ಕರಾವಳಿ

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣ| ಅವರವರ ಪ್ರಕಾರ ಎಲ್ಲರೂ ಅಮಾಯಕರೇ, ಯಾರನ್ನೂ ಬಿಡೋ‌ ಮಾತೇ ಇಲ್ಲ – ಎಸ್ಪಿ

ಸಮಗ್ರ ನ್ಯೂಸ್: ಶಾಸಕ ಹರೀಶ್‌ ಪೂಂಜ ಅವರ ಬಂಧನ ಹೈಡ್ರಾಮಾದಲ್ಲಿ ಪೊಲೀಸರು ಅನಗತ್ಯವಾಗಿ ಮನೆಗೆ ನುಗ್ಗಿದ್ದಾರೆ ಎಂಬ ಆರೋಪಕ್ಕೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದ.ಕ. ಜಿಲ್ಲಾ ಪೊಲೀಸ್‌ ಅಧೀಕ್ಷಕ ರಿಷ್ಯಂತ್‌ ಸಿ.ಬಿ. ಮಾಧ್ಯಮಕ್ಕೆ ಸ್ಪಷ್ಟೀಕರಣ ನೀಡಿದ್ದಾರೆ. ಪೂಂಜ ಅವರ ಮನೆಗೆ ಆರಂಭದಲ್ಲಿ ನೋಟಿಸ್‌ ನೀಡುವ ಸಲುವಾಗಿ ಮೂವರು ತೆರಳಿದ್ದರು. ಆದರೆ ಅಲ್ಲಿ ಅವರು ಠಾಣೆಗೆ ಬಾರದೆ ಜನ ಸೇರಿಸಿ ದ್ದರಿಂದ ಭದ್ರತೆಗಾಗಿ ಹೆಚ್ಚುವರಿ ತಂಡ ಕಳುಹಿಸಬೇಕಾಯಿತು. ಬಳಿಕ ಅಲ್ಲಿನ ರಸ್ತೆ ಕಿರಿದಾಗಿದ್ದರಿಂದ ನೀವು ತೆರಳಿದರೆ

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣ| ಅವರವರ ಪ್ರಕಾರ ಎಲ್ಲರೂ ಅಮಾಯಕರೇ, ಯಾರನ್ನೂ ಬಿಡೋ‌ ಮಾತೇ ಇಲ್ಲ – ಎಸ್ಪಿ Read More »

ಮಂಗಳೂರು: ಕಂಕನಾಡಿಯ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡುವ ವೀಡಿಯೋ ವೈರಲ್

ಸಮಗ್ರ ನ್ಯೂಸ್: ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಾರೆ. ಈ ಘಟನೆ ಕಳೆದ ಶುಕ್ರವಾರ ನಡೆದಿದ್ದು, ನಮಾಜ್ ಮಾಡಿದ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ. ಕಂಕನಾಡಿಯಲ್ಲಿ ಮಸೀದಿ ಮುಂದೆ ಇರುವ ರಸ್ತೆಯಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ನಡು ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದರಿಂದ ವಾಹನ ಸವಾರರು ಯೂಟರ್ನ್ ತೆಗೆದುಕೊಂಡು ಹೋಗಿದ್ದಾರೆ. ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮುಸ್ಲಿಮರು ನಮಾಜ್ ಮಾಡಿದನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದ್ದು, ಇದಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಮಂಗಳೂರು: ಕಂಕನಾಡಿಯ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡುವ ವೀಡಿಯೋ ವೈರಲ್ Read More »

ಉಡುಪಿ: ಸಿದ್ದರಾಮಯ್ಯನವರೇ ಪುಂಡರನ್ನು ಬಂಧಿಸುವ ಗಂಡೆದೆ ಇಲ್ಲವೇ? ಎಂದ ಸುನಿಲ್ ಕುಮಾರ್

ಸಮಗ್ರ ನ್ಯೂಸ್‌ : ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಉಡುಪಿ, ದಕ್ಷಿಣ ಕನ್ನಡದಂಥ‌ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡಿ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ

ಉಡುಪಿ: ಸಿದ್ದರಾಮಯ್ಯನವರೇ ಪುಂಡರನ್ನು ಬಂಧಿಸುವ ಗಂಡೆದೆ ಇಲ್ಲವೇ? ಎಂದ ಸುನಿಲ್ ಕುಮಾರ್ Read More »

ಉಡುಪಿ: ಆವರಣ ಗೋಡೆ ಕುಸಿದು 3 ದ್ವಿಚಕ್ರ ವಾಹನ ಜಖಂ

ಸಮಗ್ರ ನ್ಯೂಸ್‌ : ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಉಡುಪಿ ನಗರದ ಹಳೆ ಬಸ್ ಸ್ಟ್ಯಾಂಡ್ ಸಮೀಪದ ಕೃಷ್ಣಾ ಕ್ಯಾಂಪೇಕ್ಸ್ ಶ್ರೀ ನಾಗದೇವರ ಸನ್ನಿಧಿಯ ಪಕ್ಕದ ಆವರಣದ ಗೋಡೆ ಕುಸಿದು 3 ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊಂಡಿದೆ. ಉಡುಪಿ ಬೋರ್ಡ್ ಶಾಲೆಯ ಆವರಣ ಗೋಡೆ ಕುಸಿದಿದ್ದು, ಯಾವುದೇ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ. ರಾತ್ರಿಯಿಡಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು ಕೆಲವೆಡೆ ಮರಗಿಡಗಳು ಧರೆಗುರುಳಿದಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಉಡುಪಿ: ಆವರಣ ಗೋಡೆ ಕುಸಿದು 3 ದ್ವಿಚಕ್ರ ವಾಹನ ಜಖಂ Read More »

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ‌ ಸಾವು

ಸಮಗ್ರ ನ್ಯೂಸ್: ಪುತ್ತೂರಿನ ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಯುವತಿ ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20). ಕೆಲವು ದಿನಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು. ಆ ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ‌ ಸಾವು Read More »

ಉಡುಪಿ: ರೆಬೆಲ್ ರಘುಪತಿ ಭಟ್ ಗೆ ಬಿಜೆಪಿಯಿಂದ ಗೇಟ್ ಪಾಸ್

ಸಮಗ್ರ ನ್ಯೂಸ್: ವಿಧಾನಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ರಘುಪತಿ ಭಟ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದುದರಿಂದ, ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ

ಉಡುಪಿ: ರೆಬೆಲ್ ರಘುಪತಿ ಭಟ್ ಗೆ ಬಿಜೆಪಿಯಿಂದ ಗೇಟ್ ಪಾಸ್ Read More »

ಧರ್ಮಸ್ಥಳ: ಸಿಎಂ, ಡಿಸಿಎಂ ಎದುರು ಜೈ ಶ್ರೀರಾಮ್, ಜೈ ಮೋದಿ ಘೋಷಣೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳ ಭೇಟಿ ನೀಡಿದ್ದ ವೇಳೆ ಜೈ ಶ್ರೀ ರಾಮ್ ಹಾಗೂ ಜೈ ಮೋದಿ ಘೋಷಣೆ ಕೇಳಿಬಂದಿದೆ. ಪಂಜೆ, ಶಲ್ಯ ತೊಟ್ಟು, ಮಂಜುನಾಥ ಸ್ವಾಮಿಯ ದರ್ಶನ ಮಾಡಿ, ಪ್ರಾರ್ಥನೆ ಸಲ್ಲಿಸಿದ್ರು. ಈ ವೇಳೆ ರಾಜ್ಯಸಭಾ ಸದಸ್ಯರೂ ಆಗಿರುವ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಇನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಂಜುನಾಥ ಸ್ವಾಮಿ ದರ್ಶನ ಪಡೆಯಲು ತೆರಳುತ್ತಿರೋ ವೇಳೆ ಹೊರಗೆ ಸರತಿ

ಧರ್ಮಸ್ಥಳ: ಸಿಎಂ, ಡಿಸಿಎಂ ಎದುರು ಜೈ ಶ್ರೀರಾಮ್, ಜೈ ಮೋದಿ ಘೋಷಣೆ Read More »

