ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ಬೀದಿಯಲ್ಲಿ ಮಲಗಿದ ಪ್ರಕರಣ| ಭಕ್ತರಿಗೆ ತೊಂದರೆಯಾಗದಂತೆ ಕ್ರಮ – ಎಸಿ ಜುಬಿನ್ ಮೊಹಪಾತ್ರ
ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಿಶೇಷ ದಿನಗಳ ಸಂದರ್ಭದಲ್ಲಿ ವಸತಿ ಸಮಸ್ಯೆಯಿಂದ ಯಾವುದೇ ಭಕ್ತರಿಗೆ ತೊಂದರೆ ಆಗದಂತೆ ಪೂರಕ ಕ್ರಮಕೈಗೊಳ್ಳಲು ದೇವಸ್ಥಾನದ ಅಧಿಕಾರಿಗಳಿಗೆ ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಪುತ್ತೂರು ಉಪವಿಭಾಗ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಬೇಸಗೆ ರಜೆಯ ಸಂದರ್ಭ ಕುಕ್ಕೆಯ ರಥಬೀದಿಯ ಒಂದು ಬದಿಯಲ್ಲಿ ಹಲವಾರು ಭಕ್ತರು ಮಲಗಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಕ್ಷೇತ್ರದಲ್ಲಿ ವಸತಿ ಸಮಸ್ಯೆಯಿಂದ ಈ ರೀತಿ ಭಕ್ತರು ಬೀದಿಯಲ್ಲಿ ಮಲಗುತ್ತಿದ್ದಾರೆ ಎಂಬ










