ಬೆಳ್ತಂಗಡಿ: ರಾತ್ರಿ ಅಕ್ರಮ ಗೋ ಸಾಗಾಟ ಪತ್ತೆ..!
ಸಮಗ್ರ ನ್ಯೂಸ್: ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಅ.3 ರಂದು ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ. ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಬೆಳ್ತಂಗಡಿ: ರಾತ್ರಿ ಅಕ್ರಮ ಗೋ ಸಾಗಾಟ ಪತ್ತೆ..! Read More »