ಕ್ರೈಂ

ಪ್ರಿಯತಮೆಯನ್ನು ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ

ಸಮಗ್ರ ನ್ಯೂಸ್: ಪ್ರಿಯತಮೆಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಕುಕ್ಕರ್ ನಲ್ಲಿ ಬೇಯಿಸಿರುವ ಭೀಕರ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ಮನೋಜ್ ಸಹಾನಿ (56) ಎಂದು ಗುರುತಿಸಲಾಗಿದ್ದು, ಈತ ತನ್ನ ಲಿವ್ ಇನ್ ಗೆಳತಿ ಸರಸ್ವತಿ ವೈದ್ಯ(36) ಎಂಬ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಆರೋಪಿ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್‌ನಲ್ಲಿ ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್ […]

ಪ್ರಿಯತಮೆಯನ್ನು ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ Read More »

ಮಂಗಳೂರು: ಹೂಡಿಕೆಯ ಆಮಿಷವೊಡ್ಡಿ 1.64 ಲಕ್ಷ ರೂ ವಂಚನೆ

ಸಮಗ್ರ ನ್ಯೂಸ್: ಹಣ ಹೂಡಿಕೆಯ ಆಮಿಷವೊಡ್ಡಿ 1.64ಲಕ್ಷ ಹಣ ವಂಚನೆ ಮಾಡಿರುವ ಘಟನೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ಅಪರಿಚಿತ ವ್ಯಕ್ತಿ ದೂರುದಾರರಿಗೆ ಜೂ.4ರಂದು ಇನ್‌ಸ್ಟಾಗ್ರಾಂ ಮೆಸೆಂಜರ್‌ನಲ್ಲಿ ಸಂದೇಶಮತ್ತು ಲಿಂಕ್ ಕಳುಹಿಸಿದ್ದು, ಆ ಲಿಂಕ್ ಕ್ಲಿಕ್ ಮಾಡಿದಾಗ ಇನ್‌ಸ್ಟಾಗ್ರಾಂ ಖಾತೆಯ ಪೇಜ್ ತೆರೆದುಕೊಂಡಿತ್ತು. ಬಳಿಕ ಅಪರಿಚಿತ ವ್ಯಕ್ತಿ 50,000 ರೂ. ಹೂಡಿಕೆ ಮಾಡಿದರೆ 4,90,000 ರೂ. ಲಾಭಾಂಶ ಸಿಗುವುದಾಗಿ ಹೇಳಿದಾಗ ಅದರಂತೆ 50,000 ರೂ. ಹಣವನ್ನು ವರ್ಗಾಯಿಸಿದರು.

ಮಂಗಳೂರು: ಹೂಡಿಕೆಯ ಆಮಿಷವೊಡ್ಡಿ 1.64 ಲಕ್ಷ ರೂ ವಂಚನೆ Read More »

ಉಳ್ಳಾಲ: 24 ಪುಟಗಳ ಡೆತ್ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ|ನೂತನ ಮನೆ ಖರೀದಿಸಿದ ಐದೇ ದಿನದಲ್ಲಿ ಏನಾಯಿತು ಈಕೆಗೆ..?| ಇದಕ್ಕೆಲ್ಲ ಕಾರಣ ಬ್ಯಾಂಕ್ ಅಧಿಕಾರಿಗಳ..!

ಸಮಗ್ರ ನ್ಯೂಸ್: ಯುವತಿಯೋರ್ವಳು 24 ಪುಟಗಳ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25)ಆತ್ಮ ಹತ್ಯೆಗೈದ ಯುವತಿ.ನಿನ್ನೆ ರಾತ್ರಿ ಅಶ್ವಿನಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ. ಅಶ್ವಿನಿ ಬರೆದ 24 ಪುಟಗಳ ಡೆತ್

ಉಳ್ಳಾಲ: 24 ಪುಟಗಳ ಡೆತ್ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ|ನೂತನ ಮನೆ ಖರೀದಿಸಿದ ಐದೇ ದಿನದಲ್ಲಿ ಏನಾಯಿತು ಈಕೆಗೆ..?| ಇದಕ್ಕೆಲ್ಲ ಕಾರಣ ಬ್ಯಾಂಕ್ ಅಧಿಕಾರಿಗಳ..! Read More »

ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರ ಸಾವು

ಸಮಗ್ರ ನ್ಯೂಸ್: ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರು ಸಾವನ್ನಪ್ಪಿದ ಘಟನೆ ಒಡಿಶಾದ ಜಾಜ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತ ಕಾರ್ಮಿಕರು ಜಾಜ್‌ಪುರ ಕಿಯೋಂಜರ್ ರಸ್ತೆ ರೈಲು ನಿಲ್ದಾಣದಲ್ಲಿ ರೈಲ್ವೆ ಸೈಡಿಂಗ್ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುತ್ತಿದ್ದ ಸಂದರ್ಭ ಏಕಾಏಕಿ ಗುಡುಗು ಸಹಿತ ಮಳೆಯಾಗಿದ್ದರಿಂದ (Thunder Storm) ಅಲ್ಲೇ ನಿಂತಿದ್ದ ಗೂಡ್ಸ್ ರೈಲಿನ ಅಡಿಯಲ್ಲಿ ಆಶ್ರಯ ಪಡೆದಿದ್ದಾರೆ. ದುರಾದೃಷ್ಟವಶಾತ್ ರೈಲಿಗೆ ಎಂಜಿನ್ ಜೋಡಿಸಿರಲಿಲ್ಲ. ಜೋರು ಮಳೆಯಿಂದಾಗಿ ರೈಲು ಚಲಿಸಲು ಪ್ರಾಂಭಿಸಿದ್ದು, ಅದರ ಅಡಿಯಲ್ಲಿ ಆಶ್ರಯ ಪಡೆದಿದ್ದ ಕಾರ್ಮಿಕರು ರೈಲಿನಡಿಗೆ

ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರ ಸಾವು Read More »

ಅತ್ತೆ, ಮಾವ, ಗಂಡ ಸೇರಿಕೊಂಡು ಸೊಸೆಯನ್ನೇ ಉಸಿರುಗಟ್ಟಿಸಿ ಕೊಲೆ!

ಸಮಗ್ರ ನ್ಯೂಸ್: ಅತ್ತೆ, ಮಾವ ಹಾಗೂ ಗಂಡ ಸೇರಿಕೊಂಡು ಸೊಸೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ. ಶ್ರೀದೇವಿ ದೀಪಕ್ ಬೇವಿನಕಟ್ಟಿ (31) ಕೊಲೆಯಾದ ಮಹಿಳೆ. ದೀಪಕ್ ಬೇವಿನಕಟ್ಟಿ (34), ರಾಮಚಂದ್ರ ಬೇವಿನಕಟ್ಟಿ (64) ಹಾಗೂ ಪದ್ಮಾವತಿ ಬೇವಿನಕಟ್ಟಿ (50) ಸೊಸೆಯನ್ನು ಹತ್ಯೆಗೈದ ಆರೋಪಿಗಳು. ಮದುವೆಯಾಗಿ 3 ವರ್ಷಗಳಾದರೂ ಶ್ರೀದೇವಿಗೆ ಮಕ್ಕಳಾಗಿರಲಿಲ್ಲ. ಅಲ್ಲದೇ ತವರು ಮನೆಯಿಂದ ಹಣ ತರುವಂತೆ ಶ್ರೀದೇವಿ ಗಂಡ ಪೀಡಿಸುತ್ತಿದ್ದ. ಈ ಹಿನ್ನೆಲೆ ಪತಿ, ಅತ್ತೆ ಹಾಗೂ ಮಾವ

ಅತ್ತೆ, ಮಾವ, ಗಂಡ ಸೇರಿಕೊಂಡು ಸೊಸೆಯನ್ನೇ ಉಸಿರುಗಟ್ಟಿಸಿ ಕೊಲೆ! Read More »

