ಕರಾವಳಿ

ಉಪ್ಪಿನಂಗಡಿ: ಬಸ್, ಕಂಟೈನರ್ ನಡುವೆ ಢಿಕ್ಕಿ; ಹಲವು ಮಂದಿಗೆ ಗಾಯ

ಸಮಗ್ರ ನ್ಯೂಸ್‌ : ಖಾಸಗಿ ಬಸ್ ಮತ್ತು ಕಂಟೈನರ್ ನಡುವೆ ಢಿಕ್ಕಿಯಾಗಿ ಹಲವು ಮಂದಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾ. ಹೆ. 75ರ ಉಪ್ಪಿನಂಗಡಿ ಉದನೆ ಬಳಿಯ ನೇಲ್ಯಡ್ಕದಲ್ಲಿ ನಡೆದಿದೆ. ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದ ವರನ ಕಡೆಯವರ ಮದುವೆಯ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್ ಗೆ ಢಿಕ್ಕಿ ಹೊಡೆದಿದೆ. ಅವಘಡದಲ್ಲಿ ಬಸ್ ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ

ಉಪ್ಪಿನಂಗಡಿ: ಬಸ್, ಕಂಟೈನರ್ ನಡುವೆ ಢಿಕ್ಕಿ; ಹಲವು ಮಂದಿಗೆ ಗಾಯ Read More »

ದ.ಕ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರಿಗೆ ಕಾರ್ಮಿಕ ವರ್ಗದ ಮಹಿಳೆಯರಿಂದ ದೇಣಿಗೆ

ಸಮಗ್ರ ನ್ಯೂಸ್‌ : ನಾಳೆ ನಾಮಪತ್ರ ಸಲ್ಲಿಸಲಿರುವ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಚುನಾವಣಾ ಠೇವಣಿಗಾಗಿ ಕಾರ್ಮಿಕ ಮಹಿಳೆಯರು ದೇಣಿಗೆ ನೀಡಿದ್ದಾರೆ. ತಾವು ದುಡಿದ ಸ್ವಂತ ಹಣವನ್ನು ದೇಣಿಗೆ ರೂಪಾದಲ್ಲಿ ಬ್ರಿಜೇಶ್ ಚೌಟಾ ಅವರಿಗೆ ಮಹಿಳೆಯರು ಸಹಾಯಹಸ್ತದ ರೂಪದಲ್ಲಿ ನೀಡಿದ್ದಾರೆ. ಮೀನಿನ ವ್ಯಾಪಾರ, ಹೂವಿನ ವ್ಯಾಪಾರ ಹಾಗು ಇತರೆ ಸಣ್ಣ ಪುಟ್ಟ ವ್ಯವಹಾರ ಮಾಡುವ ಮಹಿಳೆಯರು ಆರತಿ ಬೆಳಗಿ ಹಣೆಗೆ ತಿಲಕ ಹಚ್ಚಿ ದೃಷ್ಟಿ ತೆಗೆದು ಆಶೀರ್ವಾದಿಸಿ ಬಳಿಕ ಚುನಾವಣಾ ಠೇವಣಿಗೆ

ದ.ಕ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರಿಗೆ ಕಾರ್ಮಿಕ ವರ್ಗದ ಮಹಿಳೆಯರಿಂದ ದೇಣಿಗೆ Read More »

ಉಡುಪಿ: ಲೋಕಸಭಾ ಚುನಾವಣೆ ನಂತರ ಸಿದ್ದರಾಮಯ್ಯ ಸರಕಾರ ಪತನ; ಯತ್ನಾಳ್ ಭವಿಷ್ಯ

ಸಮಗ್ರ ನ್ಯೂಸ್‌ : ಚಾಮರಾಜನಗರ ಹಾಗೂ ಮೈಸೂರು ಎರಡು ಲೋಕಸಭಾ ಕ್ಷೇತ್ರ ಸೋತರೆ, ಸಿದ್ದರಾಮಯ್ಯನವರನ್ನು ಇಳಿಸುತ್ತಾರೆ ಎಂಬ ಭಯವಿದೆ. ಹೀಗಾಗಿ ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ. ಅನುಕಂಪದ ಆಧಾರದಲ್ಲಿ ಮತ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಲೋಕಸಭಾ ಚುನಾವಣೆ ನಂತರ ಸಿದ್ದರಾಮಯ್ಯ ಸರಕಾರದ ಪತನ ಖಚಿತ ಎಂದು ಮಾಜಿ ಕೇಂದ್ರ ಸಚಿವ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಸಮಾಜದ ಜಾತಿಗಳ ಬಗ್ಗೆ ಮಾತನಾಡುವ ಯಾವುದೇ ನೈತಿಕತೆಯನ್ನು ಸಿದ್ದರಾಮಯ್ಯ ಉಳಿಸಿಕೊಂಡಿಲ್ಲ.

