ಕರಾವಳಿ

ಸುಳ್ಯ: ಕೋಳಿ ಗೂಡಲ್ಲಿದ್ದ ನಾಗರ ಕಡಿದು ವೃದ್ದೆ ಸಾವು

ಸಮಗ್ರ ನ್ಯೂಸ್: ಮನೆಯ ಸಮೀಪ ಕೊಟ್ಟಿಗೆಯ ಸುತ್ತ ಸ್ವಚ್ಚಗೊಳಿಸುವ ಸಂದರ್ಭ ಕೋಳಿ ಗೂಡು(ಕಾಪು) ವನ್ನು ಪರಿಶೀಲಿಸಲು ವೃದ್ದೆಯೊಬ್ಬರು ಕೈ ಹಾಕಿದಾಗ ನಾಗರ ಹಾವು ಕಡಿದು ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ಸಂಭವಿಸಿದೆ. ಮೃತರನ್ನು ಹರಿಹರ ಪಲ್ಲತ್ತಡ್ಕ ಗ್ರಾಮದ ಕಲ್ಲೇಮಠ ನಿವಾಸಿ ದೇವಮ್ಮ(67) ಎಂದು ಗುರುತಿಸಲಾಗಿದೆ. ಕೈಗೆ ನಾಗರ ಹಾವು ಕಡಿದಿರುವುದು ಗೊತ್ತಾಗಿದ್ದು ತಕ್ಷಣವೇ ಅವರನ್ನು ಹಳ್ಳಿ ಮದ್ದಿಗೆ ಕರೆದೊಯ್ದು ಅಲ್ಲಿಂದ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯೆ ವಿಷವೇರಿ ಕೊನೆಯುಸಿರೆಳೆದರೆನ್ನಲಾಗಿದೆ.

ಸುಳ್ಯ: ಕೋಳಿ ಗೂಡಲ್ಲಿದ್ದ ನಾಗರ ಕಡಿದು ವೃದ್ದೆ ಸಾವು Read More »

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ನಾರಾಯಣ‌ ಕಳಿಗೆ ಇನ್ನಿಲ್ಲ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ಬಿಳಿನೆಲೆಯ ಚೇರು ನಿವಾಸಿ ನಾರಾಯಣ ಕಳಿಗೆ ಅವರು ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. 2023ರ ಸೆಪ್ಟೆಂಬರ್ ನಲ್ಲಿ ಬ್ರೈನ್ ಸ್ಟ್ರೋಕ್ ಆಗಿ ಚಿಕಿತ್ಸೆ ಪಡೆಯುತ್ತಿದ್ದರು. ನಾಳೆ ಜೂ.3 ರ ಬೆಳಗ್ಗೆ ಅವರ ಅಂತಿಮ ಸಂಸ್ಕಾರ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿದು ಬಂದಿದೆ. ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಮಾಲತಿ, ಓರ್ವ ಪುತ್ರಿ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ನಾರಾಯಣ‌ ಕಳಿಗೆ ಇನ್ನಿಲ್ಲ Read More »

ಉಜಿರೆ: ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಮಿಸ್ಸಿಂಗ್; ದೂರು ದಾಖಲು

ಸಮಗ್ರ ನ್ಯೂಸ್: ಉಜಿರೆಯ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಿಂದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಘಟನೆ ನಡೆದಿದೆ. ಕ್ರೀಡಾ ವಸತಿ ನಿಲಯದ ವಾರ್ಡನ್‌ ಮೋಹಿನಿ ಎಂಬುವವರು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿರುವ ಕುರಿತು ವರದಿಯಾಗಿದೆ. ಬೇಲೂರು ಮೂಲದ ದಿವ್ಯಾ ಎಸ್, ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಶಿಕ್ಷಣ ಪಡೆಯುತ್ತಿದ್ದು‌ ಮೇ 29ರಂದು ಬೆಳಿಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುವುದಾಗಿ ಹೇಳಿ ನಿಲಯ ಪಾಲಕರಲ್ಲಿ ತಿಳಿಸಿ ಹೋದವಳು ಹಾಸ್ಟೆಲ್ ಗೂ ಹಿಂತಿರುಗದೆ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ.