ನಿಂತಿದ್ದ ಲಾರಿಗೆ ಅಂಬ್ಯುಲೆನ್ಸ್ ಡಿಕ್ಕಿ; ಚಾಲಕ ಸೇರಿ ಮೂವರು ಸ್ಪಾಟ್ ಡೆತ್

ಸಮಗ್ರ ನ್ಯೂಸ್: ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ, ಆ್ಯಂಬುಲೆನ್ಸ್ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ. ಆಯಂಬುಲೆನ್ಸ್ ನಲ್ಲಿದ್ದ ಕನಕಮಣಿ (72) ಆಕಾಶ್ (17 ಮತ್ತು ಚಾಲಕ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದು, ಗಾಯಗೊಂಡವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗುಜರಾತ್ ನಿಂದ ತಮಿಳುನಾಡಿಗೆ ಹೋಗುತ್ತಿದ್ದ ಆಯಂಬುಲೆನ್ಸ್ ಚಿತ್ರದುರ್ಗದ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ

ನಿಂತಿದ್ದ ಲಾರಿಗೆ ಅಂಬ್ಯುಲೆನ್ಸ್ ಡಿಕ್ಕಿ; ಚಾಲಕ ಸೇರಿ ಮೂವರು ಸ್ಪಾಟ್ ಡೆತ್ Read More »

ಸುಳ್ಯ ತಾಲೂಕು ಆಸ್ಪತ್ರೆಗೆ ನೇಮಕಗೊಂಡಿದ್ದ ಯುವ ವೈದ್ಯೆ ಆತ್ಮಹತ್ಯೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಆಸ್ಪತ್ರೆಗೆ ನೇಮಕಗೊಂಡಿದ್ದ ಯುವ ವೈದ್ಯೆಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪದ ನೀರ್ಚಾಲಿನಲ್ಲಿ ನಡೆದಿದೆ. ಎಂಬಿಬಿಎಸ್‌ ಕೋರ್ಸ್‌ ಪೂರ್ತಿಗೊಳಿಸಿ ಗ್ರಾಮೀಣ ಸೇವೆನಡೆದಿದೆ ಕಾರ್ಯ ನಿರ್ವಹಿಸುತ್ತಿದ್ದ ಕನ್ಯಪ್ಪಾಡಿ ನಿವಾಸಿ ನಿವೃತ್ತ ಕ್ಯಾಂಪ್ಕೋ ಉದ್ಯೋಗಿ ಗೋಪಾಲಕೃಷ್ಣ ಭಟ್‌ ಅವರ ಪುತ್ರಿ ಯುವ ವೈದ್ಯೆ ಡಾ. ಪಲ್ಲವಿ ಜಿ.ಕೆ. (25) ಎಂದು ಗುರುತಿಸಲಾಗಿದೆ. ಇವರು ಜೂ. 5ರಂದು ರಾತ್ರಿ ಊಟ ಮಾಡಿ ನಿದ್ದೆ ಮಾಡಿದವರು ಬೆಳಗ್ಗೆ ಎದ್ದಿರಲಿಲ್ಲ. ಇದರಿಂದ ಮನೆಯವರು ಕೊಠಡಿಯ

ಸುಳ್ಯ ತಾಲೂಕು ಆಸ್ಪತ್ರೆಗೆ ನೇಮಕಗೊಂಡಿದ್ದ ಯುವ ವೈದ್ಯೆ ಆತ್ಮಹತ್ಯೆ Read More »

ಶೀಲಶಂಕಿಸಿ ಪತ್ನಿಯನ್ನು ಬರ್ಬರವಾಗಿ ಕೊಂದ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ

ಸಮಗ್ರ ನ್ಯೂಸ್: ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ಸಂಗೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ದ್ರಾಕ್ಷಣವ್ವ ಎಂಬವರನ್ನು ಪತಿ ಪ್ರಭು ವಾರತಿ (52) ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ವರದಿಯಾಗಿದೆ. ಪತ್ನಿ ಶೀಲ ಶಂಕಿಸಿ ನಿತ್ಯ ಗಲಾಟೆ ಮಾಡುತ್ತಿದ್ದ ಪ್ರಭು ನಿನ್ನೆಯೂ ಗಲಾಟೆ ಮಾಡಿ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನೂ ಮನೆ ಮುಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೀಲಶಂಕಿಸಿ ಪತ್ನಿಯನ್ನು ಬರ್ಬರವಾಗಿ ಕೊಂದ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ Read More »

