ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಅವಘಡ ಪ್ರಕರಣ| ಬಿಹಾರ ಮೂಲದ ಓರ್ವ ಸಾವು, ಮತ್ತೊಬ್ಬ ಗಂಭೀರ| ಮ.ನ ಪಾಲಿಕೆಯಿಂದ ನಗರದಾದ್ಯಂತ ಕಾಮಗಾರಿ ನಿಷೇಧಿಸಿ ಆದೇಶ
ಸಮಗ್ರ ನ್ಯೂಸ್: ಮಂಗಳೂರು ನಗರದ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದ ತಳಪಾಯಕ್ಕೆ ತೆಗೆದ ಗುಂಡಿಯ ಪಕ್ಕದ ಮಣ್ಣು ಬುಧವಾರ ಮಧ್ಯಾಹ್ನ ಕುಸಿದು, ಕಾರ್ಮಿಕರಿಬ್ಬರು ಅದರಡಿ ಸಿಲುಕಿದ್ದರು. ಅವರಲ್ಲಿ ಒಬ್ಬ ಕಾರ್ಮಿಕನನ್ನು ರಕ್ಷಿಸಲಾಗಿದೆ. ಇನ್ನೊಬ್ಬನ ರಕ್ಷಣಾ ಕಾರ್ಯಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಏಳು ಗಂಟೆಗಳ ಪ್ರಯತ್ನದ ಬಳಿಕ ಇನ್ನೊಬ್ಬ ಕಾರ್ಮಿಕನ ದೇಹವನ್ನು ಮಣ್ಣಿನಡಿಯಿಂದ ರಾತ್ರಿ 7.30ರ ಸುಮಾರಿಗೆ ಹೊರತೆಗೆಯಲಾಯಿತು. ಬಿಹಾರದ ರೋಹ್ಟಾಸ್ ಜಿಲ್ಲೆಯ