ಉಜಿರೆ: ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಮಿಸ್ಸಿಂಗ್; ದೂರು ದಾಖಲು Read More »

ಸುಳ್ಯ:ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ನಿಡುಬೆ ಸಿ.ಆ‌ರ್.ಸಿ ಕಾಲನಿಯಲ್ಲಿ ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು (ಜೂ.1) ನಡೆದಿದೆ. ಐವರ್ನಾಡು ಗ್ರಾಮದ ನಿಡುಬೆ ಸಿ.ಆರ್.ಸಿ ಕಾಲನಿಯ ಇಲಯರಾಜ್‌ರವರ ಪುತ್ರಿ ಕೀರ್ತನ(15) ನೇಣು ಬಿಗಿದುಕೊಂಡಿದ್ದಾರೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತಾದರು, ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತಹದೇಹವನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಸುಳ್ಯ:ಅಪ್ರಾಪ್ತ ಬಾಲಕಿ ನೇಣಿಗೆ ಶರಣು Read More »

ಎಸ್ ಡಿಪಿಐ ಕಡಬ ಬ್ಲಾಕ್ ಸಮಿತಿ ವತಿಯಿಂದ ಕಾರ್ಯಕರ್ತರ ಸಮಾವೇಶ

ಸಮಗ್ರ ನ್ಯೂಸ್: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಡಬ ಬ್ಲಾಕ್ ಸಮಿತಿಯ ವತಿಯಿಂದ ಕಾರ್ಯಕರ್ತರ ಸಮಾವೇಶವು ಮೇ 31ರಂದುನೆಲ್ಯಾಡಿಯಲ್ಲಿ ಕಡಬ ಬ್ಲಾಕ್ ಸಮಿತಿಯ ಅಧ್ಯಕ್ಷ ಹಾರಿಸ್ ಕಡಬ ರವರು ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಸವಣೂರು ರವರು ಮಾತನಾಡಿ ಪಕ್ಷ ಸಂಘಟನೆಯಲ್ಲಿ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ತೊಡಗಿಸಿಕೊಳ್ಳಲು ಕರೆ ನೀಡಿದರು. ಸಮಾವೇಶದ ಸಮಾರೋಪ ಭಾಷಣ ಗೈದ ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಶರೀಫ್ ನಿಂತಿಕಲ್

ಎಸ್ ಡಿಪಿಐ ಕಡಬ ಬ್ಲಾಕ್ ಸಮಿತಿ ವತಿಯಿಂದ ಕಾರ್ಯಕರ್ತರ ಸಮಾವೇಶ Read More »

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ಬೀದಿಯಲ್ಲಿ ಮಲಗಿದ ಪ್ರಕರಣ| ಭಕ್ತರಿಗೆ ತೊಂದರೆಯಾಗದಂತೆ ಕ್ರಮ – ಎಸಿ ಜುಬಿನ್ ಮೊಹಪಾತ್ರ

ಸಮಗ್ರ‌ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ದಿನಗಳ ಸಂದರ್ಭದಲ್ಲಿ ವಸತಿ ಸಮಸ್ಯೆಯಿಂದ ಯಾವುದೇ ಭಕ್ತರಿಗೆ ತೊಂದರೆ ಆಗದಂತೆ ಪೂರಕ ಕ್ರಮಕೈಗೊಳ್ಳಲು ದೇವಸ್ಥಾನದ ಅಧಿಕಾರಿಗಳಿಗೆ ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತ ಜುಬಿನ್‌ ಮೊಹಪಾತ್ರ ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಬೇಸಗೆ ರಜೆಯ ಸಂದರ್ಭ ಕುಕ್ಕೆಯ ರಥಬೀದಿಯ ಒಂದು ಬದಿಯಲ್ಲಿ ಹಲವಾರು ಭಕ್ತರು ಮಲಗಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಕ್ಷೇತ್ರದಲ್ಲಿ ವಸತಿ ಸಮಸ್ಯೆಯಿಂದ ಈ ರೀತಿ ಭಕ್ತರು ಬೀದಿಯಲ್ಲಿ ಮಲಗುತ್ತಿದ್ದಾರೆ ಎಂಬ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ಬೀದಿಯಲ್ಲಿ ಮಲಗಿದ ಪ್ರಕರಣ| ಭಕ್ತರಿಗೆ ತೊಂದರೆಯಾಗದಂತೆ ಕ್ರಮ – ಎಸಿ ಜುಬಿನ್ ಮೊಹಪಾತ್ರ Read More »

ಬೆಳ್ತಂಗಡಿ: 6 ದಿನಗಳ ಕಾಲ ಆಹಾರವಿಲ್ಲದೆ ಕಾಡಿನಲ್ಲಿ ನಾಪತ್ತೆಯಾಗಿದ್ದ ವೃದ್ದ ಮರಳಿ ಮನೆಗೆ| ಕಾಡಿನಲ್ಲಿ ಕೇಳಿಸಿತ್ತು ಅಶರೀರವಾಣಿ!!

