ದ.ಕ ದಲ್ಲಿ ವೀಕೆಂಡ್ ಕರ್ಪ್ಯೂ ಇನ್ಮುಂದೆ ಹೀಗಿರಲಿದೆ.| ಹೊಸ ಮಾರ್ಗಸೂಚಿ ಪ್ರಕಟಿಸಿದ ಡಿಸಿ ಡಾ| ರಾಜೇಂದ್ರ ಕೆ.ವಿ
ಮಂಗಳೂರು: ರಾಜ್ಯ ಸರ್ಕಾರದ ಆದೇಶ ಹಾಗೂ ಜಿಲ್ಲೆಯ ವಿದ್ಯಮಾನಗಳನ್ನು ಗಮನಿಸಿ, ಕೋವಿಡ್-19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಕೆಲವು ನಿರ್ಬಂಧಗಳನ್ನು ಜಾರಿ ಮಾಡಿದ್ದಾರೆ. ಮುಂದಿನ ಆದೇಶದವರೆಗೆ ಜಿಲ್ಲೆಯಾದ್ಯಂತ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ, ಚಾಲ್ತಿಯಲ್ಲಿರುವ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಿ ಪರೀಕ್ಷೆಗಳಿಗೆ ಹಾಜರಾಗಲು […]








