ಕರಾವಳಿ

ಬೆಳ್ತಂಗಡಿ: ಉಕ್ಕಿ ಹರಿದ ಕಪಿಲಾ ನದಿ| ಶಿಶಿಲದ ಶಿಶಿಲೇಶ್ವರ ದೇವಸ್ಥಾನ ಜಲಾವೃತ

ಸಮಗ್ರ ನ್ಯೂಸ್: ಮತ್ಸ್ಯತೀರ್ಥ ಎಂದೇ ಪ್ರಸಿದ್ಧವಾದ ಶಿಶಿಲ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲಾ ನದಿಯಲ್ಲಿ ಗುರುವಾರ ಸಂಜೆಯಿಂದ ಪ್ರವಾಹ ಏರಿಕೆಯಾಗುತ್ತಿದ್ದು, ನೀರು ದೇವಸ್ಥಾನದ ಒಳಗೆ ನೀರು ನುಗ್ಗಿದೆ. ಬೈರಾಪುರ ಘಾಟಿಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಪಿಲಾ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದೆ. ಪ್ರವಾಹದ ಜತೆಗೆ ಭಾರಿ ಗಾತ್ರದ ಮರಗಳೂ ಬರುತ್ತಿದ್ದು, ಶಿಶಿಲದ ಕಿಂಡಿ ಅಣೆಕಟ್ಟೆಯಲ್ಲಿ ಸಿಕ್ಕಿಹಾಕಿಕೊಂಡಿವೆ. ಇದರಿಂದಾಗಿ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದೆ. ಈ ವರ್ಷ ಪ್ರಥಮ ಬಾರಿಗೆ ನೀರು ದೇವಸ್ಥಾನದ ಒಳಗೆ ನುಗ್ಗಿದೆ. ದೇವಸ್ಥಾನದ

ಬೆಳ್ತಂಗಡಿ: ಉಕ್ಕಿ ಹರಿದ ಕಪಿಲಾ ನದಿ| ಶಿಶಿಲದ ಶಿಶಿಲೇಶ್ವರ ದೇವಸ್ಥಾನ ಜಲಾವೃತ Read More »

ಭಾರೀ ಮಳೆ, ಭೂಕುಸಿತ ಭೀತಿ| ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಭಾಗಶಃ ಬಂದ್| ರಾತ್ರಿ ಸಂಚಾರ ಸಂಪೂರ್ಣ ಬಂದ್ ಮಾಡಿ ಆದೇಶ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಧಾರಾಕಾರ ಸುರಿಯುತ್ತಿದೆ. ಇದರಿಂದ ಮಳೆ ಆರ್ಭಟಕ್ಕೆ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಹಲವೆಡೆ ರಸ್ತೆಗಳು ಜಲಾವೃತವಾಗಿವೆ. ಈ ಹಿನ್ನೆಲೆಯಲ್ಲಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಅದರಂತೆ ಬೆಂಗಳೂರು ಟು ಮಂಗಳೂರು ಅಥವಾ ಮಂಗಳೂರು ಟು ಬೆಂಗಳೂರು ಮಾರ್ಗ ರಸ್ತೆಗಳು ಸಹ ಬಂದ್​ ಆಗಿವೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳಬೇಕಾದರೆ ಚಾರ್ಮಾಡಿ ಘಾಟ್, ಶಿರಾಡಿಘಾಟ್ ಮತ್ತು ಮಡಿಕೇರಿಯ ಸಂಪಾಜೆ ಘಾಟ್​ ಮೂಲಕ ಹೋಗಬೇಕು. ಆದರೆ, ಇದೀಗ ಈ ಮಾರ್ಗಗಳಲ್ಲಿ

ಭಾರೀ ಮಳೆ, ಭೂಕುಸಿತ ಭೀತಿ| ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಭಾಗಶಃ ಬಂದ್| ರಾತ್ರಿ ಸಂಚಾರ ಸಂಪೂರ್ಣ ಬಂದ್ ಮಾಡಿ ಆದೇಶ Read More »

