ಕರಾವಳಿ

ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ| ಬಂಟ್ವಾಳ ಮೂಲದ ಇಬ್ಬರು ದಾರುಣ ಸಾವು

ಸಮಗ್ರ ನ್ಯೂಸ್: ಶಿರಾಡಿ ಘಾಟ್ ವ್ಯಾಪ್ತಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇನ್ನೋವಾ ಹಾಗೂ ಕಂಟೈನರ್ ಒಂದರ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಬಂಟ್ವಾಳ ಮೂಲದ ಇಬ್ಬರು ಸಾವನಪ್ಪಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿವೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರನಹಳ್ಳಿಯಿಂದ ಸುಮಾರು ಎಂಟು ಕಿಲೋಮೀಟರ್ ದೂರದ ಶಿರಾಡಿ ಘಾಟಿ್ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ 6.30ರ ಸಮಯದಲ್ಲಿ ಘಟನೆ ಸಂಭವಿಸಿದೆ. ಸಕಲೇಶಪುರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಮಂಗಳೂರು ಕಡೆಯಿಂದ ಬರುತ್ತಿದ್ದ ಕಂಟೈನರ್ ಲಾರಿ […]

ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ| ಬಂಟ್ವಾಳ ಮೂಲದ ಇಬ್ಬರು ದಾರುಣ ಸಾವು Read More »

ಉಡುಪಿ: ಟಿಸಿ ಕೊಟ್ಟಿಲ್ಲವೆಂದು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಟಿಸಿ ಕೊಟ್ಟಿಲ್ಲವೆಂದು ಬೇಸರದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೊನ್ನೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಬಂದಿದ್ದು ಈತ ಉತ್ತೀರ್ಣನಾಗಿದ್ದ. ಇವನು ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ಆದರೆ ಆತ್ಮಹತ್ಯೆ  ಮಾಡಿಕೊಂಡಿದ್ದಾನೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ನಿತಿನ್‌ ಆಚಾರಿ, ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದ. ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಭಟ್ ಬೈದಿದ್ದರಿಂದ ಬೇಸರಗೊಂಡು ಡೆತ್ ನೋಟ್

ಉಡುಪಿ: ಟಿಸಿ ಕೊಟ್ಟಿಲ್ಲವೆಂದು ವಿದ್ಯಾರ್ಥಿ ಆತ್ಮಹತ್ಯೆ Read More »

ಪುತ್ತೂರು: ಕೊನೆಗೂ ಸಿಕ್ಕಿದ ಪ್ರೇತವರ| ಆಟಿ ತಿಂಗಳಲ್ಲಿ ನಡೆಯಲಿದೆ ‘ಕುಲೆ ಮದಿಮೆ’

ಸಮಗ್ರ ನ್ಯೂಸ್: ಪ್ರೇತ ವಿವಾಹಕ್ಕೆ ವರ ಬೇಕೆಂದು ಜಾಹೀರಾತು ಹಾಕಿದ ಸುದ್ದಿ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ಜಾಹೀರಾತು ಹಾಕಿದ ಫಲವಾಗಿ ಪ್ರೇತವಿವಾಹಕ್ಕೆ ವರ ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರೇತ ವಿವಾಹಕ್ಕೆ ಪ್ರೇತ ವಧುವಿಗೆ ಕಾಸರಗೋಡು ಸಮೀಪದ ಬಾಯಾರು ಕಡೆಯ ವರ ಈಗ ನಿಗದಿಯಾಗಿದ್ದು, ಮುಂದಿನ ಆಷಾಡ ತಿಂಗಳಲ್ಲಿ ಪ್ರೇತ ಮದುವೆ ನಡೆಯಲಿದೆ. “ಸುಮಾರು 30 ವರ್ಷದ ಹಿಂದೆ ತೀರಿ ಹೋದಾಕೆಗೆ ಪ್ರೇತ ವರ ಸದ್ಯ ಬೇಕಾಗಿದೆ’ ಎಂದು ಪತ್ರಿಕೆಯಲ್ಲಿ ಜಾಹೀರಾತು ಹಾಕಿದ್ದನ್ನು ಗಮನಿಸಿದ