ಉಡುಪಿ: ನಡುರಸ್ತೆಯಲ್ಲೇ ಗ್ಯಾಂಗ್ ವಾರ್| ಇಬ್ಬರನ್ನು ಅರೆಸ್ಟ್ ಮಾಡಿದ ಖಾಕಿ| ಹೊಡೆದಾಟದ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗರುಡ ಗ್ಯಾಂಗ್ ಗೆ ಸೇರಿದ ಇಬ್ಬರು ಆರೋಪಿಗಳಾದ ಆಶಿಕ್ ಮತ್ತು ರಖೀಬ್ ಎಂಬವರನ್ನು ಬಂಧಿಸಲಾಗಿದ್ದು ಉಳಿದವರು ಪರಾರಿಯಾಗಿದ್ದಾರೆ. ಮೇ 20ರಂದು ಪ್ರಕರಣ ದಾಖಲಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ

ಉಡುಪಿ: ನಡುರಸ್ತೆಯಲ್ಲೇ ಗ್ಯಾಂಗ್ ವಾರ್| ಇಬ್ಬರನ್ನು ಅರೆಸ್ಟ್ ಮಾಡಿದ ಖಾಕಿ| ಹೊಡೆದಾಟದ ವಿಡಿಯೋ ವೈರಲ್ Read More »

ಇಂದು(ಮೇ.25) ಧರ್ಮಸ್ಥಳಕ್ಕೆ ಸಿಎಂ ಮತ್ತು‌ ಡಿಸಿಎಂ ಭೇಟಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬೆಳಗ್ಗೆ 11:30 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಹೊರಟು 12.05ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಮಧ್ಯಾಹ್ನ 1.05 ಕ್ಕೆ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಸಂಜೆ 4 ಗಂಟೆಗೆ ಧರ್ಮಸ್ಥಳದಿಂದ ಹೊರಟು ಮಂಗಳೂರು

ಇಂದು(ಮೇ.25) ಧರ್ಮಸ್ಥಳಕ್ಕೆ ಸಿಎಂ ಮತ್ತು‌ ಡಿಸಿಎಂ ಭೇಟಿ Read More »

ಕರಾವಳಿಯಲ್ಲಿ ಅಬ್ವರಿಸುತ್ತಿರುವ ಪೂರ್ವ ಮುಂಗಾರು| ಸಿಡಿಲಿಗೆ ಕಾಲೇಜು ವಿದ್ಯಾರ್ಥಿ ಬಲಿ; ಅಲ್ಲಲ್ಲಿ ಹಾನಿ

ಸಮಗ್ರ ನ್ಯೂಸ್: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದ್ದು, ಶುಕ್ರವಾರದಿಂದೀಚೆಗೆ ಭಾರಿ ಮಳೆಯಾಗುತ್ತಿದೆ. ಶನಿವಾರ ಬೆಳಗಿನ ಜಾವ ದಟ್ಟ ಮೋಡದೊಂದಿಗೆ ಮಳೆಯಾಗುತ್ತಿದ್ದು, ಕೆಲ ದಿನ ಇದೇ ರೀತಿ ಮಳೆ ಸುರಿಯುವ ಲಕ್ಷಣಗಳಿರುವುದಾಗಿ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಶಿರ್ವದಲ್ಲಿ ಭಾರಿ ಗಾಳಿ, ಮಳೆ ಸಂದರ್ಭ ಸಿಡಿಲಾಘಾತದಿಂದ ಕಾಲೇಜು ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ. ಶಿರ್ವ ಎಂಆರ್ ಎಸ್ ಕಾಲೇಜಿನ ದ್ವಿತೀಯ ಬಿಸಿಎ ವಿದ್ಯಾರ್ಥಿ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿ

ಕರಾವಳಿಯಲ್ಲಿ ಅಬ್ವರಿಸುತ್ತಿರುವ ಪೂರ್ವ ಮುಂಗಾರು| ಸಿಡಿಲಿಗೆ ಕಾಲೇಜು ವಿದ್ಯಾರ್ಥಿ ಬಲಿ; ಅಲ್ಲಲ್ಲಿ ಹಾನಿ Read More »