ಕ್ರೈಂ

ಅರಂತೋಡು:ಆಧಾರ್ ಕಾರ್ಡ್ ಬದಲಾವಣೆಗೆ ತಂಭ್ ಕೊಡಲು ಹೋದ ವ್ಯಕ್ತಿ ನಾಪತ್ತೆ

ಸಮಗ್ರ ನ್ಯೂಸ್:ಆಧಾರ್ ಕಾರ್ಡ್ ತಿದ್ದುಪಡಿ ಮಾಡಲೆಂದು ಅರಂತೊಡಿಗೆ ಹೋದ ಚೆಂಬು ಗ್ರಾಮದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಆ. 8ರಂದು ವರದಿಯಾಗಿದೆ. ಚೆಂಬುಗ್ರಾಮದ ಮಿನುಂಗೂರು ಮನೆ ಬಾಲಕೃಷ್ಣ (65) ಅವರು ಅರಂತೋಡಿಗೆ ತೆರಳಿದ್ದರು. ಅಲ್ಲಿಂದ ಸುಳ್ಯ ಕಡೆಗೆ ಬರುವ ವ್ಯಾನ್ ನಲ್ಲಿ ತೆರಳಿದ್ದು ಮತ್ತೆ ಮರಳಿ ಹಿಂತಿರುಗದೆ ಇರುವುದರಿಂದ ಮನೆಯವರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾವಚಿತ್ರದಲ್ಲಿರುವ ವ್ಯಕ್ತಿಯು ಕಂಡುಬಂದಲ್ಲಿ ಸುಳ್ಯ ಠಾಣೆಗೆ ತಿಳಿಸುವಂತೆ ಅಥವಾ 9731435253, 7760505928 ಸಂಖ್ಯೆಗೆ ತಿಳಿಸುವಂತೆ ಕೋರಲಾಗಿದೆ.

ಅರಂತೋಡು:ಆಧಾರ್ ಕಾರ್ಡ್ ಬದಲಾವಣೆಗೆ ತಂಭ್ ಕೊಡಲು ಹೋದ ವ್ಯಕ್ತಿ ನಾಪತ್ತೆ Read More »

ಸುಳ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ| ಐವರ ವಿರುದ್ಧ ದೂರು; ಓರ್ವ ಅರೆಸ್ಟ್

ಸಮಗ್ರ ನ್ಯೂಸ್: ತಡರಾತ್ರಿ ಸುಳ್ಯ ತಾಲೂಕಿನ ಅರಂತೋಡು ಸಮೀಪ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿರುವ ಯುವಕ ಸುಳ್ಯ ಪೊಲೀಸ್ ಠಾಣೆಯಲ್ಲಿ ಐವರು ಆರೋಪಿಗಳ ದೂರು ನೀಡಿದ್ದು, ಓರ್ವ ಆರೋಪಿಯ ಬಂಧನವಾಗಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು ಯುವಕ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅರ್ಜುನ್ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಈ ವಿಚಾರ ತಿಳಿದ ಸುಳ್ಯದ ಬಿಜೆಪಿ ಮುಖಂಡರು ಪೊಲೀಸ್ ಠಾಣೆಗೆ ತೆರಳಿದ್ದರು. ಪುತ್ತೂರಿನಿಂದ ಅರುಣ್ ಕುಮಾರ್ ಪುತ್ತಿಲ ಕೂಡಾ ಆಗಮಿಸಿದ್ದರು. ಹಲವು

ಸುಳ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ| ಐವರ ವಿರುದ್ಧ ದೂರು; ಓರ್ವ ಅರೆಸ್ಟ್ Read More »

