ಕಳಚಿದ ಯಕ್ಷಲೋಕದ ಹಿರಿಯ ಕೊಂಡಿ| ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ
ಸಮಗ್ರ ನ್ಯೂಸ್: ತೆಂಕುತಿಟ್ಟಿನ ಯಕ್ಷಗಾನದ ಹಾಸ್ಯರಾಜ ಎಂದೇ ಪ್ರಖ್ಯಾತಿ ಪಡೆದ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಬೆಂಗಳೂರಿನಲ್ಲಿ ಹೃದಯಘಾತವಾಗಿದೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಅ. 21ರಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಜೊತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ […]