ಕ್ರೈಂ

ಇನ್ಸ್ಟಾಗ್ರಾಂ ವೈರಲ್ ಸ್ಟಾರ್ ಆಶಾ ಪಂಡಿತ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಥಟ್ಟನೆ ಪ್ರಸಿಯ ಪಡೆದಿರುವ ನಾಗುರಿ ಆಶಾ(Ashapandith) ರವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ತಿಳಿದಿಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಹಟ್ಟತ್ತನೆ ಪ್ರಸಿದ್ದಿ ಪಡೆದಿರುವ ಅವರು ತನ್ನ ಬೈಗುಳದಿಂದಲೇ ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿದ್ದರು.ಅವರಿಗೆ ರಾತ್ರಿ ವೇಳೆ ಎದೆ ನೋವು ಉಂಟಾಗಿ ತ ವಾಂತಿ ಮಾಡಿದ್ದು ಇಂದು(ಜ.23) ಬೆಳಗಿನ ಜಾವ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಇನ್ಸ್ಟಾಗ್ರಾಂ ವೈರಲ್ ಸ್ಟಾರ್ ಆಶಾ ಪಂಡಿತ್ ಹೃದಯಾಘಾತದಿಂದ ಸಾವು Read More »

ಪುತ್ತೂರು: ಕೋರ್ಟ್ ನಲ್ಲಿ ಜಡ್ಜ್ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಸಮಗ್ರ ನ್ಯೂಸ್: ವ್ಯಕ್ತಿಯೋರ್ವ ಕೋರ್ಟ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ. ಕಾವು ಮಣಿಯಡ್ಕ ನಿವಾಸಿ ರವಿ (35) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ರವಿ ಹಾಗೂ ಪತ್ನಿ ವಿದ್ಯಾಶ್ರೀ ನಡುವೆ ಕೌಟುಂಬಿಕ ಕಲಹವಾಗಿತ್ತು. ಎರಡು ದಿನಗಳ ಹಿಂದೆ ರವಿ ತನ್ನ ಪತ್ನಿ ವಿದ್ಯಾಶ್ರೀಯನ್ನು ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದ. ಗಂಡ-ಹೆಂಡತಿ ಜಗಳ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ

ಪುತ್ತೂರು: ಕೋರ್ಟ್ ನಲ್ಲಿ ಜಡ್ಜ್ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ Read More »

ಪುತ್ತೂರು: ನಕಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ 51 ಲಕ್ಷ ಕಳೆದುಕೊಂಡ ವ್ಯಕ್ತಿ

ಸಮಗ್ರ ನ್ಯೂಸ್: ಸ್ಟಾಕ್ ಮಾರ್ಕೆಟ್ ನಲ್ಲಿ ಹೂಡಿಕೆ ಮಾಡುತ್ತಿರುವ ಪುತ್ತೂರಿನ ವ್ಯಕ್ತಿಯೊಬ್ಬರು , ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಅದರಲ್ಲಿದ್ದ ವಾಟ್ಸಾಫ್ ಗ್ರೂಪ್ ಗೆ ಸೇರಿ ಅಲ್ಲಿ ನಕಲಿ ಷೇರು ಮಾರುಕಟ್ಟೆಗೆ ಹೂಡಿಕೆ ಮಾಡಿ 51 ಲಕ್ಷ ಕಳೆದುಕೊಂಡಿದ್ದಾರೆ. ಪುತ್ತೂರಿನ ನಿವಾಸಿಯಾಗಿರುವ ವ್ಯಕ್ತಿ ಈ ಹಿಂದೆ ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡುತ್ತಿದ್ದರು. 15-11-2025 ರಂದು ಫೇಸ್‌ಬುಕ್‌ನಲ್ಲಿ ಹೆಚ್ಚು ಲಾಭಾಂಶದ ಜಾಹೀರಾತು ನೋಡಿ ವಾಟ್ಸಪ್ ಗ್ರೂಪ್‌ಗೆ ಸೇರಿರುತ್ತಾರೆ. ಸದ್ರಿ ಗ್ರೂಪ್ ಹಾಗೂ ವಾಟ್ಸಪ್

