ಕರಾವಳಿ

ರಾ.ಹೆದ್ದಾರಿ 275ರ ಸಂಪಾಜೆ ಘಾಟ್ ರಸ್ತೆಯಲ್ಲಿ ಬಿರುಕು|ಜೋಡುಪಾಲದಲ್ಲಿ ಸಂಪರ್ಕ ಕಡಿತ ಭೀತಿ

ಸಮಗ್ರ ನ್ಯೂಸ್: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಮಡಿಕೇರಿಯ ಜೋಡುಪಾಲ ಸಮೀಪ ಜು.16ರಂದು ಮುಖ್ಯರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದರಿಂದಾಗಿ ರಸ್ತೆ ಬದಿಯ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಹೆದ್ದಾರಿ ಸಂಪರ್ಕ ಕಡಿತದ ಭೀತಿಯೂ ಎದುರಾಗಿದೆ. ಕಳೆದ ಎರಡು ಮೂರು ದಿನಗಳಿಂದ ಕೊಡಗು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಜೋಡುಪಾಲ ಸಮೀಪ ಎರಡನೇ ಮೊಣ್ಣಂಗೇರಿ ಬಳಿ ಹೆದ್ದಾರಿಯ ಒಂದು ಬದಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸವಾರರು ಎಚ್ಚರ ವಹಿಸುವಂತೆ ಸೂಚಿಸಲಾಗಿರುವುದಾಗಿ ತಿಳಿದುಬಂದಿದೆ. ಸುಮಾರು 6 ವರ್ಷಗಳ

ರಾ.ಹೆದ್ದಾರಿ 275ರ ಸಂಪಾಜೆ ಘಾಟ್ ರಸ್ತೆಯಲ್ಲಿ ಬಿರುಕು|ಜೋಡುಪಾಲದಲ್ಲಿ ಸಂಪರ್ಕ ಕಡಿತ ಭೀತಿ Read More »

ಸುಳ್ಯದ ವಿದ್ಯಾಮಾತಾ ಅಕಾಡೆಮಿಯಲ್ಲಿ ಉಚಿತ ಕಂಪ್ಯೂಟರ್ ತರಗತಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಸದ್ಯ PUC ಮತ್ತು Degree ಓದುತ್ತಿರುವ ವಿದ್ಯಾರ್ಥಿಗಳಿಗೆ 3 ತಿಂಗಳು ಪ್ರತೀ ಭಾನುವಾರ ಉಚಿತ ಕಂಪ್ಯೂಟರ್ ತರಬೇತಿಯನ್ನು ನೀಡಲಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಿದೆ. ಕಂಪ್ಯೂಟರ್ ತರಬೇತಿಯನ್ನು ಪಡೆಯುವ ಪ್ರತೀ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್ ಮತ್ತು 2 ಪಾಸ್ ಪೋರ್ಟ್ ಅಳತೆಯ ಫೋಟೋದೊಂದಿಗೆ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖಾ ಕಚೇರಿಯನ್ನು ಸಂಪರ್ಕಿಸಿ ಹೆಸರನ್ನು

ಸುಳ್ಯದ ವಿದ್ಯಾಮಾತಾ ಅಕಾಡೆಮಿಯಲ್ಲಿ ಉಚಿತ ಕಂಪ್ಯೂಟರ್ ತರಗತಿಗೆ ಅರ್ಜಿ ಆಹ್ವಾನ Read More »

ಉಡುಪಿ ಅಗ್ನಿ ಅವಘಡ ಪ್ರಕರಣ| ಉದ್ಯಮಿ ಪತ್ನಿ ಸೋಶಿಯಲ್ ಮೀಡಿಯಾ ಖ್ಯಾತಿಯ ಅಶ್ವಿನಿ ಶೆಟ್ಟಿ ಸಾವು

ಸಮಗ್ರ ನ್ಯೂಸ್: ಉಡುಪಿಯ ಅಂಬಲಪಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಬಾರ್ & ರೆಸ್ಟೋರೆಂಟ್ ಉದ್ಯಮಿ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪತ್ನಿ ಅಶ್ವಿನಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ. ಸೋಮವಾರ ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಸಿಲುಕಿದ ಬಾರ್ ಮಾಲಕ ರಮಾನಂದ ಹಾಗು ಪತ್ನಿ ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ರಮಾನಂದ ಅವರು

ಉಡುಪಿ ಅಗ್ನಿ ಅವಘಡ ಪ್ರಕರಣ| ಉದ್ಯಮಿ ಪತ್ನಿ ಸೋಶಿಯಲ್ ಮೀಡಿಯಾ ಖ್ಯಾತಿಯ ಅಶ್ವಿನಿ ಶೆಟ್ಟಿ ಸಾವು Read More »

