ಕ್ರೈಂ

ಮಂಗಳೂರು: ಮಸೀದಿ ಮೇಲೆ‌ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಸಮಗ್ರ ನ್ಯೂಸ್: ಮಂಗಳೂರಿನ ಕಾಟಿಪಳ್ಳದ ಮಸೀದಿಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣದಿಂದ ಕೂಡಿರುವುದಾಗಿ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯಲ್ಲಿರುವ ಕಾಟಿಪಳ್ಳದ 3ನೇ ಬ್ಲಾಕ್ ನಲ್ಲಿರುವ ಬದ್ರಿಯಾ ಮಸೀದಿಯ ಮೇಲೆ ಕಿಡಿಗೇಡಿಗಳು ನಿನ್ನೆ ರಾತ್ರಿ 10.30ರ ಸುಮಾರಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಕಿಡಿಗೇಡಿಗಳ ಕಲ್ಲೆಸೆತದಿಂದ ಬದ್ರಿಯಾ ಮಸೀದಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಈ ಕೃತ್ಯವನ್ನು ಎರಡು ಬೈಕ್ ನಲ್ಲಿ […]

ಮಂಗಳೂರು: ಮಸೀದಿ ಮೇಲೆ‌ ಕಿಡಿಗೇಡಿಗಳಿಂದ ಕಲ್ಲು ತೂರಾಟ Read More »

ಜಾತಿ ನಿಂದನೆ ಹಾಗೂ ಜೀವಬೆದರಿಕೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಬಂಧನ..!

ಸಮಗ್ರ ನ್ಯೂಸ್: ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಜೀವಬೆದರಿಕೆ ಕೇಸ್ ನಲ್ಲಿ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿತ್ತು. ಇತ್ತ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಶಾಸಕ ಮುನಿರತ್ನರನ್ನು ಕೋಲಾರ ಜಿಲ್ಲೆಯ ನಂಗಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತವರು ಜಿಲ್ಲೆಯಾದ ಆಂಧ್ರಪ್ರದೇಶದ ಚಿತ್ತೂರಿಗೆ ಪಲಾಯಾನ‌ ಮಾಡುವ ವೇಳೆ ಮುನಿರತ್ನರನ್ನು ಅರೆಸ್ಟ್‌ ಮಾಡಲಾಗಿದೆ. ಗುತ್ತಿಗೆದಾರ ಚೆಲುವರಾಜು ಸಿಎಂ ಸಿದ್ದರಾಮಯ್ಯಗೆ ಮನವಿ ಕೊಟ್ಟ ಒಂದೇ ಗಂಟೆಯಲ್ಲಿ ಪೊಲೀಸರು ಮುನಿರತ್ನರನ್ನು ವಶಕ್ಕೆ ಪಡೆದಿದ್ದಾರೆ. ಮುನಿರತ್ನರನ್ನು ವಶಕ್ಕೆ ಪಡೆದು ಕೋಲಾರ ಮಾರ್ಗವಾಗಿ ಬೆಂಗಳೂರಿಗೆ

ಜಾತಿ ನಿಂದನೆ ಹಾಗೂ ಜೀವಬೆದರಿಕೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಬಂಧನ..! Read More »

ಆಂದ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ| 8 ಸಾವು; 33 ಮಂದಿ ಗಂಭೀರ

ಸಮಗ್ರ ನ್ಯೂಸ್: ಆಂಧ್ರಪ್ರದೇಶದಲ್ಲಿ ಶುಕ್ರವಾರ ಆರ್ಟಿಸಿ ಬಸ್ ಮತ್ತು ಎರಡು ಲಾರಿಗಳು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. 33 ಜನರು ಗಾಯಗೊಂಡಿದ್ದಾರೆ. ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮೊಘಲಿ ಘಾಟ್ ರಸ್ತೆಯಲ್ಲಿ ಎರಡು ಲಾರಿಗಳಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಚಿತ್ತೂರು ಜಿಲ್ಲೆಯ ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದರು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಗುತ್ತಿದೆ. ತನಿಖೆ

ಆಂದ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ| 8 ಸಾವು; 33 ಮಂದಿ ಗಂಭೀರ Read More »

ಮಂಗಳೂರು: ಗೋಡೆ ಕುಸಿದು ಇಬ್ಬರು ಮೃತ್ಯು

ಸಮಗ್ರ ನ್ಯೂಸ್: ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ನಗರದ ಜೈಲ್ ರಸ್ತೆಯಲ್ಲಿ ಸೆ.12 ರಂದು ನಡೆದಿದೆ. ಮೃತಪಟ್ಟವರನ್ನು ಜೇಮ್ಸ್ ಜತ್ತನ್ನ ಮತ್ತು ಅಡ್ವಿನ್ ಜೆರಾಲ್ಡ್ ಮೊಬಿನ್ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಮಂಗಳೂರು: ಗೋಡೆ ಕುಸಿದು ಇಬ್ಬರು ಮೃತ್ಯು Read More »

