ಕರಾವಳಿ

ರಿಯಲ್ ಎಸ್ಟೇಟ್ ಉದ್ಯಮಿ ಸುದೀಪ್ ಶೆಟ್ಟಿ ಸಾವು ಹೇಗಾಯ್ತು ಗೊತ್ತಾ? ಮದುವೆಯಾಗಿ ಒಂದೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು?

ಸಮಗ್ರ ನ್ಯೂಸ್: ರಿಯಲ್ ಎಸ್ಟೇಟ್ ಉದ್ಯಮಿ ಸುದೀಪ್ ಶೆಟ್ಟಿ ಮತ್ತು ತುಳು ನಾಟಕದ ನಟಿಯೊಬ್ಬರ ಈ ಪ್ರೇಮ ಕಥೆ ಈಗ ಭೀಕರ ತಿರುವು ಪಡೆದಿದ್ದು, ಹವಾಮಾನ ಕೇವಲ ಒಂದು ತಿಂಗಳಲ್ಲಿ ಗಂಡ ಹೆಣವಾಗಿದ್ದಾನೆ. ಈ ಪ್ರಕರಣದ ಸುತ್ತ ಈಗ ಹತ್ತಾರು ಅನುಮಾನಗಳು ಹುಟ್ಟಿಕೊಂಡಿವೆ. ಮೃತ ಸುದೀಪ್ ಶೆಟ್ಟಿ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಇತ್ತಆಕೆ ರಂಗಭೂಮಿ ಹಾಗೂ ಕಿರುತೆರೆಯಲ್ಲಿ ನಟಿಸುವ ನಟಿ ಸೌಮ್ಯಾ ಶೆಟ್ಟಿ. ಇವರಿಬ್ಬರಿಗೂ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಈ ಸ್ನೇಹ

ರಿಯಲ್ ಎಸ್ಟೇಟ್ ಉದ್ಯಮಿ ಸುದೀಪ್ ಶೆಟ್ಟಿ ಸಾವು ಹೇಗಾಯ್ತು ಗೊತ್ತಾ? ಮದುವೆಯಾಗಿ ಒಂದೇ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು? Read More »

ಪುತ್ತೂರು: ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ‌ಅಧಿಕೃತ ಆದೇಶ| ಸೇಡಿಯಾಪುನಲ್ಲಿ ಸ್ಥಾಪನೆಯಾಗಲಿದೆ ಸುಸಜ್ಜಿತ ಆಸ್ಪತ್ರೆ

ಸಮಗ್ರ ನ್ಯೂಸ್: ಪುತ್ತೂರಿನ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ಮೆಡಿಕಲ್ ಕಾಲೇಜು ನಿರ್ಮಾಣವಾಗುವಲ್ಲಿ ಸರಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸೇಡಿಯಾಪಿನಲ್ಲಿ ಕಾಯ್ದಿರಿಸಲಾಗಿರುವ ೪೦ ಎಕ್ರೆ ಜಾಗದಲ್ಲಿ 300 ಬೆಡ್‌ನ ಮೆಡಿಕಲ್ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನವನ್ನು ಒದಗಿಸುವುದರ ಜೊತೆಗೆ ಕಟ್ಟಡದ ರೂಪುರೇಶೆಗಳ ಬಗ್ಗೆಯೂ ಸರಕಾರದದ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅಂತಿಮ ಮುದ್ರೆ ಬಿದ್ದಿದೆ. 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-138 ರಲ್ಲಿ ‘ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು

ಪುತ್ತೂರು: ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ‌ಅಧಿಕೃತ ಆದೇಶ| ಸೇಡಿಯಾಪುನಲ್ಲಿ ಸ್ಥಾಪನೆಯಾಗಲಿದೆ ಸುಸಜ್ಜಿತ ಆಸ್ಪತ್ರೆ Read More »

