ಕರಾವಳಿ

ಉಡುಪಿ: ರೆಬೆಲ್ ರಘುಪತಿ ಭಟ್ ಗೆ ಬಿಜೆಪಿಯಿಂದ ಗೇಟ್ ಪಾಸ್

ಸಮಗ್ರ ನ್ಯೂಸ್: ವಿಧಾನಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ರಘುಪತಿ ಭಟ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದುದರಿಂದ, ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ

ಉಡುಪಿ: ರೆಬೆಲ್ ರಘುಪತಿ ಭಟ್ ಗೆ ಬಿಜೆಪಿಯಿಂದ ಗೇಟ್ ಪಾಸ್ Read More »

ಧರ್ಮಸ್ಥಳ: ಸಿಎಂ, ಡಿಸಿಎಂ ಎದುರು ಜೈ ಶ್ರೀರಾಮ್, ಜೈ ಮೋದಿ ಘೋಷಣೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಧರ್ಮಸ್ಥಳ ಭೇಟಿ ನೀಡಿದ್ದ ವೇಳೆ ಜೈ ಶ್ರೀ ರಾಮ್ ಹಾಗೂ ಜೈ ಮೋದಿ ಘೋಷಣೆ ಕೇಳಿಬಂದಿದೆ. ಪಂಜೆ, ಶಲ್ಯ ತೊಟ್ಟು, ಮಂಜುನಾಥ ಸ್ವಾಮಿಯ ದರ್ಶನ ಮಾಡಿ, ಪ್ರಾರ್ಥನೆ ಸಲ್ಲಿಸಿದ್ರು. ಈ ವೇಳೆ ರಾಜ್ಯಸಭಾ ಸದಸ್ಯರೂ ಆಗಿರುವ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಇನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಂಜುನಾಥ ಸ್ವಾಮಿ ದರ್ಶನ ಪಡೆಯಲು ತೆರಳುತ್ತಿರೋ ವೇಳೆ ಹೊರಗೆ ಸರತಿ

ಧರ್ಮಸ್ಥಳ: ಸಿಎಂ, ಡಿಸಿಎಂ ಎದುರು ಜೈ ಶ್ರೀರಾಮ್, ಜೈ ಮೋದಿ ಘೋಷಣೆ Read More »

ಉಡುಪಿ: ನಡುರಸ್ತೆಯಲ್ಲೇ ಗ್ಯಾಂಗ್ ವಾರ್| ಇಬ್ಬರನ್ನು ಅರೆಸ್ಟ್ ಮಾಡಿದ ಖಾಕಿ| ಹೊಡೆದಾಟದ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗರುಡ ಗ್ಯಾಂಗ್ ಗೆ ಸೇರಿದ ಇಬ್ಬರು ಆರೋಪಿಗಳಾದ ಆಶಿಕ್ ಮತ್ತು ರಖೀಬ್ ಎಂಬವರನ್ನು ಬಂಧಿಸಲಾಗಿದ್ದು ಉಳಿದವರು ಪರಾರಿಯಾಗಿದ್ದಾರೆ. ಮೇ 20ರಂದು ಪ್ರಕರಣ ದಾಖಲಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ

ಉಡುಪಿ: ನಡುರಸ್ತೆಯಲ್ಲೇ ಗ್ಯಾಂಗ್ ವಾರ್| ಇಬ್ಬರನ್ನು ಅರೆಸ್ಟ್ ಮಾಡಿದ ಖಾಕಿ| ಹೊಡೆದಾಟದ ವಿಡಿಯೋ ವೈರಲ್ Read More »

ಇಂದು(ಮೇ.25) ಧರ್ಮಸ್ಥಳಕ್ಕೆ ಸಿಎಂ ಮತ್ತು‌ ಡಿಸಿಎಂ ಭೇಟಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬೆಳಗ್ಗೆ 11:30 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಹೊರಟು 12.05ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಮಧ್ಯಾಹ್ನ 1.05 ಕ್ಕೆ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಸಂಜೆ 4 ಗಂಟೆಗೆ ಧರ್ಮಸ್ಥಳದಿಂದ ಹೊರಟು ಮಂಗಳೂರು