ಒಡಿಶಾ ರೈಲು ದುರಂತದ ಸಂತ್ರಸ್ತರಿಗಾಗಿ ₹30 ಕೋಟಿ ನೀಡಿದ್ರಾ ವಿರಾಟ್ ಕೊಹ್ಲಿ? ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಮೆಸೇಜ್ ನ ಅಸಲಿಯತ್ತೇನು?

ಸಮಗ್ರ ನ್ಯೂಸ್: ಒಡಿಶಾ ರೈಲು ದುರಂತದ ಸಂತ್ರಸ್ತರಿಗಾಗಿ ಟೀಮ್​ ಇಂಡಿಯಾದ ಮಾಜಿ ನಾಯಕ ವಿರಾಟ್​ ಕೊಹ್ಲಿ ಅವರು 30 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇಷ್ಟೇ ಅಲ್ಲದೆ, ಅನೇಕ ಮೊಬೈಲ್​ ವಾಟ್ಸ್​ಆಯಪ್​​ ಸ್ಟೇಟಸ್​ಗಳಲ್ಲಿ ಮೋದಿ ಅವರನ್ನು ಕೊಂಡಾಡುತ್ತಿದ್ದಾರೆ. ಆದರೆ, ಈ ಸುದ್ದಿ ಸುಳ್ಳು ಎಂದು ಫ್ರೀ ಪ್ರೆಸ್​ ಜರ್ನಲ್​ ವರದಿ ಮಾಡಿದೆ. ಕೊಹ್ಲಿ ಯಾವುದೇ ನೆರವು ಘೋಷಣೆ ಮಾಡಿಲ್ಲ. ಬದಲಾಗಿ ಅವರು ರೈಲು ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಕೊಹ್ಲಿ

ಒಡಿಶಾ ರೈಲು ದುರಂತದ ಸಂತ್ರಸ್ತರಿಗಾಗಿ ₹30 ಕೋಟಿ ನೀಡಿದ್ರಾ ವಿರಾಟ್ ಕೊಹ್ಲಿ? ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಮೆಸೇಜ್ ನ ಅಸಲಿಯತ್ತೇನು? Read More »

ಸ್ಲೀಪರ್ ಕೋಚ್ ಬಸ್‍ನಲ್ಲಿ ವಿಷ ಕುಡಿದು ಮಲಗಿದ ಪ್ರೇಮಿಗಳು

ಸಮಗ್ರ ನ್ಯೂಸ್: ಸ್ಲೀಪರ್ ಕೋಚ್ ಬಸ್ ನಲ್ಲಿ ವಿಷ ಕುಡಿದು ಪ್ರೇಮಿಗಳು ಮಲಗಿದ್ದು, ಯುವತಿ ಮೃತಪಟ್ಟ ಘಟನೆ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಬಳಿ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ. ಹೇಮಾ ರಾಮಕೃಷ್ಣಪ್ಪ (20) ಮೃತಪಟ್ಟ ಯುವತಿ. ಆದರೆ ಯುವಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಘಟನೆ ವಿವರ: ಬಿ.ಕಾಂ ಫೈನಲ್ ಇಯರ್ ವಿದ್ಯಾರ್ಥಿನಿಯಾಗಿದ್ದ ಬೆಂಗಳೂರು ಮೂಲದ ಹೇಮಾಳಿಗೆ ಬಾಗಲಕೋಟೆ ಮೂಲದ ಅಖಿಲ್ ಜೊತೆ ಪ್ರೇಮಾಂಕುರವಾಗಿತ್ತು. ಇಬ್ಬರೂ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರಿಬ್ಬರ

ಸ್ಲೀಪರ್ ಕೋಚ್ ಬಸ್‍ನಲ್ಲಿ ವಿಷ ಕುಡಿದು ಮಲಗಿದ ಪ್ರೇಮಿಗಳು Read More »