ಪುತ್ತೂರು: ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಮಕ್ಕಳು| ಪವಾಡ ಸದೃಶ ತಪ್ಪಿದ ಭಾರೀ ದುರಂತ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮತ್ತೊಂದು ಅವಘಡ ಸಂಭವಿಸಿದೆ. ದ.ಕ ಜಿಲ್ಲೆಯ ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದ ಪರಿಣಾಮ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ ಘಟನೆ ಇಂದು(ಗುರುವಾರ) ಬೆಳಗಿನ ಜಾವ ನಡೆದಿದೆ. ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಘಟನೆ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿದಿದೆ. ಅದೃಷ್ಟವಶಾತ್ ಮಣ್ಣಿನಡಿ ಸಿಲುಕಿದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋಡೆ ಕುಸಿದ