ಉಡುಪಿ: ಲೋಕಸಭಾ ಚುನಾವಣೆ ನಂತರ ಸಿದ್ದರಾಮಯ್ಯ ಸರಕಾರ ಪತನ; ಯತ್ನಾಳ್ ಭವಿಷ್ಯ Read More »

ವಿಟ್ಲ : ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ : ಪ್ರಕರಣ ದಾಖಲು

ಸಮಗ್ರ ನ್ಯೂಸ್‌ : ವ್ಯಕ್ತಿಯೊಬ್ಬನಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಎಂಬಲ್ಲಿ ನಡೆದಿದೆ. ನೆಟ್ಲಮುಡ್ನೂರು ಗ್ರಾಮ ಬಂಟ್ವಾಳ ನಿವಾಸಿ ನವೀನ ಶೆಟ್ಟಿ (61) ಎಂಬವರು, ಏ.೦೧ ರಂದು ರಾತ್ರಿ, ನವೀನ ಶೆಟ್ಟಿಯವರು, ಕೊರಗಪ್ಪ ಮತ್ತು ಸುಂದರ ಎಂಬವರೊಂದಿಗೆ ಬಂಟ್ವಾಳ ತಾಲೂಕು ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಸಾರ್ವಜನಿಕ ರಸ್ತೆಯಲ್ಲಿ ಮಾತನಾಡುತ್ತಿರುವಾಗ ಆರೋಪಿ ವಸಂತ ಎಂಬಾತನು ಬಂದು ನವೀನ ಶೆಟ್ಟಿಯವರಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ

ವಿಟ್ಲ : ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ : ಪ್ರಕರಣ ದಾಖಲು Read More »

ಉಡುಪಿ: ದಲಿತ ವಿರೋಧಿ ಕಾಂಗ್ರೆಸ್ಸನ್ನು ಸೋಲಿಸಿ ಎಂದು ದಿನಕರ ಬಾಬು ಕರೆ

ಸಮಗ್ರ ನ್ಯೂಸ್‌ : ಕಾಂಗ್ರೆಸ್ ಸರಕಾರವು ದಲಿತರ ಸಮಾಧಿ ಮೇಲೆ ಕುಳಿತು ಅಧಿಕಾರ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷವು ಮತಬ್ಯಾಂಕಿಗಾಗಿ ಮಾತ್ರ ದಲಿತರನ್ನು ಓಲೈಸುತ್ತದೆ. ಕಾಂಗ್ರೆಸ್ಸಿಗರು ದಲಿತರಿಗೆ ವಿವರಿಸಲಾಗದಷ್ಟು ಅನ್ಯಾಯವನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ದಲಿತ ಸಮಾಜ ಸನ್ನದ್ಧರಾಗಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು ಕರೆ ನೀಡಿದರು. ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ದಲಿತರನ್ನು ತುಳಿದು, ಅವರ ಬೆನ್ನಿಗೆ ಚೂರಿ ಹಾಕಿ ಅವರನ್ನು

ಉಡುಪಿ: ದಲಿತ ವಿರೋಧಿ ಕಾಂಗ್ರೆಸ್ಸನ್ನು ಸೋಲಿಸಿ ಎಂದು ದಿನಕರ ಬಾಬು ಕರೆ Read More »

ಪುತ್ತೂರು:ದೇಶ ದ್ರೋಹಿಗಳು ಯಾರೆಂಬುದನ್ನು ಬಿಜೆಪಿ ಸ್ಪಷ್ಟಪಡಿಸಿ| ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ

ಸಮಗ್ರ ನ್ಯೂಸ್‌ : ದೇಶ ದ್ರೋಹಿಗಳ ಹಾಗೂ ರಾಷ್ಟ್ರ ಪ್ರೇಮಿಗಳ ನಡುವಿನ ಸ್ಪರ್ಧೆ ಎಂಬ ಹೇಳಿಕೆಯಲ್ಲಿ ದೇಶ ದ್ರೋಹಿಗಳು ಯಾರೆಂಬುದನ್ನು ಬಿಜೆಪಿ ಸ್ಪಷ್ಟ ಪಡಿಸಬೇಕಾಗಿದೆ. ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡುವ ಕಾರ್ಯವನ್ನು ಮಾಡುವ ಜತೆಗೆ ದೇಶ ಪ್ರೇಮದ ಬಗ್ಗೆ ಅನುಮಾನ ಇದ್ದಾಗ ತಮಗೆ ತಾವೇ ಪ್ರಮಾಣ ಪತ್ರ ನೀಡುವ ಕಾರ್ಯ ಬಿಜೆಪಿಯಿಂದ ನಡೆದಿದೆ. ಅಭಿವೃದ್ಧಿಗೆ ಹಾಗೂ ಅಭಿವೃದ್ಧಿ ಹೀನತೆಯ ನಡುವಿನ ಚುನಾವಣೆಯಾಗಿದೆ ಎಂದು ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ ಹೇಳಿದರು. ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ನಾರಾಯಣ ಗುರುಗಳ

