ಕ್ರೈಂ

ಮಾಜಿ ಸಂಸದ ಎಂ‌ ಶ್ರೀನಿವಾಸ್ ವಿಧಿವಶ

ಸಮಗ್ರ ನ್ಯೂಸ್: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಸಂಸದರು ಹಾಗೂ 4 ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಮುತ್ಸದ್ದಿ ಎಂ.ಶ್ರೀನಿವಾಸ್ ವಿಧಿವಶರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಲಾಗಿದ್ದ ಶ್ರೀನಿವಾಸ್ ಅವರು, ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ. ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತ ಶ್ರೀನಿವಾಸ್​​ ರ ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದಂತೆ ನಾಳೆ ಉತ್ತರಹಳ್ಳಿಯಲ್ಲಿ ನಡೆಯಲಿದೆ.

ಮಾಜಿ ಸಂಸದ ಎಂ‌ ಶ್ರೀನಿವಾಸ್ ವಿಧಿವಶ Read More »

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚೂರಿ ಇರಿತ

ಸಮಗ್ರ ನ್ಯೂಸ್: ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ಗಾಯಗೊಂಡಿದ್ದಾರೆ. ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಇತರ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ. ಮನೆಯಲ್ಲಿದ್ದವರು ಎಚ್ಚರಗೊಂಡು ದರೋಡೆಕೋರನನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂದ್ರಾ ಪೊಲೀಸರು ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ಅಪರಾಧಿಯನ್ನು ಹಿಡಿಯಲು ಹಲವಾರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಹಿರಿಯ

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚೂರಿ ಇರಿತ Read More »

ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್| ಹಿರಿಯ ನಟ ಸರಿಗಮ‌ ವಿಜಿ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗ ಹಾಗೂ ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ (76) ಅವರು ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು (ಜನವರಿ 15) ನಿಧನ ಹೊಂದಿದ್ದಾರೆ. ವಿಜಿ ಅವರದ್ದು ಬಲು ಸುದೀರ್ಘವಾದ ಸಿನಿಮಾ ಮತ್ತು ರಂಗಭೂಮಿ ಪಯಣ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ

ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್| ಹಿರಿಯ ನಟ ಸರಿಗಮ‌ ವಿಜಿ ಇನ್ನಿಲ್ಲ Read More »

ಸಕಲೇಶಪುರ: ಸ್ನಾನ‌ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಮಹಿಳೆ ಸಾವು

ಸಮಗ್ರ ನ್ಯೂಸ್: ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತವಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ, ವೆಂಕಟಹಳ್ಳಿ ಗ್ರಾಮದಲ್ಲಿ ನಡೆದಿದೆ.ದೀಪಾ (35) ಸಾವನ್ನಪ್ಪಿದ ಮಹಿಳೆ. ದೀಪಾ ಸಕಲೇಶಪುರ ತಾಲೂಕಿನ ವೀರಶೈವ ಸಮಾಜದ ಯುವ ವೇದಿಕೆ ಅಧ್ಯಕ್ಷ ಶಶಿಕುಮಾರ್ ಅವರ ಪತ್ನಿ. ದೀಪಾ ಹಾನುಬಾಳು ಹೋಬಳಿ ವೆಂಕಟಹಳ್ಳಿ ಗ್ರಾಮದವರೆಂದು ತಿಳಿದುಬಂದಿದೆ. ದೀಪಾರವರು ಸ್ನಾನ ಮಾಡುತ್ತಿದ್ದ ವೇಳೆ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದದ್ದು ಬಳಿಕ ಸಕಲೇಶಪುರ ತಾಲ್ಲೂಕಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ದೀಪಾರವರು ಪತಿ

ಸಕಲೇಶಪುರ: ಸ್ನಾನ‌ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಮಹಿಳೆ ಸಾವು Read More »

ಬೆಂಗಳೂರಿನಲ್ಲಿ ಮೂಕಪ್ರಾಣಿಗಳ ಮೇಲೆ ಅಮಾನವೀಯ ಕೃತ್ಯ| ಹಸುಗಳ ಕೆಚ್ಚಲು ಕೊಯ್ದು ವಿಕೃತಿ

ಸಮಗ್ರ ನ್ಯೂಸ್: ಬೆಂಗಳೂರಲ್ಲಿ ಕಿಡಿಗೇಡಿಗಳು ಮೂಖ ಪ್ರಾಣಿಗಳ ಮೇಲೆ ಅಮಾನವೀಯ ಕೃತ್ಯ ಎಸಗಿದ್ದಾರೆ. ಹಾಲು ಕೊಡುವ ಕಾಮಧೇನುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆಯಲಾಗಿದೆ. ಚಾಮರಾಜಪೇಟೆ ವಿನಾಯಕ ನಗರದ ಪೆನ್ಷನ್ ಮೊಲಾದಲ್ಲಿ ಇಂತಹದೊಂದು ಕ್ರೂರ ಘಟನೆ ಬೆಳಕಿಗೆ ಬಂದಿದೆ. ನಿನ್ನೆ ಮಧ್ಯರಾತ್ರಿಯೇ ಕಿಡಿಗೇಡಿಗಳು ಹಸುವಿನ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ಇಂದು ನಸುಕಿನ ಜಾವ ಹಸುವಿನ ಮಾಲೀಕರಿಗೆ ಪಕ್ಕದ ಮನೆಯವರು ಮಾಹಿತಿ ನೀಡಿದ್ದಾರೆ. ನೀಚರ ಕೃತ್ಯಕ್ಕೆ ಮೂರು ಹಸುಗಳ ಮೂಕ ರೋಧನೆ ಮುಗಿಲು ಮುಟ್ಟಿದೆ. 3 ಹಸುಗಳ ಕೆಚ್ಚಲು ಕೊಯ್ದು

ಬೆಂಗಳೂರಿನಲ್ಲಿ ಮೂಕಪ್ರಾಣಿಗಳ ಮೇಲೆ ಅಮಾನವೀಯ ಕೃತ್ಯ| ಹಸುಗಳ ಕೆಚ್ಚಲು ಕೊಯ್ದು ವಿಕೃತಿ Read More »

ಬೆಂಗಳೂರಿಗೆ ನಕಲಿ ಸಿಗರೇಟ್ ಸರಬರಾಜು ಮಾಡ್ತಿದ್ದ ಕೇರಳ ಗ್ಯಾಂಗ್ ಅರೆಸ್ಟ್

ಸಮಗ್ರ ನ್ಯೂಸ್ : ನೀವು ಹಲವಾರು ರೂಪಾಯಿ ಖರ್ಚು ಮಾಡಿ ಇದು ಒಳ್ಳೆಯ ಸಿಗರೇಟ್ ಎಂದು ತೆಗೆದುಕೊಂಡಿರುತ್ತೀರಿ.ಆದ್ರೆ ಅಲ್ಲಿಯೂ ಕೂಡ ನಕಲಿ ಗ್ಯಾಂಗ್‌ಗಳ ಕೈವಾಡವಿರುತ್ತದೆ. ಇದಕ್ಕೆ ನೇರ ಸಾಕ್ಷಿ ಬೆಂಗಳೂರಿನಲ್ಲಿ ಇಂದು ಸೀಜ್ ಆಗಿರುವ ಲಕ್ಷಾಂತರ ರೂಪಾಯಿ ಮೌಲ್ಯದ ನಕಲಿ ಸಿಗರೇಟ್ಸ್ ಐಟಿಸಿ ಲೈಟ್ಸ್ ಬ್ರಾಂಡ್ ನ ಮೂರು ಬಾಕ್ಸ್ ನಕಲಿ ಸಿಗರೇಟ್ ಸೀಜ್ ಮಾಡಲಾಗಿದೆ. ಪ್ರತಿಷ್ಠಿತ ಸಿಗರೇಟ್ ಬ್ರಾಂಡ್‌ನ್ನುನ ನಕಲು ಮಾಡಿ ಮಾರಾಟ ಮಾಡಲಾಗುತ್ತಿತ್ತು. ಕಾಂಬೋಡಿಯಾ, ಬಾಂಗ್ಲಾದೇಶ ಮೂಲಕ ನಕಲಿ ಸಿಗರೇಟ್ಸ್ ತಂದು ಬೆಂಗಳೂರಿನಲ್ಲಿ ಮಾರಾಟ

ಬೆಂಗಳೂರಿಗೆ ನಕಲಿ ಸಿಗರೇಟ್ ಸರಬರಾಜು ಮಾಡ್ತಿದ್ದ ಕೇರಳ ಗ್ಯಾಂಗ್ ಅರೆಸ್ಟ್ Read More »

ಸಿಟಿ ರವಿಗೆ ಮತ್ತೆ ಜೀವ ಬೆದರಿಕೆ

ಸಮಗ್ರ ನ್ಯೂಸ್ : ಡಿಸೆಂಬರ್ 13ನೇ ತಾರೀಕು ವಿಧಾನಪರಿಷತ್ ರಣರಂಗವಾಗಿತ್ತು. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ಗೆ ಪರಿಷತ್ ಸದಸ್ಯ ಸಿ.ಟಿ ರವಿ ಅವಾಚ್ಯ ಪದ ಬಳಸಿ ನಿಂದಿಸಿರುವ ಆರೋಪ ಕೇಳಿಬಂದಿತ್ತು. ಆದ್ರೆ ಪ್ರಕರಣ ಜೈಲು, ಕೋರ್ಟ್ ಮೆಟ್ಟಿಲೇರಿ ಸಿಟಿ ರವಿ ಸದ್ಯ ಬಂಧನದಿಂದ ಮುಕ್ತರಾಗಿದ್ದಾರೆ. ಇದರ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ಗೆ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬಿಜೆಪಿ ವಿಧಾನಪರಿಷತ್‌ ಸದಸ್ಯ ಸಿಟಿ ರವಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ.ಲಕ್ಷ್ಮೀ ಹೆಬ್ಬಾಳ್ಳರ್‌ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು

ಸಿಟಿ ರವಿಗೆ ಮತ್ತೆ ಜೀವ ಬೆದರಿಕೆ Read More »

ತಾಯಿಯ ಬದಲು ಕೆಲಸ ಮಾಡುತ್ತಿದ್ದ ಮಗ ಅರೆಸ್ಟ್; ಲೋಕಾಯುಕ್ತ ದಾಳಿ ವೇಳೆ ಕೇಸ್‌ ವರ್ಕರ್ ಕಳ್ಳಾಟ ಬಯಲು!

