ಕರಾವಳಿ

ಪುತ್ತೂರು: ವಿದ್ಯುತ್ ಶಾಕ್‌ನಿಂದ ಯುವಕ ಮೃತ್ಯು

ಸಮಗ್ರ ನ್ಯೂಸ್ : ವಿದ್ಯುತ್ ಶಾಕ್‌ನಿಂದ ಯುವಕ ಮೃತಪಟ್ಟ ಘಟನೆ  ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ಘಟನೆ ಮೇ 24ರ ರಾತ್ರಿ ಸಂಭವಿಸಿದೆ. ಬೇಲೂರಿನ ಅಂಕಿಹಳ್ಳಿ ನಿವಾಸಿ ಜೋಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29) ಮೃತಪಟ್ಟ ಯುವಕ.ಜೋಕಿಂ ಅವರು ಪತ್ನಿ ಇಬ್ಬರು ಮಕ್ಕಳೊಂದಿಗೆ ಅವರ ಮಾವನ ಮನೆ ನಿಡಳ್ಳಿಯ ಬೋಳುಂಬುಡೆಗೆ ಬಂದಿದ್ದರು. ರೋಶನ್ ರಾತ್ರಿ ಸ್ಥಾನ ಮುಗಿಸಿ ಬಟ್ಟೆ ಒಗೆಯುವ ಸ್ಥಳಕ್ಕೆ ಹೋದಾಗ ಅಲ್ಲಿದ್ದ ವಿದ್ಯುತ್ ವಯರ್ ನಿಂದ ಶಾಕ್ ಹೊಡೆದು ನೆಲಕ್ಕೆ ಬಿದ್ದಿರುವುದಾಗಿ ತಿಳಿದುಬಂದಿದೆ. ಗಂಭೀರ ಗಾಯಗೊಂಡ

ಪುತ್ತೂರು: ವಿದ್ಯುತ್ ಶಾಕ್‌ನಿಂದ ಯುವಕ ಮೃತ್ಯು Read More »

ದುಬೈನಲ್ಲಿ ರಸ್ತೆ ಅಪಘಾತ: ಕೋಮಾದಲ್ಲಿದ್ದ ಮಂಗಳೂರಿನ ಯುವತಿ ಸಾವು

ಸಮಗ್ರ ನ್ಯೂಸ್ : ದುಬೈನಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕೆಲವು ತಿಂಗಳುಗಳಿಂದ ಕೋಮಾದಲ್ಲಿದ್ದ ಯುವತಿಯೊಬ್ಬರು ಮೇ 24 ರಂದು ನಿಧನರಾಗಿದ್ದಾರೆ. ಮೃತರನ್ನು ಕಿನ್ನಿಗೋಳಿಯ ಪುನರೂರಿನ ವಾಸುದೇವ ಅಗ್ರಹಾರ ನಿವಾಸಿ ಶ್ರೀಲತಾ ತಂತ್ರಿ (26) ಎಂದು ಗುರುತಿಸಲಾಗಿದೆ. ಇವರು ಭರತನಾಟ್ಯ ಹಾಗೂ ಯಕ್ಷಗಾನ ಕಲಾವಿದೆಯಾಗಿದ್ದು, ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದರು. ದುಬೈನಲ್ಲಿ ಉದ್ಯೋಗದಲ್ಲಿದ್ದ ಶ್ರೀಲತಾ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಅಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದರು. ಪ್ರಾರಂಭದಲ್ಲಿ ಅವರಿಗೆ ದುಬೈನಲ್ಲೇ ಚಿಕಿತ್ಸೆ ನೀಡಲಾಗಿತ್ತು.

ದುಬೈನಲ್ಲಿ ರಸ್ತೆ ಅಪಘಾತ: ಕೋಮಾದಲ್ಲಿದ್ದ ಮಂಗಳೂರಿನ ಯುವತಿ ಸಾವು Read More »

ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆ ಪಡೆಯಲು ಹೊಸ ಅರ್ಜಿ ಕಡ್ಡಾಯ!