ಅಡಿಕೆ ಕ್ಯಾನ್ಸರ್ ಕಾರಕವಲ್ಲ| ಸಂಶೋಧನಾ ವರದಿಯಲ್ಲಿ ದೃಢ

ಸಮಗ್ರ ನ್ಯೂಸ್: ಅಡಿಕೆ ಹಾಗೂ ಅಡಿಕೆ ಹಾಳೆ ತಟ್ಟೆ ಕ್ಯಾನ್ಸರ್‌ಕಾರಕ ಎಂಬ ಅಪಪ್ರಚಾರಕ್ಕೆ ತೆರೆ ಎಳೆಯಲು ಸರ್ಕಾರ ವ್ಯಾಪಕ ಸಂಶೋಧನೆಗಳನ್ನು ಕೈಗೊಂಡಿದ್ದು, ಪ್ರಾಥಮಿಕ ವರದಿಗಳು ಅಡಿಕೆ ಬೆಳೆಗಾರರಿಗೆ ನೆಮ್ಮದಿ ತಂದಿವೆ. ತಂಬಾಕು ಬೆರೆಸದೆ ಅಲ್ಪ ಪ್ರಮಾಣದಲ್ಲಿ ಅಡಿಕೆ ಸೇವಿಸುವುದರಿಂದ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ ಎಂಬ ಮಹತ್ವದ ಅಂಶ ವೈಜ್ಞಾನಿಕ ಸಂಶೋಧನೆಯಿಂದ ದೃಢಪಟ್ಟಿದೆ. ಅಡಿಕೆಗೆ ಅಂಟಿರುವ ಕಳಂಕವನ್ನು ವೈಜ್ಞಾನಿಕವಾಗಿ ತೊಡೆದುಹಾಕುವ ನಿಟ್ಟಿನಲ್ಲಿ ರಾಜ್ಯ ತೋಟಗಾರಿಕೆ ಇಲಾಖೆಯು ಬೆಂಗಳೂರಿನ ಎಂ.ಎಸ್. ರಾಮಯ್ಯ ವಿಶ್ವವಿದ್ಯಾಲಯಕ್ಕೆ ವಿಶೇಷ ಅಧ್ಯಯನದ ಜವಾಬ್ದಾರಿ

ಅಡಿಕೆ ಕ್ಯಾನ್ಸರ್ ಕಾರಕವಲ್ಲ| ಸಂಶೋಧನಾ ವರದಿಯಲ್ಲಿ ದೃಢ Read More »

ಕೋಟಿ ಕೋಟಿ ಆದಾಯವಿದ್ದರೂ ಮೂಲ ಸೌಕರ್ಯಗಳಿಗೆ ಕೊರತೆ| ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಭಿವೃದ್ಧಿ ಶೂನ್ಯ!!

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ‌ ದೇವಸ್ಥಾನ ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ಒಂದು. ಕೋಟ್ಯಂತರ ರೂ ಆದಾಯ ತಂದು ಕೊಡುವ ಈ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಮಾತ್ರ ಸೂಕ್ತ ಮೂಲಭೂತ ಸೌಲಭ್ಯಗಳಿಲ್ಲ ಎಂಬುದು‌ ದಶಕಗಳ‌ ಆರೋಪ.‌ ಸಂಪತ್ತು ಇದ್ದರೂ ಇಚ್ಛಾಶಕ್ತಿ, ಕ್ರಿಯಾಶಕ್ತಿ‌ ಇಲ್ಲದ ಪರಿಣಾಮ ಇಲ್ಲಿ ಸರಿಯಾದ ವ್ಯವಸ್ಥೆ ಇಲ್ಲದೆ ಭಕ್ತರು ಪರದಾಡುವಂತಾಗಿದೆ. ಪ್ರಸಿದ್ಧ ನಾಗ ಕ್ಷೇತ್ರ ಎಂದು ಕರೆಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿರುವ ಈ ದೇವಸ್ಥಾನಕ್ಕೆ ಜಿಲ್ಲೆ, ಹೊರ ಜಿಲ್ಲೆ, ಹೊರ ರಾಜ್ಯಗಳಿಂದಲೂ

ಕೋಟಿ ಕೋಟಿ ಆದಾಯವಿದ್ದರೂ ಮೂಲ ಸೌಕರ್ಯಗಳಿಗೆ ಕೊರತೆ| ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಭಿವೃದ್ಧಿ ಶೂನ್ಯ!! Read More »