ಮುಂದುವರಿದ ಭಾರೀ ಮಳೆ| ಜು.19ರಂದು ದಕ್ಷಿಣ ಕನ್ನಡದ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜು.18 ರಂದು ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜು. 19ರಂದು ಜಿಲ್ಲೆಯ ಸುಳ್ಯ, ಪುತ್ತೂರು, ಕಡಬ, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ‌‌ ಮುಗಿಲನ್ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ನೇತ್ರಾವತಿ, ಕುಮಾರಧಾರ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಅಲ್ಲಲ್ಲಿ ವಿಪತ್ತು ಸಂಭವಿಸಿದ್ದು

ಮುಂದುವರಿದ ಭಾರೀ ಮಳೆ| ಜು.19ರಂದು ದಕ್ಷಿಣ ಕನ್ನಡದ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ದ.ಕ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ‌ ಮೈದಾನಗಳನ್ನು ‌ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸದಂತೆ ಸುತ್ತೋಲೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮೈದಾನಗಳನ್ನು ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸದಂತೆ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಈ ಕುರಿತಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರಿಂದ ಸುತ್ತೋಲೆ ಹೊರಡಿಸಲಾಗಿದ್ದು, ಸರ್ಕಾರಿ/ಅನುದಾನಿತ/ಅನುದಾನ ರಹಿತ ಶಾಲೆಗಳ ಮೈದಾನ ಮತ್ತು ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಗಳಿಗೆ ಬಳಸಬಾರದಾಗಿ ಸೂಚನೆ ನೀಡಲಾಗಿದೆ. ಅಲ್ಲದೇ ಅನುಮತಿಗಾಗಿ ಶಿಕ್ಷಣ ಇಲಾಖೆಗೆ ಪ್ರಸ್ತಾವನೆಗಳನ್ನು ಸಲ್ಲಿಸದಂತೆಯೂ ಸುತ್ತೋಲೆಯಲ್ಲಿ ಸೂಚಿಸಲಾಗಿದ್ದು, ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು ಎಂದು ತಿಳಿಸಲಾಗಿದ್ದು, ಈ

ದ.ಕ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ‌ ಮೈದಾನಗಳನ್ನು ‌ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸದಂತೆ ಸುತ್ತೋಲೆ Read More »

ಗುಡ್ಡ ಕುಸಿಯುವ ಭೀತಿ ಹಿನ್ನೆಲೆ| ರಾ.ಹೆ.275 ಸಂಪಾಜೆ ಘಾಟ್ ರಸ್ತೆಯಲ್ಲಿ 4 ದಿನಗಳ ಕಾಲ ರಾತ್ರಿ ಸಂಚಾರ ಬಂದ್

ಸಮಗ್ರ ನ್ಯೂಸ್: ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ಮಧ್ಯೆ 4 ದಿನಗಳ ಕಾಲ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯ ತನಕ ವಾಹನ ಸಂಚಾರ ನಿಷೇಧ ಮಾಡಿ ಕೊಡಗು ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಈ ಭಾಗದಲ್ಲಿ ದಿನಾಂಕ 18.07.2024 ರಿಂದ 22.07.2024ರ

ಗುಡ್ಡ ಕುಸಿಯುವ ಭೀತಿ ಹಿನ್ನೆಲೆ| ರಾ.ಹೆ.275 ಸಂಪಾಜೆ ಘಾಟ್ ರಸ್ತೆಯಲ್ಲಿ 4 ದಿನಗಳ ಕಾಲ ರಾತ್ರಿ ಸಂಚಾರ ಬಂದ್ Read More »