ಇಂದು(ಮೇ.25) ಧರ್ಮಸ್ಥಳಕ್ಕೆ ಸಿಎಂ ಮತ್ತು‌ ಡಿಸಿಎಂ ಭೇಟಿ Read More »

ಕರಾವಳಿಯಲ್ಲಿ ಅಬ್ವರಿಸುತ್ತಿರುವ ಪೂರ್ವ ಮುಂಗಾರು| ಸಿಡಿಲಿಗೆ ಕಾಲೇಜು ವಿದ್ಯಾರ್ಥಿ ಬಲಿ; ಅಲ್ಲಲ್ಲಿ ಹಾನಿ

ಸಮಗ್ರ ನ್ಯೂಸ್: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದ್ದು, ಶುಕ್ರವಾರದಿಂದೀಚೆಗೆ ಭಾರಿ ಮಳೆಯಾಗುತ್ತಿದೆ. ಶನಿವಾರ ಬೆಳಗಿನ ಜಾವ ದಟ್ಟ ಮೋಡದೊಂದಿಗೆ ಮಳೆಯಾಗುತ್ತಿದ್ದು, ಕೆಲ ದಿನ ಇದೇ ರೀತಿ ಮಳೆ ಸುರಿಯುವ ಲಕ್ಷಣಗಳಿರುವುದಾಗಿ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಶಿರ್ವದಲ್ಲಿ ಭಾರಿ ಗಾಳಿ, ಮಳೆ ಸಂದರ್ಭ ಸಿಡಿಲಾಘಾತದಿಂದ ಕಾಲೇಜು ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ. ಶಿರ್ವ ಎಂಆರ್ ಎಸ್ ಕಾಲೇಜಿನ ದ್ವಿತೀಯ ಬಿಸಿಎ ವಿದ್ಯಾರ್ಥಿ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿ

ಕರಾವಳಿಯಲ್ಲಿ ಅಬ್ವರಿಸುತ್ತಿರುವ ಪೂರ್ವ ಮುಂಗಾರು| ಸಿಡಿಲಿಗೆ ಕಾಲೇಜು ವಿದ್ಯಾರ್ಥಿ ಬಲಿ; ಅಲ್ಲಲ್ಲಿ ಹಾನಿ Read More »

ಉಡುಪಿ: ಪೊಲೀಸರೇ ಗೂಂಡಾ ರೀತಿ ವರ್ತಿಸಿದರೆ ವ್ಯವಸ್ಥೆಗೆ ಮಾರಕ; ಮಾಜಿ ಸಚಿವ ವಿ. ಸುನಿಲ್ ಕುಮಾರ್

ಸಮಗ್ರ ನ್ಯೂಸ್‌ : ಪೊಲೀಸರೇ ಗೂಂಡಾ ರೀತಿ ವರ್ತನೆ ಮಾಡಿದರೆ ಅದು ವ್ಯವಸ್ಥೆಗೆ ಮಾರಕ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಜನರಿಗೆ ರಕ್ಷಣೆ ಕೊಡುವುದು, ವಿಶ್ವಾಸ ನಿರ್ಮಾಣ ಮಾಡುವುದು ಪೊಲೀಸರ ಜವಾಬ್ದಾರಿ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬೆಳ್ತಂಗಡಿಯಲ್ಲಿ ಕಾನೂನು ಉಲ್ಲಂಘಿಸುವಂತಹ ಯಾವುದೇ ಘಟನೆ ನಡೆದಿರಲಿಲ್ಲ. ವಿನಾಕಾರಣ ರಾಜಕೀಯ ದ್ವೇಷದಿಂದ ಬಂಧನಕ್ಕೆ ಮುಂದಾಗಿದ್ದಾರೆ. ಈ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ

ಉಡುಪಿ: ಪೊಲೀಸರೇ ಗೂಂಡಾ ರೀತಿ ವರ್ತಿಸಿದರೆ ವ್ಯವಸ್ಥೆಗೆ ಮಾರಕ; ಮಾಜಿ ಸಚಿವ ವಿ. ಸುನಿಲ್ ಕುಮಾರ್ Read More »

ಉಡುಪಿ: ರಘುಪತಿ ಭಟ್ ನಿವೃತ್ತಿ ಘೋಷಿಸದಿದ್ದರೆ ಶಿಸ್ತು ಕ್ರಮ;ಸುನಿಲ್ ಕುಮಾರ್

ಸಮಗ್ರ ನ್ಯೂಸ್‌ : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು 24 ಗಂಟೆಯೊಳಗೆ ನಿವೃತ್ತಿ ಘೋಷಿಸಬೇಕು. ಇಲ್ಲದಿದ್ದರೆ ಪಕ್ಷದ ನಿಯಮ ಉಲ್ಲಂಘಿಸಿದ ಆಧಾರದ ಮೇಲೆ ಶಿಸ್ತು ಕ್ರಮ ಜರುಗಿಸುವುದು ಅನಿವಾರ್ಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದರು. ಉಡುಪಿ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 24 ಗಂಟೆಯೊಳಗೆ ಸ್ಪರ್ಧೆಗೆ ನಿವೃತ್ತಿ ಘೋಷಿಸದಿದ್ದರೆ, ಪಕ್ಷ ವಿರೋಧಿ ಚಟುವಟಿಕೆ ಅಥವಾ ಪಕ್ಷಕ್ಕೆ ಮುಜುಗರ ಉಂಟು

ಉಡುಪಿ: ರಘುಪತಿ ಭಟ್ ನಿವೃತ್ತಿ ಘೋಷಿಸದಿದ್ದರೆ ಶಿಸ್ತು ಕ್ರಮ;ಸುನಿಲ್ ಕುಮಾರ್ Read More »

ಮಂಗಳೂರು : ಶಾಸಕರೇ ನೀತಿ ನಿಯಮ ಉಲ್ಲಂಘಿಸಿ ರೌಡಿ ತರ ವರ್ತಿಸಿ ಜಿಲ್ಲೆಗೆ ಕಳಂಕ ತಂದಿದ್ದಾರೆ: ಎಂಎಲ್ ಸಿ ಹರೀಶ್ ಕುಮಾರ್

ಸಮಗ್ರ ನ್ಯೂಸ್ : ಪ್ರಜ್ಞಾವಂತ ನಾಗರಿಕರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಅಪಮಾನ ಮಾಡಿದ್ದಾರೆ. ಜನವಿರೋಧಿ ಕಾರ್ಯದಲ್ಲಿ ಪಾಲ್ಗೊಂಡು, ಶಾಸಕರೆ ನೀತಿ ನಿಯಮ ಉಲ್ಲಂಘಿಸಿ ರೌಡಿ ತರ ವರ್ತಿಸಿ ಜಿಲ್ಲೆಗೆ ಕಳಂಕ ತಂದಿದ್ದಾರೆ ಎಂದು ದ. ಕ ಕಾಂಗ್ರೆಸ್ ಅಧ್ಯಕ್ಷ ಎಂಎಲ್ ಸಿ ಹರೀಶ್ ಕುಮಾರ್ ಕಿಡಿಕಾರಿದ್ದಾರೆ. ಹಿಂದಿನ ಶಾಸಕರುಗಳು ಆ ಕ್ಷೇತ್ರದ ಗೌರವ ಉಳಿಸಿದವರು. ಅಕ್ರಮ ಕಲ್ಲು ಗಣಿಗಾರಿಕೆ, ಮರಳುಗಾರಿಕೆ ರೌಡಿ ಶೀಟರ್ ವ್ಯಕ್ತಿಯನ್ನು ರಕ್ಷಿಸಲು ಹೋಗಿದ್ದಾರೆ. ಅವನ ಬಂಧನವಾದಾಗ ಪೊಲೀಸರಿಗೆ ಬೈತಾರೆ, ತಲೆ ಕಡಿರಿ ಅಂತಾರೆ,