ಸಮಗ್ರ ನ್ಯೂಸ್: ಕಟ್ಟಿಗೆ ತರಲು ಕಾಡಿಗೆ ಹೋಗಿ ನಾಪತ್ತೆಯಾಗಿದ್ದ 82 ವರ್ಷದ ವೃದ್ಧರೊಬ್ಬರು ಪವಾಡ ಸದೃಶವಾಗಿ ಮನೆಗೆ ಮರಳಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಐಂಗುಡ‌ ನಿವಾಸಿ ವಾಸು ರಾಣ್ಯ 6 ದಿನಗಳ ಬಳಿಕ ಸಿಕ್ಕಿದ್ದಾರೆ. ಶಿಬಾಜೆ ಗ್ರಾಮದ 82 ವರ್ಷದ ವಯೋವೃದ್ಧ ವಾಸು ರಾಣ್ಯ ಎಂಬುವವರು ಕಟ್ಟಿಗೆ ತರಲು ಹೋಗಿ ನಾಪತ್ತೆಯಾಗಿದ್ದರು. ಸದ್ಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ತಂಡ ಅವರನ್ನು ಪತ್ತೆ ಹಚ್ಚಿ ಮನೆಗೆ ಸೇರಿಸಿದೆ. ವಾಸು ರಾಣ್ಯ

ಬೆಳ್ತಂಗಡಿ: 6 ದಿನಗಳ ಕಾಲ ಆಹಾರವಿಲ್ಲದೆ ಕಾಡಿನಲ್ಲಿ ನಾಪತ್ತೆಯಾಗಿದ್ದ ವೃದ್ದ ಮರಳಿ ಮನೆಗೆ| ಕಾಡಿನಲ್ಲಿ ಕೇಳಿಸಿತ್ತು ಅಶರೀರವಾಣಿ!! Read More »

ಹವಾಮಾನ ವರದಿ| ಇಂದಿನಿಂದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ರಾಜ್ಯದ ಗಡಿ ಜಿಲ್ಲೆಗಳಿಗೆ ಮುಂಗಾರು ಮಳೆಯ ಪ್ರವೇಶವಾಗಿದ್ದು, ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್‌ 7 ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇಂದಿನಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಲಾರ, ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ

ಹವಾಮಾನ ವರದಿ| ಇಂದಿನಿಂದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ Read More »

ಉಡುಪಿ: ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಸಮಗ್ರ ನ್ಯೂಸ್‌ : ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು, ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೀನುಗಾರಿಕೆ ನಡೆಸುವಂತಿಲ್ಲ. ಯಾಂತ್ರೀಕೃತ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ

ಉಡುಪಿ: ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ Read More »

ಮಂಗಳೂರು: ರೌಡಿ ಶೀಟರ್ ಭರತ್ ಶೆಟ್ಟಿ ಮೇಲೆ ತಲವಾರು ದಾಳಿ

ಸಮಗ್ರ ನ್ಯೂಸ್‌ : ಸುರತ್ಕಲ್ ನ ಕುಳಾಯಿ ಆರೋನ್ ವೈನ್ಸ್ ಬಳಿ ನಿನ್ನೆ ರಾತ್ರಿ ಸುಮಾರು 8.30ರ ಸುಮಾರಿಗೆ ರೌಡಿ ಶೀಟರ್ ಭರತ್ ಶೆಟ್ಟಿ ಎಂಬಾತನ ಮೇಲೆ ತಲವಾರು ದಾಳಿ ನಡೆದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸುರತ್ಕಲ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿ ಪೋಲಿಸರು ತನಿಖೆ ಕೈಗೊಂಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ದಾಖಲಾಗಿರುವ ಭರತ್ ಶೆಟ್ಟಿ ನೀಡಿರುವ ದೂರಿನ ಪ್ರಕಾರ ದೀಕ್ಷಿತ್ ಶೆಟ್ಟಿ ಕೈಕಂಬ ಶೈಲೇಶ್ ಕೈಕಂಬ ಮತ್ತು ಇತರ ಮೂವರ ಜೊತೆಗೆ ಸೇರಿ ಕೃತ್ಯ ಎಸಗಿದ್ದಾರೆ

ಮಂಗಳೂರು: ರೌಡಿ ಶೀಟರ್ ಭರತ್ ಶೆಟ್ಟಿ ಮೇಲೆ ತಲವಾರು ದಾಳಿ Read More »