ಕೋವಿಡ್ ರೂಲ್ಸ್ ಗಿಂತ ಮೋದಿ ಸರ್ಕಾರದ ಏಳನೇ ವರ್ಷಚಾರಣೆಯೇ ಮೇಲಾಯ್ತು ಈ ಸಂಸದರಿಗೆ…! | ತಮ್ಮದೇ ರೂಲ್ಸ್ ಬ್ರೇಕ್ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷರು
ಮಂಗಳೂರು: ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಸರ್ಕಾರಗಳು, ಸ್ಥಳೀಯ ಆಡಳಿತಗಳು ಅಗತ್ಯ ಸಭೆ ನಡೆಸಲು ಅಗತ್ಯ ಸಚಿವರುಗಳು ಮತ್ತು ಅಧಿಕಾರಿಗಳನ್ನು ಸೇರಿಸಿಕೊಳ್ಳುವುದು ಹೇಗೆ ಎಂದು ಚಿಂತೆ ಮಾಡುತ್ತಿದ್ದರೆ ಇಲ್ಲೊಬ್ಬ ಸಂಸದರು ತಮ್ಮ ಪಕ್ಷದ ಕಾರ್ಯಕ್ರಮಕ್ಕೆ ತಮ್ಮದೇ ಸರ್ಕಾರದ ನಿಯಮ ಮೀರಿ ಜನ ಸೇರಿಸಿ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಸಮಾರಂಭ ನಡೆಸಿರುವ ಘಟನೆ ನಡೆದಿದೆ. ಹೇಳಿ ಕೇಳಿ ಇವ್ರು ಬಿಜೆಪಿ ರಾಜ್ಯಾಧ್ಯಕ್ಷರು, ಜೊತೆಗೆ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್. ಇವ್ರು ಮಂಗಳೂರಿನ ಸರಕಾರಿ ಶಾಲೆಯೊಂದರಲ್ಲಿ