ಪುತ್ತೂರು: ನಕಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ 51 ಲಕ್ಷ ಕಳೆದುಕೊಂಡ ವ್ಯಕ್ತಿ Read More »

ರಾಸಲೀಲೆ ವಿಡಿಯೋ ವೈರಲ್ ಪ್ರಕರಣ| ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್

ಸಮಗ್ರ ನ್ಯೂಸ್: ಕಚೇರಿಯಲ್ಲಿ ಮಹಿಳೆಗೆ ಮುತ್ತಿಟ್ಟು ಚೇರ್ ಮೇಲೆ ಕೂರಿಸಿಕೊಂಡು ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಜಿಪಿ ರಾಮಚಂದ್ರರಾವ್ ಅವರನ್ನು ಅಮಾನತು ಗೊಳಿಸಲಾಗಿದೆ ಡಿಜಿಪಿ ರಾಮಚಂದ್ರರಾವ್ ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆ ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಭಾರಿ ವೈರಲಾಗಿತ್ತು. ಅದರ ಬೆನ್ನಲ್ಲೇ ಬಿಜೆಪಿ ರಾಮಚಂದ್ರರಾವ್ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಲು ತೆರಳಿದ್ದರು. ಆದರೆ ಪರಮೇಶ್ವರ್ ಭೇಟಿಗೆ ಅವಕಾಶ ನೀಡಲಿಲ್ಲ. ಇದೀಗ ರಾಮಚಂದ್ರರಾವ್ ಅಜ್ಞಾತ

ರಾಸಲೀಲೆ ವಿಡಿಯೋ ವೈರಲ್ ಪ್ರಕರಣ| ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್ Read More »

ಪುತ್ತೂರಿನ ಪಡುಮಲೆ ಜಾತ್ರೆ ವೇಳೆ ಅವಘಡ| ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ಸಿಲುಕಿ ಶಾರ್ಟ್ ಸರ್ಕ್ಯೂಟ್| ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

ಸಮಗ್ರ ನ್ಯೂಸ್: ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಾರು ಸುಟ್ಟು ಭಸ್ಮವಾಗಿದೆ. ಶ್ರೀ ಪೂಮಾನಿ-ಕಿನ್ನಿಮಾನಿ ಪ್ರದೇಶದ ಬಳಿಯ ಪಡುಮಲೆಯಲ್ಲಿ ಮತ್ತು ಬಡಗನ್ನೂರು ಗ್ರಾಮ ಪಂಚಾಯತ್‌ನ ಪಡುಮಲೆ ಪ್ರದೇಶದ ಮೈಂದಿನಡ್ಕದಲ್ಲಿರುವ ವ್ಯಾಘ್ರ ಚಾಮುಂಡಿ ದೈವಸ್ಥಾನದ ಬಳಿ ಭಾನುವಾರ ಈ ಘಟನೆ ಸಂಭವಿಸಿದೆ. ದೇವಾಲಯದ ವಾರ್ಷಿಕ ಉತ್ಸವ ನಡೆಯುತ್ತಿರುವಾಗ ಈ ಘಟನೆ ನಡೆದಿದೆ. ದೇವಾಲಯದ ಆವರಣದೊಳಗಿನ ವಿದ್ಯುತ್ ಕಂಬದ ಬಳಿ ಕಾರು ನಿಲ್ಲಿಸಲಾಗಿತ್ತು. ಹತ್ತಿರದ ಜಾತ್ರೆಯಿಂದ ಬಂದ ಗ್ಯಾಸ್ ಬಲೂನ್ ಬಲವಾದ ಗಾಳಿಯಿಂದ

ಪುತ್ತೂರಿನ ಪಡುಮಲೆ ಜಾತ್ರೆ ವೇಳೆ ಅವಘಡ| ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ಸಿಲುಕಿ ಶಾರ್ಟ್ ಸರ್ಕ್ಯೂಟ್| ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ Read More »