ಸುಳ್ಯ: ನೈತಿಕ ಪೊಲೀಸ್‌ಗಿರಿ ಪ್ರಕರಣ| ಪೊಲೀಸ್‌ ಠಾಣೆಗೆ ಅರುಣ್‌ ಕುಮಾರ್‌ ಪುತ್ತಿಲ ಭೇಟಿ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ(sullia) ತೊಡಿಕಾನದಲ್ಲಿ ಅನ್ಯಕೋಮಿನ ವ್ಯಕ್ತಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಸುಳ್ಯ ಪೊಲೀಸ್‌ ಠಾಣೆಗೆ ಅರುಣ್‌ ಕುಮಾರ್‌ ಪುತ್ತಿಲ (Arun kumar puttila) ಭೇಟಿ ನೀಡಿದ್ದಾರೆ. ಘಟನೆಯ ವಿವರ: ಸುಳ್ಯ ತಾಲೂಕಿ‌ನ ಅರಂತೋಡು(Aranthodu) ಕಡೆ ಟ್ಯಾಪಿಂಗ್ ಕೆಲಸ ವಹಿಸಿಕೊಂಡು ಮಾಡುತ್ತಿದ್ದ ಅನ್ಯಕೋಮಿನ ವ್ಯಕ್ತಿ ಮಹಿಳೆಯೊಬ್ಬರನ್ನು ತನ್ನ ಕಾರಲ್ಲಿ ಸುತ್ತಾಡಿಸುತ್ತಿದ್ದಾನೆ ಎಂಬ ಅನುಮಾನದಿಂದ ಕೆಲ ಯುವಕರು ಕಾರನ್ನು ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ. ಆ.12ರ ಸಂಜೆ ಆತ ಮಹಿಳೆಯನ್ನು ಸುಳ್ಯಕ್ಕೆ ಬಿಟ್ಟು ತೊಡಿಕಾನ ಕಡೆಗೆ ಬರುತ್ತಿದ್ದಾನೆಂಬ

ಸುಳ್ಯ: ನೈತಿಕ ಪೊಲೀಸ್‌ಗಿರಿ ಪ್ರಕರಣ| ಪೊಲೀಸ್‌ ಠಾಣೆಗೆ ಅರುಣ್‌ ಕುಮಾರ್‌ ಪುತ್ತಿಲ ಭೇಟಿ Read More »

ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ| ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪದಲ್ಲಿ ಅನ್ಯಕೋಮಿನ ಕಾರು ಚಾಲಕನ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಮಹಿಳೆಯನ್ನು ತನ್ನ ಕಾರಲ್ಲಿ ಕರೆದೊಯ್ಯುತ್ತಿದ್ದ ಎಂಬ ಕಾರಣಕ್ಕೆ ಕಾರಲ್ಲಿ ಹೋಗುತ್ತಿದ್ದ ಅನ್ಯಕೋಮಿನ ವ್ಯಕ್ತಿಗೆ ಕೆಲ ಯುವಕರು ತಡೆದು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನದಿಂದ ವರದಿಯಾಗಿದೆ. ಸದ್ಯ ಸುಳ್ಯ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ತಾಲೂಕಿ‌ನ ಅರಂತೋಡು ಕಡೆ ಟ್ಯಾಪಿಂಗ್ ಕೆಲಸ ವಹಿಸಿಕೊಂಡು ಮಾಡುತ್ತಿದ್ದ ಅನ್ಯಕೋಮಿನ ವ್ಯಕ್ತಿ ಮಹಿಳೆಯೊಬ್ಬರನ್ನು ತನ್ನ ಕಾರಲ್ಲಿ ಸುತ್ತಾಡಿಸುತ್ತಿದ್ದಾನೆ ಎಂಬ ಅನುಮಾನದಿಂದ ಕೆಲ ಯುವಕರು ಕಾರನ್ನು ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ. ಇಂದು ಸಂಜೆ ಆತ ಮಹಿಳೆಯನ್ನು ಸುಳ್ಯಕ್ಕೆ

ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ| ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪದಲ್ಲಿ ಅನ್ಯಕೋಮಿನ ಕಾರು ಚಾಲಕನ ಮೇಲೆ ಹಲ್ಲೆ Read More »

ಮಕ್ಕಳಿಗೆ ಜಾಮೂನಿನಲ್ಲಿ ವಿಷ ಹಾಕಿದ ತಂದೆ..!

ಸಮಗ್ರ ನ್ಯೂಸ್: ಮಕ್ಕಳಿಬ್ಬರಿಗೆ ವಿಷವುಣಿಸಿದ ತಂದೆ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರ ತಾಲೂಕಿನ ಕ್ಯಾಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕುಮಾರ್ (38) ತನ್ನ ಇಬ್ಬರು ಹೆಣ್ಣುಮಕ್ಕಳಿಗೆ ಜಾಮೂನಿನಲ್ಲಿ ವಿಷ ಬೆರಸಿ ತಿನ್ನಿಸಿ ತಾನೂ ವಿಷ ಸೇವಿಸಿದ್ದಾರೆ. ಸದ್ಯ ಮೂವರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕೌಟುಂಬಿಕ ಕಲಹದಿಂದ ಕೆಲ ತಿಂಗಳ ಹಿಂದೆ ಪತ್ನಿ ತವರು ಮನೆ ಸೇರಿದ್ದರು. ಎರಡು ಮಕ್ಕಳನ್ನು ನೋಡಿಕೊಳ್ಳುತ್ತಿದ್ದ ಕುಮಾರ್ ಹೆಂಡತಿ ವಾಪಸ್ ಬಾರದಿದ್ದಕ್ಕೆ

ಮಕ್ಕಳಿಗೆ ಜಾಮೂನಿನಲ್ಲಿ ವಿಷ ಹಾಕಿದ ತಂದೆ..! Read More »

ಸವಣೂರು:ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದ ಮಹಿಳೆ ಮರದಿಂದ ಬಿದ್ದು ಮೃತ್ಯು

ಸಮಗ್ರ ನ್ಯೂಸ್:ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ (30)ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಪ್ರಮೋದ್ ಬೊಳ್ಳಾಜೆಯವರ ಪತ್ನಿ ಸುಚಿತ್ರ ಅವರು ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕಕ್ಕೆ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು.

ಸವಣೂರು:ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದ ಮಹಿಳೆ ಮರದಿಂದ ಬಿದ್ದು ಮೃತ್ಯು Read More »

ಮಂಗಳೂರು:ಪತಿಯಿಂದ ಕಳ್ಳತನ |ಠಾಣಾ ಮೆಟ್ಟಿಲೇರಿದ ಪತ್ನಿ

ಸಮಗ್ರ ನ್ಯೂಸ್: ಕಪಾಟಿನಲ್ಲಿರಿಸಿದ ಪತ್ನಿಯ ಚಿನ್ನಾಭರಣವನ್ನು ಪತಿಯೇ ಕಳ್ಳತನ ಮಾಡಿದ ಘಟನೆ ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕೆ.ಪಿ.ಟಿ. ವ್ಯಾಸ ನಗರದ ಶಾಂತಲಾ ಆಶಿಯಾನ ಫ್ಲ್ಯಾಟ್‌ನ ಕಪಾಟಿನಲ್ಲಿರಿಸಿದ ಚಿನ್ನಾಭರಣವನ್ನು ಕಳ್ಳತನ ಮಾಡಿದ್ದು, ಪ್ರಮುಖ ಆರೋಪಿಗಳಾದ ಇಲಿಯಾಸ್‌ ಮತ್ತು ಪ್ರಭಾಕರ್‌ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ. ತಾಯಿ ಮನೆಯಿಂದ ಮತ್ತು ಪತಿ ಮನೆಯಿಂದ ಮದುವೆ ಸಂದರ್ಭದಲ್ಲಿ ನೀಡಿದ್ದ ಚಿನ್ನ ಸೇರಿದಂತೆ ಒಟ್ಟು 75 ಪವನ್‌ ಚಿನ್ನವಿತ್ತು. ಅದನ್ನು ತಾವು ವಾಸಿಸುತ್ತಿದ್ದ ಕೆ.ಪಿ.ಟಿ. ವ್ಯಾಸ

ಮಂಗಳೂರು:ಪತಿಯಿಂದ ಕಳ್ಳತನ |ಠಾಣಾ ಮೆಟ್ಟಿಲೇರಿದ ಪತ್ನಿ Read More »

ಟ್ಯೂಷನ್ ಮುಗಿಸಿ ವಾಪಾಸ್ಸಾಗುತ್ತಿದ್ದ ಮಕ್ಕಳ ಮೇಲೆ ಹರಿದ ಗೂಡ್ಸ್ ವಾಹನ| ಇಬ್ಬರು ಸಾವು; ಮೂವರು ಗಂಭೀರ

ಸಮಗ್ರ ನ್ಯೂಸ್: ರಾತ್ರಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ಐವರು ಮಕ್ಕಳ ಮೇಲೆ ಟಾಟಾ ಏಸ್ ಗೂಡ್ಸ್‌ ವಾಹನ ಹರಿದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ರಾಮನಗರ ಜಿಲ್ಲೆಯ ಮಾಗಡಿ ರಸ್ತೆಯ ಗೊಲ್ಲರದೊಡ್ಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ರೋಹಿನ್ (5) ಮತ್ತು ಶಾಲಿನಿ (8) ಮೃತಪಟ್ಟವರು. ಗಂಭೀರವಾಗಿ ಗಾಯಗೊಂಡಿರುವ ಸುಚಿತ್, ಗೌತಮಿ ಹಾಗೂ ಲೇಖನ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಟ್ಯೂಷನ್ ಮುಗಿಸಿ ವಾಪಾಸ್ಸಾಗುತ್ತಿದ್ದ ಮಕ್ಕಳ ಮೇಲೆ ಹರಿದ ಗೂಡ್ಸ್ ವಾಹನ| ಇಬ್ಬರು ಸಾವು; ಮೂವರು ಗಂಭೀರ Read More »