ಹಿರಿಯ ಮಾರ್ಕ್ಸ್ ವಾದಿ CPI(M) ನಾಯಕ ಸೀತಾರಾಮ್ ಯಚೂರಿ ಇನ್ನಿಲ್ಲ

ಸಮಗ್ರ ನ್ಯೂಸ್: ತೀವ್ರ ಶ್ವಾಸಕೋಶದ ಸೋಂಕಿನಿಂದಾಗಿ ದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ನಿಧನರಾಗಿದ್ದಾರೆ. 72 ವರ್ಷದ ಯೆಚೂರಿ ಅವರನ್ನು ಆಗಸ್ಟ್ 19 ರಂದು ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲಿಸಲಾಗಿತ್ತು. ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಸದಸ್ಯರಾದ ಒಂದು ವರ್ಷದ ನಂತರ 1975 ರಲ್ಲಿ ಸೀತಾರಾಮ್ ಯೆಚೂರಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ ವಾದಿ) ಗೆ

ಹಿರಿಯ ಮಾರ್ಕ್ಸ್ ವಾದಿ CPI(M) ನಾಯಕ ಸೀತಾರಾಮ್ ಯಚೂರಿ ಇನ್ನಿಲ್ಲ Read More »

ಬೆಂಗಳೂರು: ಗಾಂಜಾ ಮಾರಾಟಕ್ಕಿಳಿದ ವ್ಯಕ್ತಿ ಈಗ ಪೊಲೀಸರ ಅತಿಥಿ

ಸಮಗ್ರ ನ್ಯೂಸ್: ನಗರದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ತನ್ನ ಸಹೋದರಿಯ ಮದುವೆಯ ಖರ್ಚಿಗೆ ಪರಿಚಿತನೊಬ್ಬನ ಸಲಹೆಯಂತೆ ಗಾಂಜಾ ಮಾರಾಟವನ್ನು ಗುಪ್ತವಾಗಿ ನಡೆಸಿದ್ದಾನೆ. ಆರೋಪಿ ದ.ಕ. ಜಿಲ್ಲೆಯ ಪುತ್ತೂರು ಮೂಲದ ಬದ್ರುದ್ದೀನ್ ಎಂದು ತಿಳಿದುಬಂದಿದೆ. ಈತನಿಂದ 1 ಲಕ್ಷ ರೂ. ಮೌಲ್ಯದ 5 ಕೆ.ಜಿ 20 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈತ ಒಡಿಶಾಕ್ಕೆ ತೆರಳಿ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಇದೀಗ ಆರೋಪಿಯನ್ನು ಬಾಣಸವಾಡಿ ಠಾಣಾ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಹೊಟೇಲ್‌ನಲ್ಲಿನ ಸಂಬಳದಿಂದ

ಬೆಂಗಳೂರು: ಗಾಂಜಾ ಮಾರಾಟಕ್ಕಿಳಿದ ವ್ಯಕ್ತಿ ಈಗ ಪೊಲೀಸರ ಅತಿಥಿ Read More »

ಲೋ ಬಿಪಿಯಿಂದ 8ನೇ ತರಗತಿ ಬಾಲಕ ಸಾವು

ಸಮಗ್ರ ನ್ಯೂಸ್: 8ನೇ ತರಗತಿ ಬಾಲಕನೊಬ್ಬ ಲೋ ಬಿಪಿಯಾಗಿ ಶಾಲೆಯಲ್ಲೇ ಕುಸಿದು ಬಿದ್ದು, ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯುತ್ತಿರುವ ವೇಳೆ ಸಾವನ್ನಪ್ಪಿರುವ ಘಟನೆ ರಾಯಚೂರಲ್ಲಿ ನಡೆದಿದೆ. ಜಿಲ್ಲೆಯ ಸಿರಿವಾರ ಪಟ್ಟಣದಲ್ಲಿನ ಖಾಸಗಿ ಶಾಲೆಯೊಂದರಲ್ಲಿ 8ನೇ ತರಗತಿಯನ್ನು ಬಾಲಕ ತರುಣ್ ಅತ್ತನೂರು(14) ಓದುತ್ತಿದ್ದ. ಎಂದಿನಂತೆ ಶಾಲೆಗೆ ತೆರಳಿದ್ದ ತರುಣ್ ಗೆ ಲೋ ಬಿಪಿಯಾಗಿ, ಏಕಾಏಕಿ ಶಾಲೆಯಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಶಿಕ್ಷಕರು ಆತನನ್ನು ಸಿರಿವಾರ ಪಟ್ಟಣದ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಲು ಮಾಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ, ತೀವ್ರ ಅಸ್ವಸ್ಥಗೊಂಡಿದ್ದ ಬಾಲಕನನ್ನು

ಲೋ ಬಿಪಿಯಿಂದ 8ನೇ ತರಗತಿ ಬಾಲಕ ಸಾವು Read More »

ದರ್ಶನ್‌ & ಗ್ಯಾಂಗ್‌ಗೆ ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ..!

