ಹವಾಮಾನ ವರದಿ| ದೀಪಾವಳಿಗೆ ಮತ್ತೆ ಅಬ್ಬರಿಸಲಿದ್ದಾನೆ ಮಳೆರಾಯ| ಕರಾವಳಿ, ದ. ಒಳನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ
ಸಮಗ್ರ ನ್ಯೂಸ್: ದೀಪಾವಳಿ ಹಬ್ಬದ ದಿನದಿಂದಲೇ ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ನವೆಂಬರ್ 1ರಂದು ವ್ಯಾಪಕ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ಹೇಳಿದೆ. ಅದುವರೆಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯ ಸಾಧ್ಯತೆ ಇಲ್ಲ ಎಂದು ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ […]