ಕ್ರೈಂ

ಮಂಗಳೂರು: ಸೇನೆಯನ್ನು ಅವಮಾನಿಸಿ ವಿದ್ಯಾರ್ಥಿನಿ ಪೋಸ್ಟ್| ಸೋಶಿಯಲ್ ಮೀಡಿಯಾದಲ್ಲಿ ಆಪರೇಶನ್ ಸಿಂಧೂರಕ್ಕೆ ದಿಕ್ಕಾರ

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯೊಬ್ಬಳು ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸುತ್ತಿರುವಂತ ಆಪರೇಷನ್ ಸಿಂಧೂರ್ ಕುರಿತಂತೆ ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ. ಧಿಕ್ಕಾರ ಆಪರೇಷನ್ ಸಿಂಧೂರ್ ಎಂಬುದಾಗಿ ದೇಶ ವಿರೋಧಿ ಪೋಸ್ಟ್ ಮಾಡಿದ್ದು, ವ್ಯಾಪಕ ಆಕ್ರೋಶಕ್ಕೂ ಕಾರಣವಾಗಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವಂತ ರೇಷ್ಮಾ ಎಂಬ ವಿದ್ಯಾರ್ಥಿನಿಯೇ ಹೀಗೊಂದು ದೇಶ ವಿರೋಧಿ ಪೋಸ್ಟ್ ನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಾಕಿರೋದು. ನನ್ನ ಮನೆಯ ದೀಪಕ್ಕೆ ಅವನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ ತಂದೆ. […]

ಮಂಗಳೂರು: ಸೇನೆಯನ್ನು ಅವಮಾನಿಸಿ ವಿದ್ಯಾರ್ಥಿನಿ ಪೋಸ್ಟ್| ಸೋಶಿಯಲ್ ಮೀಡಿಯಾದಲ್ಲಿ ಆಪರೇಶನ್ ಸಿಂಧೂರಕ್ಕೆ ದಿಕ್ಕಾರ Read More »

ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ಈ ಅಪಘಾತ ಸಂಭವಿಸಿದೆ. ಹರಿಯಾಣ ಮೂಲದ ಆಡಿ ಕಾರು ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.ಅಪಘಾತದಲ್ಲಿ ಗಾಯಗೊಂಡವನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಬ್ಯಾಡಿಗೆ ಠಾಣೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವು Read More »

ಕಾಂತಾರ ಚಾಪ್ಟರ್ 1 ಸಿನಿಮಾದ ಕಲಾವಿದ ನಿಧನ

ಸಮಗ್ರ ನ್ಯೂಸ್: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಇದೀಗ ಕೇರಳ ಮೂಲದ ಸಹ ಕಲಾವಿದ ಕಪಿಲ್ ಎಂಬುವರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಶೂಟಿಂಗ್ ಮುಗಿಸಿದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಕಪಿಲ್ ಅವರು ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದರು. ಈ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಾಂತಾರ:

ಕಾಂತಾರ ಚಾಪ್ಟರ್ 1 ಸಿನಿಮಾದ ಕಲಾವಿದ ನಿಧನ Read More »

ಧರ್ಮಸ್ಥಳ: ಹೃದಯಾಘಾತದಿಂದ ಬಾಲಕ ಸಾವು

ಸಮಗ್ರ ನ್ಯೂಸ್: ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಬಾಲಕನೊಬ್ಬ ಸಾವನಪ್ಪಿದ ಘಟನೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಗೋವಿಂದ ಗೌಡರ ಪುತ್ರ ಪ್ರಥಮ್‌ (16) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನದ ಸಮಯದಲ್ಲಿ ಬಾಲಕ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅಷ್ಟರಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಉಜಿರೆ ಖಾಸಗಿ ಆಸ್ಪತ್ರೆಯಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಬಾಲಕನ ಮೃತದೇಹವನ್ನು ಶವಪರೀಕ್ಷೆಗೆಂದು ಸಾಗಿಸಲಾಗಿದೆ. ಧರ್ಮಸ್ಥಳ

ಧರ್ಮಸ್ಥಳ: ಹೃದಯಾಘಾತದಿಂದ ಬಾಲಕ ಸಾವು Read More »

ಬೆಂಗಳೂರು: ನಡುರಸ್ತೆಯಲ್ಲೇ ನಗ್ನವಾಗಿ ಓಡಾಡಿದ ಯುವತಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪಿಜಿ ಯುವತಿಯೊಬ್ಬಳು ನಗ್ನವಾಗಿ ಹಾಡಹಗಲೇ ಯುವತಿ ರಸ್ತೆಯಲ್ಲಿ ಓಡಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಅಕ್ರಮ ಪಿಜಿಗಳಲ್ಲಿ ಅನಾಗರಿಕ ವರ್ತನೆ ಕಂಡುಬಂದಿದ್ದು, ಹಾಡಹಗಲೆ ರಸ್ತೆಯಲ್ಲಿ ಯುವತಿ ನಗ್ನವಾಗಿ ಓಡಾಟ ನಡೆಸಿದ್ದಾಳೆ. ಅಕ್ರಮ ಪಿಜಿಗಳ ಪುಂಡಾಟಕ್ಕೆ ಸ್ಥಳೀಯ ಜನರು ಬೇಸತ್ತು ಹೋಗಿದ್ದಾರೆ. ನಗ್ನವಾಗಿ ರಸ್ತೆಯಲ್ಲಿಯೇ ಪಿಜಿ ಯುವತಿ ಓಡಾಡಿದ್ದಾಳೆ. ಬಿಬಿಎಂಪಿ ಮತ್ತು ಬೆಸ್ಕಾಂ ಹಾಗೂ ಪೊಲೀಸ್ ಠಾಣೆಗೆ ಈ ಸಂಬಂಧ ದೂರು ನೀಡಲಾಗಿದೆ. ಸ್ಥಳೀಯ ನಿವಾಸಿಗಳು ದೂರು ನೀಡಿದರು ಕೂಡ ಪಿ ಜಿ ಹಾಗೂ ಯುವತಿಯ

ಬೆಂಗಳೂರು: ನಡುರಸ್ತೆಯಲ್ಲೇ ನಗ್ನವಾಗಿ ಓಡಾಡಿದ ಯುವತಿ Read More »

ಸುಹಾಸ್ ಶೆಟ್ಟಿ‌ ಕೊಲೆ ಪ್ರಕರಣ| 8 ಮಂದಿ ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಮಂಗಳೂರು ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಗೃಹಸಚಿವ ಜಿ. ಪರಮೇಶ್ವರ್‌, “ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಈಗಾಗಲೇ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಯಾವುದೇ ಸಮುದಾಯದವರನ್ನು ಕಾನೂನು ಉಲ್ಲಂಘನೆ ಮಾಡಲು ಬಿಡಲ್ಲ. ಎಲ್ಲಾ ತರದ ಕಾನೂನು

ಸುಹಾಸ್ ಶೆಟ್ಟಿ‌ ಕೊಲೆ ಪ್ರಕರಣ| 8 ಮಂದಿ ಆರೋಪಿಗಳ ಬಂಧನ Read More »

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ| ೮ ಮಂದಿ ಶಂಕಿತರು ಪೊಲೀಸ್ ವಶಕ್ಕೆ?

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಬಾರಿ ಸಂಚು ನಡೆದಿರುವುದು ಬಯಲಾಗಿದೆ. ಕಾಂಟ್ರಾಕ್ಟ್ ಕಿಲ್ಲರ್ಸ್ ಬಳಸಿ ಈ ದಾಳಿ ನಡೆಸಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಇದೀಗ ಪೊಲೀಸರು ಒಟ್ಟು 8 ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಬಯಲಾಗಿದೆ. ಪೊಲೀಸರು ವಶಕ್ಕೆ ಪಡೆದಿರುವ 8 ಶಂಕಿತ ಆರೋಪಿಗಳ ಪೈಕಿ ಇಬ್ಬರು ಹಿಂದೂ ಯುವಕರು ಎಂದು ಹೇಳಲಾಗುತ್ತಿದೆ. ವಿಡಿಯೋ ಸಾಕ್ಷ್ಯದ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದೀಗ 8 ಮಂದಿ ಬಂಧಿತರನ್ನು

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ| ೮ ಮಂದಿ ಶಂಕಿತರು ಪೊಲೀಸ್ ವಶಕ್ಕೆ? Read More »

ಉಡುಪಿ: ಮುಸ್ಲಿಂ ಯುವಕನ ಮೇಲೆ ಕೊಲೆ ಯತ್ನ| ಇಬ್ಬರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ರಿಕ್ಷಾ ಚಾಲಕರೊಬ್ಬರ ಮೇಲೆ ಇಬ್ಬರು ದುಷ್ಕರ್ಮಿಗಳು ತಲವಾರಿನಿಂದ ದಾಳಿ ಮಾಡಿ ಕೊಲೆಗೆ ಯತ್ನಿಸಿರುವ ಘಟನೆ ಮೇ 1ರಂದು ರಾತ್ರಿ 11:15ರ ಸುಮಾರಿಗೆ ಶೇಡಿಗುಡ್ಡೆ ಬಳಿ ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಿರಿಯಡ್ಕ ಬೊಮ್ಮರಬೆಟ್ಟುವಿನ ಸಂದೇಶ್ (31) ಮತ್ತು ಬಾಪೂಜಿ ದರ್ಖಾಸು ನಿವಾಸಿ ಸುಶಾಂತ್ (32) ಬಂದಿತ ಆರೋಪಿಗಳು. ಆತ್ರಾಡಿಯ ಅಬೂಬಕರ್ (50) ಎಂಬವರು ಬಾಡಿಗೆ ನಿಮಿತ್ತ ಆತ್ರಾಡಿಯಿಂದ ಮದಗ ಕಡೆಗೆ ಮುಖ್ಯರಸ್ತೆಯಲ್ಲಿ ರಿಕ್ಷಾದಲ್ಲಿ ಆತ್ರಾಡಿ ಗ್ಯಾಸ್ ಪೆಟ್ರೋಲ್ ಬಂಕ್ ಬಳಿ

ಉಡುಪಿ: ಮುಸ್ಲಿಂ ಯುವಕನ ಮೇಲೆ ಕೊಲೆ ಯತ್ನ| ಇಬ್ಬರು ಆರೋಪಿಗಳ ಬಂಧನ Read More »

ಮೇ.6ರವರೆಗೆ ದ.ಕ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬಜಪೆಯ ಕಿನ್ನಿಪದವಿನಲ್ಲಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಬೆನ್ನಲ್ಲೇ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 2 ರಿಂದ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರು ಶುಕ್ರವಾರ ಆದೇಶ ಮಾಡಿದ್ದಾರೆ. ‘ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ನಗರದ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಜಾಸ್ತಿಯಾಗಿವೆ. ಹಾಗಾಗಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಕಾನೂನು

ಮೇ.6ರವರೆಗೆ ದ.ಕ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ Read More »

ಸುಹಾಸ್ ಶೆಟ್ಟಿ ಹತ್ಯೆ ಖಂಡನೆ| ಇಂದು(ಮೇ.2) ದ.ಕ ಜಿಲ್ಲಾ ಬಂದ್ ಗೆ ಹಿಂದೂ ಸಂಘಟನೆಗಳ ಕರೆ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬಜ್ಪೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ ಇಂದು(ಮೇ.2) ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದೆ ಎಂದು VHP ಮುಖಂಡ ಶರಣ್ ಪಂಪ್

ಸುಹಾಸ್ ಶೆಟ್ಟಿ ಹತ್ಯೆ ಖಂಡನೆ| ಇಂದು(ಮೇ.2) ದ.ಕ ಜಿಲ್ಲಾ ಬಂದ್ ಗೆ ಹಿಂದೂ ಸಂಘಟನೆಗಳ ಕರೆ Read More »