ಕುಕ್ಕೆಸುಬ್ರಹ್ಮಣ್ಯಕ್ಕೂ ತಟ್ಟಿದ ಯುದ್ಧದ ಬಿಸಿ| ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ಇರಾನ್ ಮತ್ತು ಅಮೇರಿಕಾ ಯುದ್ದದಿಂದಾಗಿ ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಮಾರ್ಚ್ 11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ. ದೇವಸ್ಥಾನದಲ್ಲಿ ಪ್ರತಿದಿನ ಬೆಳಿಗ್ಗೆ ಭಕ್ತರಿಗೆ ವಿವಿಧ ಬಗೆಯ ಬಿಸಿ ಉಪಹಾರವನ್ನು ನೀಡಲಾಗುತ್ತಿತ್ತು. ಆದರೆ, ಗ್ಯಾಸ್ ಪೂರೈಕೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚು ಅನಿಲ ಬಳಕೆಯಾಗುವ ತಿಂಡಿಗಳ ಬದಲಾಗಿ, ಇಂದಿನಿಂದ ಭಕ್ತರಿಗೆ ಅವಲಕ್ಕಿ ಮತ್ತು ಮೊಸರನ್ನು ವಿತರಿಸಲಾಗುತ್ತಿದೆ. ಅನಿಲ ಉಳಿತಾಯಕ್ಕಾಗಿ ದೇವಸ್ಥಾನ

ಕುಕ್ಕೆಸುಬ್ರಹ್ಮಣ್ಯಕ್ಕೂ ತಟ್ಟಿದ ಯುದ್ಧದ ಬಿಸಿ| ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ Read More »

ಪುತ್ತೂರು: ಆಫ್ ರೋಡ್ ಜೀಪ್ ರೇಸ್| ಜಾಕ್ ಅನಿಲ್ ಗೆ ಪ್ರಥಮ ಸ್ಥಾನ

ಸಮಗ್ರ ನ್ಯೂಸ್: ದಕ್ಷಿಣಕನ್ನಡದ ಉಪ್ಪಿನಂಗಡಿಯ ಇಳಂತಿಲದಲ್ಲಿ ಎರಡು ದಿನಗಳ ಕಾಲ ನಡೆದ ಆಫ್ ರೋಡ್ ಜೀಪ್ ವಿಭಾಗದ ಸ್ಪರ್ಧೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಹವ್ಯಾಸಿ ಆಫ್ ರೋಡ್ ಡ್ರೈವರ್ ಜಾಕ್ ಅನಿಲ್ ಪ್ರಥಮ ಪ್ರಶಸ್ತಿಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾರೆ. ಮಾರ್ಚ್ 7 ಮತ್ತು 8ರಂದು ಉಪ್ಪಿನಂಗಡಿಯಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ಈ ರೇಸ್ ನಲ್ಲಿ ತನ್ನ ಅದ್ಭುತ ಚಾಲನಾ ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ಜಾಕ್‌ ಅನಿಲ್ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜೀಪ್ , ಥಾರ್, ಜಿಮ್ಮಿ, ಜಿಪ್ಸಿ

ಪುತ್ತೂರು: ಆಫ್ ರೋಡ್ ಜೀಪ್ ರೇಸ್| ಜಾಕ್ ಅನಿಲ್ ಗೆ ಪ್ರಥಮ ಸ್ಥಾನ Read More »

ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಸ್ಥಾನಗಳ ಅಭಿವೃದ್ಧಿಗೆ ಪ್ರಾಧಿಕಾರ ರಚನೆ| ರಾಜ್ಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ತಮ್ಮ ದಾಖಲೆಯ 17ನೇ ಬಜೆಟ್‌ನಲ್ಲಿ ಕರಾವಳಿ ಭಾಗದ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಬಿಗ್‌ ಗಿಫ್ಟ್‌ ನೀಡಿದ್ದಾರೆ. ರಾಜ್ಯದ ಅತ್ಯಂತ ಶ್ರೀಮಂತ ಹಾಗೂ ಪ್ರಸಿದ್ಧ ದೇವಾಲಯಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸುವುದಾಗಿ ಘೋಷಿಸಿದ್ದಾರೆ. 17ನೇ ಬಜೆಟ್​​​ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿಗೆ ಹೆಚ್ಚು ಮಹತ್ವ ನೀಡಿದ್ದಾರೆ. ಬಜೆಟ್​​​ ಆರಂಭದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಸ್ಥಾನಗಳ ಅಭಿವೃದ್ಧಿಗೆ ಪ್ರಾಧಿಕಾರ ರಚನೆ| ರಾಜ್ಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ Read More »

