ಉಪ್ಪಿನಂಗಡಿ: ಅನ್ನ ಹಾಕಿದ ಯಜಮಾನಿಯ ಆತ್ಮಹತ್ಯೆ ತಡೆದ ಶ್ವಾನ!!| ನೇತ್ರಾವತಿಗೆ ಹಾರಲೆತ್ನಿಸಿದ್ದಾಕೆ ಬದುಕಿದ್ದು ಹೇಗೆ?
ಸಮಗ್ರ ನ್ಯೂಸ್: ಗಂಡನ ಜೊತೆ ಮುನಿಸಿಕೊಂಡು ಆತ್ಮಹತ್ಯೆ ಮಾಡುವ ಸಲುವಾಗಿ ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ 36 ವರ್ಷದ ಮಹಿಳೆಯ ಜೀವ ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಸಾಕು ನಾಯಿಯಿಂದ ಬಚಾವಾಗಿದೆ. ಬೆಳ್ತಂಗಡಿ ತಾಲೂಕಿನ ಪಿಲಿಗೂಡು ನಿವಾಸಿ ಮಹಿಳೆ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಮನೆಯಿಂದ ಹತ್ತಾರು ಕಿ.ಮೀ ದೂರದ ಉಪ್ಪಿನಂಗಡಿಯ ನೇತ್ರಾವತಿ ಸೇತುವೆಗೆ ನಡೆದು ಬಂದಿದ್ದರು. ಆದರೆ ಅವರನ್ನು ಮನೆಯಿಂದಲೇ ಹಿಂಬಾಲಿಸಿಕೊಂಡು ಬಂದಿದ್ದ ಸಾಕು ನಾಯಿ ಅಪಾಯ ವನ್ನು ಅರಿತು ಮಹಿಳೆಯ ಚೂಡಿದಾರವನ್ನು ಕಚ್ಚಿ ಹಿಡಿದು, ಬೊಗಳುತ್ತಾ ರಸ್ತೆಯಲ್ಲಿ