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. 24ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನಟ ದರ್ಶನ್‌ನನ್ನು ಬಳ್ಳಾರಿ ಜೈಲಿನಿಂದ, ಪವಿತ್ರಾಗೌಡ ಮತ್ತಿತರನ್ನು ಪರಪ್ಪನ ಅಗ್ರಹಾರದಿಂದ ಹಾಗೂ ಮೈಸೂರು, ಬಳ್ಳಾರಿ, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರುಗಿ, ವಿಜಯಪುರದ ಜೈಲಿನಿಂದ ಒಟ್ಟು 17 ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಇದೀಗ ಸೆ.12ರವರೆಗೆ

ದರ್ಶನ್‌ & ಗ್ಯಾಂಗ್‌ಗೆ ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ..! Read More »

ಮಂಗಳೂರು ಹೊರವಲಯದ ತಲಪಾಡಿ ಬಳಿ ನವವಿವಾಹಿತ ದಂಪತಿಗಳಿದ್ದ ಕಾರು ಅಪಘಾತ| ಪತ್ನಿ ಸಾವು; ಪತಿ ಗಂಭೀರ

ಸಮಗ್ರ ನ್ಯೂಸ್: ಎರಡು ದಿನಗಳ ಹಿಂದಷ್ಟೇ ವಿವಾಹವಾಗಿದ್ದ ನವ ದಂಪತಿ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಬಳಿ ನಡೆದಿದೆ. ಪೆರ್ನೆ ಸಮೀಪದ ಒಡ್ಯ ನಿವಾಸಿ ಅನಿಶ್ ಕೃಷ್ಣ ತಮ್ಮ ಪತ್ನಿ ಮಾನಸ ಜೊತೆ ಬಿ.ಸಿ.ರೋಡ್ ನಿಂದ ‌ಮಂಗಳೂರು ಕಡೆಗೆ ಆಲ್ಟೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಗುದ್ದಿ ಹಾರಿ ಕೆಎಸ್‌ಆರ್‌ಟಿಸಿ ಬಸ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಮಾನಸ ಸ್ಥಳದಲ್ಲಿಯೇ ಅಸುನೀಗಿದ್ದು, ಗಂಭೀರ ಗಾಯಗೊಂಡ

ಮಂಗಳೂರು ಹೊರವಲಯದ ತಲಪಾಡಿ ಬಳಿ ನವವಿವಾಹಿತ ದಂಪತಿಗಳಿದ್ದ ಕಾರು ಅಪಘಾತ| ಪತ್ನಿ ಸಾವು; ಪತಿ ಗಂಭೀರ Read More »

ಸುಳ್ಯ: ಆಟೋರಿಕ್ಷಾ – ಸ್ಕೂಟಿ ನಡುವೆ ಅಪಘಾತ| ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಸಾವು

ಸಮಗ್ರ ನ್ಯೂಸ್: ಮಾಣಿ – ಮೈಸೂರು ರಾ.ಹೆದ್ದಾರಿಯ ಸುಳ್ಯ ಸಮೀಪದ ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿ ಸ್ಕೂಟಿ ಮತ್ತು ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ. ರಿಕ್ಷಾ ಶರತ್ ಎಂಬವರದಾಗಿದ್ದು ಸ್ಕೂಟಿ ಸವಾರ ಐಟಿಐ ವಿದ್ಯಾರ್ಥಿ ನವೀನ್ ಎಂದು ತಿಳಿದುಬಂದಿದೆ. ಚೆಂಬು ಗ್ರಾಮದ ಕುದ್ರೆಪಾಯ ಬೊಳ್ಳೂರು ಆನಂದ ಎಂಬವರ ಪುತ್ರ ಮೃತಪಟ್ಟ ದುರ್ದೈವಿ. ದ್ವಿತೀಯ ವರ್ಷದ ಐಟಿಐ ಪರೀಕ್ಷೆ ಬರೆದಿದ್ದು, ಪರೀಕ್ಷೆ ಫಲಿತಾಂಶ ಬರುವ ಮೊದಲೇ ವಿಧಿ ಬರಹ ಬೇರೆಯಾಗಿತ್ತು. ಈತ

ಸುಳ್ಯ: ಆಟೋರಿಕ್ಷಾ – ಸ್ಕೂಟಿ ನಡುವೆ ಅಪಘಾತ| ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಸಾವು Read More »