ಶಿರಾಡಿ‌ ಘಾಟ್ ನಲ್ಲಿ ಗುಡ್ಡ ಕುಸಿತ| ಪರ್ಯಾಯ ಮಾರ್ಗ ಬಳಕೆಗೆ ಸೂಚನೆ

ಸಮಗ್ರ ನ್ಯೂಸ್: ಭಾರೀ ಮಳೆ ಪ್ರಭಾವದಿಂದ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಈ ನಿಟ್ಟಿನಲ್ಲಿ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಚಲಿಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸುವ ಮೂಲಕ ಪೊಲೀಸರು ಮಾಹಿತಿ ನೀಡುತ್ತಿದ್ದಾರೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಬೆಂಗಳೂರು ಸೇರಿದಂತೆ ಸಕಲೇಶಪುರ, ಹಾಸನ ತೆರಳುವ ವಾಹನಗಳು ಬದಲಿ ರಸ್ತೆಗಳಾದ ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಹಾಸನ ಭಾಗದಿಂದ ಬರುವ ಪ್ರಯಾಣಿಕರು ಚಾರ್ಮಾಡಿ ಘಾಟ್ ರಸ್ತೆ

ಶಿರಾಡಿ‌ ಘಾಟ್ ನಲ್ಲಿ ಗುಡ್ಡ ಕುಸಿತ| ಪರ್ಯಾಯ ಮಾರ್ಗ ಬಳಕೆಗೆ ಸೂಚನೆ Read More »

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕರಾವಳಿಯ 16 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ‌ ಆಹ್ವಾನ| ಪ್ರಾಧಿಕಾರ ರಚನೆ ಕೈಬಿಟ್ಟ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರತ್ಯೇಕ ಪ್ರಾಧಿಕಾರ ರಚಿಸುವ ನಿರ್ಧಾರದಿಂದ ಹಿಂದೆ ಸರಿದಿರುವ ರಾಜ್ಯ ಸರಕಾರ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕರಾವಳಿಯ ಪ್ರಮುಖ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚಿಸಲು ಮುಂದಾಗಿದೆ. ರಾಜ್ಯದಲ್ಲೇ ಅತೀ ಹೆಚ್ಚು ಆದಾಯ ತರುವ ಎ ಗ್ರೇಡ್‌ಗೆ ಸೇರಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚಿಸಲು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ. ಆಗಸ್ಟ್ 3ರ ಒಳಗೆ ಸಮಿತಿಯ ಸದಸ್ಯತ್ವಕ್ಕೆ

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕರಾವಳಿಯ 16 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ‌ ಆಹ್ವಾನ| ಪ್ರಾಧಿಕಾರ ರಚನೆ ಕೈಬಿಟ್ಟ ರಾಜ್ಯ ಸರ್ಕಾರ Read More »

ಉಪ್ಪಿನಂಗಡಿ: ಏಕಾಏಕಿ ಐರಾವತ ಬಸ್ ನಲ್ಲಿ‌ ಕಾಣಿಸಿಕೊಂಡ ಬೆಂಕಿ| ಸ್ವಲ್ಪದರಲ್ಲೇ ತಪ್ಪಿದ ಅನಾಹುತ

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಸಂಸ್ಥೆ ಯ ಐರಾವತ ಬಸ್ಸೊಂದಕ್ಕೆ ಬೆಂಕಿ ಹಿಡಿದ ಘಟನೆ ಇಲ್ಲಿನ ಹಳೆಗೇಟು ಬಳಿ ಜು.18 ಗುರುವಾರ ಬೆಳಗ್ಗೆ ನಡೆದಿದೆ. ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ ಆರಿಸಿದ ಕಾರಣ ಸಂಭವಿಸಬಹುದಾಗಿದ್ದ ಹೆಚ್ಚಿನ ಅವಘಡ ತಪ್ಪಿದೆ. ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಉಪ್ಪಿನಂಗಡಿ ಗ್ರಾ.ಪಂ. ಸಿಬ್ಬಂದಿ ಇಸಾಕ್,

ಉಪ್ಪಿನಂಗಡಿ: ಏಕಾಏಕಿ ಐರಾವತ ಬಸ್ ನಲ್ಲಿ‌ ಕಾಣಿಸಿಕೊಂಡ ಬೆಂಕಿ| ಸ್ವಲ್ಪದರಲ್ಲೇ ತಪ್ಪಿದ ಅನಾಹುತ Read More »

