ಕರಾವಳಿ

ದಿಢೀರ್ ಕುಸಿತ ಕಂಡ ಕೋಕೋ ಧಾರಣೆ| ಕೆಜಿ ದರದಲ್ಲಿ ₹35 ಇಳಿಕೆ

ಸಮಗ್ರ ನ್ಯೂಸ್: ವಿಪರೀತ ಧಾರಣೆ‌ ಕಂಡಿದ್ದ ಕೊಕ್ಕೋ ದರದಲ್ಲಿ ದಿಢೀರ್ ಕುಸಿತ ಕಂಡಿದೆ. ಸಾಧಾರಣವಾಗಿ 60-70 ರೂಪಾಯಿ ಆಸುಪಾಸಿನಲ್ಲಿದ್ದ ಧಾರಣೆ ₹ 325 ವರೆಗೂ ಹೋಗಿತ್ತು. ಇದೀಗ ಮತ್ತೆ ಕುಸಿತ ಕಂಡಿದ್ದು 290 ರೂಪಾಯಿಗೆ ಇಳಿಕೆಯಾಗಿದೆ. ಹಸಿ ಕೊಕ್ಕೋ ಧಾರಣೆ 325 ರೂಪಾಯಿವರೆಗೆ ಏರಿಕೆ ಕಂಡಿದ್ದರೆ, ಒಣ ಕೊಕೊ ಧಾರಣೆ 900 ರೂಪಾಯಿ ಆಸುಪಾಸಿಗೆ ಬಂದಿತ್ತು. ಇದೀಗ ಧಾರಣೆ ಇಳಿಕೆಯಾಗಿದೆ. ಹಸಿ ಕೊಕ್ಕೋ ಧಾರಣೆ 290 ರೂಪಾಯಿಗೆ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆ ಹೊಂದಿರುವ ಕೊಕೊ ಪ್ರಮುಖವಾಗಿ ಆಫ್ರಿಕಾ

ದಿಢೀರ್ ಕುಸಿತ ಕಂಡ ಕೋಕೋ ಧಾರಣೆ| ಕೆಜಿ ದರದಲ್ಲಿ ₹35 ಇಳಿಕೆ Read More »

ಉಪ್ಪಿನಂಗಡಿ: ಹೃದಯಾಘಾತದಿಂದ ಮಲಗಿದ್ದಲ್ಲೇ ಯುವಕ ಸಾವು

ಸಮಗ್ರ ನ್ಯೂಸ್: ಗಾರೆ ಕೆಲಸಕ್ಕೆ ಹೋಗುವ ಯುವಕನೊಬ್ಬ ಮಲಗಿದ್ದಲ್ಲೇ ಹೃದಯಾಘಾತಕ್ಕೆ ಸಿಲುಕಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪ ನಡೆದಿದೆ. ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ. ಗೋಪಾಲ ಗೌಡರ ಪುತ್ರ 27ರ ಹರೆಯದ ಜನಾರ್ದನ ನಿನ್ನಿಕಲ್ಲು ಹೃದಯಾಘಾತದಿಂದ ಶುಕ್ರವಾರ ಮೃತಪಟ್ಟಿದ್ದಾರೆ. ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದ ಇವರು ಕೆಲಸಕ್ಕೆ ರಜೆ ಹಾಕಿ ಮನೆಯಲ್ಲೇ ಇದ್ದರು. ಇವರ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದು ನೋಡಿದಾಗ ಜನಾರ್ದನ ಮಲಗಿದ್ದಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ. ಶ್ರೀ ದುರ್ಗಾ ಭಜನಾ ಮಂಡಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಮಲಗಿದ್ದಲ್ಲೇ ಯುವಕ ಸಾವು Read More »

ಉಡುಪಿ: ಮೇ.4ರಂದು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

ಸಮಗ್ರ ನ್ಯೂಸ್‌ : ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು, ವಿಜ್ಡಮ್ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ಮೇಳವನ್ನು ಮೇ 4ರಂದು ಬೆಳಿಗ್ಗೆ 9 ರಿಂದ ಸಂಜೆ 4:30ರವರೆಗೆ ಮಿಲಾಗ್ರಿಸ್ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದೆ ಎಂದು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿನ್ಸೆಂಟ್ ಆಳ್ವ ತಿಳಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಸಿಎ ಪದವೀಧರಲ್ಲದೇ, ವಾಣಿಜ್ಯ ಮತ್ತು ನಿರ್ವಹಣೆ, ಇಂಜಿನಿಯರಿಂಗ್, ಡಿಪ್ಲೋಮಾ ವಿದ್ಯಾರ್ಥಿಗಳು ನೊಂದಣಿಯನ್ನು ಮಾಡಿಕೊಳ್ಳಬಹುದಾಗಿದೆ. ಎಸೆಸೆಲ್ಸಿ ಬಳಿಕ ಡಿಪ್ಲೋಮ, ಐಟಿಐ ಕಲಿತ, ಪದವಿ ಪೂರ್ವ,

ಉಡುಪಿ: ಮೇ.4ರಂದು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ Read More »

ಕಬಕದಲ್ಲಿ ಸರಣಿ ಅಪಘಾತ| ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು

ಸಮಗ್ರ ನ್ಯೂಸ್‌ : ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಡಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ. ಘಟನೆಯಿಂದ ಮಂಗಳೂರು – ಪುತ್ತೂರು ಹಾಗೂ ಪುತ್ತೂರು – ವಿಟ್ಲ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಯಿತು. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆ್ಯಂಬುಲೆನ್ಸ್ ನಲ್ಲಿದ್ದ ರೋಗಿ ಹಾಗೂ ರೋಗಿಯ ಕಡೆಯವರನ್ನು ಪರ್ಯಾಯ ಆ್ಯಂಬುಲೆನ್ಸ್ ನಲ್ಲಿ ಮಂಗಳೂರಿಗೆ ಕಳುಹಿಸಿಕೊಡಲಾಯಿತು. ಸುಳ್ಯ

ಕಬಕದಲ್ಲಿ ಸರಣಿ ಅಪಘಾತ| ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು Read More »

ಉಡುಪಿ: ಯುವಕನಿಗೆ ಲೈಂಗಿಕ ಕಿರುಕುಳ-ವಾಸ್ತುತಜ್ಞನ ಬಂಧನ

ಸಮಗ್ರ ನ್ಯೂಸ್‌ : ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಸಮೀಪದ ಮಟಪಾಡಿ ನಿವಾಸಿ ಅನಂತ ನಾಯ್ಕ್ (51) ಬಂಧಿತ ಆರೋಪಿ. ಈತ ಬ್ರಹ್ಮಾವರ ಬಸ್‌ ನಿಲ್ದಾಣ ಸಮೀಪದ ಲಾಡ್ಜ್ ವೊಂದರ ರೂಮಿನಲ್ಲಿ ವಾಸ್ತುತಜ್ಞ, ಜಲತಜ್ಞ, ಯೋಗ ಪಂಡಿತ, ಆಧ್ಯಾತ್ಮಿಕ ಪಂಡಿತ ಎಂಬುದಾಗಿ ಬೋರ್ಡ್ ಹಾಕಿಕೊಂಡು ವ್ಯವಹಾರ ನಡೆಸುತ್ತಿದ್ದರು. 18ರ ಹರೆಯದ ಯುವಕ ತನ್ನ ತಂದೆಯೊಂದಿಗೆ ಈತನ ಬಳಿ ವಾಸ್ತು ಕೇಳಲು ಲಾಡ್ಜ್‌ನಲ್ಲಿರುವ ರೂಮಿಗೆ ರಾತ್ರಿ 9ಗಂಟೆ ಸುಮಾರಿಗೆ ಹೋಗಿದ್ದನು.

ಉಡುಪಿ: ಯುವಕನಿಗೆ ಲೈಂಗಿಕ ಕಿರುಕುಳ-ವಾಸ್ತುತಜ್ಞನ ಬಂಧನ Read More »