ಮಂಗಳೂರು : ಶಾಸಕರೇ ನೀತಿ ನಿಯಮ ಉಲ್ಲಂಘಿಸಿ ರೌಡಿ ತರ ವರ್ತಿಸಿ ಜಿಲ್ಲೆಗೆ ಕಳಂಕ ತಂದಿದ್ದಾರೆ: ಎಂಎಲ್ ಸಿ ಹರೀಶ್ ಕುಮಾರ್ Read More »

ಬೆಳ್ತಂಗಡಿ: ಕೊನೆಗೂ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜಾ

ಸಮಗ್ರ ನ್ಯೂಸ್: ಇಂದು ಬೆಳಿಗ್ಗೆಯಿಂದ ನಡೆದ ಹೈಡ್ರಾಮ ಬಳಿಕ ಶಾಸಕ ಹರೀಶ್ ಪೂಂಜಾ ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ತನ್ನ ಆಪ್ತ , ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅಕ್ರಮ ಗಣಿಗಾರಿಕೆ ಮತ್ತು ಸ್ಪೋಟಕ ದಾಸ್ತಾನು ಪ್ರಕರಣದಲ್ಲಿ ಬಂಧಿತನಾದ ಬಳಿಕ ಠಾಣೆಗೆ ತೆರಳಿದ ಶಾಸಕ ಪೂಂಜಾ ಪೊಲೀಸರಿಗೆ ಬೆದರಿಕೆ ಮತ್ತು ಠಾಣೆಯನ್ನು ಧ್ವಂಸ ಮಾಡುವ ಬಗ್ಗೆ ಬೆದರಿಕೆ ಹಾಕಿದ್ದರು. ಶಾಸಕರ ಹೇಳಿಕೆಯ ಆಧಾರದಲ್ಲಿ ಎರಡೆರಡು ಎಫ್ಐಆರ್ ಜಡಿದ ಪೊಲೀಸರು ಹರೀಶ್ ಪೂಂಜಾರನ್ನು ಬಂಧಿಸಲು ಅವರ ಗರ್ಡಾಡಿಯ

ಬೆಳ್ತಂಗಡಿ: ಕೊನೆಗೂ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜಾ Read More »

ಹರೀಶ್ ಪೂಂಜಾರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈ‌ಹಾಕದಿರಿ – ವಿಜಯೇಂದ್ರ

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನ ಬಂಧನ ಸಾಧ್ಯತೆ ವಿಚಾರವಾಗಿ ಕೆಂಡಾಮಂಡಲರಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶಾಸಕರನ್ನು ಅರೆಸ್ಟ್‌ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದರೆ ಮುಂದೆ ನಡೆಯುವುದಕ್ಕೆ ಕಾಂಗ್ರೆಸ್‌ ಹೊಣೆ ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರೀಶ್ ಪೂಂಜಾ ಉದ್ವೇಗದಲ್ಲಿ ಕೆಲವು ಮಾತನಾಡಿದ್ದಾರೆ, ಅದು ತಪ್ಪು ಎಂದು ಅವರಿಗೂ ಗೊತ್ತಾಗಿದೆ, ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲು ಸಾಧ್ಯವಿಲ್ಲ ಕಾನೂನು ಸುವ್ಯವಸ್ಥೆ ಹದಗೆಡಲು ನೀವೆ ಕುಮ್ಮಕ್ಕು ನೀಡುತ್ತಿದ್ದಿರಿ ಎಂಧು ವಿಜಯೇಂದ್ರ

ಹರೀಶ್ ಪೂಂಜಾರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈ‌ಹಾಕದಿರಿ – ವಿಜಯೇಂದ್ರ Read More »