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿಬಂದ ಆನೆಯ ಮೃತದೇಹ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯ ನೆರೆ ನೀರಿನಲ್ಲಿ ಆನೆ ಮೃತದೇಹ ತೇಲಿಬಂದ ಘಟನೆ ಸೋಮವಾರ ತಡರಾತ್ರಿ ವರದಿಯಾಗಿದೆ. ನಿರಂತರ ಮಳೆಯಿಂದ ತುಂಬಿ ಹರಿಯುತ್ತಿರುವ ನೀರಿನ ಮಟ್ಟವನ್ನು ವೀಕ್ಷಣೆಗೆ ಸೋಮವಾರ ತಡ ರಾತ್ರಿ ಮನ್ಮಥ ಬಟ್ಟೋಡಿ ಮತ್ತಿತರರು ತೆರಳಿದ್ದ ವೇಳೆ ನೆರೆ ನೀರಿನಲ್ಲಿ ತೇಲಿಬರುತ್ತಿರುವುದು ಕಂಡುಬಂದಿದ್ದು ಸೂಕ್ಷ್ಮವಾಗಿ ಗಮನಿಸಿದಾಗ ಆನೆ ಮೃತದೇಹ ಎಂಬುದು ಗೊತ್ತಾಗಿದೆ. ಆನೆ ಕೆಲದಿನಗಳ ಹಿಂದೆಯೇ ಎಲ್ಲೋ ಸತ್ತು ಈ ಭಾಗಕ್ಕೆ ತೇಲಿ ಬಂದಿರುವ ಶಂಕೆ ವ್ಯಕ್ತವಾಗಿದೆ. ಆನೆ ಮೃತದೇಹ ನೀರಿನಲ್ಲಿ ಕೊಚ್ಚಿ

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿಬಂದ ಆನೆಯ ಮೃತದೇಹ Read More »

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ಸ್ಥಳಾಂತರಗೊಂಡು ಶುಭಾರಂಭ

ಸಮಗ್ರ ನ್ಯೂಸ್:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಗರ ಮಾದರಿಯ ಉತ್ತಮ ಶಿಕ್ಷಣ ಪದ್ಧತಿ ಸ್ಥಳಾಂತರಗೊಂಡು ಅಂಬೆಟಡ್ಕ ಆರ್ಯುವೇದ ಕಾಲೇಜು ಮುಂಭಾಗ ಅಡ್ಕಾರ್ ಆರ್ಕೆಡ್ ನಲ್ಲಿ ಶುಭಾರಂಭಗೊಂಡಿದೆ. ಮೊಂಟೆಸ್ಸರಿ ಪದ್ಧತಿಗೆ ಅನುಗುಣವಾದ ಕಲಿಕೆಗೆ ಪೂಕರವಾದ ಕಲಿಕಾ ಸಾಮಾಗ್ರಿಗಳೊಂದಿಗೆ ಸುಸಜ್ಜಿತವಾದ ಪತ್ಯೇಕ ತರಗತಿ ಕೊಠಡಿಯಿರುವ ಸಂಸ್ಥೆ Play group, Pre kg, Lkg, Ukg, 1 ರಿಂದ 10 ತರಗತಿವರೆಗೆ ಕೋಚಿಂಗ್ ಕ್ಲಾಸ್, ಡ್ರಾಯಿಂಗ್ ಸಂಗೀತ, ಸ್ಪೋಕನ್ ಇಂಗ್ಲಿಷ್ ತರಗತಿ ನೀಡಲು ಸುಸಜ್ಜಿತವಾದ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +91

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ಸ್ಥಳಾಂತರಗೊಂಡು ಶುಭಾರಂಭ Read More »

ಭಾರೀ ಮಳೆ ಹಿನ್ನಲೆ|ಉಡುಪಿ ಜಿಲ್ಲೆಯಲ್ಲಿನಾಳೆ(ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಲ್ಲಿ ಮಳೆ‌ ಮುಂದುವರೆದಿದೆ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 16-7-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ , ಸರಕಾರಿ ಅನುದಾನಿತ ಮತ್ತು ಖಾಸಗಿ ,ಪ್ರಾಥಮಿಕ ಪ್ರೌಢಶಾಲೆ , ಪದವಿ ಪೂರ್ವ ಕಾಲೇಜುಗಳಿಗೆ ಜು.16ರಂದು ರಜೆಯನ್ನು ಮುಂದುವರೆಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಹಿನ್ನಲೆ|ಉಡುಪಿ ಜಿಲ್ಲೆಯಲ್ಲಿನಾಳೆ(ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ದ.ಕ ಜಿಲ್ಲೆಯಲ್ಲಿ ನಾಳೆ(ಜು.16) ಕೂಡಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಮುಂದುವರಿಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ‌ ಮುಂದುವರೆದಿದೆ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 16-7-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ , ಸರಕಾರಿ ಅನುದಾನಿತ ಮತ್ತು ಖಾಸಗಿ ,ಪ್ರಾಥಮಿಕ ಪ್ರೌಢಶಾಲೆ , ಪದವಿ ಪೂರ್ವ ಕಾಲೇಜುಗಳಿಗೆ ಜು.16ರಂದು ರಜೆಯನ್ನು

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ದ.ಕ ಜಿಲ್ಲೆಯಲ್ಲಿ ನಾಳೆ(ಜು.16) ಕೂಡಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಮುಂದುವರಿಕೆ Read More »

ಬೆಳ್ತಂಗಡಿ: ವಿದ್ಯುತ್ ಶಾಕ್ ಗೆ ಯುವಕ‌ ಬಲಿ

ಸಮಗ್ರ ನ್ಯೂಸ್: ವಿದ್ಯುತ್ ಶಾಕ್ ಹೊಡೆದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ ಜು.15ರ ಸೋಮವಾರ ನಡೆದಿದೆ. ಇಳಂತಿಲ ಗ್ರಾಮದ ಗೋಳಿದಡಿ ತಿಮ್ಮಪ್ಪಗೌಡ ಎಂಬವರ ಪುತ್ರ ಹರೀಶ್ ಗೌಡ(35) ಎಂಬಾತ ಸಾವನ್ನಪ್ಪಿದ ಯುವಕ. ತಮ್ಮ ಮನೆಯ ಸಮೀಪವೇ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದು ಇವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ದುರ್ಘಟನೆಯಿಂದ ತಾಲೂಕಿನಲ್ಲಿ ಈ ಮಳೆ‌ಗಾಲ

ಬೆಳ್ತಂಗಡಿ: ವಿದ್ಯುತ್ ಶಾಕ್ ಗೆ ಯುವಕ‌ ಬಲಿ Read More »

ಭಾರತೀಯ ಸೇನೆಯಿಂದ ಮಹಿಳೆಯರಿಗೆ ಬೈಕ್ ರ್‍ಯಾಲಿ| ಸುಳ್ಯದ ವೃಷ್ಟಿ ಮಲ್ಕಜೆ ಆಯ್ಕೆ

ಸಮಗ್ರ ವಾರ್ತೆ: ಕಾರ್ಗಿಲ್‌ ವಿಜಯ ದಿನದ ಗೌರವಾರ್ಥ ಭಾರತೀಯ ಸೇನೆಯು 25 ಮಹಿಳೆಯರ ಆಲ್‌ವುಮೆನ್‌ ಬೈಕ್‌ ರ್‍ಯಾಲಿ ಆಯೋಜಿಸಿದ್ದು, 2000 ಕಿ.ಮೀ. ಮಾರ್ಗದ ಈ ರ್‍ಯಾಲಿಯಲ್ಲಿ ಕರ್ನಾಟಕದಿಂದ ಪಾಲ್ಗೊಂಡಿದ್ದ ಇಬ್ಬರಲ್ಲಿ ಸುಳ್ಯ ತಾಲೂಕಿನ ಪಂಜ ಸಮೀಪದ ವೃಷ್ಟಿ ಮಲ್ಕಜೆ ಕೂಡ ಸೇರಿದ್ದಾರೆ. ಇವರು ಪುತ್ತೂರು ಹಾಗೂ ಸುಳ್ಯದಲ್ಲಿ ನ್ಯಾಯವಾದಿಯಾಗಿರುವ ಪುರುಷೋತ್ತಮ ಮಲ್ಕಜೆ ಹಾಗೂ ಉಷಾ ಮಲ್ಕಜೆ ದಂಪತಿಯ ಪುತ್ರಿ. ಜು.4ರಂದು ಹಿಮಾಚಲ ಪ್ರದೇಶದ ಲೇಹ್‌ನಿಂದ ಆರಂಭಗೊಂಡ ರ್‍ಯಾಲಿ ಲಡಾಕ್‌ನ ವಿವಿಧ ಸ್ಥಳಗಳ ಮೂಲಕ ಕಾರ್ಗಿಲ್‌ ಹುತಾತ್ಮರ ಸ್ಮಾರಕಕ್ಕೆ

ಭಾರತೀಯ ಸೇನೆಯಿಂದ ಮಹಿಳೆಯರಿಗೆ ಬೈಕ್ ರ್‍ಯಾಲಿ| ಸುಳ್ಯದ ವೃಷ್ಟಿ ಮಲ್ಕಜೆ ಆಯ್ಕೆ Read More »

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜು.15) ರಜೆ‌ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 15-7-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ,ಸರಕಾರಿ ಅನುದಾನಿತ ಮತ್ತು ಖಾಸಗಿ ,ಪ್ರಾಥಮಿಕ ಪ್ರೌಢಶಾಲೆ ,ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜು.15) ರಜೆ‌ ಘೋಷಣೆ Read More »