ಸಮಗ್ರ ನ್ಯೂಸ್ : ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗಷ್ಟೇ ದೊರೆಯುವಂತೆ ಮಾಡಲು ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಚಿಂತನೆ ನಡೆಸಿದೆ. ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳನ್ನು ಅರ್ಹರಲ್ಲದವರೂ ಪಡೆಯುತ್ತಿದ್ದು, ಫಲಾನುಭವಿಗಳ ಪಟ್ಟಿ ಪರಿಷ್ಕರಿಸುವಂತೆ ಭಾನುವಾರದ ಶಾಸಕರ ಸಭೆಯಲ್ಲಿ ಸಲಹೆಗಳು ಬಂದಿವೆ. ಅದರಲ್ಲೂ, ಫಲಾನುಭವಿಗಳ ಹಾಲಿ ಪಟ್ಟಿಯಲ್ಲಿ ಕೆಲವರು ಮೃತಪಟ್ಟಿದ್ದಾರೆ, ಬೇರೆಯವರು ಅವರ ಹೆಸರಿನಲ್ಲಿ ಸಹಾಯಧನ ಪಡೆಯುತ್ತಿದ್ದಾರೆ. ಹಾಗೆಯೇ, ಅರ್ಹರ ಹೆಸರಿನಲ್ಲಿ ಬೇರೆಯವರು ನೋಂದಣಿ ಮಾಡಿ

ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆ ಪಡೆಯಲು ಹೊಸ ಅರ್ಜಿ ಕಡ್ಡಾಯ! Read More »

ಸಂಸ್ಕಾರಯುತರು ಈ ರೀತಿಯ ಮಾತುಗಳನ್ನಾಡುವುದಿಲ್ಲ, ನನ್ನ ಅಪ್ಪ ಅವರಿಗೇನು ಮಾಡಿದ್ದಾರೆ? – ಶಾಸಕ ಅಶೋಕ್ ರೈ

ಸಮಗ್ರ ನ್ಯೂಸ್: ಹಕ್ಕುಪತ್ರ ವಿಚಾರದಲ್ಲಿ ಬಂಟ್ವಾಳ ತಹಶೀಲ್ದಾರ್ ಕಛೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ತನ್ನ ಬಗ್ಗೆ ವೈಯುಕ್ತಿಕ ಟೀಕೆ ನಡೆಸಲಾಗಿದ್ದು, ನನಗೆ ಅದಕ್ಕಿಂತಲೂ ಕೆಟ್ಟ ಪದಗಳಲ್ಲಿ ಟೀಕೆ ಮಾಡಲು ತಿಳಿದಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ಎಚ್ಚರಿಸಿದ್ದಾರೆ. ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಐದು ಕುಟುಂಬಗಳಿಗೆ ಹಕ್ಕುಪತ್ರ ನೀಡಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಂತ್ರಸ್ತ ಕುಟುಂಬಗಳು ಹಾಗು ಬಿಜೆಪಿ ಪಕ್ಷ ಪುತ್ತೂರು ಶಾಸಕರ ವಿರುದ್ಧ ಪ್ರತಿಭಟನೆ ನಡೆಸಿತ್ತು. ಆ ಪ್ರತಿಭಟನೆಯಲ್ಲಿ ಓರ್ವ ಬಿಜೆಪಿ ಮುಖಂಡ

ಸಂಸ್ಕಾರಯುತರು ಈ ರೀತಿಯ ಮಾತುಗಳನ್ನಾಡುವುದಿಲ್ಲ, ನನ್ನ ಅಪ್ಪ ಅವರಿಗೇನು ಮಾಡಿದ್ದಾರೆ? – ಶಾಸಕ ಅಶೋಕ್ ರೈ Read More »