ವೈರಲ್ ಆಯ್ತು ಐಜಿಪಿ ರಾಮಚಂದ್ರ ರಾವ್ ರಾಸಲೀಲೆ| ಕರ್ತವ್ಯದಲ್ಲಿದ್ದಾಗಲೇ ಮಹಿಳೆಯೊಂದಿಗೆ ಸರಸ, ಸರ್ಕಾರಕ್ಕೆ ಮುಜುಗರ

ಸಮಗ್ರ ನ್ಯೂಸ್:ಕರ್ನಾಟಕ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ‘ಕಾಮಕಾಂಡ’ ಈಗ ಇಡೀ ಸರ್ಕಾರವನ್ನೇ ಮುಜುಗರಕ್ಕೀಡು ಮಾಡಿದೆ. ಕರ್ನಾಟಕದ ಐಜಿಪಿ (DGP ಶ್ರೇಣಿ) ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕದ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋಗಳು ವೈರಲ್ ಆಗಿವೆ. ಈ ‘ಕಾಮಕಾಂಡ’ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ

ವೈರಲ್ ಆಯ್ತು ಐಜಿಪಿ ರಾಮಚಂದ್ರ ರಾವ್ ರಾಸಲೀಲೆ| ಕರ್ತವ್ಯದಲ್ಲಿದ್ದಾಗಲೇ ಮಹಿಳೆಯೊಂದಿಗೆ ಸರಸ, ಸರ್ಕಾರಕ್ಕೆ ಮುಜುಗರ Read More »

ಆನ್ ಲೈನ್ ನಲ್ಲಿ ಚೂಡಿದಾರ್ ಬುಕ್ ಮಾಡಿ 87 ಸಾವಿರ ಕಳೆದುಕೊಂಡ ಮಹಿಳೆ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಂದ ಜಾಹಿರಾತು ನಂಬಿ ಆನ್ಲೈನ್ ಆಯಪ್ ಮೂಲಕ ಚೂಡಿದಾರ್ ಬುತ್ ಮಾಡಿದ ಮಹಿಳೆ ಸೈಬರ್ ವಂಚಕರಿಂದ 87 ಸಾವಿರ ಕಳೆದುಕೊಂಡ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸ್ ದೂರಿನ ಪ್ರಕಾರ 35 ವರ್ಷ ವಯಸ್ಸಿನ ಮಹಿಳೆ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನೋಡಿ Aramya App ಮೂಲಕ ದಿನಾಂಕ 03-01-2026 ರಂದು ಸಾಲ್ವಾರ್‌ ಚೂಡಿದಾರ್‌ ಬಟ್ಟೆಯನ್ನು ಬುಕ್ ಮಾಡಿ ಪಾವತಿ ಮಾಡಿರುತ್ತಾರೆ. ನಂತರ

ಆನ್ ಲೈನ್ ನಲ್ಲಿ ಚೂಡಿದಾರ್ ಬುಕ್ ಮಾಡಿ 87 ಸಾವಿರ ಕಳೆದುಕೊಂಡ ಮಹಿಳೆ Read More »

ಬೆಳ್ತಂಗಡಿ: ಕೆರೆಯಲ್ಲಿ ಶವವಾಗಿ ಸಿಕ್ಕಿದ ಸುಮಂತ್ ನ‌ ಪೋಸ್ಟ್ ಮಾರ್ಟಂ ವರದಿಯಲ್ಲಿ ಬಯಲಾಯ್ತು ಸ್ಫೋಟಕ ಮಾಹಿತಿ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ಓಡಿಲ್ನಾಳ ಗ್ರಾಮದಲ್ಲಿ ನಡೆದ ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್ ಮಾರ್ಟ್ ವರದಿಯಲ್ಲಿ ಸ್ಪೋಟಕ ಮಾಹಿತಿ ಪೊಲೀಸರಿಗೆ ದೊರೆತಿದ್ದು, ಬಾಲಕ ಕೆರೆಯಲ್ಲಿ ಮುಳುಗುವ ಮೊದಲು ಜೀವಂತ ಇದ್ದ ಎಂಬ ಮಾಹಿತಿ ಲಭ್ಯವಾಗಿದೆ. ಜನವರಿ 12 ರಂದು ಬೆಳಗ್ಗೆ ಧನುಪೂಜೆಗೆಂದು ಸುಮಂತ್ ಬೆಳಗ್ಗೆ 5 ಗಂಟೆಗೆ ಎದ್ದು ದೇವಸ್ಥಾನಕ್ಕೆ ಹೊರಟಿದ್ದ. ವಾರದಲ್ಲೊಮ್ಮೆ ಪೂಜೆಗೆ ತೆರಳುವ ವಾಡಿಕೆ ಮಾಡಿಕೊಂಡಿದ್ದ. ಆದರೆ ನಿನ್ನೆ ಬೆಳಗ್ಗೆ ದೇವಸ್ಥಾನಕ್ಕೆ ಹೋದವನು ಮರಳಿ ಮನೆಗೆ

ಬೆಳ್ತಂಗಡಿ: ಕೆರೆಯಲ್ಲಿ ಶವವಾಗಿ ಸಿಕ್ಕಿದ ಸುಮಂತ್ ನ‌ ಪೋಸ್ಟ್ ಮಾರ್ಟಂ ವರದಿಯಲ್ಲಿ ಬಯಲಾಯ್ತು ಸ್ಫೋಟಕ ಮಾಹಿತಿ Read More »

ಧರ್ಮಸ್ಥಳದಲ್ಲಿ ನಡೆದ ಅಸಹಜ ಸಾವುಗಳ ಕುರಿತು ತನಿಖೆಗೆ ನಿರ್ದೇಶಿಸಲು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಸೌಜನ್ಯಳ ತಾಯಿ‌

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡಕ್ಕೆ ಧರ್ಮಸ್ಥಳದಲ್ಲಿ1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳ ಸಂಬಂಧ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ನಿರ್ದೇಶನ ನೀಡುವಂತೆ ಹೈಕೋರ್ಟ್ ಗೆ ಸೌಜನ್ಯ ತಾಯಿ ಅರ್ಜಿ ಸಲ್ಲಿಸಿದ್ದಾರೆ. ಧರ್ಮಸ್ಥಳದಲ್ಲಿಸಾಮೂಹಿಕ ಅತ್ಯಾಚಾರಕ್ಕೀಡಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ವಿಭಾಗೀಯಪೀಠದ ಮುಂದೆ

ಧರ್ಮಸ್ಥಳದಲ್ಲಿ ನಡೆದ ಅಸಹಜ ಸಾವುಗಳ ಕುರಿತು ತನಿಖೆಗೆ ನಿರ್ದೇಶಿಸಲು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಸೌಜನ್ಯಳ ತಾಯಿ‌ Read More »

ಬೆಳ್ತಂಗಡಿ: ನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಬೆಳ್ತಂಗಡಿಯ ಕಳಿಯ ದೇವಸ್ಥಾನಕ್ಕೆ ಇಂದು ಮುಂಜಾನೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್, ನಾಪತ್ತೆಯಾಗಿ ಮೃತಪಟ್ಟ ಬಾಲಕ. ನಾಳ ದೇವಸ್ಥಾನಕ್ಕೆ ಸುಮಂತ್ ಸೇರಿದಂತೆ ಮೂರು ಮಂದಿ ಬಾಲಕರು ಒಟ್ಟಿಗೆ ಹೋಗುತ್ತಿದ್ದರು. ಇಂದು ಮುಂಜಾನೆ ಸುಮಂತ್ ಮನೆಯಿಂದ ಬರುವಾಗ

ಬೆಳ್ತಂಗಡಿ: ನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆ Read More »