ಪುತ್ತೂರು:ದೇಶ ದ್ರೋಹಿಗಳು ಯಾರೆಂಬುದನ್ನು ಬಿಜೆಪಿ ಸ್ಪಷ್ಟಪಡಿಸಿ| ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ Read More »

ಪುತ್ತೂರು: ಎಲೆಕ್ಟ್ರಾನಿಕ್ಸ್ ಶೋರೂಂನ ಗೋದಾಮಿಗೆ ಬೆಂಕಿ; ಕೋಟ್ಯಾಂತರ ರೂ. ನಷ್ಟ

ಸಮಗ್ರ ನ್ಯೂಸ್‌ : ಎಲೆಕ್ಟ್ರಾನಿಕ್ಸ್ ಶೋರೂಂ ಗೋದಾಮಿಗೆ ಬೆಂಕಿ ಹತ್ತಿ ಕೋಟ್ಯಾಂತರ ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮವಾದ ಘಟನೆ ಪುತ್ತೂರಿನ ದರ್ಬೆಯಲ್ಲಿ ಇಂದು ಬೆಳ್ಳಿಗ್ಗೆ ನಡೆದಿದೆ. ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಗೋದಾಮಿನಲ್ಲಿರುವ ಸೊತ್ತುಗಳು ಧಗಧಗನೆ ಹೊತ್ತಿ ಉರಿದಿವೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು, ಪುತ್ತೂರು ನಗರ ಠಾಣಾ ಪೊಲೀಸರು ಸಾಥ್ ನೀಡಿದ್ದಾರೆ.

ಪುತ್ತೂರು: ಎಲೆಕ್ಟ್ರಾನಿಕ್ಸ್ ಶೋರೂಂನ ಗೋದಾಮಿಗೆ ಬೆಂಕಿ; ಕೋಟ್ಯಾಂತರ ರೂ. ನಷ್ಟ Read More »

ಬಂಟ್ವಾಳ: ಮನೆ ಮಹಡಿಯ ಮೇಲಿಂದ ಬಿದ್ದು ಬಾಲಕ ಮೃತ್ಯು

ಸಮಗ್ರ ನ್ಯೂಸ್‌ : ಬಾಲಕ ಮನೆಯ ಮಹಡಿ ಮೇಲಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿದ್ದ ಘಟನೆ ಇಂದು ಬಂಟ್ವಾಳದಲ್ಲಿ ನಡೆದಿದೆ. ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತಪಟ್ಟ ಬಾಲಕನಾಗಿದ್ದಾನೆ. ಬಾಲಕ ಆದಿಶ್ ತಮ್ಮ ಮನೆಯ ಮಹಡಿಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದನು. ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಆತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ

ಬಂಟ್ವಾಳ: ಮನೆ ಮಹಡಿಯ ಮೇಲಿಂದ ಬಿದ್ದು ಬಾಲಕ ಮೃತ್ಯು Read More »

ಬಂಟ್ವಾಳ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಅತಿ ಹೆಚ್ಚು ಕುಡಿತದ ಚಟ, ಮಾನಸಿಕವಾಗಿ ಅಸ್ವಸ್ಥತೆಯನ್ನು ಹೊಂದಿದ್ದ ವ್ಯಕ್ತಿಯೊಬ್ಬ ವಿಷ ಪದಾರ್ಥ ಸೇವಿಸಿ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರವೀಣ್ ನಜರತ್ (45) ಮೃತಪಟ್ಟ ವ್ಯಕ್ತಿ. ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ವಿಪರೀತ ಕುಡಿತದ ಚಟ ಹೊಂದಿದ್ದನು. ಕಳೆದ 15 ದಿನಗಳ ಹಿಂದೆ ಮಾನಸಿಕವಾಗಿ ನೊಂದಿದ್ದ ಈತ ಮನೆಯ ಮಹಡಿಯಿಂದ ಕೆಳಗೆ ಹಾರಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದನು. ಮಾ.29 ರಂದು ಕೆಲಸಕ್ಕೆ

ಬಂಟ್ವಾಳ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ಬ್ರಹ್ಮಾವರ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಸಮಗ್ರ ನ್ಯೂಸ್‌ : ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಇಂದು ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ನಡೆದಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನೆಯಿಂದಾಗಿ ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮವಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ. ವಾತಾವರಣದಲ್ಲಿ ಶಾಖದ ಅಲೆಗಳ ಹೆಚ್ಚಳದಿಂದಾಗಿ ಅನೇಕ ವಾಹನಗಳು ಬಿಸಿಯಾಗುತ್ತಿವೆ ಮತ್ತು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಇದು ಕೂಡ ಘಟನೆಗೆ ಕಾರಣವಾಗಿರಬಹುದು ಎಂಬ ಮಾಹಿತಿ ತಿಳಿದು

ಬ್ರಹ್ಮಾವರ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್ Read More »