ಸಮಗ್ರ ನ್ಯೂಸ್ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮೇಲೆ ನಡೆದ ಲೋಕಾಯುಕ್ತ ದಾಳಿ ವೇಳೆ ಮಹಾ ಮೋಸವೊಂದು ಬೆಳಕಿಗೆ ಬಂದಿದೆ. ತಾಯಿಯ ಹೆಸರಿನಲ್ಲಿ ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಗನನ್ನು ಬಂಧಿಸಲಾಗಿದೆ. ಕೆಂಪೇಗೌಡನಗರ ಸಬ್ ಡಿವಿಷನ್ ಎಸ್‌ಡಿಎ ಆಗಿರುವ ಕವಿತ ಅವರ ಬದಲಾಗಿ ಆಕೆಯ ಪುತ್ರ ನವೀನ್ ಬಿಬಿಎಂಪಿ ಕಚೇರಿಯಲ್ಲಿ ತಾಯಿ ಪರವಾಗಿ ಕರ್ತವ್ಯ ಮಾಡುತಿದ್ದರು. ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದ ವೇಳೆ ಕಳ್ಳಾಟ ಬಯಲಾಗಿದೆ. ಅಲ್ಲದೆ ಕರ್ತವ್ಯ ದುರುಪಯೋಗಪಡಿಸಿಕೊಂಡ ಅಧಿಕಾರಿಗಳ

ತಾಯಿಯ ಬದಲು ಕೆಲಸ ಮಾಡುತ್ತಿದ್ದ ಮಗ ಅರೆಸ್ಟ್; ಲೋಕಾಯುಕ್ತ ದಾಳಿ ವೇಳೆ ಕೇಸ್‌ ವರ್ಕರ್ ಕಳ್ಳಾಟ ಬಯಲು! Read More »

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ!

ಸಮಗ್ರ ನ್ಯೂಸ್ : ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ಡೆತ್‌ ನೋಟ್ ಬರೆದು ತನ್ನ ಮನೆಯಲ್ಲಿ ಯಾರು ಇಲ್ಲದನ್ನು ನೋಡಿ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿನ ಮನೆಯಲ್ಲಿ ತ್ರಿಶಾಲ್ (13) ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಶರಣಾದ ಈ ಬಾಲಕ ಏಳನೇ ತರಗತಿ ವಿದ್ಯಾರ್ಥಿ ಆಗಿದ್ದಾನೆ. ಈ ವಯಸ್ಸಲ್ಲೇ ಈತ ಆತ್ಮಹತ್ಯೆ ಮಾಡಿಕೊಳ್ಳಲು ಮನಸ್ಸು ಮಾಡಿದ್ದಲ್ಲದೆ ಡೆತ್ ನೋಟ್ ಸಹ ಬರೆದಿದ್ದು, ಇಡೀ ರಾಜ್ಯವೇ ಶಾಕ್‌ಗೆ ಒಳಗಾಗುವಂತೆ ಆಗಿದೆ.ಇದರಲ್ಲಿ ಆತ ತಾನು ಯಾಕೆ

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ! Read More »

ಉಡುಪಿ: ಕಟಪಾಡಿ ಬಳಿ ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ| ಹೊತ್ತಿ ಉರಿದ ಬೈಕ್; ಸವಾರ ದುರ್ಮರಣ

ಸಮಗ್ರ ನ್ಯೂಸ್: ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಜ.10ರ ಶುಕ್ರವಾರ ತಡರಾತ್ರಿ ಉದ್ಯಾವರ ಬಲೈ ಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಅಪಘಾತದ ಸಂದರ್ಭ ಲಾರಿಯ ಅಡಿಭಾಗದಲ್ಲಿ ಬೈಕ್ ಸಿಲುಕಿಕೊಂಡಿದ್ದು ಈ ವೇಳೆ ಬೈಕಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಲಾರಿ ಬೆಂಕಿಗಾಹುತಿಯಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರ ಪಣಿಯೂರು ಮೂಲದ ರವಿ ಆಚಾರ್ಯ ಎಂದು ತಿಳಿದು ಬಂದಿದ್ದು, ಸ್ಥಳೀಯರ

ಉಡುಪಿ: ಕಟಪಾಡಿ ಬಳಿ ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ| ಹೊತ್ತಿ ಉರಿದ ಬೈಕ್; ಸವಾರ ದುರ್ಮರಣ Read More »