ಸೌಜನ್ಯಳ ನ್ಯಾಯಕ್ಕಾಗಿ ಫೀಲ್ಡ್ ಗಿಳಿದ ಅರುಣ್ ಪುತ್ತಿಲ| ಆ.14ರಂದು ಪುತ್ತೂರಿನಲ್ಲಿ ”ನಮ್ಮ ನಡೆ ನ್ಯಾಯದ ಕಡೆ” ಜಾಥಾ ಹಾಗೂ ರಸ್ತೆ ತಡೆ

ಸಮಗ್ರ ನ್ಯೂಸ್: 11 ವರ್ಷಗಳ ಹಿಂದೆ ಅತ್ಯಾಚಾರ ನಡೆದು ಕೊಲೆಯಾದ ಸಹೋದರಿ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಲು ಸರ್ಕಾರ ಮರುತನಿಖೆ ಕೈಗೊಳ್ಳಬೇಕು ಹಾಗೂ ನೈಜ ಆರೋಪಿಗಳ ಬಂಧನವಾಗಬೇಕೆಂದು ಒತ್ತಾಯಿಸಿ ಆಗಸ್ಟ್ 14 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ‘ನಮ್ಮ ನಡೆ ನ್ಯಾಯದ ಕಡೆ’ ಬೃಹತ್ ಕಾಲ್ನಡಿಗೆ ಜಾಥ ಹಾಗೂ ರಸ್ತೆ ತಡೆ ನಡೆಯಲಿದೆ. ಆಗಸ್ಟ್ 14ರ ಸೋಮವಾರದಂದು ಬೆಳಿಗ್ಗೆ 9.30 ಕ್ಕೆ ದರ್ಬೆ ವೃತ್ತದಿಂದ ಕಾಲ್ನಡಿಗೆ ಜಾಥ ಪುತ್ತೂರು ಬಸ್ ನಿಲ್ದಾಣದವರೆಗೆ ತೆರಳಿ ಅಲ್ಲಿ ರಸ್ತೆ

ಸೌಜನ್ಯಳ ನ್ಯಾಯಕ್ಕಾಗಿ ಫೀಲ್ಡ್ ಗಿಳಿದ ಅರುಣ್ ಪುತ್ತಿಲ| ಆ.14ರಂದು ಪುತ್ತೂರಿನಲ್ಲಿ ”ನಮ್ಮ ನಡೆ ನ್ಯಾಯದ ಕಡೆ” ಜಾಥಾ ಹಾಗೂ ರಸ್ತೆ ತಡೆ Read More »

ಸುಳ್ಯ: ಓಮ್ನಿ ಡಿಕ್ಕಿ ಹೊಡೆದು ಪಾದಾಚಾರಿ ಸಾವು

ಸಮಗ್ರ ನ್ಯೂಸ್: ಪಾದಾಚಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅರಂತೋಡಿನಿಂದ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಅರಂತೋಡು ಗ್ರಾಮದ ಉಳುವಾರು ತೀರ್ಥರಾಮ ಎಂದು ಗುರುತಿಸಲಾಗಿದೆ. ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದ ಓಮಿನಿ ಕಾರು, ಪಾದಾಚಾರಿ ಉಳುವಾರು ನಿವಾಸಿ ತೀರ್ಥರಾಮ ಎಂಬುವರಿಗೆ ಡಿಕ್ಕಿ ಹೊಡೆದಿದ್ದು ಗಂಭೀರ ಗಾಯಗಳಾಗಿದ್ದು , ಗಾಯಾಳುವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರೆಂದು ಹೇಳಲಾಗಿದೆ. ಅವರು ಕೃಷಿಕರಾಗಿದ್ದು ಪತ್ನಿ ಪುತ್ರ ಹಾಗು ಓರ್ವ

ಸುಳ್ಯ: ಓಮ್ನಿ ಡಿಕ್ಕಿ ಹೊಡೆದು ಪಾದಾಚಾರಿ ಸಾವು Read More »