ತಿದ್ದು, ಕೆಲ ದಿನ ಇದೇ ರೀತಿ ಮಳೆ ಸುರಿಯುವ ಲಕ್ಷಣಗಳಿರುವುದಾಗಿ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಶಿರ್ವದಲ್ಲಿ ಭಾರಿ ಗಾಳಿ, ಮಳೆ ಸಂದರ್ಭ ಸಿಡಿಲಾಘಾತದಿಂದ ಕಾಲೇಜು ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ. ಶಿರ್ವ ಎಂಆರ್ ಎಸ್ ಕಾಲೇಜಿನ ದ್ವಿತೀಯ ಬಿಸಿಎ ವಿದ್ಯಾರ್ಥಿ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿ

ಕರಾವಳಿಯಲ್ಲಿ ಅಬ್ವರಿಸುತ್ತಿರುವ ಪೂರ್ವ ಮುಂಗಾರು| ಸಿಡಿಲಿಗೆ ಕಾಲೇಜು ವಿದ್ಯಾರ್ಥಿ ಬಲಿ; ಅಲ್ಲಲ್ಲಿ ಹಾನಿ Read More »

ಉಡುಪಿ: ಪೊಲೀಸರೇ ಗೂಂಡಾ ರೀತಿ ವರ್ತಿಸಿದರೆ ವ್ಯವಸ್ಥೆಗೆ ಮಾರಕ; ಮಾಜಿ ಸಚಿವ ವಿ. ಸುನಿಲ್ ಕುಮಾರ್

ಸಮಗ್ರ ನ್ಯೂಸ್‌ : ಪೊಲೀಸರೇ ಗೂಂಡಾ ರೀತಿ ವರ್ತನೆ ಮಾಡಿದರೆ ಅದು ವ್ಯವಸ್ಥೆಗೆ ಮಾರಕ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಜನರಿಗೆ ರಕ್ಷಣೆ ಕೊಡುವುದು, ವಿಶ್ವಾಸ ನಿರ್ಮಾಣ ಮಾಡುವುದು ಪೊಲೀಸರ ಜವಾಬ್ದಾರಿ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬೆಳ್ತಂಗಡಿಯಲ್ಲಿ ಕಾನೂನು ಉಲ್ಲಂಘಿಸುವಂತಹ ಯಾವುದೇ ಘಟನೆ ನಡೆದಿರಲಿಲ್ಲ. ವಿನಾಕಾರಣ ರಾಜಕೀಯ ದ್ವೇಷದಿಂದ ಬಂಧನಕ್ಕೆ ಮುಂದಾಗಿದ್ದಾರೆ. ಈ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ

ಉಡುಪಿ: ಪೊಲೀಸರೇ ಗೂಂಡಾ ರೀತಿ ವರ್ತಿಸಿದರೆ ವ್ಯವಸ್ಥೆಗೆ ಮಾರಕ; ಮಾಜಿ ಸಚಿವ ವಿ. ಸುನಿಲ್ ಕುಮಾರ್ Read More »

ಉಡುಪಿ: ರಘುಪತಿ ಭಟ್ ನಿವೃತ್ತಿ ಘೋಷಿಸದಿದ್ದರೆ ಶಿಸ್ತು ಕ್ರಮ;ಸುನಿಲ್ ಕುಮಾರ್

ಸಮಗ್ರ ನ್ಯೂಸ್‌ : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು 24 ಗಂಟೆಯೊಳಗೆ ನಿವೃತ್ತಿ ಘೋಷಿಸಬೇಕು. ಇಲ್ಲದಿದ್ದರೆ ಪಕ್ಷದ ನಿಯಮ ಉಲ್ಲಂಘಿಸಿದ ಆಧಾರದ ಮೇಲೆ ಶಿಸ್ತು ಕ್ರಮ ಜರುಗಿಸುವುದು ಅನಿವಾರ್ಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದರು. ಉಡುಪಿ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 24 ಗಂಟೆಯೊಳಗೆ ಸ್ಪರ್ಧೆಗೆ ನಿವೃತ್ತಿ ಘೋಷಿಸದಿದ್ದರೆ, ಪಕ್ಷ ವಿರೋಧಿ ಚಟುವಟಿಕೆ ಅಥವಾ ಪಕ್ಷಕ್ಕೆ ಮುಜುಗರ ಉಂಟು

ಉಡುಪಿ: ರಘುಪತಿ ಭಟ್ ನಿವೃತ್ತಿ ಘೋಷಿಸದಿದ್ದರೆ ಶಿಸ್ತು ಕ್ರಮ;ಸುನಿಲ್ ಕುಮಾರ್ Read More »

ಮಂಗಳೂರು : ಶಾಸಕರೇ ನೀತಿ ನಿಯಮ ಉಲ್ಲಂಘಿಸಿ ರೌಡಿ ತರ ವರ್ತಿಸಿ ಜಿಲ್ಲೆಗೆ ಕಳಂಕ ತಂದಿದ್ದಾರೆ: ಎಂಎಲ್ ಸಿ ಹರೀಶ್ ಕುಮಾರ್

ಸಮಗ್ರ ನ್ಯೂಸ್ : ಪ್ರಜ್ಞಾವಂತ ನಾಗರಿಕರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಅಪಮಾನ ಮಾಡಿದ್ದಾರೆ. ಜನವಿರೋಧಿ ಕಾರ್ಯದಲ್ಲಿ ಪಾಲ್ಗೊಂಡು, ಶಾಸಕರೆ ನೀತಿ ನಿಯಮ ಉಲ್ಲಂಘಿಸಿ ರೌಡಿ ತರ ವರ್ತಿಸಿ ಜಿಲ್ಲೆಗೆ ಕಳಂಕ ತಂದಿದ್ದಾರೆ ಎಂದು ದ. ಕ ಕಾಂಗ್ರೆಸ್ ಅಧ್ಯಕ್ಷ ಎಂಎಲ್ ಸಿ ಹರೀಶ್ ಕುಮಾರ್ ಕಿಡಿಕಾರಿದ್ದಾರೆ. ಹಿಂದಿನ ಶಾಸಕರುಗಳು ಆ ಕ್ಷೇತ್ರದ ಗೌರವ ಉಳಿಸಿದವರು. ಅಕ್ರಮ ಕಲ್ಲು ಗಣಿಗಾರಿಕೆ, ಮರಳುಗಾರಿಕೆ ರೌಡಿ ಶೀಟರ್ ವ್ಯಕ್ತಿಯನ್ನು ರಕ್ಷಿಸಲು ಹೋಗಿದ್ದಾರೆ. ಅವನ ಬಂಧನವಾದಾಗ ಪೊಲೀಸರಿಗೆ ಬೈತಾರೆ, ತಲೆ ಕಡಿರಿ ಅಂತಾರೆ,

ಮಂಗಳೂರು : ಶಾಸಕರೇ ನೀತಿ ನಿಯಮ ಉಲ್ಲಂಘಿಸಿ ರೌಡಿ ತರ ವರ್ತಿಸಿ ಜಿಲ್ಲೆಗೆ ಕಳಂಕ ತಂದಿದ್ದಾರೆ: ಎಂಎಲ್ ಸಿ ಹರೀಶ್ ಕುಮಾರ್ Read More »