ಒಮಾನ್ ಕರಾವಳಿಯಲ್ಲಿ ಮುಳುಗಿದ ತೈಲ ಟ್ಯಾಂಕರ್| ಒಂಬತ್ತು ಮಂದಿಯ ರಕ್ಷಣೆ

ಸಮಗ್ರ ನ್ಯೂಸ್: ಒಮಾನ್ ಕರಾವಳಿಯಲ್ಲಿ ಹಡಗು ಮುಳುಗಿ 16 ಮಂದಿ ನಾಪತ್ತೆಯಾಗಿದ್ದು, ಅದರಲ್ಲಿ ಈಗ ಒಂಬತ್ತು ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ಒಂಬತ್ತು ಸದಸ್ಯರಲ್ಲಿ ಎಂಟು ಮಂದಿ ಭಾರತೀಯರು ಮತ್ತು ಒಬ್ಬರು ಶ್ರೀಲಂಕಾದವರು ಎಂದು ಮೂಲಗಳು ತಿಳಿಸಿವೆ. ಒಮಾನ್​​ನ ಪ್ರಮುಖ ಬಂದರು ಡುಗ್ಮ್ ನಿಂದ ಹೊರಟಿದ್ದ ಪ್ರೆಸ್ಟೀಜ್ ಪಾಲ್ಕನ್ ಹಡಗು ಒಮಾನ್ ಸಾಗರ ಪ್ರದೇಶದಲ್ಲಿ ಮಗುಚಿದೆ. ಈ ಹಡಗಿನಲ್ಲಿ ಪೂರ್ವ ಕಾರ್ಮೋಸ್ ದೇಶದ ತೈಲ ಟ್ಯಾಂಕರ್ ಇತ್ತು ಎಂದು ಸಾಗರ ಭದ್ರತಾ ಕೇಂದ್ರ ಹೇಳಿದೆ. ಈ ಹಡಗು ಯೆಮನ್​​ನ ಅದೆನ್​​ಗೆ

ಒಮಾನ್ ಕರಾವಳಿಯಲ್ಲಿ ಮುಳುಗಿದ ತೈಲ ಟ್ಯಾಂಕರ್| ಒಂಬತ್ತು ಮಂದಿಯ ರಕ್ಷಣೆ Read More »

ಶಿರಾಡಿ ಘಾಟ್ ನಲ್ಲಿ ಓಮ್ನಿ ಮೇಲೆ ಗುಡ್ಡ ಕುಸಿತ| ಅಪಾಯದಿಂದ ಪಾರಾದ ಪ್ರಯಾಣಿಕರು

ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರಾ. ಹೆದ್ದಾರಿಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಎಂಬಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿದೆ. ಘಟನೆಯ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ಘಾಟ್ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಕಾರ್ಯಾಚರಣೆ ಸಾಗುತ್ತಿದ್ದು, ರಸ್ತೆಯುದ್ದಕ್ಕೂ ಟ್ರಾಫಿಕ್ ಜ್ಯಾಂ ಉಂಟಾಗಿದೆ. ಭಾರೀ ಮಳೆಗೆ ಸಕಲೇಶಪುರ ತಾಲೂಕು ಕೊಲ್ಲಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-75ರ ತಡೆಗೋಡೆ ಕುಸಿದಿದೆ. ಸುಮಾರು 25 ಅಡಿಯಷ್ಟು ಮಣ್ಣು ಹಾಕಿ ತಡೆಗೋಡೆ

ಶಿರಾಡಿ ಘಾಟ್ ನಲ್ಲಿ ಓಮ್ನಿ ಮೇಲೆ ಗುಡ್ಡ ಕುಸಿತ| ಅಪಾಯದಿಂದ ಪಾರಾದ ಪ್ರಯಾಣಿಕರು Read More »