ಕಾರ್ಕಳ: ಟೆಂಪೋ ಪಲ್ಟಿ- ಓರ್ವ ಮೃತ್ಯು, ನಾಲ್ವರಿಗೆ ಗಾಯ
ಸಮಗ್ರ ನ್ಯೂಸ್: ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಮಾಳ ಗ್ರಾಮದ ಕಡಾರಿ ಕ್ರಾಸ್‌ನಲ್ಲಿ ನಡೆದಿದೆ. ಹೆಜಮಾಡಿಯಿಂದ ಮಾಳದೆಡೆಗೆ ತೆಂಗಿನಕಾಯಿ ಸಾಗಿಸುತ್ತಿದ್ದ ವೇಳೆ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಪರಿಣಾಮವಾಗಿ ಐವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಓರ್ವ ಮೃತಪಟ್ಟಿರುತ್ತಾರೆ.ಟೆಂಪೋದಲ್ಲಿ ಚಾಲಕ ಸೇರಿದಂತೆ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರ್ಕಳ: ಟೆಂಪೋ ಪಲ್ಟಿ- ಓರ್ವ ಮೃತ್ಯು, ನಾಲ್ವರಿಗೆ ಗಾಯ Read More »