ಎಬೋಲಾ ವೈರಸ್ ಬೀತಿ| ಮಂಗಳೂರಿನಲ್ಲಿ ಹೈ ಅಲರ್ಟ್ 

ಸಮಗ್ರ ನ್ಯೂಸ್ : ಎಬೋಲಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅಧಿಕಾರಿಗಳು ಮಂಗಳೂರಿನಲ್ಲಿ ಹೈ ಅಲರ್ಟ್ ಯಾಗಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಸ್ಕ್ರೀನಿಂಗ್ ಪ್ರೋಟೋಕಾಲ್‌ಗಳನ್ನು ಜಾರಿಗೆ ತರಲಾಗಿದ್ದೂ, ಕೇಂದ್ರ ಸರ್ಕಾರದ ಸ್ಪಷ್ಟ ಸೂಚನೆಗಳ ಪ್ರಕಾರ, ಆರೋಗ್ಯ ಇಲಾಖೆಯ ಅಧಿಕಾರಿಗಳು ಡೆನ್ಮಾರ್ಕ್, ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಂದ ಬರುವ ಅಥವಾ ಅವುಗಳ ಮೂಲಕ ಸಾಗುವ ಎಲ್ಲಾ ಪ್ರಯಾಣಿಕರಿಗೆ ಕಠಿಣ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ . ರೋಗಲಕ್ಷಣ ಅಥವಾ ಸೋಂಕಿತ ವ್ಯಕ್ತಿಗಳ ರಕ್ತ

ಎಬೋಲಾ ವೈರಸ್ ಬೀತಿ| ಮಂಗಳೂರಿನಲ್ಲಿ ಹೈ ಅಲರ್ಟ್  Read More »

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣ

ಸಮಗ್ರ ನ್ಯೂಸ್: ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣಕ್ಕೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ತಟ್ಟೆಹಕ್ಕಲು ಕಡಲ ತೀರದಲ್ಲಿ ಸಂಭವಿಸಿದೆ. ಮೃತದೇಹಗಳು ಅಳ್ವೆಕೋಡಿ ಸಮೀಪ ಪತ್ತೆಯಾಗಿದ್ದು, 1. ಲಕ್ಷ್ಮಿ ಮಹಾದೇವ ನಾಯ್ಕ (42),2. ಉಮೇಶ ನಾಯ್ಕ (30).3. ಲಕ್ಷ್ಮಿ ನಾಯ್ಕ (30).4. ಲಕ್ಷ್ಮಿ ಅಣ್ಣಪ್ಪ ನಾಯ್ಕ (60).5. ಲಕ್ಷ್ಮಿ ಶಿವರಾಮ ನಾಯ್ಕ (49)6. ಜ್ಯೋತಿ ನಾಗಪ್ಪ ನಾಯ್ಕ (34).7. ಮಾಲತಿ ನಾಯ್ಕ (38).8. ಮಾಸ್ತಮ್ಮ ನಾಯ್ಕ ಎಂದು ಗುರುತಿಸಲಾಗಿದೆ. ಸ್ಥಳೀಯ ಪೊಲೀಸರ

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣ Read More »

ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ

ಸಮಗ್ರ ನ್ಯೂಸ್ : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೊಂದು ಹೊಸ ರೈಲು ನಿಲ್ದಾಣವನ್ನು ನಿರ್ಮಿಸುವ ಕುರಿತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶನಿವಾರ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ‘ಅಮೃತ್ ಭಾರತ್ ಸ್ಟೇಷನ್’ ಯೋಜನೆಯಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ವಿಶೇಷ ಪ್ರಸ್ತಾವನೆಯ ಮೇರೆಗೆ ಈ ಹೊಸ ನಿಲ್ದಾಣದ

ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ Read More »

ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರತದಲ್ಲೇ ಅತ್ಯಂತ ಕಡಿಮೆ ಏರಿಕೆ

ಸಮಗ್ರ ನ್ಯೂಸ್ : 10 ದಿನಗಳಲ್ಲಿ 3ನೇ ಬಾರಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗಿದ್ದರೂ (Fuel Price) ಜಾಗತಿಕ ಇಂಧನ ಬಿಕ್ಕಟ್ಟಿನ ಸಂಪೂರ್ಣ ಪರಿಣಾಮದಿಂದ ಭಾರತ ತನ್ನ ಗ್ರಾಹಕರನ್ನ ರಕ್ಷಣೆ ಮಾಡಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಕಚ್ಚಾ ತೈಲದ ವೆಚ್ಚಗಳು ಮತ್ತು ಜಾಗತಿಕ ಪೂರೈಕೆ ಸರಪಳಿಯಲ್ಲಿ ಉಂಟಾದ ಅಡಚಣೆಗಳ ಹೊರತಾಗಿಯೂ ಚಿಲ್ಲರೆ ಇಂಧನ ಬೆಲೆ ಏರಿಕೆ ಮಾಡದೇ 76 ದಿನಗಳ ಕಾಲ ಒತ್ತಡ ತಡೆದುಕೊಂಡಿದೆ ಎಂದು ಹೇಳಿದೆ. ಸರ್ಕಾರದ (Government) ಅಂಕಿ-ಅಂಶಗಳ ಪ್ರಕಾರ, ಮೇ

ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರತದಲ್ಲೇ ಅತ್ಯಂತ ಕಡಿಮೆ ಏರಿಕೆ Read More »

ರಾಜ್ಯದಲ್ಲಿ ಎಬೋಲಾ ವೈರಸ್ ಆತಂಕ| ಆರೋಗ್ಯ ಇಲಾಖೆ ಮಾರ್ಗಸೂಚಿ ಹೀಗಿದೆ 

ಸಮಗ್ರ ನ್ಯೂಸ್ : ವಿಶ್ವದಾದ್ಯಂತ ಕೊರೋನಾ (Corona) ವೈರಸ್ ಬಳಿಕ ಇದೀಗ ಎಬೋಲಾ (Ebola) ವೈರಸ್ ಆತಂಕ ಎದುರಾಗಿದ್ದು, ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಎಬೋಲಾ ಆತಂಕದ ಹಿನ್ನೆಲೆ ವಿಶ್ವಸಂಸ್ಥೆ ತುರ್ತು ಆರೋಗ್ಯ ಪರಿಸ್ಥಿತಿ ಘೋಷಣೆ ಮಾಡಿದೆ. ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಎಚ್ಚರಿಕೆ ಸಂದೇಶ ರವಾನಿದೆ. ಈ ನಿಟ್ಟಿನಲ್ಲಿ ಕೇಂದ್ರದ ಸೂಚನೆ ಮೇರೆಗೆ ರಾಜ್ಯ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನ ಬಿಡುಗಡೆ ಮಾಡಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಎಬೋಲಾ ಭಾದಿತ ದೇಶಗಳಿಂದ ಬರುವ

ರಾಜ್ಯದಲ್ಲಿ ಎಬೋಲಾ ವೈರಸ್ ಆತಂಕ| ಆರೋಗ್ಯ ಇಲಾಖೆ ಮಾರ್ಗಸೂಚಿ ಹೀಗಿದೆ  Read More »

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಅಭಿವೃದ್ಧಿಗೆ 604 ಕೋಟಿ ರೂ. : ಹೊಸ ಪ್ರಾಜೆಕ್ಟ್ ವಿವರ ಇಲ್ಲಿದೆ

ಸಮಗ್ರ ನ್ಯೂಸ್ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರು, ಸಿಬ್ಬಂದಿಗಳಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಧಾರ್ಮಿಕ ಇಲಾಖೆಯು ವಿವಿಧ ಮೂಲ ಸೌಕರ್ಯಗಳನ್ನು ಒದಗಿಸಲು 604.65 ಕೋಟಿ ರೂ ವೆಚ್ಚದ ಮಾಸ್ಟರ್ ಪ್ಲಾನ್ ರೂಪಿಸಿದೆ. ಪ್ರತಿದಿನ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಸುಮಾರು 25 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ. ಹೀಗಾಗಿ ಭಕ್ತರಿಗೆ ಅನುಕೂಲಕ್ಕಾಗಿ ಮೂರು ಹಂತಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಅಭಿವೃದ್ಧಿಗೆ 604 ಕೋಟಿ ರೂ. : ಹೊಸ ಪ್ರಾಜೆಕ್ಟ್ ವಿವರ ಇಲ್ಲಿದೆ Read More »