ಧರ್ಮಸ್ಥಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ

ಸಮಗ್ರ ನ್ಯೂಸ್‌ : ಇಲ್ಲಿ ಬುಧವಾರ ನಡೆದ ಸಾಮೂಹಿಕ ವಿವಾಹದಲ್ಲಿ 39 ಅಂತರ್ಜಾತಿಯ ಜೋಡಿ ಸೇರಿದಂತೆ ಒಟ್ಟು 123 ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಂಜೆ 6.45ರ ಗೋದೂಳಿ ಮುಹೂರ್ತದಲ್ಲಿ ವೇದಮಂತ್ರದೊಂದಿಗೆ ನಡೆದ ಮದುವೆ ಕಾರ್ಯಕ್ರಮಕ್ಕೆ ನೂರಾರು ಜನರು ಸಾಕ್ಷಿಯಾದರು. ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರು ಬೀಡಿನಲ್ಲಿ ವಧುವಿಗೆ ಸೀರೆ, ರವಿಕೆ ಮತ್ತು ವರನಿಗೆ ಧೋತಿ, ಶಾಲು ವಿತರಿಸಿದರು. ಸಂಜೆ 6 ಗಂಟೆಗೆ ವಧು–ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿ ಸಭಾಭವನದಲ್ಲಿ ಹಾಜರಾದರು.

ಧರ್ಮಸ್ಥಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ Read More »

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಹಾಯಕ ಇಒ‌ ಆಗಿ ಅನ್ಯಧರ್ಮೀಯ ಅಧಿಕಾರಿ ನೇಮಕಗೊಂಡರೇ? ಜಾಲತಾಣಗಳಲ್ಲಿ ನಡೆಯುತ್ತಿರುವ ಪ್ರಚಾರದ ಅಸಲಿಯತ್ತೇನು? ಯಾರು ಈ ಯೇಸುರಾಜ್?

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ . ರಾಮನಗರ ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ವಿಭಾಗದಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದ ಇವರನ್ನು ಕುಕ್ಕೆ ದೇವಳದ ನೂತನ ಎಇಒ ಆಗಿ ಸರ್ಕಾರ ನೇಮಿಸಿದೆ. ನೂತನ ಎಇಒಗೆ ಪ್ರಭಾರ ಎಇಒ ಪರಮೇಶ್ ಅಧಿಕಾರ ಹಸ್ತಾಂತರಿಸಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ನೂತನ ಎಇಒ ಅವರನ್ನು ಸ್ವಾಗತಿಸಿದರು. ಬಳಿಕ ನಿರ್ಗಮಿತ ಎಇಒ ಪರಮೇಶ್ ಅವರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಬೀಳ್ಕೊಡಲಾಗಿದೆ. ಸದ್ಯ ಸಹಾಯಕ ಕಾರ್ಯನಿರ್ವಹಣಾಧಿಕಾರಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಹಾಯಕ ಇಒ‌ ಆಗಿ ಅನ್ಯಧರ್ಮೀಯ ಅಧಿಕಾರಿ ನೇಮಕಗೊಂಡರೇ? ಜಾಲತಾಣಗಳಲ್ಲಿ ನಡೆಯುತ್ತಿರುವ ಪ್ರಚಾರದ ಅಸಲಿಯತ್ತೇನು? ಯಾರು ಈ ಯೇಸುರಾಜ್? Read More »

ಕುಕ್ಕೆಸುಬ್ರಹ್ಮಣ್ಯ: ಉಪನ್ಯಾಸಕರೊಂದಿಗೆ ಅನುಚಿತ ವರ್ತನೆ ನಡೆಸಿದ ವಿದ್ಯಾರ್ಥಿ ಸಸ್ಪೆಂಡ್

ಸಮಗ್ರ ನ್ಯೂಸ್: ವಿದ್ಯಾರ್ಥಿಯೊಬ್ಬ ಕಾಲೇಜಿನ ಉಪನ್ಯಾಸಕರ ಜೊತೆ ಅನುಚಿತ ವರ್ತನೆ ನಡೆಸಿದ ಹಿನ್ನಲೆಯಲ್ಲಿ ಆತನನ್ನು ತರಗತಿಯಿಂದ ಅಮಾನತು ಮಾಡಿದ ಘಟನೆ ಕುಕ್ಕೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಇಲ್ಲಿನ ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿ ಮೊಬೈಲ್ ವಿಷಯದಲ್ಲಿ ಉಪನ್ಯಾಸಕರ ಜೊತೆಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಯತ್ನ ಮಾಡಿದ್ದಾಗಿ ಹೇಳಲಾಗಿದ್ದು, ಈ ಕುರಿತು ಸ್ಥಳೀಯ ಪೋಲಿಸ್ ಠಾಣೆಯಲ್ಲಿ ವಿಧ್ಯಾರ್ಥಿಯಿಂದ ಮುಚ್ಚಳಿಕೆ ಬರೆಸಿ ಕಳುಹಿಸಲಾಗಿತ್ತು. ಆದರೆ ಶಿಸ್ತು ಹಾಗೂ ಗುಣಮಟ್ಟದ ಉತ್ತಮ ಶಿಕ್ಷಣಕ್ಕೆ ಹೆಸರಾಗಿದ್ದ ಕಾಲೇಜಿನಲ್ಲಿ ಈ ರೀತಿಯ ಘಟನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ

ಕುಕ್ಕೆಸುಬ್ರಹ್ಮಣ್ಯ: ಉಪನ್ಯಾಸಕರೊಂದಿಗೆ ಅನುಚಿತ ವರ್ತನೆ ನಡೆಸಿದ ವಿದ್ಯಾರ್ಥಿ ಸಸ್ಪೆಂಡ್ Read More »

ವೇಷ ಕಳಚುವಾಗ ಹೃದಯಾಘಾತ| ಹಿರಿಯ ಯಕ್ಷ ಕಲಾವಿದ ಗಂಗಾಧರ ಪುತ್ತೂರು ಸಾವು

ಸಮಗ್ರ ನ್ಯೂಸ್: ಶ್ರೀ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ 42 ವರ್ಷ ತಿರುಗಾಟ ನಿರ್ವಹಿಸಿದ ಹಿರಿಯ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು (59 ವರ್ಷ) ನಿಧನರಾದರು. ಬುಧವಾರ ಕೋಟ ಗಾಂಧಿ ಮೈದಾನದಲ್ಲಿ ನಡೆದ ಯಕ್ಷಗಾನದಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಕುಕ್ಕಿತ್ತಾಯನ ವೇಷ ನಿರ್ವಹಿಸಿ, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು ಮುಖದ ಬಣ್ಣ ತೆಗೆಯುತ್ತಿರುವಾಗ ಅವರಿಗೆ ತೀವ್ರ ಹೃದಯಾಘಾತವಾಗಿ, ಮೃತಪಟ್ಟಿದ್ದಾರೆ. ನಾರಾಯಣ ಮಯ್ಯ ಮತ್ತು ಲಕ್ಷ್ಮಿ ದಂಪತಿಯ ಪುತ್ರನಾಗಿ 1964ರಲ್ಲಿ ಪುತ್ತೂರು ತಾಲ್ಲೂಕಿನ ಸೇಡಿಯಾಪು ಮನೆಯಲ್ಲಿ ಜನಿಸಿದ ಅವರು,

ವೇಷ ಕಳಚುವಾಗ ಹೃದಯಾಘಾತ| ಹಿರಿಯ ಯಕ್ಷ ಕಲಾವಿದ ಗಂಗಾಧರ ಪುತ್ತೂರು ಸಾವು Read More »

ಮಲ್ಪೆ:ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ

ಸಮಗ್ರ ನ್ಯೂಸ್‌ : ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ತಾಲೂಕಿನ ಮಲ್ಪೆ ಬೀಚ್ ನಲ್ಲಿ ಸಂಭವಿಸಿದೆ. ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12) ರಕ್ಷಿಸಲ್ಪಟ್ಟ ಬಾಲಕ. ಈತ ಕುಟುಂಬದೊಂದಿಗೆ ಮಲ್ಪೆ ಬೀಚ್‌ಗೆ ಬಂದಿದ್ದು, ಸಮುದ್ರಕ್ಕಿಳಿದು ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅಲೆಗಳ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ‌ ಮುಳುಗಿದ್ದಾನೆ. ತಕ್ಷಣವೇ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಯು ಬಾಲಕನನ್ನು ರಕ್ಷಣೆ ಮಾಡಿದರು. ಪ್ರಾಥಮಿಕ ಚಿಕಿತ್ಸೆಯ ಬಳಿಕ ಬಾಲಕ ಕುಟುಂಬದವರೊಂದಿಗೆ ತೆರಳಿದ್ದಾನೆ. ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಮಲ್ಪೆ:ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ Read More »