ಪುತ್ತೂರು: ಕೊನೆಗೂ ಸಿಕ್ಕಿದ ಪ್ರೇತವರ| ಆಟಿ ತಿಂಗಳಲ್ಲಿ ನಡೆಯಲಿದೆ ‘ಕುಲೆ ಮದಿಮೆ’ Read More »

ಬೆಳ್ತಂಗಡಿ: ಪಿಎಸ್ಐ ಗೆ ಧಮ್ಕಿ ಹಾಕಿದ ಶಾಸಕ ಹರೀಶ್ ಪೂಂಜಾ ಮೇಲೆ‌ ಎಫ್ಐಆರ್

ಸಮಗ್ರ ನ್ಯೂಸ್: ಪೊಲೀಸ್ ಠಾಣೆಯ ಎದುರು ಬೆಂಬಲಿಗರ ಪರ ಧರಣಿ ಮಾಡಿದಲ್ಲದೆ, ಠಾಣೆಯ PSI ಗೆ ಧಮ್ಕಿ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ

ಬೆಳ್ತಂಗಡಿ: ಪಿಎಸ್ಐ ಗೆ ಧಮ್ಕಿ ಹಾಕಿದ ಶಾಸಕ ಹರೀಶ್ ಪೂಂಜಾ ಮೇಲೆ‌ ಎಫ್ಐಆರ್ Read More »

ಉಡುಪಿ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಸಮಗ್ರ ನ್ಯೂಸ್ : ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ ಹಾಕಿದರು. ಈ ಹಿಂದೆ ಹಲವು ಬಾರಿ ಪ್ರತಿಭಟನೆ ಹಾಗೂ ಮನವಿ ನೀಡಿದ ಬಳಿಕ ಸಾಸ್ತಾನ ಟೋಲ್ ಪ್ಲಾಝಾದಲ್ಲಿ ಸ್ಥಳೀಯರಿಗೆ ಕೆಲವು ವರ್ಷಗಳಿಂದ ಶುಲ್ಕ ವಿನಾಯತಿ ನೀಡಲಾಗುತ್ತಿತ್ತು. ಆದರೆ ಈಗ ನವಯುಗ ಕಂಪೆನಿ ಟೋಲ್ ಪ್ಲಾಜಾವನ್ನು ಹೊಸ ಕಂಪೆನಿಗೆ ಮಾರಾಟ ಮಾಡಿದ್ದು, ಆ ಬಳಿಕದಿಂದ ಸ್ಥಳೀಯ ವಾಹನಗಳಿಗೂ ಫಾಸ್ಟ್ಯಾಗ್ ಮೂಲಕ

ಉಡುಪಿ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ Read More »

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಅರೆಸ್ಟ್‌

ಸಮಗ್ರ ನ್ಯೂಸ್‌ : ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿ ಮೇಲೆ ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಮೇಲೆ ಎಫ್ ಐ ಆರ್ ದಾಖಲಾದ ಹಿನ್ನೆಲೆ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾತ್ರೋ ರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹರೀಶ್ ಪೂಂಜ ದೌಡಾಯಿಸಿದ್ದು, ಆರೋಪಿಯನ್ನ ಬಿಡುಗಡೆ ಮಾಡುವಂತೆ ಹೈ ಡ್ರಾಮಾ ಮಾಡಿದ್ದಾರೆ. ಅಮಾಯಕ ಕಾರ್ಯಕರ್ತನನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸರಿಗೆ

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಅರೆಸ್ಟ್‌ Read More »

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಸಮಗ್ರ ನ್ಯೂಸ್‌ : ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು ವಾಹನದ ವೀಡಿಯೋ ಚಿತ್ರೀಕರಿಸಿದ ಸಾರ್ವಜನಿಕರೊಬ್ಬರು ಸದ್ರಿ ವಾಹನದ ವಿಮಾ ಅವಧಿಯು ಮುಕ್ತಾಯವಾಗಿರುವುದಾಗಿಯೂ, ಪೊಲೀಸ್ ಇಲಾಖೆಯು ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿರುವುದಾಗಿಯೂ ಸುಳ್ಳು ಸಂದೇಶವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಕುರಿತು ಸ್ಪಷ್ಠನೆ ನೀಡಿರುವ ಪೊಲೀಸ್ ಇಲಾಖೆ, ಪೊಲೀಸ್ ಇಲಾಖೆಯ ಎಲ್ಲಾ ವಾಹನಗಳೂ ಕರ್ನಾಟಕ ಗವರ್ನಮೆಂಟ್ ಇನ್ಯುರೆನ್ಸ್ ಡಿಪಾರ್ಟ್‌ಮೆಂಟ್ (ಕೆ.ಜಿ.ಐ.ಡಿ)

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ Read More »

ಉಡುಪಿ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಸಮಗ್ರ ನ್ಯೂಸ್ : ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ನಾಪತ್ತೆ ಯಾದ ಯುವತಿ, 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2542248, ಮೊ.ನಂ.9480805452, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಮೊ.ನಂ: 9480805400 ಅನ್ನು ಸಂಪರ್ಕಿಸಬಹುದಾಗಿದೆ ಎಂದು

ಉಡುಪಿ: ಕಾಲೇಜಿಗೆ ಹೋದ ಯುವತಿ ನಾಪತ್ತೆ Read More »

ಪುತ್ತೂರು: ಕರ್ನಾಟಕದ ಆರ್ಥಿಕ ಸ್ಥಿತಿ, ಪಾಕಿಸ್ತಾನದ ಆರ್ಥಿಕ ಸ್ಥಿತಿಯ ಹಂತಕ್ಕೆ ತಲುಪಿದೆ| ಸಂಜೀವ ಮಠಂದೂರು

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ ಆಗಿಲ್ಲ. ಅಂಗನವಾಡಿ ಕಟ್ಟಡ ಬಿಡಿ ದುರಸ್ಥಿಗೂ ಹಣವಿಲ್ಲ. ಹೈನುಗಾರರಿಗೆ ಪ್ರೋತ್ಸಾಹ ಧನವಿಲ್ಲ ಹೀಗೆ ಕರ್ನಾಟಕದ ಆರ್ಥಿಕ ಸ್ಥಿತಿ ಪಾಕಿಸ್ತಾನದ ಆರ್ಥಿಕ ಸ್ಥಿತಿಯ ಹಂತಕ್ಕೆ ತಲುಪಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸರಕಾರ ಒಂದು ವರ್ಷದಲ್ಲಿ ಎನೂ ಮಾಡಿಲ್ಲ ಎಂಬುದಕ್ಕೆ ಹಲವು ಉದಾಹರಣೆ ಇದೆ. ಇವತ್ತು ಪುತ್ತೂರಿನಲ್ಲಿ

ಪುತ್ತೂರು: ಕರ್ನಾಟಕದ ಆರ್ಥಿಕ ಸ್ಥಿತಿ, ಪಾಕಿಸ್ತಾನದ ಆರ್ಥಿಕ ಸ್ಥಿತಿಯ ಹಂತಕ್ಕೆ ತಲುಪಿದೆ| ಸಂಜೀವ ಮಠಂದೂರು Read More »

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕಾರು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ‌ ಕಾರೊಂದು ಚರಂಡಿಗಿಳಿದ ಘಟನೆ ಸುಳ್ಯ – ಬೆಳ್ಳಾರೆ ಹೆದ್ದಾರಿಯ ಬೇಂಗಮಲೆ ಎಂಬಲ್ಲಿ ಮೇ.17ರಂದು ನಡೆದಿದೆ. ಸುಳ್ಯದಿಂದ ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಆಲ್ಟೊ -800 ಕಾರು ಬೇಂಗಮಲೆ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ಪರಿಣಾಮ ರಸ್ತೆ ಪಕ್ಕದ ಚರಂಡಿಗಿಳಿದು ಜಖಂಗೊಂಡಿದೆ. ಚಾಲಕ ಮಾತ್ರ ಇದ್ದು, ಅಪಾಯದಿಂದ ಪಾರಾಗಿದ್ದಾನೆ.

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕಾರು Read More »