ಚಂದ್ರಗ್ರಹಣ ಹಿನ್ನಲೆ| ಧರ್ಮಸ್ಥಳ ದೇವರ ದರ್ಶನದಲ್ಲಿ ಬದಲಾವಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಾರ್ಚ್ 3ರಂದು ಸಂಭವಿಸಲಿರುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಅಂದು ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಈ ಕುರಿತು ಧರ್ಮಸ್ಥಳದ ಆಡಳಿತ ಮಂಡಳಿಯು ಪ್ರಕಟಣೆ ಹೊರಡಿಸಿದ್ದು, ಭಕ್ತಾದಿಗಳು ಸಹಕರಿಸುವಂತೆ ಕೋರಿದೆ. ದರ್ಶನದ ಸಮಯದ ವಿವರ: ದಿನಾಂಕ: 03-03-2026, ಮಂಗಳವಾರ. ಬೆಳಗಿನ ಅವಧಿ: ಅಂದು ಬೆಳಿಗ್ಗೆ 6.30 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ಮಧ್ಯಾಹ್ನದ ನಂತರ: ಗ್ರಹಣದ ಕಾರಣದಿಂದ

ಚಂದ್ರಗ್ರಹಣ ಹಿನ್ನಲೆ| ಧರ್ಮಸ್ಥಳ ದೇವರ ದರ್ಶನದಲ್ಲಿ ಬದಲಾವಣೆ Read More »

ಬೆಳ್ತಂಗಡಿ: ಅಂಬ್ಯುಲೆನ್ಸ್ ನಲ್ಲೇ‌ ಮಗುವಿಗೆ ಜನ್ಮ ನೀಡಿದ ಮಹಿಳೆ

ಸಮಗ್ರ ನ್ಯೂಸ್: ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಸುದೆಮುಗೇರು ನಿವಾಸಿ ಲೀಲಾವತಿ ಆಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ಲೀಲಾವತಿಯನ್ನು ಇಂದು ಬೆಳಗ್ಗಿನ ಜಾವ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಹೆರಿಗೆಗೆಂದು ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರು ಪರಿಶೀಲಿಸಿ ಲೀಲಾವತಿಯನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಅದರಂತೆ ಲೀಲಾವತಿಯನ್ನು

ಬೆಳ್ತಂಗಡಿ: ಅಂಬ್ಯುಲೆನ್ಸ್ ನಲ್ಲೇ‌ ಮಗುವಿಗೆ ಜನ್ಮ ನೀಡಿದ ಮಹಿಳೆ Read More »

ಸುಳ್ಯ , ಕಡಬ, ಬೆಳ್ತಂಗಡಿ ತಾಲೂಕಿನ ಹಲವೆಡೆ ಉತ್ತಮ ಮಳೆ

ಸಮಗ್ರ ನ್ಯೂಸ್: ವಾಯುಭಾರ ಕುಸಿತದ ಪರಿಣಾಮವಾಗಿ ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನ ಹಲವೆಡೆ ಸಂಜೆ ವೇಳೆಗೆ ಉತ್ತಮ ಮಳೆಯಾಗಿದೆ. ಸುಳ್ಯ ತಾಲೂಕಿನ ಬಹುತೇಕ ಕಡೆ‌ 20 ನಿಮಿಷಕ್ಕೂ ಹೆಚ್ಚು ಕಾಲ ಮಳೆಯಾಗಿದ್ದರೆ, ಕಡಬ, ಬೆಳ್ತಂಗಡಿ ತಾಲೂಕಿನ ಘಟ್ಟ ಪ್ರದೇಶಕ್ಕೆ ಹೊಂದಿಕೊಂಡಿರುವ ಭಾಗಗಳಲ್ಲಿ ವ್ಯಾಪಕ ಮಳೆಯಾದ ವರದಿಗಳು ಬಂದಿವೆ. ಹಲವೆಡೆ ಒಣಹಾಕಿದ ಅಡಿಕೆ ಮಳೆಯಿಂದಾಗಿ ಒದ್ದೆಯಾಗಿದ್ದು, ಕೃಷಿಕರು ಕಂಗಾಲಾದರು.

ಸುಳ್ಯ , ಕಡಬ, ಬೆಳ್ತಂಗಡಿ ತಾಲೂಕಿನ ಹಲವೆಡೆ ಉತ್ತಮ ಮಳೆ Read More »